News Kadaba Desk

ಶಾಲಾ-ಕಾಲೇಜು‌ ರಜೆಯ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ ➤ ವಾರ್ತಾಧಿಕಾರಿ ಖಾದರ್ ಷಾ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ದಕ್ಷಿ‌ಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ (ಆಗಸ್ಟ್ 9) ಶಾಲಾ – ಕಾಲೇಜುಗಳಿಗೆ ರಜೆ‌ ಘೋಷಿಸಲಾಗಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ತಾಣಗಳಲ್ಲಿ ಕಿಡಿಗೇಡಿಗಳು ಹರಡುತ್ತಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯವರ ಹಿಂದಿನ ಆದೇಶ ಪ್ರತಿಗಳನ್ನು ತಿದ್ದಿ ಹರಿಯಬಿಡಲಾಗಿದ್ದು, ಇಂತಹ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮವನ್ನು ಜರುಗಿಸಲು ಪೊಲೀಸ್ ಅಧಿಕಾರಿಗಳಿಗೆ ಕೋರಲಾಗಿದೆ. ರಜೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯವರ ಆದೇಶಗಳಿದ್ದಲ್ಲಿ ವಾರ್ತಾ ಇಲಾಖೆ‌ಯ ಮುಖಾಂತರ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ತಿಳಿಸಲಾಗುವುದು. ಈ ಬಗ್ಗೆ‌ […]

ಶಾಲಾ-ಕಾಲೇಜು‌ ರಜೆಯ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಾನೂನು ಕ್ರಮ ➤ ವಾರ್ತಾಧಿಕಾರಿ ಖಾದರ್ ಷಾ ಸ್ಪಷ್ಟನೆ Read More »

ಕರ್ನಾಟಕ

ಮುಳುಗಡೆಯ ಭೀತಿಯಲ್ಲಿ ಹೊಸ್ಮಠ ಹೊಸ ಸೇತುವೆ ➤ ನೂತನ ಸೇತುವೆಗೆ ಹೊಡೆಯುತ್ತಿರುವ ನೆರೆ ನೀರು ➤ ಸ್ಥಳಕ್ಕೆ ಜಮಾಯಿಸುತ್ತಿರುವ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಆ.08. ಮುಳುಗು ಸೇತುವೆಯೆಂದೇ ಕುಖ್ಯಾತಿ ಪಡೆದಿದ್ದ ಹೊಸ್ಮಠ ಸೇತುವೆಗೆ ಪರ್ಯಾಯವಾಗಿ ಹೊಸ ಸೇತುವೆ ನಿರ್ಮಿಸಿ ಸಂಚಾರಕ್ಕೆ ಮುಕ್ತಗೊಳಿಸಿದ್ದರೂ, ಇದೀಗ ನೆರೆ ನೀರಿನ ಹೆಚ್ಚಳದಿಂದಾಗಿ ಹೊಸ ಸೇತುವೆಯೂ ಮುಳುಗಡೆಯ ಭೀತಿಯನ್ನು ಎದುರಿಸುತ್ತಿದೆ. ಹೊಸ ಸೇತುವೆಯ ಅಡಿಭಾಗಕ್ಕೆ ನೀರು ಹೊಡೆಯುತ್ತಿದ್ದು, ಹೊಸ ಸೇತುವೆಯ ಮೇಲೆ ಸಂಚರಿಸಲು ಸಾರ್ವಜನಿಕರು ಭಯಪಡುತ್ತಿದ್ದಾರೆ. ನೀರಿನ ಹರಿವು ಹೆಚ್ಚಾಗುತ್ತಿದ್ದು, ಹರಿವಿನ ಮಟ್ಟವನ್ನು ವೀಕ್ಷಿಸಲು ಸಾರ್ವಜನಿಕರು ಸ್ಥಳಕ್ಕೆ ಜಮಾಯಿಸುತ್ತಿದ್ದಾರೆ.

ಮುಳುಗಡೆಯ ಭೀತಿಯಲ್ಲಿ ಹೊಸ್ಮಠ ಹೊಸ ಸೇತುವೆ ➤ ನೂತನ ಸೇತುವೆಗೆ ಹೊಡೆಯುತ್ತಿರುವ ನೆರೆ ನೀರು ➤ ಸ್ಥಳಕ್ಕೆ ಜಮಾಯಿಸುತ್ತಿರುವ ಸಾರ್ವಜನಿಕರು Read More »

ಕರಾವಳಿ

ಉದನೆ: ರಸ್ತೆಗೆ‌ ನುಗ್ಗಿದ ನೆರೆ ನೀರು ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.08. ಶಿರಾಡಿ ಗ್ರಾಮದ ಉದನೆ ಸಮೀಪ ಅಲ್ಲಲ್ಲಿ ಕೆಂಪುಹೊಳೆಯ ನೆರೆ ನೀರು ರಸ್ತೆಗೆ ಬಂದಿದ್ದು, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರಕ್ಕೆ ತಡೆಯುಂಟಾಗಿದೆ. ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವಾಗಿ ಪೆರಿಯಶಾಂತಿ, ಇಚಿಲಂಪಾಡಿ, ಮರ್ದಾಳ, ಕೈಕಂಬ, ಗುಂಡ್ಯ ರಸ್ತೆಯ ಮೂಲಕ ಅಥವಾ ಉಪ್ಪಿನಂಗಡಿ, ಕಡಬ, ಕೈಕಂಬ, ಗುಂಡ್ಯ ಮೂಲಕ ತೆರಳುವಂತೆ ಸೂಚಿಸಲಾಗಿದೆ.

ಉದನೆ: ರಸ್ತೆಗೆ‌ ನುಗ್ಗಿದ ನೆರೆ ನೀರು ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ Read More »

ರಾಷ್ಟ್ರೀಯ ನ್ಯೂಸ್

ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ➤ ಮಂಗಳೂರಿನಲ್ಲಿ ನಡೆದ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಆಟವಾಡುತ್ತಿದ್ದ ಮಗುವೊಂದು ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟ ಘಟನೆ ನಗರದ ಹೊರವಲಯದ ಕುಳಾಯಿ ಎಂಬಲ್ಲಿ ಬುಧವಾರದಂದು ನಡೆದಿದೆ. ಮೃತ ಮಗುವನ್ನು ಕುಳಾಯಿ ನಿವಾಸಿ ಶಂಕರಪ್ಪ ಎಂಬವರ ಒಂದೂವರೆ ವರ್ಷ ಪ್ರಾಯದ ಪುತ್ರ ಸಿದ್ಧಾರ್ಥ್ ಎಂದು ಗುರುತಿಸಲಾಗಿದೆ. ಸಿದ್ಧಾರ್ಥ್ ತನ್ನ ಅಕ್ಕನ ಜೊತೆ ಮನೆಯಲ್ಲಿ ಆಟವಾಡುತ್ತಿದ್ದಾಗ ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನೀರು ತುಂಬಿಸಿಟ್ಟಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ➤ ಮಂಗಳೂರಿನಲ್ಲಿ ನಡೆದ ಘಟನೆ Read More »

ಕರಾವಳಿ

ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.07. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಗುರುವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ

ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ➤ ಶುಕ್ರವಾರದವರೆಗೆ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.08) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ

ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.07. ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಬಳಿಯ ಕೊಡ್ಯಕಲ್ ಎಂಬಲ್ಲಿ ಮರ ಬಿದ್ದು ರಸ್ತೆ ತಡೆ ಉಂಟಾದ ಘಟನೆ ಬುಧವಾರದಂದು ನಡೆದಿದೆ. ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬ್ಲಾಕ್ ಆಗಿದ್ದು, ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕ ಕಿಶೋರ್ ಶಿರಾಡಿ ನೇತೃತ್ವದಲ್ಲಿ ಸಾರ್ವಜನಿಕರು

ಶಿರಾಡಿ: ರಸ್ತೆಗುರುಳಿದ ಬೃಹತ್ ಮರ ➤ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ Read More »

ಕರಾವಳಿ

ಕಡಬ ಮತ್ತು ಉಪ್ಪಿನಂಗಡಿಯ ‘ನ್ಯೂ ಅಶ್ವಿನಿ ಟ್ರೇಡರ್ಸ್’ನಲ್ಲಿ ಆ.20 ರ ವರೆಗೆ ಡಿಸ್ಕೌಂಟ್ ಸೇಲ್ & ಎಕ್ಸ್‌ಚೇಂಜ್ ಆಫರ್ ➤ ಎರಡು ಸಾವಿರ ರೂ. ಮೇಲ್ಪಟ್ಟ ಪ್ರತೀ ಖರೀದಿಗೆ ಲಕ್ಕೀ ಕೂಪನ್

(ನ್ಯೂಸ್ ಕಡಬ) newskadaba.com ಕಡಬ, ಆ.07. ಇಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಕಳೆದ ಸುಮಾರು 20 ವರ್ಷಗಳಿಂದ ಜನ ಮನಸ್ಸುಗಳನ್ನು ಗೆದ್ದಿರುವ ಉಪ್ಪಿನಂಗಡಿ ಹಾಗೂ ಕಡಬದ ‘ನ್ಯೂ ಅಶ್ವಿನಿ ಟ್ರೇಡರ್ಸ್’ ವ್ಯಾಪಾರ ಮತ್ತು ಸೇವಾ ಕೇಂದ್ರದಲ್ಲಿ ನಾಗರ ಪಂಚಮಿ ಹಾಗೂ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಗಸ್ಟ್ 05 ರಿಂದ ಆರಂಭಗೊಂಡು ಆಗಸ್ಟ್ 20 ರ ವರೆಗೆ ಡಿಸ್ಕೌಂಟ್ ಸೇಲ್ ಮತ್ತು ಎಕ್ಸ್‌ಚೇಂಜ್ ಆಫರ್ ಲಭ್ಯವಿದೆ. ‘ನ್ಯೂ ಅಶ್ವಿನಿ ಟ್ರೇಡರ್ಸ್’ ಮಳಿಗೆಯು ಉಪ್ಪಿನಂಗಡಿಯ ಪಾರಿಜಾತ ಕಾಂಪ್ಲೆಕ್ಸ್ ಹಾಗೂ ಕಡಬದ ಅನುಗ್ರಹ ಕಾಂಪ್ಲೆಕ್ಸ್ ನಲ್ಲಿ

ಕಡಬ ಮತ್ತು ಉಪ್ಪಿನಂಗಡಿಯ ‘ನ್ಯೂ ಅಶ್ವಿನಿ ಟ್ರೇಡರ್ಸ್’ನಲ್ಲಿ ಆ.20 ರ ವರೆಗೆ ಡಿಸ್ಕೌಂಟ್ ಸೇಲ್ & ಎಕ್ಸ್‌ಚೇಂಜ್ ಆಫರ್ ➤ ಎರಡು ಸಾವಿರ ರೂ. ಮೇಲ್ಪಟ್ಟ ಪ್ರತೀ ಖರೀದಿಗೆ ಲಕ್ಕೀ ಕೂಪನ್ Read More »

ತಂತ್ರಜ್ಞಾನ

➤➤ Big Breaking News ಮಾಜಿ ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.06. ಬಿಜೆಪಿಯ ಹಿರಿಯ ನಾಯಕಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್(67) ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ಹೃದಯಾಘಾತಕ್ಕೊಳಗಾಗಿದ್ದು, ತಕ್ಷಣವೇ ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

➤➤ Big Breaking News ಮಾಜಿ ಕೇಂದ್ರ ಸಚಿವೆ ಸುಶ್ಮಾ ಸ್ವರಾಜ್ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕರಾವಳಿಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.07) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.06. ಕರಾವಳಿಯಾದ್ಯಂತ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 7 ಬುಧವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ 07 ಮತ್ತು 08 ರಂದು ರೆಡ್ ಅಲೆರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ಕರಾವಳಿಯಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ ರೆಡ್ ಅಲೆರ್ಟ್ ಘೋಷಣೆ ➤ ನಾಳೆ (ಆ.07) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಕರಾವಳಿಯ ಹಲವೆಡೆ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ➤ ಇಂದು (ಆ.06) ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.06. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಪುತ್ತೂರು, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ನೀಡಿ ಪುತ್ತೂರು ಸಹಾಯಕ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದ್ದು, ಪದವಿ ಮತ್ತು ನಂತರದ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಪುತ್ತೂರು ಸಹಾಯಕ ಆಯುಕ್ತರಾದ ಎಚ್. ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.‌  

ಕರಾವಳಿಯ ಹಲವೆಡೆ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ➤ ಇಂದು (ಆ.06) ಕಡಬ, ಪುತ್ತೂರು, ಬೆಳ್ತಂಗಡಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ
Scroll to Top