News Kadaba Desk

ಕೆಟ್ಟು ನಿಂತಿದ್ದ ಲಾರಿ ಏಕಾಏಕಿ ಚಲಿಸಿ ರಿಕ್ಷಾಕ್ಕೆ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಜ.09. ಕೆಟ್ಟು ನಿಂತಿದ್ದ ಲಾರಿಯೊಂದು ಹಠಾತ್ತನೆ ಚಲಿಸಿದ ಪರಿಣಾಮ ಎದುರಗಡೆ ನಿಲ್ಲಿಸಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಲಾರಿಯೊಂದು ಕೆಟ್ಟು ಹೋದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಲಾರಿಯನ್ನು ದುರಸ್ತಿ ಮಾಡಲೆಂದು ಮೆಕ್ಯಾನಿಕ್ ಆಟೋ ರಿಕ್ಷಾದಲ್ಲಿ ಆಗಮಿಸಿದ್ದರು. ದುರಸ್ತಿ ವೇಳೆ ಲಾರಿ ಹಠಾತ್ತನೆ ಚಲಿಸಿ ಎದುರುಗಡೆ ಇದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದು ರಿಕ್ಷಾವನ್ನು ದೂಡಿಕೊಂಡು ಹೋಗಿ ಮರಕ್ಕೆ ಢಿಕ್ಕಿ […]

ಕೆಟ್ಟು ನಿಂತಿದ್ದ ಲಾರಿ ಏಕಾಏಕಿ ಚಲಿಸಿ ರಿಕ್ಷಾಕ್ಕೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ➤ ಜೋಡಿಗಳನ್ನು ಕೂಡಿಟ್ಟು ಹಣ ಮಾಡುವ ದಂಧೆ ಭೇದಿಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.09. ದೇಶದ ವಿವಿಧೆಡೆ ಕೇಳಿ ಬರುತ್ತಿದ್ದ ಹನಿ ಟ್ರ್ಯಾಪ್ ಘಟನೆಯು ಉಪ್ಪಿನಂಗಡಿಯಲ್ಲಿ ನಡೆದಿದ್ದು, ಶಂಕಿತ ಆರೋಪಿಗಳು ಪೊಲೀಸರ ಬಲೆಗೆ ಬಿದ್ದ ಘಟನೆ ಗುರುವಾರದಂದು ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿ ದಿಲೀಪ್ ಟಿ ಎಂಬವರು ತನ್ನ ಸ್ನೇಹಿತರಾದ ಜನಾರ್ಧನನ್, ಪ್ರಶಾಂತ್, ಪ್ರವೀಣ್ ಎಂಬವರೊಂದಿಗೆ ಇನ್ನೋವಾ ಕಾರಿನಲ್ಲಿ ಕಣ್ಣೂರಿನಿಂದ ಪುತ್ತೂರಿಗೆ ಆಗಮಿಸಿದ್ದು, ಪುತ್ತೂರಿನಲ್ಲಿ ಪರಿಚಯದ ಹುಡುಗಿಯೊಂದಿಗೆ ಒಂದು ಮನೆಗೆ ತೆರಳಿದ್ದರೆನ್ನಲಾಗಿದೆ. ಆ ಮನೆಯಲ್ಲಿ ಮತ್ತೊಬ್ಬಳು ಹುಡುಗಿಯಿದ್ದು ಅದೇ ಸಮಯದಲ್ಲಿ ಇಬ್ಬರು

ರಾಜ್ಯದಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ➤ ಜೋಡಿಗಳನ್ನು ಕೂಡಿಟ್ಟು ಹಣ ಮಾಡುವ ದಂಧೆ ಭೇದಿಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಕ್ರಮ‌ ಮರ ಸಾಗಾಟಕ್ಕೆ ಲಂಚದ ಬೇಡಿಕೆ ➤ ಫಾರೆಸ್ಟ್ ಗಾರ್ಡ್ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.08. ಅಕ್ರಮವಾಗಿ ಮರ ಸಾಗಾಟಕ್ಕೆ ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅರಣ್ಯ ರಕ್ಷಕನೋರ್ವನನ್ನು ಬಂಧಿಸಿದ ಘಟನೆ ಬುಧವಾರದಂದು ಬೆಳ್ತಂಗಡಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಕಣಿಯೂರು ಬೀಟ್ ಸಿಬ್ಬಂದಿ ಅರಣ್ಯ ರಕ್ಷಕ ಸುಧೀರ್ ಎಂದು ಗುರುತಿಸಲಾಗಿದೆ. ಆರೋಪಿಯು ಬೆಳ್ತಂಗಡಿ ತಾಲೂಕಿನ ಉರುವಾಲು ನಿವಾಸಿ ಸಿದ್ದೀಕ್ ಅಕ್ಬರ್ ಎಂಬವರಿಂದ ಅಕ್ರಮವಾಗಿ ಮರ ಸಾಗಾಟ ಮಾಡುವುದಕ್ಕಾಗಿ 15 ಸಾವಿರ ಲಂಚದ ಬೇಡಿಕೆ ಇಟ್ಟಿದ್ದು, 10 ಸಾವಿರ

ಬೆಳ್ತಂಗಡಿ: ಅಕ್ರಮ‌ ಮರ ಸಾಗಾಟಕ್ಕೆ ಲಂಚದ ಬೇಡಿಕೆ ➤ ಫಾರೆಸ್ಟ್ ಗಾರ್ಡ್ ಎಸಿಬಿ ಬಲೆಗೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಿವೃತ್ತ ಯೋಧ, ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜ.08. ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ, ನಿವೃತ್ತ ಯೋಧ, ನೆಟ್ಟಣ ವಾಲ್ತಾಜೆ ನಿವಾಸಿ ಬಾಲಕೃಷ್ಣ ಗೌಡ (50) ಅವರು ಇಂದು (ಜ.8) ಮಧ್ಯಾಹ್ನ ಹೃದಯಾಘಾತದಿಂದ ನಿಧನ ಹೊಂದಿದರು. ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದು, ಯುದ್ಧದ ವೇಳೆ ಅವರ ಒಂದು ಕಣ್ಣಿಗೆ ಹಾನಿಯಾಗಿತ್ತು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

ನಿವೃತ್ತ ಯೋಧ, ಬಿಳಿನೆಲೆ ಸಿ.ಎ. ಬ್ಯಾಂಕ್ ಅಧ್ಯಕ್ಷ ಬಾಲಕೃಷ್ಣ ಗೌಡ ವಾಲ್ತಾಜೆ ನಿಧನ Read More »

ಕರಾವಳಿ

ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು

➤➤ ವೀಡಿಯೋ ನ್ಯೂಸ್ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು ವೀಡಿಯೋಗಾಗಿ??ಕ್ಲಿಕ್ ಮಾಡಿ

ವೀಡಿಯೋ ನ್ಯೂಸ್ ➤ ನಿರ್ಭಯಾ ಅತ್ಯಾಚಾರಿಗಳಿಗೆ ಜ.22 ರಂದು ಗಲ್ಲು Read More »

ಕರಾವಳಿ

ವಿದೇಶದಿಂದ ಕೋಮು ಪ್ರಚೋದನೆಯ ಸಂದೇಶ ರವಾನೆ ➤ ಊರಿಗೆ ತಲುಪಿದ ವಿಟ್ಲ ನಿವಾಸಿಯ ಬಂಧನ

(ನ್ಯೂಸ್ ಕಡಬ) newskadaba.com ವಿಟ್ಲ, ಜ.07. ಕೋಮು ಸೌಹಾರ್ದಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಡಿದ ಆರೋಪದಲ್ಲಿ ಓರ್ವನನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎನ್.ಆರ್.ಸಿ ಮತ್ತು ಸಿ.ಎ.ಎ ಕಾಯ್ದೆಗೆ ಸಂಬಂಧಿಸಿದಂತೆ ಮಂಗಳೂರು ವಾಮಂಜೂರಿನ ಹಿಂದೂ ಸಂಘಟನೆಗೆ ಸೇರಿದ ಕೆಲವು ವ್ಯಕ್ತಿಗಳಿಗೆ ಹಾಗೂ ವಿದೇಶದಲ್ಲಿ ಉದ್ಯೋಗದಲ್ಲಿರುವ ವಾಮಂಜೂರು ಮೂಲದ ವ್ಯಕ್ತಿಯೋರ್ವರಿಗೆ ಬಂಟ್ವಾಳ ಪೆರಿವಾಯಿ ಗ್ರಾಮದ ಅನ್ವರ್ ಮತ್ತು ನಿಯಾಜ್ ಎಂಬವರು ವಿದೇಶದಿಂದ ಪೋನ್ ಕರೆ ಮಾಡಿ ಒತ್ತಡ ಹೇರಿದ್ದಲ್ಲದೆ, ಈ ಸಂಬಂಧ ಆರೋಪಿಗಳು ಕಳುಹಿಸಿರುವ

ವಿದೇಶದಿಂದ ಕೋಮು ಪ್ರಚೋದನೆಯ ಸಂದೇಶ ರವಾನೆ ➤ ಊರಿಗೆ ತಲುಪಿದ ವಿಟ್ಲ ನಿವಾಸಿಯ ಬಂಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಜ.04. ಶಾಲೆ‌ ಬಿಟ್ಟು ಮನೆಗೆ ತೆರಳುತ್ತಿದ್ದ ಆರನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ತಡೆದು ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೋಳ್ಪಾಡಿ ಗ್ರಾಮದ ಕಳೆಂಜೋಡಿ ನಿವಾಸಿ ರುಕ್ಮಯ್ಯ ಪೂಜಾರಿ ಎಂಬವರ ಪುತ್ರ ಲಿಂಗಪ್ಪ ಪೂಜಾರಿ ಎಂದು ಗುರುತಿಸಲಾಗಿದೆ. ಆರೋಪಿಯು ಕಡಬದ ಖಾಸಗಿ ಶಾಲೆಯೊಂದರ ಆರನೇ ತರಗತಿಯ ವಿದ್ಯಾರ್ಥಿನಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ರಸ್ತೆ ಮಧ್ಯದಲ್ಲಿ ನಿಲ್ಲಿಸಿ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು.

ಕಡಬ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿಯ ಬಂಧನ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಿರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ➤ ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಕಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜ.04. ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ಉಂಟಾಗಿ ಕಾರು ಸುಟ್ಟು ಭಸ್ಮವಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಶನಿವಾರದಂದು ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಪ್ರವೀಣ್ ಎಂಬವರು ತನ್ನ ಮಾರುತಿ 800 ಕಾರಿನಲ್ಲಿ ಸಕಲೇಶಪುರ ಕಡೆಯಿಂದ ತನ್ನ ಮನೆಗೆ ಆಗಮಿಸುತ್ತಿದ್ದ ವೇಳೆ ಶಿರಾಡಿಯ ಕೊಡ್ಯಾಕಲ್ ಎಂಬಲ್ಲಿ ಶಾರ್ಟ್ ಸರ್ಕ್ಯುಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಪ್ರವೀಣ್ ಕಾರಿನಿಂದ ಇಳಿದಿದ್ದಾರೆ. ನೋಡನೋಡುತ್ತಿದ್ದಂತೆಯೇ ಕಾರು

ಶಿರಾಡಿ: ಚಲಿಸುತ್ತಿದ್ದ ಕಾರಿನಲ್ಲಿ ಹಠಾತ್‌ ಬೆಂಕಿ ➤ ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಕಾರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.04. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಿರು ಸೇತುವೆಯಿಂದ ಕೆಳಗೆ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಅಮೈ ಎಂಬಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಶ್ರೀದುರ್ಗಾ ಸಂಸ್ಥೆಯ ಖಾಸಗಿ ಬಸ್ ಅಮೈ ಕಿರು ಸೇತುವೆ ಪಕ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿದ್ದು, ಕೆಳಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಬಸ್ಸಿನಲ್ಲಿ 27 ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದ್ದು, ಸಣ್ಣಪುಟ್ಟ ತರಚಿದ ಗಾಯಗಳೊಂದಿಗೆ ಪವಾಡ

ಪೆರ್ನೆ: ಕಿರು ಸೇತುವೆ ಬಳಿ ಕೆಳಕ್ಕುರುಳಿದ ಖಾಸಗಿ ಬಸ್ ➤ ಪವಾಡ ಸದೃಶವಾಗಿ ಪಾರಾದ 27 ಪ್ರಯಾಣಿಕರು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top