News Kadaba Desk

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.20. ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತಡ್ಕ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾವತ್ತಡ್ಕದಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರಿನಿಂದ ಅಧಿಕಾರಿಗಳು ಆಗಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಟ್ಯಾಂಕರ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು, […]

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಕೇರಳದಲ್ಲಿ ಕೊಲೆಯತ್ನ ನಡೆಸಿ ಕಡಬದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಊರವರ ಸಹಕಾರದೊಂದಿಗೆ ಕೇರಳ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕೊಲ್ಲಂ ಗ್ರಾಮಾಂತರ ಠಾಣಾ ವ್ಯಾಪ್ತಿಯ ಸುಗು ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಲ್ಲಂ ಠಾಣಾ ವ್ಯಾಪ್ತಿಯಲ್ಲಿ 307 ಕೇಸು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿಯು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಮಡುಪು ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಶುಕ್ರವಾರದಂದು ಕಡಬಕ್ಕೆ ಆಗಮಿಸಿದ ಕೊಲ್ಲಂ ಠಾಣಾ ಎಸ್ಐ

ಕೇರಳದಲ್ಲಿ ಕೊಲೆಗೆ ಯತ್ನಿಸಿ ಕಡಬದಲ್ಲಿ ಆಶ್ರಯ ➤ ಊರವರ ಸಹಕಾರದಲ್ಲಿ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬುಲೆಟ್ – ಲಾರಿ ನಡುವೆ ಢಿಕ್ಕಿ ➤ ಪುತ್ತೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.20. ಲಾರಿ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ‌ ಸವಾರನನ್ನು ಪುತ್ತೂರು ತಾಲೂಕಿನ ಬಡಗನ್ನೂರು ಪೇರಾಲ್ ನಿವಾಸಿ ಚಂದ್ರಶೇಖರ್ ಆಳ್ವರ ಪುತ್ರ ಪ್ರಣ್ವಿತ್ ಆಳ್ವ (21) ಎಂದು ಗುರುತಿಸಲಾಗಿದೆ. ಮೂಡಬಿದಿರೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರಣ್ವಿತ್ ಚಲಯಿಸುತ್ತಿದ್ದ ಹಿಮಾಲಯ ಬುಲ್ಲೆಟ್ ಮಂಗಳೂರಿನ ಮರೋಳಿ ಎಂಬಲ್ಲಿ ಲಾರಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಮಂಗಳೂರು: ಬುಲೆಟ್ – ಲಾರಿ ನಡುವೆ ಢಿಕ್ಕಿ ➤ ಪುತ್ತೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ನನ್ನ ಮಗಳ ಸಾವಿಗೆ 7 ವರ್ಷಗಳ ಬಳಿಕವಾದರೂ ನ್ಯಾಯ ಸಿಕ್ಕಿತಲ್ಲ. ಈ ದಿನಕ್ಕಾಗಿ ನಾನು ಕಾಯುತ್ತಿದ್ದೆ. ಈ ದಿನವನ್ನು ನನ್ನ ಮಗಳಿಗೆ ಅರ್ಪಿಸುತ್ತಿದ್ದೇನೆ ಎಂದು ನಿರ್ಭಯಾ ತಾಯಿ ಪ್ರತಿಕ್ರಿಯಿಸಿದ್ದಾರೆ. ತನ್ನ ಮಗಳನ್ನು ಅತ್ಯಾಚಾರಗೈದು ಚಿತ್ರಹಿಂಸೆ ನೀಡಿ ಕೊಂದ ಅಪರಾಧಿಗಳಿಗೆ ಗಲ್ಲು ಶಿಕ್ಷೆ ನೀಡಿದ ನಂತರ ಅವರು ಈ ರೀತಿ ಪ್ರತಿಕ್ರಿಯಿಸಿದರು. 2012ರಿಂದಲೂ ಮಗಳ ಸಾವಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡುತ್ತಲೇ ಬಂದಿದ್ದೆವು. ಕೊನೆಗೂ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಯಾಗಿದೆ. ಇಂದು

ಮಗಳ ಸಾವಿಗೆ ಏಳು ವರ್ಷಗಳ ಬಳಿಕ ನ್ಯಾಯ ಸಿಕ್ಕಿದೆ ➤ ನಿರ್ಭಯಾ ತಾಯಿ ಪ್ರತಿಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊನೆಗೂ ಬಿತ್ತು ನಿರ್ಭಯಾ ಹಂತಕರ ಕೊರಳಿಗೆ ಗಲ್ಲು ➤ ಅತ್ಯಾಚಾರಿಗಳಿಗೆ ಕಠಿಣ ಸಂದೇಶ ರವಾನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.20. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಗಲ್ಲಿಗೇರಿಸಲಾಯಿತು. ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಾದ ಮುಕೇಶ್ ಸಿಂಗ್, ವಿನಯ್ ಶರ್ಮಾ, ಅಕ್ಷಯ್ ಠಾಕೂರ್ ಹಾಗೂ ಪವನ್ ಗುಪ್ತ ತಮ್ಮ ವಕೀಲರ ಮೂಲಕ ವಿವಿಧ ಕಸರತ್ತು ನಡೆಸಿದರೂ ಗಲ್ಲು ಶಿಕ್ಷೆಯನ್ನು ತಪ್ಪಿಸಲು ಸಾಧ್ಯವಾಗಲಿಲ್ಲ. ಮ್ಯಾಜಿಸ್ಟ್ರಿಟ್ ಸಮ್ಮುಖದಲ್ಲಿ

ಕೊನೆಗೂ ಬಿತ್ತು ನಿರ್ಭಯಾ ಹಂತಕರ ಕೊರಳಿಗೆ ಗಲ್ಲು ➤ ಅತ್ಯಾಚಾರಿಗಳಿಗೆ ಕಠಿಣ ಸಂದೇಶ ರವಾನೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊರೋನಾಕ್ಕೆ ಬೆಚ್ಚಿಬಿದ್ದ ಭಾರತ ➤ ಮಾರ್ಚ್ 22 ರಂದು ‘ಜನತಾ ಕರ್ಫ್ಯೂ’: ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.19. ದೇಶದಲ್ಲಿ ಕೊರೊನಾ ವೈರಸ್ ನ ಅಟ್ಟಹಾಸವು ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22 ಭಾನುವಾರದಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ‘ಜನತಾ ಕರ್ಫ್ಯೂ’ ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕೊರೋನಾದಿಂದಾಗಿ ಇಡೀ ಜಗತ್ತೇ ಸಮಸ್ಯೆಯನ್ನು ಎದುರಿಸುತ್ತಿದೆ. ಕೊರೊನಾವೈರಸ್ ಗೆ ಇನ್ನೂ ಸರಿಯಾದ ಲಸಿಕೆ ಸಿಕ್ಕಿಲ್ಲ. ನಿಮ್ಮ ಕೆಲ ವಾರಗಳು ನನಗೆ ಬೇಕಾಗಿದೆ. ದೇಶದ ನಾಗರಿಕರು

ಕೊರೋನಾಕ್ಕೆ ಬೆಚ್ಚಿಬಿದ್ದ ಭಾರತ ➤ ಮಾರ್ಚ್ 22 ರಂದು ‘ಜನತಾ ಕರ್ಫ್ಯೂ’: ಪ್ರಧಾನಿ ಮೋದಿ ಕರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸರಕಾರಿ ಶಾಲೆಯ ಅಭಿವೃದ್ಧಿ ಬಗ್ಗೆ ದಿನಪತ್ರಿಕೆಯಲ್ಲಿ ಲೇಖನ ➤ ಕಡಬದ ಶಿಕ್ಷಕರಿಗೆ ಬಂತು ಶಿಕ್ಷಣ ಸಚಿವರಿಂದ ಬುಲಾವ್

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಕಡಬ ತಾಲೂಕು ಓಂತ್ರಡ್ಕ ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕ ದಿಲೀಪ್ ಕುಮಾರ್ ಸಂಪಡ್ಕ ಅವರು ಬರೆದ ಲೇಖನವೊಂದು ದಿನಪತ್ರಿಕೆಯಲ್ಲಿ ಪ್ರಕಟವಾದ ಸಂಬಂಧ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರದಂದು ದೂರವಾಣಿ ಮುಖಾಂತರ ಶಿಕ್ಷಕರೊಂದಿಗೆ ವಿಶ್ಲೇಷಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ದಾಖಲಾತಿಗಾಗಿ ಕ್ಯೂ ನಿಲ್ಲುವ ಸನ್ನಿವೇಶ ಸೃಷ್ಟಿಯಾಗಬೇಕು ಎನ್ನುವ ಆಶಯವನ್ನು ಇತ್ತೀಚೆಗೆ ಸಚಿವರು ವ್ಯಕ್ತಪಡಿಸಿದ್ದರು. ದಾಖಲಾತಿಗಾಗಿ ಕ್ಯೂ ನಿಲ್ಲಬೇಕು ಎನ್ನುವ ವಿಚಾರದಲ್ಲಿ ಪತ್ರಿಕೆಯೊಂದರಲ್ಲಿ ದಿಲೀಪ್ ಬರೆದ

ಸರಕಾರಿ ಶಾಲೆಯ ಅಭಿವೃದ್ಧಿ ಬಗ್ಗೆ ದಿನಪತ್ರಿಕೆಯಲ್ಲಿ ಲೇಖನ ➤ ಕಡಬದ ಶಿಕ್ಷಕರಿಗೆ ಬಂತು ಶಿಕ್ಷಣ ಸಚಿವರಿಂದ ಬುಲಾವ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಹೊಟೇಲ್ ನಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿ ಮಾರಾಟ ಪ್ರಕರಣ ➤ ಜಿಲೆಟಿನ್ ಸರಬರಾಜು ಮಾಡುತ್ತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಠಾಣಾ ವ್ಯಾಪ್ತಿಯ ಲಾವತ್ತಡ್ಕದ ಹೋಟೆಲ್‌ವೊಂದಕ್ಕೆ, ಜಿಲೆಟಿನ್ ಕಡ್ಡಿಯನ್ನು ಅಕ್ರಮವಾಗಿ ಸರಬರಾಜು ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕಡಬ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸೋಮವಾರಪೇಟೆ ನಿವಾಸಿ ಚಂದ್ರ(60) ಹಾಗೂ ಸಕಲೇಶಪುರ ನಿವಾಸಿ ನಿತ್ಯಾನಂದ (28) ಎಂದು ಗುರುತಿಸಲಾಗಿದೆ. ಲಾವತ್ತಡ್ಕದ ಹೊಟೇಲಿನಲ್ಲಿ ಜಿಲೆಟಿನ್ ಕಡ್ಡಿಯನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದ ಕಡಬ ಪೊಲೀಸರು ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡು ಹೊಟೇಲ್ ಮಾಲಕನನ್ನು ಬಂಧಿಸಿದ್ದರು.

ನೆಲ್ಯಾಡಿ: ಹೊಟೇಲ್ ನಲ್ಲಿ ಅಕ್ರಮವಾಗಿ ಜಿಲೆಟಿನ್ ಕಡ್ಡಿ ಮಾರಾಟ ಪ್ರಕರಣ ➤ ಜಿಲೆಟಿನ್ ಸರಬರಾಜು ಮಾಡುತ್ತಿದ್ದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಭಾರತದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ➤ ಐಸಿಎಸ್ಸಿ ಬೋರ್ಡ್ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.19, ತೀವ್ರಗತಿಯಲ್ಲಿ ಹರಡುತ್ತಿರುವ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಐಸಿಎಸ್ ಇ ಬೋರ್ಡ್ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಗುರುವಾರ ಮುಂದೂಡಿದೆ. ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 31ರವರೆಗೆ ಮುಂದೂಡಲಾಗಿದೆ ಎಂದು ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಇ) ತಿಳಿಸಿದೆ. ಎಲ್ಲಾ ಪರೀಕ್ಷೆಗಳ ವೇಳಾಪಟ್ಟಿಯನ್ನು ಮಾರ್ಚ್ 31ರ ನಂತರ ಘೋಷಿಸುವ ಸಾಧ್ಯತೆ ಇರುವುದಾಗಿ ತಿಳಿಸಿದೆ. ಅಲ್ಲದೇ ಮೌಲ್ಯಮಾಪನ ಕೆಲಸ ಕೂಡಾ ಮಾರ್ಚ್ 31ರಂದು ಮರು ನಿಗದಿಪಡಿಸಲಾಗುವುದು

ಭಾರತದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆ ➤ ಐಸಿಎಸ್ಸಿ ಬೋರ್ಡ್ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಮೂರು ಮಕ್ಕಳ‌ ತಂದೆಯಿಂದ ಅಪ್ರಾಪ್ತೆಯ ಅತ್ಯಾಚಾರ ➤ ಅಪ್ರಾಪ್ತ ಬಾಲಕಿ ಇದೀಗ ಆರು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಮೂರು ಮಕ್ಕಳ ತಂದೆಯೋರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದುದರಿಂದ ಆಕೆ ಇದೀಗ ಆರು ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಡಬ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕೆರ್ಮಾಯಿ ಸಿ ಆರ್ ಸಿ ಕಾಲನಿ ನಿವಾಸಿ ಮಹಾದೇವ(40) ಎಂದು ಗುರುತಿಸಲಾಗಿದೆ. ಆರೋಪಿಯು ಕಡಬ ಠಾಣಾ ವ್ಯಾಪ್ತಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಗೈದಿದ್ದು, ಇದೀಗ ಆಕೆ ಆರು ತಿಂಗಳ ಗರ್ಭಿಣಿಯಾಗಿದ್ದರಿಂದ ಅತ್ಯಾಚಾರ ಪ್ರಕರಣ

ಕಡಬ: ಮೂರು ಮಕ್ಕಳ‌ ತಂದೆಯಿಂದ ಅಪ್ರಾಪ್ತೆಯ ಅತ್ಯಾಚಾರ ➤ ಅಪ್ರಾಪ್ತ ಬಾಲಕಿ ಇದೀಗ ಆರು ತಿಂಗಳ ಗರ್ಭಿಣಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top