ಬೈಕ್ ಮತ್ತು ಕಾರು ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ
(ನ್ಯೂಸ್ ಕಡಬ) newskadaba.com ಕಡಬ, ನ.19. ಬೈಕ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಸೈಂಟ್ ಜೋಕಿಮ್ಸ್ ಕಾಲೇಜು ಮುಂಭಾಗದಲ್ಲಿ ಮಂಗಳವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಎರ್ಟಿಗಾ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಮತ್ತು ಕಾರು ನಡುವೆ ಅಪಘಾತ ➤ ಬೈಕ್ ಸವಾರನಿಗೆ ಗಾಯ Read More »
ಕರಾವಳಿ






