News Kadaba Desk

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಸುರತ್ಕಲ್ ಬಳಿಯ ಕಾಟಿಪಳ್ಳದ ಗಣೇಶಪುರ ಎಂಬಲ್ಲಿ ನಡೆದ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಶ್ರೀನಿವಾಸ(20), ರಾಜು (20) ಹಾಗೂ ಅಭಿಷೇಕ್ (19) ಎಂಸು ಗುರುತಿಸಲಾಗಿದೆ. ಈ ಆರೋಪಿಗಳ ಮೇಲೆ ಈಗಾಗಲೇ ಎರಡು ಕೇಸು ದಾಖಲಾಗಿದ್ದವು. ಇವರು ಬುಧವಾರದಂದು ರಾತ್ರಿ 10.45 ರ ಸುಮಾರಿಗೆ ಕಾಟಿಪಳ್ಳದ ಏಳನೇ ಬ್ಲಾಕ್ ನಿವಾಸಿ ಜಾಬಿರ್ ಎಂಬಾತನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದರು. ಆರೋಪಿಗಳ ಜೊತೆಗೆ […]

ಸುರತ್ಕಲ್: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಮೂವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜ.31ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ‌.ಎಸ್. ಈಶ್ವರಪ್ಪರವರಿಂದ ಉದ್ಘಾಟನೆ ➤ ಪತ್ರಕರ್ತರ ಮೂರನೇ ಗ್ರಾಮ ವಾಸ್ತವ್ಯಕ್ಕೆ ಭರ್ಜರಿ ಸಿದ್ಧತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಡಬ ತಾಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ,ಜಿಲ್ಲಾಡಳಿತ, ವಿವಿಧ ಇಲಾಖೆಗಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ‘ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರ’ ಜ.31ರಂದು ಕೊಂಬಾರು ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ. ಪತ್ರಕರ್ತರ ಸಂಘದ ಮೂರನೇ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆಯನ್ನೂ ಮಾಡಲಾಗಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ತಿಳಿಸಿದ್ದಾರೆ. ಪ್ರೆಸ್ ಕ್ಲಬ್

ಜ.31ರಂದು ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ‌.ಎಸ್. ಈಶ್ವರಪ್ಪರವರಿಂದ ಉದ್ಘಾಟನೆ ➤ ಪತ್ರಕರ್ತರ ಮೂರನೇ ಗ್ರಾಮ ವಾಸ್ತವ್ಯಕ್ಕೆ ಭರ್ಜರಿ ಸಿದ್ಧತೆ Read More »

ಕರಾವಳಿ, ಕರ್ನಾಟಕ

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ಜ. 28. ಸಮುದ್ರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಮಗುಚಿ ಬಿದ್ದಿದ್ದು, ನಾಲ್ವರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಗಂಗೊಳ್ಳಿ ಸಮೀಪ ನಡೆದಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ‘ಸೌಮ್ಯ’ ಎಂಬ ಹೆಸರಿನ ನಾಡ ದೋಣಿಯೊಂದು ಗುರುವಾರ ಬೆಳಗ್ಗೆ ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಸಮುದ್ರದಲ್ಲಿ ಸುಮಾರು ಏಳು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಸಂದರ್ಭ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ಈ ಸಮದರ್ಭದಲ್ಲಿ ದೋಣಿಯಲ್ಲಿದ್ದ ಇಬ್ಬರು ಮೀನುಗಾರರು ನೀರಿಗೆ ಹಾರಿ ಈಜಿ

ಉಡುಪಿ: ಮೀನುಗಾರಿಕೆಯಲ್ಲಿ ತೊಡಗಿದ್ದ ದೋಣಿ ಸಮುದ್ರಪಾಲು ➤ ನಾಲ್ವರ ರಕ್ಷಣೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 28. 9 ಮತ್ತು 10ನೇ ತರಗತಿಯು ಆರಂಭವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರವು ಇದೀಗ ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ದಿನಾಂಕವನ್ನು ಪ್ರಕಟಿಸಿದೆ. ಜೂನ್ 14 ರಿಂದ 25ರವರೆಗೆ ಪರೀಕ್ಷೆ ನಡೆಯಲಿದ್ದು, ಜೂ.14ರಂದು ಪ್ರಥಮ ಭಾಷೆ, ಜೂ.16 ಗಣಿತ , ಜೂ.18ರಂದು ಇಂಗ್ಲೀಷ್ ಹಾಗೂ ಕನ್ನಡ, ಜೂ.21ರಂದು ವಿಜ್ಞಾನ, ಜೂ. 23ರಂದು ಹಿಂದಿ ಹಾಗೂ ಜೂ.25ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್

ಎಸ್ಸೆಸ್ಸೆಲ್ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

ರಾತ್ರೋರಾತ್ರಿಯಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! ➤ ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಹಾಸನ, ಜ. 28. ರಾತ್ರೋರಾತ್ರಿ ಮನೆಯಿಂದ ಕಾಣೆಯಾಗಿದ್ದ ಬಾಲಕಿಯ ಮೃತದೇಹವೊಂದು ಪಕ್ಕದ ಊರಿನ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಕಳೆದ ಸೋಮವಾರದಂದು ರಾತ್ರಿ 11 ಗಂಟೆಯ ಬಳಿಕ ಕಾಣೆಯಾಗಿದ್ದ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಕೆರಗೋಡು ಗ್ರಾಮದ ಬಾಲಕಿಯ ಮೃತದೇಹವು ಬುಧವಾರದಂದು ಪಕ್ಕದ ಊರಿನ ಅಂಕವಳ್ಳಿ ಎಂಬ ಕೆರೆಯಲ್ಲಿ ಪತ್ತೆಯಾಗಿದ್ದು, ಅತ್ಯಾಚಾರಗೈದು ಕೊಲೆಗೈದಿರಬಹುದು ಎಂದು ಶಂಕಿಸಲಾಗಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಿರುವ ಆಕೆಯ ಪೋಷಕರು ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದ್ದು, ಯೋಗೇಶ್

ರಾತ್ರೋರಾತ್ರಿಯಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ..! ➤ ಕೊಲೆ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 28. ಕಾರು ಹಾಗೂ ಓಮ್ನಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಾಳಾದ ಘಟನೆ ಮಾಣಿ-ಮೈಸೂರು ರಾ.ಹೆ ಪರ್ಲಡ್ಕ ಬೈಪಾಸ್ ಜಂಕ್ಷನ್ ನಲ್ಲಿ ನಡೆದಿದೆ. ಸುಳ್ಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಓಮ್ನಿ ಹಾಗೂ ರಾ.ಹೆ ಪರ್ಲಡ್ಕ ರಸ್ತೆಗೆ ಬರುತ್ತಿದ್ದ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ‌. ಘಟನೆಯಿಂದ ಓಮ್ನಿ ಕಾರಿನಲ್ಲಿದ್ದ ಮಹಿಳೆಯರು ಹಾಗೂ ಮಕ್ಕಳಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಕಾರು ಹಾಗು ಓಮ್ನಿ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಜ. 28. ಹಲವು ಪ್ರಕರಣಕ್ಕೆ ಸಂಬಂದಿಸಿದಂತೆ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಗಾಂಜಾ ಪ್ರಕರಣದಲ್ಲಿ ಭಾಗಿಯಾದ ಮಂಜೇಶ್ವರ ಕುಂಜತ್ತೂರಿನ ಮುಹಮ್ಮದ್ ಫತಮುದ್ದೀನ್(24), ಕೃಷ್ಣ(43), ಕೊಲೆ ಪ್ರಕರಣದ ಆರೋಪಿ ಸೆನೋಹರ್(23) ಹಾಗೂ ಶಸ್ತ್ರ ಕಾಯ್ದೆ ಪ್ರಕರಣಾದ ಆರೋಪಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಭಾಗಿಯಾದ ಇವರು ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದರು. ಇದೀಗ ಆರೋಪಿಗಳ ಸುಳಿವು ದೊರೆತ ಮೇರೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಜೇಶ್ವರ: ಗಾಂಜಾ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಾರ್ವಜನಿಕ ಶೌಚಾಲಯದಲ್ಲಿ ಅಕ್ರಮ ಮಾಂಸ ಮಾರಾಟ..!

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 28. ಇತ್ತೀಚಿನ ದಿನಗಳಲ್ಲಿ ಹಕ್ಕಿಜ್ವರ ಬಂದ ಕಾರಣ ಮಧ್ಯಪ್ರದೇಶ ಸರಕಾರವು ನೀಮುಚ್ ಹಾಗೂ ಇಂದೋರ್ ಜಿಲ್ಲೆಗಳಲ್ಲಿ ಕೋಳಿ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದ್ದು, ಇದರ ಬಳಿಕ ಕೆಲವೇ ದಿನಗಳಲ್ಲಿ ಸಾರ್ವಜನಿಕ ಶೌಚಾಲಯಗಳಲ್ಲಿ ಮೊಟ್ಟೆ ಮತ್ತು ಮಟನ್ ಮಾರಾಟ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಇಂದೋರ್ ನ ಸಾರ್ವಜನಿಕ ಶೌಚಾಲಯವೊಂದರಲ್ಲಿ ಈ ಕೃತ್ಯ ನಡೆಯುತ್ತಿದೆ. ಇಂದೋರ್ ಮುನ್ಸಿಪಲ್ ಕಾರ್ಪೊರೇಶನ್ ಸಾರದವಜನಿಕ ಶೌಚಾಲಯವನ್ನು ಪರಿಶೀಲನೆ ಮಾಡುತ್ತಿದ್ದ ವೇಳೆ ಈ ದೃಶ್ಯ ಕಂಡುಬಂದಿದ್ದು, ನಾಗರಿಕ ಸಂಸ್ಥೆಯ

ಸಾರ್ವಜನಿಕ ಶೌಚಾಲಯದಲ್ಲಿ ಅಕ್ರಮ ಮಾಂಸ ಮಾರಾಟ..! Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಪ್ಪಿನಂಗಡಿ: ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ➤ ಪುತ್ತೂರು ಮೂಲದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 28. ಸಹಕಾರಿ‌ ಸಂಸ್ಥೆಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು ಗ್ರಾಹಕನಂತೆ ವರ್ತಿಸಿ, ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಬಂಧಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕೇರಳ ನೋಂದಾವಣೆಯ ಕಾರಿನಲ್ಲಿ ಬಂದ ಈತ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕೊಂದರಲ್ಲಿ ಚಿನ್ನವನ್ನು ಅಡವಿಟ್ಟು, ತಾನು ಬಿಝಿಯಿರುವುದರಿಂದ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು, ಸಿಬ್ಬಂದಿಗಳು ಚಿನ್ನವನ್ನು ಪರಿಶೀಲಿಸುವ

ಉಪ್ಪಿನಂಗಡಿ: ನಕಲಿ ಚಿನ್ನವನ್ನು ಅಡವಿಟ್ಟು ವಂಚನೆ ➤ ಪುತ್ತೂರು ಮೂಲದ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 28. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರಿ ನೌಕರರ ಸಂಘ ಮಂಗಳೂರು, ಇವರುಗಳ ಸಂಯುಕ್ತ ಆಶ್ರಯದಲ್ಲಿ ಪ್ರಸ್ತುತ ಸಾಲಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟವು ಫೆಬ್ರವರಿ 2 ರಂದು ಬೆಳಗ್ಗೆ 9 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಾಂಸ್ಕೃತಿಕ ಸ್ಪರ್ಧೆಗಳನ್ನು ಫೆಬ್ರವರಿ 3 ರಂದು ಬೆಳಗ್ಗೆ 10 ಗಂಟೆಗೆ ಸರಕಾರಿ ನೌಕರರ ಸಭಾಭವನದಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ

ಮಂಗಳೂರು: ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ Read More »

ಕರಾವಳಿ, ಕರ್ನಾಟಕ
Scroll to Top