News Kadaba Desk

ಗುತ್ತಿಗಾರು- ಸುಬ್ರಹ್ಮಣ್ಯ ಅವೈಜ್ಞಾನಿಕ ವಿದ್ಯುತ್ ಕೇಬಲ್ ಅಳವಡಿಕೆ ➤ ಕಾಂಗ್ರೆಸ್ ಆರೋಪ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 06. ಗುತ್ತಿಗಾರಿನಿಂದ ಸುಬ್ರಹ್ಮಣ್ಯದವರಿಗೆ 110ಕೆ.ವಿ ವಿದ್ಯುತ್ ಭೂಗತ ಕೇಬಲ್ ಅಳವಡಿಕೆ ಅವೈಜ್ಙಾನಿಕ ರೀತಿಯಲ್ಲಿ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಪರಶುರಾಮ ಚಿಲ್ತಡ್ಕ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ಆರು ತಿಂಗಳಿನಿಂದ ರಸ್ತೆ ಬದಿ ಭೂಮಿಯನ್ನು ಅಗೆದು ಅರ್ಧದಲ್ಲಿ ಬಿಟ್ಟಿದ್ದು, ಸಾರ್ವಜನಿಕ ನಡೆದಾಡಲು ಸಾಧ್ಯವಾಗುವುದಿಲ್ಲ, ಸರಿಯಾದ ರೀತಿಯಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು. ಈ ಸಂದರ್ಭ ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, […]

ಗುತ್ತಿಗಾರು- ಸುಬ್ರಹ್ಮಣ್ಯ ಅವೈಜ್ಞಾನಿಕ ವಿದ್ಯುತ್ ಕೇಬಲ್ ಅಳವಡಿಕೆ ➤ ಕಾಂಗ್ರೆಸ್ ಆರೋಪ Read More »

ಕರಾವಳಿ, ಕರ್ನಾಟಕ

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್…! ➤ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 06. ರಾಜ್ಯದಾದ್ಯಂತ ರೈತರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಸ್ತೆ ತಡೆಯುವ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ಗೇಟ್ ಬಳಿ ರೈತ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರಕಾರದ ವಿರುದ್ದ ಘೋಷಣೆಗಳನ್ನು ಕೂಗಿದ್ದಾರೆ. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ರೈತ ಕೃಷಿ ಕಾರ್ಮಿಕ ಸಂಘಟನೆ, ಪ್ರಾಂತ ರೈತ ಸಂಘಟನೆ, ಹಸಿರು ಸೇನೆ,

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಾದ್ಯಂತ ಚಕ್ಕಾ ಜಾಮ್…! ➤ ಪೊಲೀಸ್ ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಂಚ ಸ್ವೀಕರಿಸುತ್ತಿದ್ದ ತಾಲೂಕು ಕಛೇರಿ ಗುಮಾಸ್ತ ಎಸಿಬಿ ವಶಕ್ಕೆ..!

(ನ್ಯೂಸ್ ಕಡಬ) newskadaba.com ಮೈಸೂರು, ಫೆ. 06. ಲಂಚ ಸ್ವೀಕರಿಸುತ್ತಿದ್ದ ಶ್ರೀರಂಗಪಟ್ಟಣ ತಾಲೂಕು ಕಛೇರಿಯ ಆರ್.ಆರ್ ಶಾಖೆ ಗುಮಾಸ್ತ ಪಿ.ಮಂಜು ಎಂಬವರನ್ನು ಎಸಿಬಿ ವಶಕ್ಕೆ ಪಡೆಯಲಾಗಿದೆ. ಇವರು ತಾಲೂಕಿನ ಚಂದಗಿರಿಕೊಪ್ಪದಲ್ಲಿ ಗ್ರಾಮದ ಧರಣೇಂದ್ರ ಕುಮಾರ್ ಎಂಬವರಿಂದ ಲಂಚ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ಧರ್ಮೇಂದ್ರ, ಸಿಪಿಐ ಸತೀಶ್ ಹಾಗೂ ರವಿಶಂಕರ್ ಹಣದ ಸಹಿತ ಆರೋಪಿಯನ್ನು ವಶಪಡಿಸಿದ್ದಾರೆ.

ಲಂಚ ಸ್ವೀಕರಿಸುತ್ತಿದ್ದ ತಾಲೂಕು ಕಛೇರಿ ಗುಮಾಸ್ತ ಎಸಿಬಿ ವಶಕ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ನಿವಾಸಕ್ಕೆ ಕಲ್ಲಡ್ಕ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 06. ಅಯೋಧ್ಯೆ ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನ ಹಿನ್ನೆಲೆ ಕಾಂಗ್ರೆಸ್ ಮುಖಂಡ ಬಂಟ್ವಾಳ ಬಿಸಿ ರೋಡಿನಲ್ಲಿರುವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ಕಲ್ಲಡ್ಕ ಪ್ರಭಾಕರ ಭಟ್ ಭೇಟಿ ನೀಡಿದರು. ಕಲ್ಲಡ್ಕ ಭಟ್ ಪೂಜಾರಿಯವರ ಕಾಲಿಗೆ ನಮಸ್ಕರಿಸಿ, ಅವರ ಆರೋಗ್ಯ ವಿಚಾರಿಸಿದರು.ರಾಮಮಂದಿರ ನಿರ್ಮಾಣಕ್ಕೆ ಪೂಜಾರಿಯವರು ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭ ಪ್ರಭಾಕರ್ ಭಟ್ ಪತ್ನಿ ಕಮಲಾ ಪ್ರಭಾಕರ್ ಭಟ್ ಹಾಗೂ ಹಿಂದೂ ಮುಖಂಡರು ಜೊತೆಗಿದ್ದರು.

ಕಾಂಗ್ರೆಸ್ ಮುಖಂಡ ಜನಾರ್ಧನ ಪೂಜಾರಿ ನಿವಾಸಕ್ಕೆ ಕಲ್ಲಡ್ಕ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ

ಪಿಲಿಕುಳ ವಿಜ್ಞಾನ ಪ್ರದರ್ಶನ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಸ್ವಾಮಿ ವಿವೇಕಾನಂದ ತಾರಾಲಯದಲ್ಲಿ ಕೋವಿಡ್ ಕಾರಣಗಳಿಂದ ನಿಲುಗಡೆಗೊಂಡ ವಿಜ್ಞಾನ ಪ್ರದರ್ಶನಗಳನ್ನು ಇಂದಿನಿಂದ ಪುನರಾರಂಭಿಸಲಾಗುತ್ತಿದೆ. ಪ್ರಥಮ ಹಂತದಲ್ಲಿ 2ಡಿ ಪ್ರದರ್ಶನಗಳನ್ನು ಕೋವಿಡ್ ನಿಯಮಗಳ ಷರತ್ತುಗಳನ್ನು ಪಾಲಿಸಿಕೊಂಡು ಮಧ್ಯಾಹ್ನ 2 ಗಂಟೆ ಮತ್ತು 3 ಗಂಟೆಗೆ ಪ್ರದರ್ಶಿಸಲಾಗುತ್ತದೆ. ಆಂಗ್ಲ ಭಾಷೆಯ ‘Cosmic Life’ ಎಂಬ ಪ್ರದರ್ಶನವನ್ನು ವಾರದ ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಹಾಗೂ ‘Autobiography of the Universe’ ಎಂಬ ಪ್ರದರ್ಶನವನ್ನು ಬುಧವಾರ,

ಪಿಲಿಕುಳ ವಿಜ್ಞಾನ ಪ್ರದರ್ಶನ ಪುನರಾರಂಭ Read More »

ಕರಾವಳಿ, ಕರ್ನಾಟಕ

ಆಟೋರಿಕ್ಷಾ ಮುಂಬದಿ ಕವಚದ ಮೇಲೆ ಹಸಿರು ಬಣ್ಣದ ಪಟ್ಟಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಮಂಗಳೂರು ಗ್ರಾಮಾಂತರ ಪ್ರದೇಶಗಳಿಂದ ಮಂಗಳೂರು ನಗರ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ, ರೋಗಿಗಳನ್ನು ಹಾಗೂ ವಯೋ ವೃದ್ಧರನ್ನು ವೈದ್ಯಕೀಯ ತಪಾಸಣೆಗಾಗಿ ಕರೆದುಕೊಂಡು ಬಂದು ಹೋಗುವಾಗ ಮತ್ತು ನಗರದೊಳಗೆ ಪ್ರಯಾಣಿಕರನ್ನು ಅವರು ಹೇಳಿರುವ ಸ್ಥಳಗಳಿಗೆ ತಲುಪಿಸುವಂತಹಾ ಆಟೋರಿಕ್ಷಾಗಳನ್ನು ಸುಲಭವಾಗಿ ಗುರುತಿಸುವ ಸಲುವಾಗಿ ಈಗಾಗಲೇ ನಿರ್ಣಯಿಸಿರುವಂತೆ ಆಟೋರಿಕ್ಷಾ ಮುಂಬದಿ ಕವಚದ ಮೇಲೆ ಹಸಿರು ಬಣ್ಣದ ಪಟ್ಟಿ (ಬಜಾಜ್ ಗ್ರೀನ್) ಕಡ್ಡಾಯವಾಗಿ ಬಳಿದು ಪ್ರದರ್ಶಿಸಬೇಕೆಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ನಿರ್ದೇಶಿಸಿದೆ ಎಂದು ಮಂಗಳೂರು ಪ್ರಾದೇಶಿಕ

ಆಟೋರಿಕ್ಷಾ ಮುಂಬದಿ ಕವಚದ ಮೇಲೆ ಹಸಿರು ಬಣ್ಣದ ಪಟ್ಟಿ ಕಡ್ಡಾಯ Read More »

ಕರಾವಳಿ, ಕರ್ನಾಟಕ

ಫೆ. 07ರಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ದ.ಕ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರವರು ಫೆಬ್ರವರಿ 7 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಫೆಬ್ರವರಿ 7 ರಂದು ಬೆಳಿಗ್ಗೆ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ  ಆಗಮಿಸಿ 10.30ಕ್ಕೆ  ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. 11.45 ಕ್ಕೆ ಧರ್ಮಸ್ಥಳದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಿಸಲಾದ ಚತುಷ್ದಥ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 12.15 ಕ್ಕೆ ಬೆಳ್ತಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರದ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಫೆ. 07ರಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ದ.ಕ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರದ ಹಣವನ್ನು ವಿಳಂಬವಿಲ್ಲದೇ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರದ ಹಣವನ್ನು ವಿಳಂಬವಿಲ್ಲದೇ ನೀಡಬೇಕು ಹಾಗೂ ಪ್ರಕರಣಗಳ ತನಿಖೆಯನ್ನು ಚುರುಕಾಗಿ ಕೈಗೊಂಡು ಅವರುಗಳಿಗೆ ನ್ಯಾಯ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ ಕಾಯ್ದೆ 1989) ಜಾಗೃತಿ ಮತ್ತು ಉಸ್ತುವಾರಿ ಸಮಿತಿ

ದೌರ್ಜನ್ಯ ಪ್ರಕರಣಗಳಲ್ಲಿ ನೊಂದವರಿಗೆ ಪರಿಹಾರದ ಹಣವನ್ನು ವಿಳಂಬವಿಲ್ಲದೇ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು – ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಬಜಾಲ್ ಪ್ರದೇಶದ ಹೇಮಾವತಿ ನಗರದಲ್ಲಿ ಬಿಟ್ಟು ಹೋದ ಒಳಚರಂಡಿ ಕಾಮಗಾರಿಯನ್ನು ಕೈಗೊಳ್ಳುವ ಸಲುವಾಗಿ ಬಜಾಲ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಿದ್ದು, ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಮಾರ್ಪಾಡು ಮಾಡಬೇಕಾದ ಅವಶ್ಯಕತೆ ಇರುವುದರಿಂದ ಕಾಮಗಾರಿ ಮುಕ್ತಾಯದ ವರೆಗೆ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989ರ ನಿಯಮ 221

ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು – ಆದೇಶ Read More »

ಕರಾವಳಿ, ಕರ್ನಾಟಕ

ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 06. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಾಲನ್ಯಾಯ ಮಂಡಳಿಗೆ ಸದಸ್ಯರನ್ನು 2020 ರಿಂದ 2023 ರವರೆಗೆ (3 ವರ್ಷ) ಸದಸ್ಯತ್ವಕ್ಕಾಗಿ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಡಬ್ಲ್ಯೂಸಿ ಹಾಗೂ ಜೆಜೆಬಿಗಳಿಗೆ ಪ್ರತ್ಯೇಕ ಅರ್ಜಿ ನಮೂನೆಗಳು  ಸೂಚನೆಗಳು, ಅಫಿದವಿಟ್‍ಗಳು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ರಲ್ಲಿ ಲಭ್ಯವಿರುತ್ತದೆ. ಅರ್ಜಿ ನಮೂನೆ ಹಾಗೂ  ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಮೂರನೇ ಮಹಡಿ, ವಿಶ್ವೇಶ್ವರಯ್ಯ

ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top