News Kadaba Desk

ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..?

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕೋಡಿಂಬಾಳ ರೈಲ್ವೇ ಹಳಿಯ ಬಳಿ ಯುವಕನೋರ್ವನ ಮೃತದೇಹವು ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಇದೀಗ ಅನುಮಾನ ಉಂಟಾಗಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ಕಡಬದ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಈತ ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ವಿನಿತ್ […]

ಕಡಬ: ರೈಲು ಢಿಕ್ಕಿಯಾಗಿ ಯುವಕನ ಸಾವಿನ ಸುತ್ತ ಅನುಮಾನದ ಹುತ್ತ.! ➤ ಸೋಮವಾರದಂದು ಆತನ ಬದುಕಿನಲ್ಲಿ ನಡೆದಿದ್ದಾರೂ ಏನು..? Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

10 ವರ್ಷಗಳ ನಂತರ ಕೊನೆಗೂ ಉದ್ಘಾಟನೆಗೊಂಡ ಪಂಪ್ ವೆಲ್ ➤ ಸದ್ದುಮಾಡುತ್ತಿದೆ ಫ್ಲೈಓವರ್ ಉದ್ಘಾಟನಾ ಟ್ರೋಲ್ ವೀಡಿಯೋ

(ನ್ಯೂಸ್ ಕಡಬ) newskadaba.com ಕಡಬ, ಡಿ.31. ಕಳೆದ 09 ವರ್ಷಗಳಿಂದ ಕಾಮಗಾರಿ ಮುಕ್ತಾಯವಾಗದೆ ಹಲವಾರು ಸಲ ಉದ್ಘಾಟನೆಗೆ ದಿನ ನಿಗದಿಯಾಗಿ ಕೊನೆಯ ಕ್ಷಣದಲ್ಲಿ ಮುಂದೂಡಲ್ಪಡುತ್ತಿರುವ ಮಂಗಳೂರಿನ ಪಂಪ್ ವೆಲ್ ಫ್ಲೈಓವರ್ ಟ್ರೋಲಿಗರ ಪಾಲಿಗೆ ಸ್ವರ್ಗವಾಗುತ್ತಿದ್ದು, ಸಂಸದರ ಮಾತು ಈ ಬಾರಿಯೂ ಈಡೇರುವಂತೆ ಕಾಣುತ್ತಿಲ್ಲ. 2020 ರ ಜನವರಿ ಮೊದಲ ವಾರದಲ್ಲಿ ಪಂಪ್ ವೆಲ್ ಫ್ಲೈಓವರ್ ಉದ್ಘಾಟನೆ ನಡೆಯಲಿದೆ‌ ಎಂದು ಈ ಹಿಂದೆ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್ ಕಟೀಲ್ ಮುಹೂರ್ತ ಫಿಕ್ಸ್ ಮಾಡಿದ್ದು, ಕಾಮಗಾರಿಯು ಇನ್ನೂ

10 ವರ್ಷಗಳ ನಂತರ ಕೊನೆಗೂ ಉದ್ಘಾಟನೆಗೊಂಡ ಪಂಪ್ ವೆಲ್ ➤ ಸದ್ದುಮಾಡುತ್ತಿದೆ ಫ್ಲೈಓವರ್ ಉದ್ಘಾಟನಾ ಟ್ರೋಲ್ ವೀಡಿಯೋ Read More »

ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.31. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಗೆ ಉರುಳಿ ಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಕರುವೇಲ್ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬೃಹತ್ ಗಾತ್ರದ ಲಾರಿಯು ಕರುವೇಲ್ ಹಾಗೂ ನೆಕ್ಕಿಲಾಡಿ ಮಧ್ಯೆಯ ಕಾಂಕ್ರೀಟ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಚಾಲಕನನ್ನು ಆಸ್ಪತ್ರೆಗೆ

ಉಪ್ಪಿನಂಗಡಿ: ರಸ್ತೆ ಬದಿ ಉರುಳಿ ಬಿದ್ದ ಲಾರಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ರೈಲು ಢಿಕ್ಕಿಯಾಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಡಿ.31. ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ. ಮೃತ ಯುವಕನನ್ನು ಸುಳ್ಯ ತಾಲೂಕಿನ ಪಂಜ ಸಮೀಪದ ನೇಲ್ಯಡ್ಕ ನಿವಾಸಿ ವಿನೀತ್ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಕೋಡಿಂಬಾಳ ರೈಲ್ವೇ ನಿಲ್ದಾಣದ ಪ್ಲಾಟ್ ಫಾರಂ ಬಳಿ ರೈಲು ಢಿಕ್ಕಿ ಹೊಡೆದು ಹಳಿಗೆ ಬಿದ್ದ ಸ್ಥಿತಿಯಲ್ಲಿ ವಿನೀತ್ ನ ಮೃತದೇಹವು ಕಂಡುಬಂದಿದೆ. ಪಕ್ಕದಲ್ಲೇ ಮದ್ಯದ ಬಾಟಲ್ ಕಂಡುಬಂದಿದ್ದು, ಪ್ಲಾಟ್ ಫಾರಂ ನಲ್ಲಿ ಕುಳಿತಿದ್ದ ವೇಳೆ

ಕಡಬ: ರೈಲು ಢಿಕ್ಕಿಯಾಗಿ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಜೀಪ್ – ಕಂಟೇನರ್ ನಡುವೆ ಢಿಕ್ಕಿ ➤ ಜೀಪ್ ಚಾಲಕ ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಜೀಪು ಹಾಗೂ ಕಂಟೇನರ್ ನಡುವಿನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಜೀಪು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಚಾಲಕನನ್ನು ನೆಲ್ಯಾಡಿ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ

ಉಪ್ಪಿನಂಗಡಿ: ಜೀಪ್ – ಕಂಟೇನರ್ ನಡುವೆ ಢಿಕ್ಕಿ ➤ ಜೀಪ್ ಚಾಲಕ ಮೃತ್ಯು, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಜೀಪ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ➤ ಏಳು ಮಂದಿ ಗಂಭೀರ, ಮೂವರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.29. ಜೀಪು ಹಾಗೂ ಕಂಟೇನರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಬೆದ್ರೋಡಿ ಎಂಬಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ನೆಲ್ಯಾಡಿ – ಉಪ್ಪಿನಂಗಡಿ ನಡುವೆ ಬಾಡಿಗೆ ನಡೆಸುತ್ತಿದ್ದ ಜೀಪು ಹಾಗೂ ಕಂಟೇನರ್ ನಡುವೆ ಬೆದ್ರೋಡಿಯಲ್ಲಿ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಜೀಪಿನಲ್ಲಿದ್ದ ಏಳು ಮಂದಿ ಪ್ರಯಾಣಿಕರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು, ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರ

ಉಪ್ಪಿನಂಗಡಿ: ಜೀಪ್ ಮತ್ತು ಕಂಟೇನರ್ ನಡುವೆ ಭೀಕರ ಅಪಘಾತ ➤ ಏಳು ಮಂದಿ ಗಂಭೀರ, ಮೂವರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಪೊಲೀಸರ ದೌರ್ಜನ್ಯ ವಿರುದ್ದ ತೀವ್ರ ಪ್ರತಿರೋಧ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ. ಡಿ.28. ಬದ್ರಿಯಾ ಜುಮಾ ಮಸ್ಜಿದ್ ತೆಕ್ಕಾರು ಇದರ ವತಿಯಿಂದ ಮಂಗಳೂರಿನಲ್ಲಿ ನಡೆದ ಪೋಲೀಸ್ ದೌರ್ಜನ್ಯದ ವಿರುದ್ಧ ಬೃಹತ್ ಪ್ರತಿರೋಧ ಮತ್ತು ಕರಪತ್ರ ಪ್ರದರ್ಶನ ಶುಕ್ರವಾರ ಜುಮಾ ಬಳಿಕ ಮಸ್ಜಿದ್ ವಠಾರ ತೆಕ್ಕಾರುನಲ್ಲಿ ನಡೆಯಿತು. ಜಮಾಅತ್ ಆಡಳಿತ ಸಮಿತಿ ಸದಸ್ಯ ಉಸ್ಮಾನ್ ಸಹದಿ ತೆಕ್ಕಾರು ಖಂಡನಾ ಬಾಷಣ ನಡೆಸಿದರು. ಸ್ಥಳೀಯ ಖತೀಬ್ ಅಬ್ದುಲ್ ರವೂಫ್ ಅಹ್ಸನಿ ಕಾಸರಗೋಡು ಪ್ರಸ್ತುತ ಪೋಲೀಸ್ ಗೋಲಿಬಾರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಎಂ ತೆಕ್ಕಾರು ಪ್ರಧಾನ ಕಾರ್ಯದರ್ಶಿ

ಮಂಗಳೂರು ಪೊಲೀಸರ ದೌರ್ಜನ್ಯ ವಿರುದ್ದ ತೀವ್ರ ಪ್ರತಿರೋಧ Read More »

ಕರಾವಳಿ

ಕಡಬ: ಮನೆಗೆ ನುಗ್ಗಿ ಕಳ್ಳತನ ➤ ಚಿನ್ನಾಭರಣ ಕಳ್ಳರ ಪಾಲು

(ನ್ಯೂಸ್ ಕಡಬ) newskadaba.com ಕಡಬ, ಡಿ.28. ಠಾಣಾ ವ್ಯಾಪ್ತಿಯ ಐತ್ತೂರು ಗ್ರಾಮದ ಕೋಡಂದೂರು ಎಂಬಲ್ಲಿನ ಮನೆಯೊಂದಕ್ಕೆ ಶುಕ್ರವಾರ ಹಾಡುಹಗಲೇ ಒಳ ನುಗ್ಗಿರುವ ಕಳ್ಳರು ಮನೆಯೊಳಗಿಟ್ಟಿದ್ದ 16 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ‌. ಕೋಡಂದೂರು ನಿವಾಸಿ ಕಮಲ ಎಂಬವರ ಮನೆಗೆ ನುಗ್ಗಿದ ಕಳ್ಳರು ಮನೆಯೊಳಗಿದ್ದ ಕಪಾಟನ್ನು ಜಾಲಾಡಿದ್ದಲ್ಲದೆ 16 ಗ್ರಾಂ ಚಿನ್ನದ ಸರವನ್ನು ಕದ್ದೊಯ್ದಿದ್ದಾರೆ. ಮನೆಯ ಬೀಗದ ಕೀಯನ್ನು ಹೊರಗಡೆ ಇಟ್ಟು ಕೂಲಿ ಕೆಲಸಕ್ಕೆ ತೆರಳಿದ್ದ ಕಮಲರವರು ಸಂಜೆ ಮನೆಗೆ ಹಿಂತಿರುಗಿದಾಗ ಬೀಗ ತೆರೆದು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.

ಕಡಬ: ಮನೆಗೆ ನುಗ್ಗಿ ಕಳ್ಳತನ ➤ ಚಿನ್ನಾಭರಣ ಕಳ್ಳರ ಪಾಲು Read More »

ಕರಾವಳಿ
download

ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.26. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಕಡಬದ ಹಳೇ ಸ್ಟೇಷನ್ ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ನೂಜಿಬಾಳ್ತಿಲ ಗ್ರಾಮದ ಪಳೆಯಮಜಲು ನಿವಾಸಿ ಜೂಲಿ ತೋಮಸ್ ಎಂದು ಗುರುತಿಸಲಾಗಿದೆ. ಮೃತರು ತನ್ನ ಪತಿ ಹಾಗೂ ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಕಡಬ ಕಡೆಗೆ ಬರುತ್ತಿದ್ದ ವೇಳೆ ಹಳೇಸ್ಟೇಷನ್ ಸಮೀಪ ಮುಖ್ಯ ರಸ್ತೆಗೆ ಬರುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್

ಕಡಬ: ದ್ವಿಚಕ್ರ – ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ➤ ಮಹಿಳೆ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top