News Kadaba Desk

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ ➤ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಿದ ಸರಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನಾಗಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸಿಂಧು ಬಿ. ರೂಪೇಶ್ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಬಿ.ಇ. ಪದವೀಧರೆಯಾಗಿರುವ ಸಿಂಧು ಬಿ.ರೂಪೇಶ್ 2011ನೇ ಸಾಲಿನ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದರು. ಈ ಹಿಂದೆ ಉಡುಪಿ ಜಿಲ್ಲಾ ಪಂಚಾಯತ್ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದ ಇವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನಾಗಿ ನೇಮಕ […]

ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿ ಸಿಂಧು ಬಿ. ರೂಪೇಶ್ ನೇಮಕ ➤ ಸೆಂಥಿಲ್ ರಾಜೀನಾಮೆ ಬೆನ್ನಲ್ಲೇ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಿದ ಸರಕಾರ Read More »

ಕರ್ನಾಟಕ

ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.06. ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಐವರು ಗಾಯಗೊಂಡ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275 ರ ಕಬಕ ಬಳಿ ಶುಕ್ರವಾರ ಸಂಜೆ ನಡೆದಿದೆ.   ಮಂಗಳೂರಿನಿಂದ ಪುತ್ತೂರು ಕಡೆಗೆ ಕುರಿ ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಕುಂಬ್ರ ಮರ್ಕಝಲ್ ಹುದಾ ಮಹಿಳಾ ಕಾಲೇಜು ಬಸ್ಸಿನ ಮಧ್ಯೆ ಕಬಕ ಸಮೀಪದ ಕೂವೆತ್ತಿಲ ಎಂಬಲ್ಲಿ ಅಪಘಾತ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಲಾರಿಯ ಒಂದು

ಕಬಕ: ಕಾಲೇಜು ಬಸ್ ಹಾಗೂ ಕುರಿ ಸಾಗಾಟದ ಲಾರಿ ನಡುವೆ ಢಿಕ್ಕಿ ➤ ಅಪಾರ ಕುರಿಗಳ ಸಾವು Read More »

ಕರಾವಳಿ

ಕ್ರೀಡಾ ಭಾರತಿ ಪ್ರತಿಭಾ ಪುರಸ್ಕಾರ 2018-19 ➤ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿ ಮಾ| ಮೊಹಮ್ಮದ್ ಫರಾಝ್ ಅಲಿ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ಕ್ರೀಡಾ ಭಾರತಿ ಸಂಘನಿಕೇತನ ಮಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ದೈಹಿಕ ಶಿಕ್ಷಕರ ಸಂಘ ಇದರ ವತಿಯಿಂದ ಕೊಡಮಾಡುವ ಕ್ರೀಡಾ ಭಾರತಿ ಪ್ರತಿಭಾ ಪುರಸ್ಕಾರ 2018-19 ಪ್ರಶಸ್ತಿಯನ್ನು ಮಂಗಳೂರಿನ ಪ್ರೆಸಿಡೆನ್ಸಿ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿ ಮಾ | ಮೊಹಮ್ಮದ್ ಫರಾಝ್ ಅಲಿ ಯವರಿಗೆ ನೀಡಿ ಗೌರವಿಸಲಾಯಿತು. ಸ್ಕೇಟಿಂಗ್‌ ನಲ್ಲಿ ಅದ್ವಿತೀಯ ನಿರ್ವಹಣೆಗೈದು, ಹಲವು ಪ್ರಶಸ್ತಿಗಳನ್ನು ಪಡೆದು ಜಿಲ್ಲೆಯ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಬೆಳಗಿಸಿದಕ್ಕಾಗಿ ಮಾ | ಮೊಹಮ್ಮದ್ ಫರಾಝ್

ಕ್ರೀಡಾ ಭಾರತಿ ಪ್ರತಿಭಾ ಪುರಸ್ಕಾರ 2018-19 ➤ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿ ಮಾ| ಮೊಹಮ್ಮದ್ ಫರಾಝ್ ಅಲಿ ಆಯ್ಕೆ Read More »

ಕರ್ನಾಟಕ

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದ್ದು, ಮೂಲಭೂತ ಒತ್ತಡಗಳಿಗೆ ರಾಜಿಯಾಗಿ ಕೆಲಸ ಮಾಡಬೇಕಾದ ಪರಿಸ್ಥಿತಿ ಇರುವುದರಿಂದ ನಾಗರಿಕ ಸೇವೆಯಲ್ಲಿ ಮುಂದುವರಿಯುವುದು ಇಷ್ಟವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ. ಸೆಪ್ಟೆಂಬರ್ 06 ರಂದು ಐಎಎಸ್ ಹುದ್ದೆಗೆ ದಿಢೀರನೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್, ಮುಂದಿನ ದಿನಗಳಲ್ಲಿ ನಮ್ಮ ದೇಶವು ಅತ್ಯಂತ ಕಷ್ಟಕರ ಸವಾಲುಗಳನ್ನು ಎದುರಿಸಲಿದ್ದು, ಆ ಸಂದರ್ಭದಲ್ಲಿ ತನ್ನ ಸಿದ್ದಾಂತಕ್ಕೆ ಎದುರಾಗಿ ಮುಂದುವರಿಯುವುದು ಕಷ್ಟ ಎಂದು ತಿಳಿದು

ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ಕಷ್ಟವಿದೆ: ಸಸಿಕಾಂತ್ ಸೆಂಥಿಲ್ ➤ ಐಎಎಸ್‌ ಗೆ ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿಯ ಪತ್ರ Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.06. ದ.ಕ. ಜಿಲ್ಲಾಧಿಕಾರಿಯಾಗಿರುವ ಎಸ್. ಸಸಿಕಾಂತ್ ಸೆಂಥಿಲ್ ಅವರು ಐಎಎಸ್ ಸೇವೆಗೆ ಹಠಾತ್ ರಾಜೀನಾಮೆ ಸಲ್ಲಿಸಿದ್ದಾರೆ. 2017ರ ಅಕ್ಟೋಬರ್ ನಿಂದ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸೇವೆಯಲ್ಲಿದ್ದ ಅವರು ಜಿಲ್ಲೆಯಲ್ಲಿನ ಭೀಕರ ಮಳೆ, ಪ್ರವಾಹ, ಅತಿವೃಷ್ಟಿ, ಡೆಂಗ್ ಹಾವಳಿ, ಮರಳು ಮತ್ತಿತರ ಸಮಸ್ಯೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಇದೀಗ ವೈಯಕ್ತಿಕ ಕಾರಣದಿಂದ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ Read More »

ರಾಷ್ಟ್ರೀಯ ನ್ಯೂಸ್

ಕಾಣಿಯೂರು: ಇಂಗು ಗುಂಡಿಯಲ್ಲಿ ಶಾಲಾ ವಿದ್ಯಾರ್ಥಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಣಿಯೂರು. ಸೆ.06. ವಿದ್ಯಾರ್ಥಿಯ ಮೃತದೇಹವೊಂದು ಕಾಣಿಯೂರು ಪ್ರೌಢಶಾಲೆಗೆ ಸಮೀಪದ ಇಂಗುಗುಂಡಿಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿಿದೆ. ಮೃತ ವಿದ್ಯಾರ್ಥಿಯನ್ನು ಚಾರ್ವಾಕ ಗ್ರಾಮದ ಬೊಮ್ಮೊಳಿಗೆ ನಿವಾಸಿ ಲಕ್ಷ್ಮಣ ಗೌಡ ಎಂಬವರ ಪುತ್ರ, ಕಾಣಿಯೂರು ಸರಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಗೌತಮ್(16) ಎಂದು ಗುರುತಿಸಲಾಗಿದೆ. ಗುರುವಾರ ಶಿಕ್ಷಕರ ದಿನಾಚರಣೆಯಿದ್ದ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯ ಹೊತ್ತಿಗೆ ಶಾಲೆ ಬಿಟ್ಟಿದ್ದರೂ ಗೌತಮ್ ಮನೆಗೆ ಹಿಂತಿರುಗಿರಲಿಲ್ಲ. ನುರಿತ ಈಜು ಪಟುವಾಗಿದ್ದ ಗೌತಮ್ ಸ್ನೇಹಿತರೊಂದಿಗೆ ಈಜಲು

ಕಾಣಿಯೂರು: ಇಂಗು ಗುಂಡಿಯಲ್ಲಿ ಶಾಲಾ ವಿದ್ಯಾರ್ಥಿಯ ಮೃತದೇಹ ಪತ್ತೆ Read More »

ಕರಾವಳಿ

ಪುತ್ತೂರು: ಚೂರಿಯಿಂದ ಇರಿದು ಹಿಂಜಾವೇ ಮುಖಂಡನ ಬರ್ಬರ ಹತ್ಯೆ ➤ ಪೊಲೀಸ್ ಠಾಣೆಯ ಮುಂಭಾಗದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಘಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.04. ಗಣೇಶೋತ್ಸವ ಕಾರ್ಯಕ್ರಮದಲ್ಲಿ ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯಗೈದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಮುಂಭಾಗದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಪುತ್ತೂರು ತಾಲೂಕು ಹಿಂದೂ ಜಾಗರಣಾ ವೇದಿಕೆಯ ಕಾರ್ಯದರ್ಶಿ ಮೇರ್ಲ ನಿವಾಸಿ ಕಾರ್ತಿಕ್ ಸುವರ್ಣ ಎಂದು ಗುರುತಿಸಲಾಗಿದೆ. ಆರೋಪಿಗಳಾದ ಸಂಪ್ಯದ ಚರಣ್‌ರಾಜ್, ಕಿರಣ್ ಮತ್ತು ಪ್ರೀತೇಶ್ ಸ್ಥಳದಿಂದ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಗಣೇಶೋತ್ಸವ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಲಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕಕಾರಿ

ಪುತ್ತೂರು: ಚೂರಿಯಿಂದ ಇರಿದು ಹಿಂಜಾವೇ ಮುಖಂಡನ ಬರ್ಬರ ಹತ್ಯೆ ➤ ಪೊಲೀಸ್ ಠಾಣೆಯ ಮುಂಭಾಗದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಘಟನೆ Read More »

ಕರಾವಳಿ

➤ ಬ್ರೇಕಿಂಗ್ ನ್ಯೂಸ್ – ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಅರೆಸ್ಟ್

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.03. ದೆಹಲಿಯ ಫ್ಲ್ಯಾಟ್‍ನಲ್ಲಿ ಪತ್ತೆಯಾದ ಅಕ್ರಮ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ ನಾಲ್ಕು ದಿವಸಗಳ ವಿಚಾರಣೆಯ ಬಳಿಕ ಮಂಗಳವಾರ ರಾತ್ರಿ ಬಂಧಿಸಿದೆ. ಮಂಗಳವಾರ ಸಂಜೆ ಈ ಪ್ರಕರಣದ ಸಂಬಂಧ ಮತ್ತಷ್ಟು ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಶಿವಕುಮಾರ್ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ರಾತ್ರಿ ಅಥವಾ ನಾಳೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಈ ನಡುವೆ, ನಿರೀಕ್ಷಣಾ ಜಾಮೀನು ಸಲ್ಲಿಸುವ ನಿರ್ಧಾರದಿಂದ ಸದ್ಯಕ್ಕೆ

➤ ಬ್ರೇಕಿಂಗ್ ನ್ಯೂಸ್ – ಮಾಜಿ ಸಚಿವ, ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಅರೆಸ್ಟ್ Read More »

ರಾಷ್ಟ್ರೀಯ ನ್ಯೂಸ್

ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.02. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಕರಾವಳಿ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿದ್ದ ಮಳೆಯು ಸ್ವಲ್ಪ ಬಿಡುವು ನೀಡಿತ್ತಾದರೂ, ಇದೀಗ ಮತ್ತೆ ಬಿರುಸನ್ನು ಪಡೆದುಕೊಂಡಿದೆ. ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆ ಬೀಳುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆ ವರದಿಯ

ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆಯಿಂದ ಎಚ್ಚರಿಕೆ ➤ ಮುಂದಿನ ನಾಲ್ಕು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲೆರ್ಟ್ ಘೋಷಣೆ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಆಲ್ಟೋ ಕಾರು ➤ ಮೃತಪಟ್ಟ ನಾಲ್ವರ ಗುರುತು ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.02. ಗಣೇಶ ಚತುರ್ಥಿ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬವೊಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ಕೆರೆಗೆ ಬಿದ್ದು ಮೃತಪಟ್ಟ ಕರುಣಾಜನಕ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಮೃತರ ಗುರುತು ಪತ್ತೆಯಾಗಿದೆ. ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ KA.05.MF.9794 ನೋಂದಣಿ ಸಂಖ್ಯೆಯ ಮಾರುತಿ ಆಲ್ಟೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿದ್ದ ಕೆರೆಗೆ ಬಿದ್ದಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶುಂಠಿಕೊಪ್ಪ ಮೂಲದ ಅಶೋಕ್(48), ಪತ್ನಿ ಹೇಮಲತಾ,

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಆಲ್ಟೋ ಕಾರು ➤ ಮೃತಪಟ್ಟ ನಾಲ್ವರ ಗುರುತು ಪತ್ತೆ Read More »

ಕರ್ನಾಟಕ
Scroll to Top