News Kadaba Desk

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಬ್ರಿಟನ್ ನಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಅಬ್ಬರಿಸುತ್ತಿದ್ದು, ಈ ನಡುವೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿರುವುದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಬ್ರಿಟನ್ ಸೇರಿದಂತೆ ಹಲವು ದೇಶಗಳಿಂದ ಭಾರತೀಯರು ತಾಯ್ನಾಡಿಗೆ ವಾಪಸಾಗುತ್ತಿದ್ದು, 56 ಮಂದಿ ಮಂಗಳೂರಿಗೆ ಬಂದಿದ್ದಾರೆ. ಇವರೆಲ್ಲರೂ ತಾವು ವಾಸಿಸುತ್ತಿದ್ದ ದೇಶದಲ್ಲೇ ಕೊರೋನಾ ಪರೀಕ್ಷೆ ನಡೆಸಿ ಕೋವಿಡ್ ನೆಗೆಟಿವ್ ದೃಢೀಕರಣದೊಂದಿಗೆ ಆಗಮಿಸಿದ್ದು, ಬ್ರಿಟನ್ ನಲ್ಲಿ ಕೊರೋನಾ ಆರ್ಭಟ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ […]

ಬ್ರಿಟನ್‌ನಿಂದ ಮಂಗಳೂರಿನ 56 ಮಂದಿಯ ಆಗಮನ ➤ ಕೊರೋನಾ 2ನೇ ಅಲೆಯ ಭೀತಿಯಲ್ಲಿ ಕರಾವಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಬ್ರೇಕಿಂಗ್ ನ್ಯೂಸ್

ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಪ್ರತಿಷ್ಠಾ ವರ್ಧಂತ್ಯುತ್ಸವ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಡಿ. 22. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ 10ನೇ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ಮಂಗಳವಾರ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಿತು.   ಈ ಪ್ರಯುಕ್ತ ಸೋಮವಾರ ಉಳ್ಳಾಲ್ತಿ ಅಮ್ಮನವರ ಸನ್ನಿಧಿಗೆ ಹಸಿರು ಕಾಣಿಕೆ ಸಮರ್ಪಿಸಲಾಯಿತು. ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಪ್ರಸಾದ ವಿತರಿಸಲಾಯಿತು. ಅರ್ಚಕ ಕೃಷ್ಣ ಹೆಬ್ಬಾರ್ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಮಂಗಳವಾರ ಬೆಳಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ,

ನೂಜಿ ಶ್ರೀ ಉಳ್ಳಾಲ್ತಿ ದೈವಸ್ಥಾನ; ಪ್ರತಿಷ್ಠಾ ವರ್ಧಂತ್ಯುತ್ಸವ Read More »

ಕರಾವಳಿ

“ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಫಿಟ್ ಇಂಡಿಯಾ ಸಪ್ತಾಹ”

(ನ್ಯೂಸ್ ಕಡಬ) newskadaba.cokm ಮಂಗಳೂರು ಡಿ. 22. ಭಾರತ ದೇಶದ ಪ್ರಜೆಗಳ ದೈಹಿಕ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯದ ದೃಷ್ಠಿಯಿಂದ 2018ರ ಆಗೋಸ್ಟ್ 29ರ ರಾಷ್ಟ್ರೀಯ ಕ್ರೀಡಾ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಫಿಟ್‍ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಈ ಹಿನ್ನಲೆಯಲ್ಲಿ ಶಕ್ತಿನಗರದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರು ಮತ್ತು ಶಾಲಾ ಶಿಕ್ಷಕರ ದೈಹಿಕ, ಮಾನಸಿಕ, ಹಾಗು ಬೌದ್ಧಿಕ ಆರೋಗ್ಯದ ಹಿತದೃಷ್ಟಿಯಿಂದ “ಫಿಟ್‍ಇಂಡಿಯಾ ಸಪ್ತಾಹ” ದಿನಾಂಕ ಡಿ. 22 ರಿಂದ 30ರ

“ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ಫಿಟ್ ಇಂಡಿಯಾ ಸಪ್ತಾಹ” Read More »

ಕರಾವಳಿ

ಕಡಬ: ಇಚಿಲಂಪಾಡಿ ದೇವಸ್ಥಾನಕ್ಕೆ ಎಸ್. ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಡಿ. 22. ತಾಲೂಕಿನ ಇಚಿಲಂಪಾಡಿಯ ಕುರಿಯಾಳಕೊಪ್ಪ ಶ್ರೀಲಕ್ಷ್ಮೀ ಜನಾರ್ಧನ ದೇವಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರು ಇಂದು ಭೇಟಿ ನೀಡಿದರು. ಚುನಾವಣಾ ಸಮಯದಲ್ಲಿ ದಿಢೀರ್ ಭೇಟಿ ನೀಡಿದ ಅವರಿಗೆ ದೇವರ ದರ್ಶನದ ನಂತರ ಅರ್ಚಕರು ಹೂವಿನ ಹಾರ ಹಾಕಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ, ಸೀತಾರಾಮ ಗೌಡ ಪೊಸವಳಿಕೆ, ಪ್ರಕಾಶ್ ಎನ್.ಕೆ ಮೊದಲಾದವರು ಉಪಸ್ಥಿತರಿದ್ದರು.

ಕಡಬ: ಇಚಿಲಂಪಾಡಿ ದೇವಸ್ಥಾನಕ್ಕೆ ಎಸ್. ಅಂಗಾರ ಭೇಟಿ Read More »

ಕರಾವಳಿ, ಕರ್ನಾಟಕ

ಕ್ಲಬ್ ಮೇಲೆ ದಾಳಿ ➤ ಕ್ರಿಕೆಟಿಗ ಸುರೇಶ್ ರೈನಾ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 22. ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಸುರೇಶ್ ರೈನಾ ಸೇರಿದಂತೆ 34 ಜನರನ್ನು ಮುಂಬೈ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಮುಂಬೈ ಡ್ರಾಗನ್ ಫ್ಲೈ ಕ್ಲಬ್ ಮೇಲೆ ರೈಡ್ ಮಾಡಿದ ಪೊಲೀಸರು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವಾರನ್ನೂ ವಶಕ್ಕೆ ಪಡೆದಿದ್ದು, ನಂತರ ಇಬ್ಬರನ್ನೂ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಕೋವಿಡ್ 19 ನಿಯಮಗಳ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯ ನಂತರ

ಕ್ಲಬ್ ಮೇಲೆ ದಾಳಿ ➤ ಕ್ರಿಕೆಟಿಗ ಸುರೇಶ್ ರೈನಾ ಬಂಧನ Read More »

ಬ್ರೇಕಿಂಗ್ ನ್ಯೂಸ್

ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್

(ನ್ಯೂಸ್ ಕಡಬ) newskadaba.com ಕೊಣಾಜೆ, ಡಿ. 22. ಇಲ್ಲಿನ ಹರೇಕಳ ಮತಗಟ್ಟೆಯಲ್ಲಿ ಎಸ್ಡಿಪಿಐ ಮತ್ರು ಕಾಂಗ್ರೆಸ್ ಕಾರ್ಯಕರ್ತರ ನಡುವರ ಘರ್ಷಣೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನೋರ್ವ ಪದೇ ಪದೇ ಮತಗಟ್ಟೆಯೊಳಗೆ ಹೋಗುವುದನ್ನು ಎಸ್ಡಿಪಿಐ ಕಾರ್ಯಕರ್ತರು ಆಕ್ಷೇಪಿಸಿದ್ದು, ಈ ವೇಳೆ ಉಭಯ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ಝಕರಿಯಾ ಮಲಾರ್ ಎಂಬವರಿಗೆ ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಲಘು ಲಾಠಿ

ಕೊಣಾಜೆ: ಮತದಾನದ ವೇಳೆ ಕಾಂಗ್ರೆಸ್ ಹಾಗೂ ಎಸ್ಡಿಪಿಐ ನಡುವೆ ಘರ್ಷಣೆ ➤ ಪೊಲೀಸರಿಂದ ಲಘು ಲಾಠಿ ಚಾರ್ಜ್ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ.)ದ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ (56) ಅವರು ಕೆಲವಿ ದಿನಗಳ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಿಧನರಾದರು. ಶ್ವಾಸಕೋಶ, ರಕ್ತದೊತ್ತಡ ಹಾಗೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎಂದು ಪಿ.ಎಫ್.ಐ. ರಾಷ್ಟ್ರೀಯ ಕಾರ್ಯದರ್ಶಿ ಅನೀಸ್ ಅಹ್ಮದ್ ತಿಳಿಸಿದ್ದಾರೆ. ಕೈಕಂಬ

ಪಿ.ಎಫ್.ಐ ಮಾಜಿ ರಾಷ್ಟ್ರೀಯ ಅಧ್ಯಕ್ಷ ಕೆ.ಎಂ.ಶರೀಫ್ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸತ್ತರೂ ಹಿಂದಿರುಗುವುದಿಲ್ಲ ➤ ಪ್ರತಿಭಟನಾ ನಿರತ ರೈತರು

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 22. ಕೇಂದ್ರ ಸರ್ಕಾರ ಜಾರಿಗೊಳಿಸಿದ ಕೃಷಿ ಮಸೂದೆಯ ವಿರುದ್ಧ ದೆಹಲಿ ಗಡಿಯಲ್ಲಿ ಮೈಕೊರೆಯುವ ಚಳಿಯ ನಡುವೆಯೂ ರೈತರ ಪ್ರತಿಭಟನೆ ಮುಂದುವರಿದಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಸತ್ತರೂ ಸರಿ ನಾವು ಇಲ್ಲಿಂದ ಹಿಂದಿರುಗುವುದಿಲ್ಲ ಎಂದು ಪ್ರತಿಭಟನಾನಿರತ ರೈತರು ಹೇಳಿದ್ದಾರೆ. ಸುಮಾರು ನಾಲ್ಕು ವಾರಗಳಿಂದ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನಗಳ ರೈತರು ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದರಲ್ಲಿ ಸುಮಾರು 30 ಮಂದಿ ಈವರೆಗೆ ಚಳಿ ಸೇರಿದಂತೆ ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸತ್ತರೂ ಹಿಂದಿರುಗುವುದಿಲ್ಲ ➤ ಪ್ರತಿಭಟನಾ ನಿರತ ರೈತರು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೋಡಿಂಬಾಳದಲ್ಲಿ ಪಡಿತರ ವ್ಯವಸ್ಥೆ ಶೀಘ್ರ ಆರಂಭ ➤ ಕಡಬ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ

(ನ್ಯೂಸ್ ಕಡಬ) newskadaba.com ಕಡಬ, ಡಿ. 22. ತಾಲೂಕಿನ ಕೋಡಿಂಬಾಳ ಪರಿಸರದ ಜನತೆಯ ಬೇಡಿಕೆಯನುಸಾರ ಪಡಿತರ ವಿತರಣೆಯ ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದು, ಶೀಘ್ರವೇ ಕಾರ್ಯಾರಂಭಿಸಲಾಗುವುದು ಎಂದು ಪ್ರಾ.ಕೃ.ಪ. ಸಹಕಾರಿ ಸಂಘಧ ವಾರ್ಷಿಕ ಮಹಾಸಭೆಯಲ್ಲಿ ಕಡಬ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ತಿಳಿಸಿದ್ದಾರೆ.     2016ರಲ್ಲಿ ಕಡಬ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಾರ್ಷಿಕ ಮಹಾಸಭೆಯ ವೇಳೆ ಅಂದು ತಾ.ಪಂ. ಸದಸ್ಯರಾಗಿದ್ದ ಫಝಲ್ ಕೋಡಿಂಬಾಳ ಮನವಿಯಲ್ಲಿ ಚರ್ಚಿಸಿದ್ದು, ಸಭೆಯಲ್ಲಿ ನಿರ್ಣಯ ಕೈಗೊಂಡು ನಂತರದ ದಿನಗಳಲ್ಲಿ

ಕೋಡಿಂಬಾಳದಲ್ಲಿ ಪಡಿತರ ವ್ಯವಸ್ಥೆ ಶೀಘ್ರ ಆರಂಭ ➤ ಕಡಬ ಪ್ರಾ.ಕೃ.ಪ.ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 22. ತಾಲೂಕಿನ ಗ್ರಾಮ ಪಂಚಾಯತ್‌ ಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಯಿಂದ  ಮತದಾನ ಆರಂಭವಾಗಿದೆ. ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ಒಂದನ್ನು ಹೊರತುಪಡಿಸಿ ಉಳಿದ 57 ಗ್ರಾಮ ಪಂಚಾಯತ್‌ ಗಳಲ್ಲಿ ಇಂದು ಚುನಾವಣೆ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಜೊತೆಗೆ ಪೊಲೀಸ್ ಸಂಪೂರ್ಣ ಸಹಕಾರದಿಂದ ಪಕ್ಷಾತೀತವಾಗಿ ನಡೆಯುವ ಗ್ರಾಮ ಪಂಚಾಯತ್ ಚುನಾವಣೆಯು ಶಾಂತವಾಗಿ ಆರಂಭವಾಗಿದೆ.  

ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್ ಗಳಲ್ಲಿ ಮತದಾನ Read More »

ಕರಾವಳಿ, ಕರ್ನಾಟಕ
Scroll to Top