News Kadaba Desk

ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಆ.05. ಯಾವುದೇ ಪರವಾನಗಿ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿಯನ್ನು ಬಂಧಿಸಿರುವ ಕಡಬ ಪೊಲೀಸರು, ಎರಡು ಪಿಸ್ತೂಲು ಹಾಗೂ 02 ಖಾಲಿ ತೋಟೆ ಹಾಗೂ ರಂಜಕ, ಪೊಟ್ಯಾಶಿಯಂನ್ನು ವಶಪಡಿಸಿಕೊಂಡಿದ್ದಾರೆ‌. ಬಂಧಿತ ಆರೋಪಿಯನ್ನು ಕಡಬ ತಾಲೂಕು ಕಡಬ ಗ್ರಾಮದ ಪಾಲೋಳಿ ನಿವಾಸಿ ಜನಾರ್ಧನ್ ಗೌಡ ಎಂದು ಗುರುತಿಸಲಾಗಿದೆ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆರೋಪಿಯ ಮನೆಯ ಮೇಲೆ ದಾಳಿ ಮಾಡಿ 02 ನಕಲಿ […]

ಕಡಬ: ಪರವಾನಿಗೆ ಇಲ್ಲದೆ ನಕಲಿ ಪಿಸ್ತೂಲ್ ಹೊಂದಿದ್ದ ವ್ಯಕ್ತಿ ➤ ಎರಡು ಪಿಸ್ತೂಲ್, ರಂಜಕ, ಪೊಟ್ಯಾಸಿಯಂ ಸಹಿತ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.05. ಘಟ್ಟದ ತಪ್ಪಲಿನಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಸುಬ್ರಹ್ಮಣ್ಯ – ಪಂಜ ರಸ್ತೆಯನ್ನು ನೀರು ಆವರಿಸಿದೆ. ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ತಡರಾತ್ರಿ 2 ಗಂಟೆಯಿಂದ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸುವಂತೆ ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ತಿಳಿಸಿದ್ದಾರೆ.

ತುಂಬಿ ತುಳುಕುತ್ತಿರುವ ಕುಮಾರಧಾರ ➤ ಸುಬ್ರಹ್ಮಣ್ಯ – ಪಂಜ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು

(ನ್ಯೂಸ್ ಕಡಬ) newskadaba.com ಮಾಣಿ, ಆ.04. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರ ಆಲದ ಮರವೊಂದು ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಬಂಟ್ವಾಳದಿಂದ ಉಪ್ಪಿನಂಗಡಿ‌ ಕಡೆಗೆ ತೆರಳುತ್ತಿದ್ದ ಮಾರುತಿ ಸುಝುಕಿ ರಿಟ್ಝ್ ಕಾರು ಸೂರಿಕುಮೇರು ಬಳಿ ತಲುಪಿದಾಗ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಆಲದ ಮರ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಡಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌.

ಉಪ್ಪಿನಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ➤ ಕಾರು ಸಂಪೂರ್ಣ ನಜ್ಜುಗುಜ್ಜು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.04. ಚಾಲಕನ ನಿಯಂತ್ರಣ ತಪ್ಪಿದ ಹ್ಯುಂಡೈ ಕ್ರೆಟಾ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರಿನ ವಿಜಯನಗರ‌ ನಿವಾಸಿ ಸೂರ್ಯ ಎಂಬವರು ಚಲಾಯಿಸುತ್ತಿದ್ದ ಕಾರು ಉದನೆ ಸಮೀಪ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಉರುಳಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವರಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕಾರಿನ

ನೆಲ್ಯಾಡಿ: ಕಮರಿಗೆ ಉರುಳಿದ ಕಾರು ➤ ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.4, ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಗ್ರಾಮದ ಬೆಳ್ಳಿಪ್ಪಾಡಿ ಕ್ರಾಸ್ ಪರಿಸರದಲ್ಲಿ ಸುಮಾರು ಮೂವತ್ತು ಸೆಕೆಂಡುಗಳ ಕಾಲ ಬೀಸಿದ ಸುಂಟರಗಾಳಿಗೆ ಮರಗಳು ಧರೆಗೆ ಉರುಳಿ, ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಕೋಡಿಂಬಾಡಿಯಲ್ಲಿ ರಸ್ತೆಗೆ ಬಿದ್ದ ಮರ ➤ ವಾಹನ ಸಂಚಾರಕ್ಕೆ ತಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢ..‼️ ➤ ರೋಗ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಅಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.04, ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಪಾಸಿಟಿವ್ ಬಂದ ಬೆನ್ನಲ್ಲೇ, ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸೋಂಕು ತಗುಲಿದ್ದು ದೃಢಪಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೂತ್ರಕೋಶದ ಸೋಂಕಿನಿಂದಾಗಿ ಜ್ವರ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭ ಅವರಿಗೆ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಇದೀಗ ವರದಿಯು ಪಾಸಿಟಿವ್ ಬಂದಿದ್ದು, ಈ ಬಗ್ಗೆ ಸಿದ್ದರಾಮಯ್ಯ ಅವರು ಹಾಗೂ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಟ್ವಿಟ್ಟರ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢ..‼️ ➤ ರೋಗ ಲಕ್ಷಣಗಳಿಲ್ಲದಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಅಸ್ಪತ್ರೆಗೆ ದಾಖಲು Read More »

ಕರಾವಳಿ

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೋನಾ ಪಾಸಿಟಿವ್ ➤ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೂ ಕೊರೋನಾ ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತೆ ವಹಿಸಿ ಎಂದು ಕೋರಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೋನಾ ಪಾಸಿಟಿವ್ ➤ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲು Read More »

ಕರಾವಳಿ

ಕಡಬದಲ್ಲಿ ಏರ್ ಟೆಲ್ ಸೇವಾ ಕೇಂದ್ರ ‘ಭಾಗ್ಯಲಕ್ಷ್ಮೀ ಕಮ್ಯುನಿಕೇಷನ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಆ.02. ಇಲ್ಲಿನ ಸಿ.ಎ. ಬ್ಯಾಂಕಿನ ಯೋಗಕ್ಷೇಮ ಸಂಕೀರ್ಣದಲ್ಲಿ ಏರ್ ಟೆಲ್ ಸೇವಾ ಕೇಂದ್ರದ ಕಡಬ ಶಾಖೆ, ಭಾಗ್ಯಲಕ್ಷ್ಮೀ ಕಮ್ಯುನಿಕೇಶನ್ ಶನಿವಾರದಂದು ಶುಭಾರಂಭಗೊಂಡಿತು. ಕಡಬ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಯವರು ಶಾಖೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಏರ್ಟೆಲ್ ಮಂಗಳೂರು ವಲಯ ವ್ಯವಹಾರ ಮುಖ್ಯಸ್ಥ ಸದಾನಂದ ಎಂ, ವಲಯ ಮಾರಾಟ ಅಧಿಕಾರಿ ಶರತ್ ಕೆ.ಎಸ್. ಏರಿಯ ಮ್ಯಾನೆಜರ್ ಮನೋಜ್ ಶೆಟ್ಟಿ ಮಾತನಾಡಿ

ಕಡಬದಲ್ಲಿ ಏರ್ ಟೆಲ್ ಸೇವಾ ಕೇಂದ್ರ ‘ಭಾಗ್ಯಲಕ್ಷ್ಮೀ ಕಮ್ಯುನಿಕೇಷನ್’ ಶುಭಾರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ಪಂಜ ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಫೋರ್ಸ್ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಸುಳ್ಯ ತಾಲೂಕಿನ ಪಂಜ ಗ್ರಾಮದ ಕೋವಿಡ್ 19 ಟಾಸ್ಕ್ ಫೋರ್ಸ್‌ ಸಭೆಯು ಪಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮಂಜುನಾಥ್ ಮಾಹಿತಿ ಹಂಚಿಸಿದರು. ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ| ದೇವಿಪ್ರಸಾದ್ ಕಾಣತ್ತೂರು ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಣಿಯಾನ ಪುರುಷೋತ್ತಮ್ ಸ್ವಾಗತಿಸಿ, ಪಂಚಾಯತ್ ಕಾರ್ಯದರ್ಶಿ ಪದ್ಮಯ್ಯ ವಂದಿಸಿದರು.

ಪಂಜ ಗ್ರಾಮ ಪಂಚಾಯತ್ ನಲ್ಲಿ ಟಾಸ್ಕ್ ಫೋರ್ಸ್ ಸಭೆ Read More »

ಕರಾವಳಿ

ಕಡಬದ ಉದ್ಯಮಿ ಮತ್ತು ಮಕ್ಕಳಿಬ್ಬರು ಕೊರೋನಾದಿಂದ ಗುಣಮುಖ ➤ ಮೂವರ ಕೊರೋನಾ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಆ.01. ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದ ಕಡಬದ ಉದ್ಯಮಿ ಹಾಗೂ ಅವರ ಮಕ್ಕಳಿಬ್ಬರ ಕೊರೋನಾ ವರದಿ ಇಂದು ನೆಗೆಟಿವ್ ಬಂದಿದೆ. ಕಡಬದ ಉದ್ಯಮಿ, ಕುಟ್ರುಪ್ಪಾಡಿ ಗ್ರಾಮದ ಹಳೇಸ್ಟೇಷನ್ ನಿವಾಸಿ 49 ವರ್ಷ ಪ್ರಾಯದ ಪುರುಷ, ಅವರ 18 ವರ್ಷ ಪ್ರಾಯದ ಪುತ್ರ ಹಾಗೂ 16 ವರ್ಷದ ಪುತ್ರಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಇಂದು ಕಡಬದಲ್ಲಿ ನಡೆದ ಕೊರೋನಾ ಪರೀಕ್ಷೆಯಲ್ಲಿ ಮೂವರ ವರದಿಯೂ ನೆಗೆಟಿವ್ ಬಂದಿದೆ.

ಕಡಬದ ಉದ್ಯಮಿ ಮತ್ತು ಮಕ್ಕಳಿಬ್ಬರು ಕೊರೋನಾದಿಂದ ಗುಣಮುಖ ➤ ಮೂವರ ಕೊರೋನಾ ವರದಿ ನೆಗೆಟಿವ್ Read More »

ಕರಾವಳಿ
Scroll to Top