News Kadaba Desk

ಕೊರೊನಾ ವಾರಿಯರ್‍ಗೆ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಆ್ಯಂಬುಲೆನ್ಸ್ ಚಾಲಕರೋರ್ವರಿಗೆ ಅಂಗಡಿಯೊಂದರ ಮಾಲಕ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಆರೋಪ ಮಂಗಳೂರಿನಲ್ಲಿ ನಡೆದಿದೆ. ಸುಳ್ಯದ ಆ್ಯಂಬುಲೆನ್ಸ್ ಚಾಲಕ ಅಭಿಲಾಷ್ ಅವರು ಅಸೌಖ್ಯಕ್ಕೊಳಗಾಗಿದ್ದ ರೋಗಿಯೋರ್ವವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲು ಬೆಳಗ್ಗಿನ ಜಾವ ಕರೆದುಕೊಂಡು ಹೋಗುತ್ತಿದ್ದರು. ಈ ಸಂದರ್ಭ ಕುಡಿಯಲು ನೀರು ಅವಶ್ಯವಿದ್ದುದರಿಂದ ಫಳ್ನೀರ್‍ನಲ್ಲಿರುವ ಅಂಗಡಿಯೊಂದಕ್ಕೆ ತೆರಳಿ ನೀರು ಕೇಳಿದಾಗ ನೀರು ನಿರಾಕರಿಸಿ ನಿಂದಿಸಿದ ಆರೋಪ ವ್ಯಕ್ತವಾಗಿದೆ. ಇದರಿಂದ ಬೇಸರಗೊಂಡ ಆ್ಯಂಬುಲೆನ್ಸ್ ಚಾಲಕ ಬಂದರು ಠಾಣೆಯಲ್ಲಿ ದೂರು ದಾಖಳಿಸಿದ್ದಾರೆ. ಕೊರೊನಾ ವಾರಿಯರ್‍ಗೆ ಅಂಗಡಿಯಲ್ಲಿದ್ದಾತ ಕೋವಿಡ್ ರೋಗಿಗಳನ್ನು […]

ಕೊರೊನಾ ವಾರಿಯರ್‍ಗೆ ನೀರಿನ ಬಾಟಲ್ ಕೊಡಲು ನಿರಾಕರಿಸಿದ ಅಂಗಡಿ ಮಾಲಕ Read More »

ಕರಾವಳಿ

ಆತ್ಮಹತ್ಯೆಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ?

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.10:ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದು. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾಗಿರುವ ಯುವಕ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ(28) ಎನ್ನಲಾಗಿದೆ. ಈತ ಖಾಸಗಿ ಕಂಪೆನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ರಾತ್ರಿ ಪಾಳಿ ಕೆಲಸ ಮುಗಿಸಿ ಬರುತ್ತಿದ್ದ ಸಂದರ್ಭ ಸೇತುವೆಯ ಬಳಿ ಬೈಕ್ ನಿಲ್ಲಿಸಿ ನಾಪತ್ತೆ ಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೆ ನದಿಯ ಬಳಿ ಪತ್ತೆಗಾಗಿ ಹುಡುಕಾಟ ಕಾರ್ಯಚರಣೆ ಆರಂಭವಾಗಿದೆ.

ಆತ್ಮಹತ್ಯೆಗೆ ಹಾಟ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ? Read More »

ಕರಾವಳಿ

ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯದಿರಿ ➤ ಎಸ್ಕೆಎಸ್ಸೆಸ್ಸೆಫ್ ಮನವಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 9, ಪ್ರಸ್ತುತ ಕೋವಿಡ್ -19 ಕರಿನೆರಳಿನಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು,  ಈ ಸೋಂಕು ನಿಯಂತ್ರಣಕ್ಕೆ ಬರುವ ತನಕ ಅಥವಾ ಅದಕ್ಕೆ ಪ್ರಾಥಮಿಕ ಔಷದಿ ಕಂಡು ಹಿಡಿಯುವ ತನಕ ಶಾಲೆಗಳ ಪುನರಾರಂಭವನ್ನು ಮುಂದೂಡುವಂತೆ ಆಗ್ರಹಿಸಿ ಎಸ್ಕೆಎಸ್ಸೆಸ್ಸೆಫ್ ಟ್ರೆಂಡ್ ಜಿಲ್ಲಾ ಸಮಿತಿಯು ಜಿಲ್ಲಾ ಶಿಕ್ಷಣಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು. ಕೋವಿಡ್ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿದ್ದು, ಜನ ಸಾಮಾನ್ಯರ ಮನದಲ್ಲಿ ಭೀತಿಯ ವಾತಾವರಣ ಸೃಷ್ಠಿಯಾಗಿದೆ. ಪ್ರಸ್ತುತ ಕೋವಿಡ್-19 ಕರಿ ನೆರಳಲ್ಲಿ ಶಾಲೆಗಳ

ಕೊರೋನಾ ನಿಯಂತ್ರಣಕ್ಕೆ ಬರುವವರೆಗೆ ಶಾಲೆಗಳನ್ನು ತೆರೆಯದಿರಿ ➤ ಎಸ್ಕೆಎಸ್ಸೆಸ್ಸೆಫ್ ಮನವಿ Read More »

ಕರ್ನಾಟಕ

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ.10, ಯುವಕನೋರ್ವ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದಿದೆ. ದಾಳಿಗೊಳಗಾದ ಯುವಕನನ್ನು ಶಫೀಕ್ (16) ಎಂದು ಗುರುತಿಸಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತನ್ನ ಸ್ನೇಹಿತನ ಜತೆ ಸಾಲೆತ್ತೂರಿನಿಂದ ಕರೈಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಮುಳ್ಳು ಹಂದಿ ದಾಳಿ Read More »

ಕರಾವಳಿ, ಕ್ರೈಮ್ ನ್ಯೂಸ್

ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ

(ನ್ಯೂಸ್ ಕಡಬ)newskadaba.com ಮನೆಮನೆಗೆ ಅಗತ್ಯ ಸೇವೆ ತಲುಪಿಸುವ ‘ಜನ ಸೇವಕ’ ಯೋಜನೆಯನ್ನು ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಹೀಗಾಗಿ ಆಧಾರ್, ಎಪಿಎಲ್ ಪಡಿತರ ಚೀಟಿ ಹಾಗೂ ಮತದಾರರ ಪಟ್ಟಿ ಈ ಸೇವೆಗೆ ಸೇರ್ಪಡೆಗೊಳ್ಳಲಿದೆ. ಇದರಿಂದಾಗಿ ಮನೆ ಬಾಗಿಲಲ್ಲೇ ಆಧಾರ್ ನೋಂದಣಿ ಮಾಡಿಸುವ, ಎಪಿಎಲ್ ಪಡಿತರ ಚೀಟಿ ಪಡೆಯುವ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅಥವಾ ಪರಿಷ್ಕರಿಸಿಕೊಳ್ಳಲು ಅವಕಾಶ ಸಿಗಲಿದೆ. ‘ಜನ ಸೇವಕ’ ಯೋಜನೆಯಡಿ ಆದಾಯ ಜಾತಿ ಪ್ರಮಾಣ ಪತ್ರ, ಹಿರಿಯ ನಾಗರಿಕರ ಪಿಂಚಣಿ

ಇನ್ಮುಂದೆ ಮನೆ ಬಾಗಿಲಲ್ಲೇ ಲಭ್ಯವಾಗಲಿದೆ ಪಡಿತರ ಚೀಟಿ Read More »

ಕರಾವಳಿ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ

(ನ್ಯೂಸ್ ಕಡಬ) newskadaba.com.,ಮಂಗಳೂರುಜೂ.9:ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿದ್ದ ಪಿಲಿಕುಳದ ಡಾ ಶಿವರಾಮ ಕಾರಂತ್ ನಿಸರ್ಗಧಾಮ ಜೂ 10 ರಿಂದ ಪ್ರವಾಸಿಗರಿಗೆ ಮತ್ತೆ ಬಾಗಿಲು ತೆರೆಯಲಿದೆ. ಸರಕಾರದ ಮಾರ್ಗಸೂಚಿಯನ್ನು ಪಾಲಿಸಿಕೊಂಡು ಪಿಲಿಕುಳದ ಜೈವಿಕ ಉದ್ಯಾನ, ಸಂಸ್ಕøತಿ ಗ್ರಾಮ, ಆರ್ಬೋರೇಟಮ್, ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು, ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಇನ್ನೂ ಕೆಲದಿನಗಳ ಕಾಲ ಕಾಯಬೇಕಾಗಿದೆ. ಸಾರ್ವಜನಿಕರು ನಿಸರ್ಗಧಾಮದ ಆಕರ್ಷಣೆಗಳನ್ನು ವೀಕ್ಷಿಸುವಾಗ 6ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು, ಮಾಸ್ಕ್ ಧಾರಣೆ

ನಾಳೆಯಿಂದ ವೀಕ್ಷಣೆಗೆ ಮುಕ್ತವಾಗಲಿದೆ ಪಿಲಿಕುಳದ ನಿಸರ್ಗಧಾಮ Read More »

ಕರ್ನಾಟಕ

ತಮಿಳುನಾಡು, ತೆಲಂಗಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು! ➤ ಕರ್ನಾಟಕದಲ್ಲೂ ರದ್ದಾಗುತ್ತಾ ಪರೀಕ್ಷೆ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 9, ಕೊರೋನಾ ಭೀತಿಯಿಂದಾಗಿ ಎಲ್ಲಾ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು, ತೆಲಂಗಾಣದಲ್ಲಿ ಹಾಗೂ ತಮಿಳುನಾಡಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿದೆ. ಹೀಗಾಗಿ ಕರ್ನಾಟಕದಲ್ಲಿ 10ನೇ ತರಗತಿ ಪರೀಕ್ಷೆ ನಡೆಯುತ್ತದೆಯೇ? ರದ್ದಾಗುತ್ತದೆಯೇ? ಎಂಬ ಪ್ರಶ್ನೆಯಂತೂ ಎದುರಾಗಿದೆ. ಈ ಪ್ರಶ್ನೆಗೆ ಖುದ್ದಾಗಿ ಉತ್ತರಿಸಿದ ಶಿಕ್ಷಣ ಸಚಿವರಾದ ಎಸ್‌. ಸುರೇಶ್‌ ಕುಮಾರ್‌ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಲಾಗದು ಎಂದು ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಪರೀಕ್ಷಾ ದಿನಾಂಕ ನಿಗದಿಯಾಗಿದ್ದು, ವೇಳಾಪಟ್ಟಿಯಂತೆಯೇ ಪರೀಕ್ಷೆ ನಡೆಯಲಿದೆ. ನಿರ್ಧಾರ ಬದಲಾಯಿಸುವ

ತಮಿಳುನಾಡು, ತೆಲಂಗಾಣದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು! ➤ ಕರ್ನಾಟಕದಲ್ಲೂ ರದ್ದಾಗುತ್ತಾ ಪರೀಕ್ಷೆ? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಜೂ.9, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವಿಶೇಷ ದಳದ ಎ.ಎಸ್.ಐ. ಧನಂಜಯ ಅವರು ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ. ವಿಟ್ಲ, ಬಿಸಿರೋಡ್ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು, ಮಂಗಳೂರು ಜಿಲ್ಲಾ ಪೊಲೀಸ್ ವಿಶೇಷ ದಳದಲ್ಲಿ ಎ.ಎಸ್.ಐ. ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ಬೆಳಿಗ್ಗೆ ಎದೆನೋವಿನಿಂದ ಬಳಲುತ್ತಿದ್ದ ಅವರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆನ್ನಲಾಗಿದೆ.  

ದ.ಕ. ಜಿಲ್ಲಾ ಪೊಲೀಸ್ ವಿಶೇಷ ದಳದ ಎಎಸ್ಐ ಹೃದಯಾಘಾತದಿಂದ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ನಿಧನ

(ನ್ಯೂಸ್ ಕಡಬ)newskadaba.com ಜೂ. 9, ಎಂಟು ಬಾರಿ ಒಡಿಶಾದ ಭದ್ರಕ್ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ, ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 79 ವರ್ಷ ವಯಸ್ಸಾಗಿತ್ತು. ಸೇಥಿಯವರು 2000ದಿಂದ 2004ರವರೆಗೆ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಸಕ್ರಿಯರಾಗಿದ್ದ ಅವರು, ಎರಡು ಬಾರಿ ಒಡಿಶಾ ವಿಧಾನಸಭೆಗೂ ಆಯ್ಕೆಯಾಗಿದ್ದರು. ಅರ್ಜುನ್ ಚರಣ್ ತಮ್ಮ ನಿಸ್ವಾರ್ಥ ಸೇವೆ ಹಾಗೂ

ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೊನಾ ಜೊತೆ ಡೆಂಗ್ಯೂ ಕಾಟ

(ನ್ಯೂಸ್ ಕಡಬ) newskadaba.com.ಕಡಬ,ಜೂ.9:ಕೊರೊನಾ ಕಾಟದ ಮಧ್ಯೆ ಇದೀಗ ಡೆಂಗ್ಯೂ ಜ್ವರ ವಕ್ಕರಿಸಿಕೊಂಡಿದೆ. ಪುತ್ತೂರು ಮತ್ತ ಕಡಬ ತಾಲೂಕಿನಲ್ಲಿ ಜೂನ್ ಮೊದಲ ವಾರದಲ್ಲಿ 53 ಪ್ರಕರಣಗಳು ಕಂಡು ಬಂದಿದೆ. ಕಡಬ ಪ್ರಾ,ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 1, ಕೊಯಿಲ 2. ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 8, ಕೊಳ್ತಿಕೆ ಮತ್ತು ಶಿರಾಡಿಯಲ್ಲಿ 1, ಪಾಣಾಜೆ-31 ಸರ್ವೆ ಮತ್ತು ತಿಂಗಳಾಡಿಯಲ್ಲಿ 3 ಪ್ರಕರಣಗಳು ಕಂಡು ಬಂದಿದೆ.ಜನವರಿಯಿಂದ ಜೂನ್ 7ರ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 258 ಡೆಂಗ್ಯೂ

ಕೊರೊನಾ ಜೊತೆ ಡೆಂಗ್ಯೂ ಕಾಟ Read More »

ಕರಾವಳಿ
Scroll to Top