News Kadaba Desk

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com. ಬಂಟ್ವಾಳ,ಜು.10: ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿಯಾಗಿ ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ […]

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು Read More »

ಕರ್ನಾಟಕ

ಆಯುಷ್ಮಾನ್ ಭಾರತ್ ಕಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದಾಗಿದೆ. ಕಾರ್ಡನ್ನು ಮಾಡಿಸುವ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ. ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ

ಆಯುಷ್ಮಾನ್ ಭಾರತ್ ಕಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ Read More »

ಕರಾವಳಿ, ಕರ್ನಾಟಕ

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಪರಿಶಿಷ್ಟ ಪಂಗಡದ ಯುವಕ, ಯುವತಿಯರು ಪರಿಶಿಷ್ಟ ಪಂಗಡ ಸಮುದಾಯದ ಒಳಗೆ ಅಂತರ್ ಜಾತಿ ವಿವಾಹವಾದಲ್ಲಿ ಪ್ರೋತ್ಸಾಹ ಧನ ಮಂಜೂರಾತಿಗೆ ಅರ್ಜಿ ಆಹ್ವಾನಿಸಿದೆ. ಯುವತಿಗೆ ಕನಿಷ್ಠ 18 ವರ್ಷ, ಗರಿಷ್ಟ 42 ವರ್ಷ, ಯುವಕನಿಗೆ ಕನಿಷ್ಟ 21 ವರ್ಷದಿಂದ ಗರಿಷ್ಟ 45 ವರ್ಷವಾಗಿರಬೇಕು. ವಾರ್ಷಿಕ ಆದಾಯ ರೂ. 2 ಲಕ್ಷ ಮೀರಬಾರದು, ಮದುವೆಯಾದ ಒಂದು ವರ್ಷದ ಅವಧಿಯೊಳಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಉಪನೋಂದಣಾಧಿಕಾರಿ ಕಚೇರಿಯಲ್ಲಿ ವಿವಾಹ ನೋಂದಣಿ

ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ಧನ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.10:  ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆ ಪೂರೈಸುವಂತೆ ಕೋರಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಿದೆ. ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್‌ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ. ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ವರ್ಷದ ಜನವರಿಯಿಂದ ಸುಮಾರು

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ Read More »

ಕರ್ನಾಟಕ

ಡಿಜಿಟಲ್ ಬೆಂಬಲಿತ ಮಾರ್ಗದರ್ಶನ ಕಾರ್ಯಕ್ರಮ- ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಡಿಜಿಟಲ್ ಬೆಂಬಲಿತ ಮಾರ್ಗದರ್ಶನ ಕಾರ್ಯಕ್ರಮ “ಗೋಯಲ್” (ಸ್ವಯಂ ನಾಯಕರಾಗಿ ರೂಪುಗೊಳ್ಳುವುದು) ಪ್ರಾರಂಭಿಸಿದೆ. ದುರ್ಗಮ ಪ್ರದೇಶದಲ್ಲಿರುವ ಪರಿಶಿಷ್ಟ ಪಂಗಡದ ಯುವಕರು ಡಿಜಿಟಲ್ ವಿಶ್ವವನ್ನು ಕರಗತ ಮಾಡಿಕೊಂಡು ಅದನ್ನು ಬುಡಕಟ್ಟು ಸಮುದಾಯಕ್ಕೆ ತಲುಪಿಸುವ ಮೂಲಕ ಡಿಜಿಟಲ್ ಭಾರತದ ಧ್ಯೇಯಗಳನ್ನು ಅರ್ಥಮಾಡಿಕೊಂಡು ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಲು ಡಿಜಿಟಲ್ ಪ್ಲಾಟ್‍ಫಾರಂಗಳನ್ನು ಬಳಸಿಕೊಳ್ಳಲು ಅನುವಾಗಿಸುವುದು ಈ ಕಾರ್ಯಕ್ರಮದ ಗುರಿಯಾಗಿರುತ್ತದೆ. ಡಿಜಿಟಲ್ ಸಾರಕ್ಷತೆ, ಉದ್ಯಮದಾರಿಕೆ ಮತ್ತು ಜೀವನ ಕೌಶಲ್ಯಗಳ ಬಗ್ಗೆ ಸಲಹೆಗಾರಿಕೆ ಒದಗಿಸುವ ಮುಖಾಂತರ

ಡಿಜಿಟಲ್ ಬೆಂಬಲಿತ ಮಾರ್ಗದರ್ಶನ ಕಾರ್ಯಕ್ರಮ- ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಜುಲೈ 13ರಂದು ಬ್ಯಾರಿ ಅಕಾಡೆಮಿಯಿಂದ ಪುಸ್ತಕ ಮತ್ತು ಸಿಡಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಜುಲೈ 13 ರಂದು ಬೆಳಿಗ್ಗೆ 11 ಗಂಟೆಗೆ ಪುಸ್ತಕ ಮತ್ತು ಸಿಡಿ ಬಿಡುಗಡೆ ಸಮಾರಂಭವನ್ನು ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‍ ಸಾರ್ ಪುಸ್ತಕ ಮತ್ತು ಸಿಡಿಯನ್ನು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ವಹಿಸಲಿದ್ದಾರೆ. ಕೊರೋನ ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು

ಜುಲೈ 13ರಂದು ಬ್ಯಾರಿ ಅಕಾಡೆಮಿಯಿಂದ ಪುಸ್ತಕ ಮತ್ತು ಸಿಡಿ ಬಿಡುಗಡೆ Read More »

ಕರಾವಳಿ, ಕರ್ನಾಟಕ

ಉದ್ಯೋಗ ಮಾರುಕಟ್ಟೆ ಸ್ಥಿತಿ ಕುರಿತು ವೆಬ್ ನಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 10 ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಭಾರತ ಸರ್ಕಾರ, ಮಂಗಳೂರು ಮತ್ತು ಬೆಸೆಂಟ್ ಮಹಿಳಾ ಕಾಲೇಜಿನ ಇಂಗ್ಲೀಷ್ ವಿಭಾಗ ಇವರ ಸಹಯೋಗದಲ್ಲಿ ಕೋವಿಡ್-19 ನಂತರದ ಉದ್ಯೋಗ ಮಾರುಕಟ್ಟೆ ಸ್ಥಿತಿ ಮತ್ತು ಉದ್ಯೋಗಾಂಕ್ಷಿಗಳು ಅದಕ್ಕೆ ನಡೆಸಬೇಕಾದ ಸಿದ್ದತೆ ವಿಶೇಷ ವೆಬಿನಾರ್ ಕಾರ್ಯಕ್ರಮ ಜುಲೈ 9 ರಂದು ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕ್ಷೇತ್ರ ಪ್ರಚಾರ ಅಧಿಕಾರಿ ರೋಹಿತ್.ಜಿ.ಎಸ್, ಕೋವಿಡ್ ನಂತರ ಭಾರತದ ಉದ್ಯೋಗ ಮಾರುಕಟ್ಟೆಯಲ್ಲಿ

ಉದ್ಯೋಗ ಮಾರುಕಟ್ಟೆ ಸ್ಥಿತಿ ಕುರಿತು ವೆಬ್ ನಾರ್ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟ ಪಂಗಡ ➤ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com 2019-20ನೇ ಸಾಲಿನಲ್ಲಿ ವಿಶೇಷ ಕೇಂದ್ರೀಯ ನೆರವಿನಡಿ ಪರಿಶಿಷ್ಟ ಪಂಗಡಕ್ಕೆ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಸ್ಥಾಪಿಸಲು ಸಹಾಯಧನ ನೀಡುವ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ವರ್ಗದವರು ನಿಗದಿತ ನಮೂನೆಯ ಅರ್ಜಿಯನ್ನು ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರು, ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯಿಂದ ಪಡೆಯಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 10ರಂದು ಕೊನೆಯ ದಿನ. ಷರತ್ತುಗಳು: ಅರ್ಜಿದಾರರು ಕರ್ನಾಟಕದವರಾಗಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಕೋಳಿ ಸಾಕಾಣಿಕೆ ಶೆಡ್ ನಿರ್ಮಿಸಲು ಫಲಾನುಭವಿಯ ಹೆಸರಿನಲ್ಲಿ ಸ್ವಂತ

ಪರಿಶಿಷ್ಟ ಪಂಗಡ ➤ ಕೋಳಿ ಸಾಕಾಣಿಕೆ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ Read More »

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.10:  ಚಾರ್ಮಾಡಿ ಘಾಟಿ ರಸ್ತೆ ಮಳೆಗಾಲದ ಸಂದರ್ಭ ಅಪಾಯವಿರುವುದರಿಂದ ರಸ್ತೆಯಲ್ಲಿ ಸಂಜೆ 7ರಿಂದ ಬೆಳಗ್ಗೆ 7ರ ತನಕ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ| ಗೌತಮ್‌ ಬಗಾದಿ ಆದೇಶ ಹೊರಡಿಸಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾನಿಗೀಡಾಗಿತ್ತು. ಕಳೆದ ವರ್ಷ ತಾತ್ಕಾಲಿಕ ಕಾಮಗಾರಿ ನಡೆಸಿ ಬೇಸಗೆಯಲ್ಲಿ ಲಘು ವಾಹನಗಳಿಗೆ ಮಾತ್ರ ಕಲ್ಪಿಸಿಕೊಡಲಾಗಿತ್ತು. ಈ ಬಾರಿಯೂ ಅಲ್ಲಲ್ಲಿ ಮಣ್ಣು ಕುಸಿಯಲು ಪ್ರಾರಂಭವಾಗಿರುದರಿಂದಾಗಿ ರಾತ್ರಿ ಸಂಚಾರ ಸೂಕ್ತವಲ್ಲ ಮುಂದಿನ ಆದೇಶದ‌ವರೆಗೂ ಈ

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್ Read More »

ಕರ್ನಾಟಕ

ದ.ಕ ಇಂದು 168 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು.9, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 168 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ. ಸೋಂಕಿತರ ಪ್ರಾಥಮಿಕ ಸಂಪರ್ಕ, ದುಬೈ, ಮಹಾರಾಷ್ಟ್ರ ಮೂಲದಿಂದ ಸೋಂಕು ಹರಡಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ನಾಗಾಲೋಟದಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿಸಿಕೊಳ್ಳುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ದ.ಕ ಇಂದು 168 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ
Scroll to Top