News Kadaba Desk

ಅಂತರ್ ರಾಷ್ಟ್ರೀಯ ವಿಮಾನಯಾನ ಪುನರಾರಂಭದ ಕುರಿತು ಜುಲೈನಲ್ಲಿ ನಿರ್ಧಾರ ➤ ಕೇಂದ್ರ ಸಚಿವ ಹರ್ ದೀಪ್ ಸಿಂಗ್

(ನ್ಯೂಸ್ ಕಡಬ)newskadaba.com ನವದೆಹಲಿ, ಜೂ.17, ಅಂತರ್ರಾಷ್ಟ್ರೀಯ ವಿಮಾನಯಾನ ಪುನರಾರಂಭದ ಕುರಿತು ಜುಲೈನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್‌ ಸಿಂಗ್ ಪುರಿ ತಿಳಿಸಿದ್ದಾರೆ. ವಿಮಾನಯಾನ ಕಂಪನಿಗಳನ್ನು ಹಾಗೂ ಪ್ರಯಾಣಿಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿರುವ ಹಿನ್ನೆಲೆಯಲ್ಲಿ ವಿದೇಶೀ ವಿಮಾನಯಾನ ಪುನರಾರಂಭದ ದಿನಾಂಕವನ್ನು ನಿಗದಿಪಡಿಸಲು ಸಾಧ್ಯವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ‘ನಾವು ದೇಶದೊಳಗೆ ಸುಗಮವಾಗಿ ಮತ್ತು ಸ್ಥಿರವಾಗಿ ವಿಮಾನ ಹಾರಾಟ ನಡೆಸುತ್ತಿದ್ದೇವೆ. ಜೂನ್ 15ರವರೆಗೆ 67,718 ಪ್ರಯಾಣಿಕರೊಂದಿಗೆ 730 ವಿಮಾನಗಳು ನಿರ್ಗಮಿಸಿವೆ ಹಾಗೂ 68,236 ಪ್ರಯಾಣಿಕರೊಂದಿಗೆ 734 […]

ಅಂತರ್ ರಾಷ್ಟ್ರೀಯ ವಿಮಾನಯಾನ ಪುನರಾರಂಭದ ಕುರಿತು ಜುಲೈನಲ್ಲಿ ನಿರ್ಧಾರ ➤ ಕೇಂದ್ರ ಸಚಿವ ಹರ್ ದೀಪ್ ಸಿಂಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಉಳ್ಳಾಲ: ಅಲೆಗಳ ಅಬ್ಬರಕ್ಕೆ ಸೋಮೇಶ್ವರದಲ್ಲಿರುವ ಮನೆ ಸಮುದ್ರಪಾಲು ➤ 20 ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜೂ.17, ಉಳ್ಳಾಲ ಮತ್ತು ಸೋಮೇಶ್ವರ ವ್ಯಾಪ್ತಿಯಲ್ಲಿ ಸಮುದ್ರ ಬೋರ್ಗರೆಯುತ್ತಿದ್ದು, ಸೋಮೇಶ್ವರ ದೇವಸ್ಥಾನದ ಬಳಿ ಭಾಗಶ: ಹಾನಿಗೊಂಡಿದ್ದ ಮನೆಯೊಂದು ಸಂಪೂರ್ಣ ಸಮುದ್ರಪಾಲಾಗಿದ್ದು, ಸಮುದ್ರದ ಅಬ್ಬರಕ್ಕೆ ಸುಮಾರು 20ಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಸೋಮೇಶ್ವರ ದೇವಸ್ಥಾನ ಬಳಿಯ ಮೋಹನ್ ಎಂಬವರಿಗೆ ಸೇರಿದ ಮನೆ ಸಂಪೂರ್ಣ ಸಮುದ್ರ ಪಾಲಾಗಿದ್ದು, ಕಳೆದ ಬಾರಿ ಸಮುದ್ರ ಕೊರೆತಕ್ಕೆ ಮನೆ ಭಾಗಶ: ಹಾನಿಯಾಗಿತ್ತು. ಸೋಮೇಶ್ವರ ಉಚ್ಚಿಲದಲ್ಲಿ ಸಮುದ್ರ ಕೊರೆತಕ್ಕೆ ಶಾಶ್ವತ ಕಾಮಗಾರಿಯ ಪರಿಣಾಮ, ಸೋಮೇಶ್ವರ ಕಡಲತೀರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು ಅನೇಕ

ಉಳ್ಳಾಲ: ಅಲೆಗಳ ಅಬ್ಬರಕ್ಕೆ ಸೋಮೇಶ್ವರದಲ್ಲಿರುವ ಮನೆ ಸಮುದ್ರಪಾಲು ➤ 20 ಕ್ಕೂ ಅಧಿಕ ಮನೆಗಳು ಅಪಾಯದಂಚಿನಲ್ಲಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಮಹಿಳೆಯರ ನೆರವಿಗೆ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.17 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳನ್ನು ವಿಡೀಯೊ ಚಿತ್ರಿಕರಣದ ಮೂಲಕ ಮಾಹಿತಿ ನೀಡುವ ಸಲುವಾಗಿ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್‍ನ್ನು ಧರ್ಮಸ್ಥಳದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ಗೆಳತಿ ಜ್ಞಾನ ಕೇಂದ್ರದ ಅಧ್ಯಕ್ಷರಾದ ಶ್ರದ್ದಾ ಅಮಿತ್ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಪ್ರಾರಂಭಿಸಲಾದ ಜ್ಞಾನ ವಿಕಾಸ ಯೂ ಟ್ಯೂಬ್ ಚಾನಲ್‍ನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ.ಹೆಗ್ಗಡೆ ಲೋಕಾರ್ಪಣೆಗೊಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಡೆಸುತ್ತಿರುವ ಅನೇಕ

ಧರ್ಮಸ್ಥಳ ಮಹಿಳೆಯರ ನೆರವಿಗೆ ಜ್ಞಾನವಿಕಾಸ ಯೂ ಟ್ಯೂಬ್ ಚಾನಲ್ Read More »

ಕರ್ನಾಟಕ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಜುಲೈ 1ರಂದು ಭೂಮಿ ಪೂಜೆ ಸಾಧ್ಯತೆ

(ನ್ಯೂಸ್ ಕಡಬ)newskadaba.com ಲಖನೌ, ಜೂ.17, ಬಹು ನಿರೀಕ್ಷಿತ ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಮಯ ಕೂಡಿ ಬಂದಿದ್ದು, ಇದೇ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಭೂಮಿ ಪೂಜೆ ನೆರವೇರಿಸುವ ಸಾಧ್ಯತೆ ಇದೆಯೆನ್ನಲಾಗಿದೆ. ಕೊರೋನಾ ಲಾಕ್ ಡೌನ್ ನಿಂದಾಗಿ ಮುಂದೂಡಲಾಗಿದ್ದ ರಾಮಮಂದಿರ ನಿರ್ಮಾಣದ ಭೂಮಿ ಪೂಜೆಯ ಕಾರ್ಯಕ್ಕೆ ಅಂತಿಮವಾಗಿ ಮಹೂರ್ತ ಕೂಡಿ ಬಂದಿದ್ದು, ಇದೇ ಬರುವ ಜುಲೈ 1ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರು ಭೂಮಿ ಪೂಜೆ ನೆರವೇರಿಸುವ  ಸಾಧ್ಯತೆ ಇದೆ. ಈಗಾಗಲೇ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಜುಲೈ 1ರಂದು ಭೂಮಿ ಪೂಜೆ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೊ, ಜೂ. 17, ಕಾರಿನೊಳಗೆ ಆಟವಾಡುತ್ತಿದ್ದ ವೇಳೆಯಲ್ಲಿ ಆಕಸ್ಮಿಕವಾಗಿ ಕಾರಿನ ಬಾಗಿಲು ಲಾಕ್ ಆದ ಕಾರಣ ಉಸಿರುಗಟ್ಟಿ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಮಕ್ಕಳೆಲ್ಲರೂ ನಾಲ್ಕರಿಂದ 7 ವರ್ಷದೊಳಗಿನವರಾಗಿದ್ದು, ಕಾರಿನೊಳಗೆ ಆಟವಾಡುತ್ತಿದ್ದರು. ಈ ಸಂದರ್ಭ ಕಾರಿನ ಬಾಗಿಲು ಆಕಸ್ಮಿಕವಾಗಿ ಲಾಕ್ ಆಗಿದ್ದು, ಲಾಕ್ ತೆಗೆಯಲು ಗೊತ್ತಿಲ್ಲದ ಮಕ್ಕಳು ಬೊಬ್ಬೆ ಹೊಡೆದರೂ ಯಾರಿಗೂ ತಿಳಿಯಲಿಲ್ಲ. ಸ್ವಲ್ಪ ಸಮಯದ ನಂತರ ಮಕ್ಕಳನ್ನು ಹುಡುಕುತ್ತಾ ಬಂದ ಮನೆಯವರು ಕಾರಿನೊಳಗೆ ಪ್ರಜ್ಞೆ ತಪ್ಪಿ ಬಿದ್ದಿದ್ದ ನಾಲ್ವರು

ಕಾರಿನ ಡೋರ್ ಲಾಕ್ ಆದ ಪರಿಣಾಮ ಮಕ್ಕಳಿಬ್ಬರು ಉಸಿರುಗಟ್ಟಿ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಡೆಂಗ್ಯೂ ಜ್ವರಕ್ಕೆ ಓರ್ವ ಬಲಿ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.17, ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(60) ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ನಡೆದಿದೆ. ಇವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು, ವರದಿಯಲ್ಲಿ ಡೆಂಗ್ಯೂ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೂ ಚಿಕಿತ್ಸೆ ಸ್ಪಂದಿಸಿದ ಇವರು ಮಂಗಳವಾರ ಮೃತಪಟ್ಟಿದ್ದಾರೆ. ಇವರು ವೃತ್ತಿಯಲ್ಲಿ ಕೃಷಿಕರಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

ಡೆಂಗ್ಯೂ ಜ್ವರಕ್ಕೆ ಓರ್ವ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com.ಮೂಡಬಿದಿರೆ,ಜೂ.17:ಮೂಡಬಿದಿರೆಯ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ಕಾಡುಕೋಣವೊಂದು ಮಂಗಳವಾರ ರಾತ್ರಿ ಕಾಣಿಸಿಕೊಂಡಿದೆ. ಪುರಸಭಾ ವ್ಯಾಪ್ತಿಯಲ್ಲಿ ಕರಿಂಜೆ ಗ್ರಾಮದ ಕರಿಂಜೆಗುತ್ತು ಪರಿಸರದಲ್ಲಿ ಮಂಗಳವಾರ ಬೆಳಗ್ಗೆ ಕಾಣಿಸಿಕೊಂಡಿತ್ತು ತಕ್ಷಣ ಸ್ಥಳೀಯರು ಅರಣ್ಯ ಇಲಾಖೆಗೆ ತಿಳಿಸಿದರು.ಸ್ಥಳಕ್ಕೆ ಭೇಟಿನೀಡಿದ ಅರಣ್ಯ ಇಲಾಖಾ ಅಧಿಕಾರಿಗಳು ದಿನವಿಡೀ ಹುಡುಕಾಟ ನಡೆಸಿದರು.ಆದರೆ ಎಲ್ಲೂ ಪತ್ತೆ ಯಾಗಿರಳಿಲ್ಲ. ರಾತ್ರಿ 9.30 ಸುಮಾ ರಿಗೆ ಕಲ್ಲಬೆಟ್ಟು ಗಂಟಾಲ್ಕಟ್ಟೆ ಚರ್ಚ್ ಬಳಿ ಅಸ್ವಸ್ಥಗೊಂಡ ರೀತಿಯಲ್ಲಿ ಪತ್ತೆಯಾಯಿತು. ಕೂಡಲೇ ಕಾರ್ಯಪ್ರವೃತರಾದ ಅರಣ್ಯ ಇಲಾಖೆ ಕಾಡುಕೋಣವನ್ನು ಹಿಡಿಯುವಲ್ಲಿ. ಸಫಲಾರಾಗಿದ್ದಾರೆ. ನಂತರ

ಮೂಡಬಿದಿರೆ ಕಾಡಿನಿಂದ ನಾಡಿಗೆ ಬಂದ ಕಾಡುಕೋಣ ➤ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ

ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ಲಾರಿ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತರನ್ನು ಪೂಂಜರಕೋಡಿ ನಿವಾಸಿ ರಿತೇಶ್ (30) ಎಂದು ಗುರುತಿಸಲಾಗಿದೆ. ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಇವರು ಕೆಲಸ ಮುಗಿಸಿ ಮನೆಗೆ ಹಿಂದಿರುಗುವ ವೇಳೆ ಈ ಘಟನೆ ನಡೆದಿದೆ ಸಂಭವಿಸಿದ್ದು, ತಕ್ಷಣವೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಕೂಡ ತಲೆಗೆ ಗಂಭೀರ ಗಾಯವಾದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನಾ

ಲಾರಿ – ಸ್ಕೂಟರ್ ಢಿಕ್ಕಿ ➤ ಸ್ಕೂಟರ್ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಶಾಕ್ ಗೆ ಕೃಷಿಕ ಬಲಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 17, ವಿದ್ಯುತ್ ಶಾಕ್ ಹೊಡೆದು ಕೃಷಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಗುಂಡಿಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಗುಂಡಿಮಜಲು ನಿವಾಸಿ ಬಾಸ್ಕರ್ ಗೌಡ ಎಂದು ಗುರುತಿಸಲಾಗಿದೆ. ಅವರು ಮನೆಗೆ ನೀರು ಸಂಗ್ರಹಕ್ಕಾಗಿ ತೋಟದಲ್ಲಿರುವ ಕೃಷಿ ಪಂಪ್ ಸೆಟ್ ನ ಸ್ವಿಚ್ ಹಾಕಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆನ್ನಲಾಗಿದೆ. ಇವರು ಸುಮಾರು ಹೊತ್ತು ಆದರೂ ಮನೆಗೆ ಬಾರದೆ ಇದ್ದುದ್ದರಿಂದ ಅವರ ಪತ್ನಿ ಪ್ರಿಯಾಂಕ ಅವರು ಪಂಪ್ ಹೌಸ್ ಬಳಿ ತೆರಳಿ

ವಿದ್ಯುತ್ ಶಾಕ್ ಗೆ ಕೃಷಿಕ ಬಲಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.16. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದ ಘಟನೆ ಮಂಗಳವಾರದಂದು ನಡೆದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top