News Kadaba Desk

ವಿಟ್ಲ: ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.22. ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬುಲ್ಲೆಟ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕರೋಪಾಡಿ ಎಂಬಲ್ಲಿ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ವಿಟ್ಲದ ಮುಗುಳಿ ನಿವಾಸಿ ಅನ್ವರ್ ಎಂದು ಗುರುತಿಸಲಾಗಿದೆ. ಅನ್ವರ್ ತನ್ನ ಸ್ಮೇಹಿತನೊಂದಿಗೆ ಬುಲ್ಲೆಟ್ ನಲ್ಲಿ ತೆರಳುತ್ತಿದ್ದ ವೇಳೆ ಕರ್ನಾಟಕದಿಂದ ಕೇರಳಕ್ಕೆ ಎಂ.ಸ್ಯಾಂಡ್ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ನಡುವೆ ಮುಗುಳಿ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಟ್ಲ: ಟಿಪ್ಪರ್ ಹಾಗೂ ಬುಲ್ಲೆಟ್ ನಡುವೆ ಢಿಕ್ಕಿ ➤ ಸವಾರ ಮೃತ್ಯು, ಸಹ ಸವಾರನಿಗೆ ಗಾಯ Read More »

ಕರಾವಳಿ

ಕಲ್ಲೆಸೆತದಿಂದ ನೆಟ್ಟಿಗರಿಗೆ ಆಹಾರವಾದ ಮಂಗಳೂರಿನ ಪಂಪ್ ವೆಲ್ ಸರ್ಕಲ್ ➤ ಟ್ರೋಲ್ ಆಗುತ್ತಿದೆ ಸಂಸದರ ಟ್ವೀಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಪೌರತ್ವ ವಿರೋಧಿಸಿ ತುಳುನಾಡಿನಲ್ಲಿ ನಡೆದ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ ಎರಡು ಜೀವಗಳು ಬಲಿಯಾಗಿದ್ದು ಆಯಿತು. ಕರ್ಫ್ಯೂ ಹಾಕಿ ಜನಜೀವನ ಅಸ್ತವ್ಯಸ್ತ ಆಗಿದ್ದೂ ಆಯಿತು. ಇದೀಗ ಕಲ್ಲೆಸೆತವನ್ನು ಟ್ರೋಲ್ ಮಾಡುತ್ತಾ ಸಂಸದ ನಳಿನ್ ಕುಮಾರ್ ಕಟೀಲ್ ರ ನಕಲಿ ಟ್ವೀಟೊಂದು ನೆಟ್ಟಿಗರಿಗೆ ಆಹಾರವಾಗುತ್ತಿದೆ. ಮಂಗಳೂರಿನ ಮುಖ್ಯದ್ವಾರವಾದ ಪಂಪ್ ವೆಲ್ ನಲ್ಲಿ ಕಳೆದ 9 ವರ್ಷಗಳಿಂದ ನಿರ್ಮಿಸುತ್ತಿರುವ ಫ್ಲೈಓವರ್ ಕಾಮಗಾರಿಯ ಉದ್ಘಾಟನೆಗೆ ಹಲವು ಸಲ ದಿನಾಂಕ ನಿಗದಿಯಾಗಿ ಕೊನೆಯ ಹಂತದಲ್ಲಿ ಕಾಮಗಾರಿ ಪೂರ್ತಿಯಾಗದೆ

ಕಲ್ಲೆಸೆತದಿಂದ ನೆಟ್ಟಿಗರಿಗೆ ಆಹಾರವಾದ ಮಂಗಳೂರಿನ ಪಂಪ್ ವೆಲ್ ಸರ್ಕಲ್ ➤ ಟ್ರೋಲ್ ಆಗುತ್ತಿದೆ ಸಂಸದರ ಟ್ವೀಟ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಮತ್ತೆ ಬೆಚ್ಚಿಬಿದ್ದ ತುಳುನಾಡು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಯುವಕನೋರ್ವನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಶನಿವಾರ ರಾತ್ರಿ ಮಂಗಳೂರಿನಲ್ಲಿ ನಡೆದಿದ್ದು, ಪೌರತ್ವದ ಕಿಚ್ಚಿನಿಂದ ತಲ್ಲಣಗೊಂಡಿದ್ದ ಮಂಗಳೂರು ಇದೀಗ ಮತ್ತೆ ಬೆಚ್ಚಿ ಬಿದ್ದಿದೆ. ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿನ ಅಂಬಿಕಾ ರೋಡ್ ಸಮೀಪ ತಂಡವೊಂದು ನಿಖಿಲ್ ಕೋಟ್ಯಾನ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದೆ. ಗಂಭೀರ ಗಾಯಗೊಂಡಿರುವ ನಿಖಿಲ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತನಿಖೆ ಕೈಗೊಂಡಿದ್ದಾರೆ.

ಮಂಗಳೂರು: ಯುವಕನಿಗೆ ಚೂರಿ ಇರಿತ ➤ ಮತ್ತೆ ಬೆಚ್ಚಿಬಿದ್ದ ತುಳುನಾಡು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.20. ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಕಬ್ಬಿಣದ ಪೈಪ್ ಹೇರಿಕೊಂಡು ತೆರಳುತ್ತಿದ್ದ ಲಾರಿ ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಂಡ್ಯ ಮೂಲದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು

ನೆಲ್ಯಾಡಿ: ಕಾರಿನ ಮೇಲೆ ಉರುಳಿ ಬಿದ್ದ ಲಾರಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು, ಮೂವರು ಗಂಭೀರ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪೇಜಾವರ ಶ್ರೀ ಆರೋಗ್ಯ ಸ್ಥಿತಿಯಲ್ಲಿ ಗಂಭೀರ ➤ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.20. ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಬೆಳಿಗ್ಗಿನ ಜಾವ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳ ಆರೋಗ್ಯ ವೃದ್ಧಿಗೆ ಪ್ರಾರ್ಥನೆ ಸಲ್ಲಿಸುವಂತೆ ಮಠವು ಮನವಿ ಮಾಡಿಕೊಂಡಿದೆ.

ಪೇಜಾವರ ಶ್ರೀ ಆರೋಗ್ಯ ಸ್ಥಿತಿಯಲ್ಲಿ ಗಂಭೀರ ➤ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ Read More »

ಕರ್ನಾಟಕ

ಕಡಬ ಭಾಗಶಃ ಬಂದ್ ➤ ಬಂದ್ ಮಾಡುವಂತೆ ಪೊಲೀಸರಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಡಿ.20. ಪೌರತ್ವ ನಿಯಮವನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದಲ್ಲಿ ಎರಡು ಜೀವ ಬಲಿಯಾಗಿರುವುದನ್ನು ಖಂಡಿಸಿ ರಾಜ್ಯದ ವಿವಿಧೆಡೆ ಬಂದ್ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಕಡಬ ಪೇಟೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಪೊಲೀಸರು ಮೈಕ್ ಮೂಲಕ ಅನೌನ್ಸ್ ಮಾಡಿದ್ದಾರೆ. ಅದರಂತೆ ಕೆಲವರು ಬಂದ್ ಮಾಡಿದ್ದು, ಇನ್ನು ಕೆಲವರು ಅಂಗಡಿಗಳನ್ನು ತೆರೆಯುತ್ತಿದ್ದಾರೆ. ಒಟ್ಟಿನಲ್ಲಿ ಕಡಬ ಪೇಟೆಯು ಭಾಗಶಃ ಬಂದ್ ಆಗಿದೆ. ಕಡಬ ಠಾಣಾ

ಕಡಬ ಭಾಗಶಃ ಬಂದ್ ➤ ಬಂದ್ ಮಾಡುವಂತೆ ಪೊಲೀಸರಿಂದ ಮನವಿ Read More »

ಕರಾವಳಿ

ಯು.ಟಿ. ಖಾದರ್ ಗೆ ಮುಳುವಾಯಿತಾ ‘ಕರ್ನಾಟಕ ಹೊತ್ತಿ ಉರಿಯಲಿದೆ’ ಹೇಳಿಕೆ ➤ ಖಾದರ್ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ ರಾಜ್ಯ ಹೊತ್ತಿ ಉರಿಯಲಿದೆ ಎಂದು ಶಾಸಕ ಯು.ಟಿ.ಖಾದರ್ ಹೇಳಿಕೆ ನೀಡಿರುವುದು ಈಗ ಅವರಿಗೆ ಮುಳುವಾದ ಲಕ್ಷಣ ಕಂಡುಬರುತ್ತಿದೆ. ಶಾಸಕ ಖಾದರ್ ಹೇಳಿಕೆ ನೀಡಿ ದಿ‌ನ ಕಳೆಯುವಷ್ಟರಲ್ಲೇ ತವರು ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಯು ಹಿಂಸಾರೂಪಕ್ಕೆ ತಾಳಿ ಇಬ್ಬರು ಪ್ರತಿಭಟನಾಕಾರರು ಪೊಲೀಸ್ ಗುಂಡೇಟಿಗೆ ಬಲಿಯಾಗಿದ್ದಾರೆ. ಖಾದರ್ ಹೇಳಿಕೆಯ ವಿರುದ್ಧ ಬಿಜೆಪಿ ಮುಖಂಡರು ಪೊಲೀಸ್ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ಖಾದರ್ ಹೇಳಿಕೆಯು ಉರಿಯುವ ಬೆಂಕಿಗೆ

ಯು.ಟಿ. ಖಾದರ್ ಗೆ ಮುಳುವಾಯಿತಾ ‘ಕರ್ನಾಟಕ ಹೊತ್ತಿ ಉರಿಯಲಿದೆ’ ಹೇಳಿಕೆ ➤ ಖಾದರ್ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ

ಮಂಗಳೂರು: ಶಾಂತಿ ಕಾಪಾಡುವಂತೆ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ➤ ಅಕ್ರೋಶಭರಿತರನ್ನು ಸಮಾಧಾನಪಡಿಸಿದ ಮುಸ್ಲಿಂ ಮುಖಂಡರ ನಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಗುರುವಾರದಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯು ತೀವ್ರಗೊಂಡು ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದ ವೇಳೆ ನಗರದ ಮಸೀದಿಯ ಮೈಕ್ ನಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಲಾಯಿತು.   ನಗರದ ಸ್ಟೇಟ್ ಬ್ಯಾಂಕ್ ಬಳಿ ಸಾವಿರಕ್ಕೂ ಅಧಿಕ ಮಂದಿ ಜಮಾಯಿಸಿದ್ದು, ಪ್ರತಿಭಟನೆ ತೀವ್ರರೂಪ ಪಡೆಯುತ್ತಿರುವುದನ್ನು ಮನಗಂಡ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು‌. ಲಾಠಿಚಾರ್ಜ್ ಬೆನ್ನಲ್ಲೇ ಪ್ರತಿಭಟನಾಕಾರರು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು, ಪೊಲೀಸ್ ವಾಹನದತ್ತಲೂ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಮಂಗಳೂರು: ಶಾಂತಿ ಕಾಪಾಡುವಂತೆ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ➤ ಅಕ್ರೋಶಭರಿತರನ್ನು ಸಮಾಧಾನಪಡಿಸಿದ ಮುಸ್ಲಿಂ ಮುಖಂಡರ ನಡೆ Read More »

ಕರಾವಳಿ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಉದ್ವಿಗ್ನಗೊಂಡ ಪೌರತ್ವದ ಬಿಸಿ ➤ ಮಂಗಳೂರು ಕಮಿಷನರ್ ಡಾ‌| ಹರ್ಷರವರಿಂದ ಪತ್ರಿಕಾಗೋಷ್ಠಿ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ

  ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ ವೀಡಿಯೋಗಾಗಿ??ಕ್ಲಿಕ್ ಮಾಡಿ  

ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ➤ ಬಿಜೆಪಿ ಮುಖಂಡ ರಹೀಂ ಉಚ್ಚಿಲ ಹೇಳಿದ್ದು ಹೀಗೆ Read More »

ಕರಾವಳಿ, ಕರ್ನಾಟಕ
Scroll to Top