ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ನಗರದಲ್ಲಿರುವ ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹೇಳಿದರು. ಅವರು ಕಳೆದ ದಿನ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ನಗರ ವ್ಯಾಪ್ತಿಯಲ್ಲಿ ನಿರಾಶ್ರಿತರಲ್ಲಿ ಮಲೇರಿಯಾ ಪ್ರಕರಣಗಳ ವರದಿ ಹಾಗೂ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡುವ ಕುರಿತ ಸಭೆ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದರು. ಮಹಾನಗರಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ […]










