News Kadaba Desk

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.29. ಸುಬ್ರಹ್ಮಣ್ಯ ಮೀಸಲು ಅರಣ್ಯದಲ್ಲಿ ಕಾಲು ಮುರಿದು ಕಳೆದ ಮೂರು ವಾರಗಳಿಂದ ನರಕಯಾತನೆ ಅನುಭವಿಸುತ್ತಿದ್ದ ಕಾಡಾನೆಯು ಬುಧವಾರದಂದು ಕೊನೆಯುಸಿರೆಳೆದಿದೆ. ಸುಬ್ರಹ್ಮಣ್ಯ ಮೀಸಲು ಅರಣ್ಯದ ಬಾಳುಗೋಡು ಗ್ರಾಮದ ಪದಕ ಎಂಬಲ್ಲಿ ಕಾಡಾನೆಯೊಂದು ಕಳೆದ ಸುಮಾರು 22 ದಿನಗಳಿಂದ ಮುಂಭಾಗದ ಎಡ ಕಾಲು ಮುರಿದು ನರಕಯಾತನೆ ಅನುಭವಿಸುತ್ತಿತ್ತು. ಸಾರ್ವಜನಿಕರ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ್ದ ಅರಣ್ಯಾಧಿಕಾರಿಗಳು, ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದರು‌. ಚಿಕಿತ್ಸೆ ನೀಡಿಯೂ ಕಾಡಾನೆ ಚೇತರಿಸದೆ ಇದ್ದುದರಿಂದ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ […]

ಸುಬ್ರಹ್ಮಣ್ಯ: ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದ ಕಾಡಾನೆ ➤ 22 ದಿನಗಳಿಂದ ಕಾಲು ಮುರಿದು ನರಕ ಯಾತನೆ ಅನುಭವಿಸುತ್ತಿದ್ದ ಆನೆ Read More »

ಕರ್ನಾಟಕ

ಕಡಬ: ನೆಕ್ಕಿತ್ತಡ್ಕದಲ್ಲಿ ಶುದ್ಧ ತೆಂಗಿನೆಣ್ಣೆ ತಯಾರಿ ಘಟಕ ಆರಂಭ ➤ ನೂತನ ತಂತ್ರಜ್ಞಾನದ ಆಯಿಲ್ & ಫ್ಲೋರ್ ಮಿಲ್

(ನ್ಯೂಸ್ ಕಡಬ) newskadaba.com ಕಡಬ, ಮೇ.29. ಅತ್ಯಾಧುನಿಕ ತಂತ್ರಜ್ಞಾನದ ಶುದ್ಧ ಕೊಬ್ಬರಿ ಎಣ್ಣೆ ಹಾಗೂ ಅಕ್ಕಿ, ಗೋಧಿ ಹುಡಿ ಮಾಡುವ ನೂತನ ಘಟಕ ‘ಮಣಿಮಲ ಮಿಲ್ ಇಂಡಸ್ಟ್ರೀಸ್’ ಕಡಬ – ಮರ್ಧಾಳ ನಡುವಿನ ನೆಕ್ಕಿತ್ತಡ್ಕ ಬಸ್ ನಿಲ್ದಾಣದ ಮುಂಭಾಗದಲ್ಲಿ ಶುಭಾರಂಭಗೊಂಡಿತು. ಸಂಸ್ಥೆಯಲ್ಲಿ ನೂತನ ತಂತ್ರಜ್ಞಾನದೊಂದಿಗೆ ಕ್ಲಪ್ತ ಸಮಯದಲ್ಲಿ ಕೊಬ್ಬರಿಯನ್ನು ಎಣ್ಣೆ ಮಾಡಿಕೊಡಲಾಗುವುದು. ಅಕ್ಕಿ, ಗೋಧಿ, ರಾಗಿ, ಅರಿಶಿನ, ಕೊತ್ತಂಬರಿ, ಮೆಣಸು ಮೊದಲಾದ ಸಾಂಬಾರ್ ವಸ್ತುಗಳನ್ನು ಹುಡಿ ಮಾಡಿಕೊಡಲಾಗುವುದು. ಶುದ್ಧ ತೆಂಗಿನ ಎಣ್ಣೆ ಹಾಗೂ ಮಸಾಲ ಹುಡಿಗಳನ್ನು ಮಾರಾಟ

ಕಡಬ: ನೆಕ್ಕಿತ್ತಡ್ಕದಲ್ಲಿ ಶುದ್ಧ ತೆಂಗಿನೆಣ್ಣೆ ತಯಾರಿ ಘಟಕ ಆರಂಭ ➤ ನೂತನ ತಂತ್ರಜ್ಞಾನದ ಆಯಿಲ್ & ಫ್ಲೋರ್ ಮಿಲ್ Read More »

ಕರಾವಳಿ

ಬೆಳ್ತಂಗಡಿ ಐಟಿಐ ಶಿಕ್ಷಕನ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ➤ ಕೊಲೆ ನಡೆದು 24 ಗಂಟೆಗಳಲ್ಲಿ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28. ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ, ಮಾಲಾಡಿ ಐಟಿಐನ ಉಪನ್ಯಾಸಕ ವಿಕ್ರಮ್ ಜೈನ್ ರನ್ನು ರಸ್ತೆ ಮಧ್ಯದಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಆರೋಪಿಗಳನ್ನು ಘಟನೆ ನಡೆದು 24 ಗಂಟೆಗಳೊಳಗಾಗಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಮುಂಡೂರು ನಿವಾಸಿಗಳಾದ ರವಿ ಪೂಜಾರಿ ಎಂಬವರ ಪುತ್ರ ನಾಗೇಶ್ ಪೂಜಾರಿ(32) ಹಾಗೂ ಡೊಂಬ ಎಂಬವರ ಪುತ್ರ ಡೀಕಯ್ಯ(39) ಎಂದು ಗುರುತಿಸಲಾಗಿದೆ. ಆರೋಪಿಗಳು ರೈಲಿನಲ್ಲಿ ಮುಂಬಯಿಗೆ ಪರಾರಿಯಾಗುತ್ತಿರುವ ವೇಳೆ ಬೈಂದೂರು ರೈಲ್ವೇ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು.

ಬೆಳ್ತಂಗಡಿ ಐಟಿಐ ಶಿಕ್ಷಕನ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ➤ ಕೊಲೆ ನಡೆದು 24 ಗಂಟೆಗಳಲ್ಲಿ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ

ಹಿರಿಯ ಧಾರ್ಮಿಕ ವಿದ್ವಾಂಸ, ಸಮಸ್ತ ನೇತಾರ ಡಾ| ಶಾಹ್ ಮುಸ್ಲಿಯಾರ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಮೇ.29. ಹಿರಿಯ ಧಾರ್ಮಿಕ ವಿದ್ವಾಂಸ, ಸಮಸ್ತ ನೇತಾರ ಡಾl. ಶಾಹ್ ಮುಸ್ಲಿಯಾರ್ (87ವ.) ಮೇ 29ರಂದು ಬೆಳಿಗ್ಗೆ ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು. ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಕೆಲ ವರ್ಷಗಳ ಕಾಲ ಮತ್ತು ಸುಮಾರು 32 ವರ್ಷಗಳ ಕಾಲ ಸುಳ್ಯ ಆರಂತೋಡು ಮಸೀದಿಯಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸಿದ್ದರು. ಕನ್ನಡ ಪಾಂಡಿತ್ಯವನ್ನು ಹೊಂದಿದ್ದ ಇವರು ಸುಮಾರು 20 ವರ್ಷಗಳ ಕಾಲ ಸರಳಪಥ ಮತ್ತು ಅಲಮುಲ್ ಹುದಾ ಮಾಸ ಪತ್ರಿಕೆಯನ್ನು ನಡೆಸುತ್ತಿದ್ದರು.

ಹಿರಿಯ ಧಾರ್ಮಿಕ ವಿದ್ವಾಂಸ, ಸಮಸ್ತ ನೇತಾರ ಡಾ| ಶಾಹ್ ಮುಸ್ಲಿಯಾರ್ ನಿಧನ Read More »

ಕರ್ನಾಟಕ

ಪೊಲೀಸ್ ಬಿಟ್ಟು ರಾಜಕೀಯಕ್ಕೆ ಎಂಟ್ರಿಯಾಗ್ತಾರಾ ಅಣ್ಣಾಮಲೈ..? ➤ ಈ ಬಗ್ಗೆ ಸ್ಪಷ್ಟನೆ ನೀಡಿದ ‘ಕರ್ನಾಟಕದ ಸಿಂಗಂ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉನ್ನತ ಹುದ್ದೆಯಲ್ಲಿದ್ದ ಇವರು ಯಾಕಾಗಿ ರಾಜೀನಾಮೆಯನ್ನು ನೀಡಿದ್ದಾರೆ ಎನ್ನುವ ಬಗ್ಗೆ ಸಾರ್ವಜನಿಕರಿಗೆ ಕುತೂಹಲ ಆರಂಭವಾಗಿದೆ. ಇನ್ನೊಂದೆಡೆ ತನ್ನ ವಿಶಿಷ್ಟ ಕಾರ್ಯ ವೈಖರಿಯಿಂದ ದರೋಡೆಕೋರರಿಗೆ, ಕಳ್ಳರಿಗೆ, ಕೊಲೆಗಾರರಿಗೆ ಸಿಂಹ ಸ್ವಪ್ನವಾಗಿದ್ದ ಅಣ್ಣಾಮಲೈ ಯವರ

ಪೊಲೀಸ್ ಬಿಟ್ಟು ರಾಜಕೀಯಕ್ಕೆ ಎಂಟ್ರಿಯಾಗ್ತಾರಾ ಅಣ್ಣಾಮಲೈ..? ➤ ಈ ಬಗ್ಗೆ ಸ್ಪಷ್ಟನೆ ನೀಡಿದ ‘ಕರ್ನಾಟಕದ ಸಿಂಗಂ’ Read More »

ಕರ್ನಾಟಕ

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.28. ಖಡಕ್ ಐಪಿಎಸ್ ಅಧಿಕಾರಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಮಂಗಳವಾರದಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜನಪರ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿ ತನ್ನ ವಿಶಿಷ್ಟ ಸೇವೆಯಿಂದಾಗಿ ‘ಕರ್ನಾಟಕದ ಸಿಗಂ’ ಎಂದೇ ಖ್ಯಾತರಾಗಿದ್ದ ಅಣ್ಣಾಮಲೈ ತನ್ನ ರಾಜೀನಾಮೆ ಪತ್ರವನ್ನು ಡಿಜಿಐಜಿಪಿಗೆ ಸಲ್ಲಿಸಿದ್ದಾರೆ. ಡಿಜಿಪಿ ಮೂಲಕ ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನೆಯಾಗಲಿದ್ದು, ಆ ಬಳಿಕ ಗೃಹ ಕಾರ್ಯದರ್ಶಿಗಳು ಅಲ್ಲಿಂದ ಕೇಂದ್ರ ಯುಪಿಎಸ್ಸಿಗೆ ರಾಜೀನಾಮೆ ಪತ್ರ ರವಾನಿಸಲಿದ್ದಾರೆ.

ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜೀನಾಮೆ ➤ ಉಡುಪಿ, ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದ ‘ಕರ್ನಾಟಕದ ಸಿಂಗಂ Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಐಟಿಐ ಉಪನ್ಯಾಸಕನ ಬರ್ಬರ ಹತ್ಯೆ ➤ ರಸ್ತೆ ಮಧ್ಯದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮೇ.28. ಸರಕಾರಿ ಐಟಿಐ ಕಾಲೇಜಿನ ಉಪನ್ಯಾಸಕರೋರ್ವರನ್ನು ರಸ್ತೆ ಮಧ್ಯದಲ್ಲೇ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಮುಂಡೂರು ಎಂಬಲ್ಲಿ ಸೋಮವಾರ ತಡರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಮುಂಡೂರು ನಿವಾಸಿ, ಮಾಲಾಡಿ ಐಟಿಐನ ಉಪನ್ಯಾಸಕ ವಿಕ್ರಮ್ ಜೈನ್(40.ವ) ಎಂದು ಗುರುತಿಸಲಾಗಿದೆ. ವಿಕ್ರಮ್ ರನ್ನು ಸೋಮವಾರ ತಡರಾತ್ರಿ ಮುಂಡೂರಿನ ಕೋಟಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯದಲ್ಲೇ ತಲವಾರಿನಿಂದ ಬರ್ಬರವಾಗಿ ಕೊಚ್ಚಿ ಕೊಲೆಗೈದು ಅಪರಿಚಿತರು ಪರಾರಿಯಾಗಿದ್ದಾರೆ. ಮೃತದೇಹದ ಪಕ್ಕದಲ್ಲೇ ವಿಕ್ರಮ್ ರವರ

ಬೆಳ್ತಂಗಡಿ: ಐಟಿಐ ಉಪನ್ಯಾಸಕನ ಬರ್ಬರ ಹತ್ಯೆ ➤ ರಸ್ತೆ ಮಧ್ಯದಲ್ಲೇ ಮಚ್ಚಿನಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು Read More »

ಕರಾವಳಿ

ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಜೀವ ಬೆದರಿಕೆ ➤ ಮೂವರು ಭಜರಂಗದಳದ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.27. ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ, ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಸೋಮವಾರದಂದು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳದ ನಿವಾಸಿಗಳಾದ ಸಚಿನ್ (25), ನಿಶಾಂತ್ (23) ಹಾಗೂ ಕಾಸರಗೋಡು ನಿವಾಸಿ ಕಾರ್ತಿಕ್ (30) ಎಂದು ಗುರುತಿಸಲಾಗಿದೆ. ಆರೋಪಿಗಳು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಗೆಲುವು

ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಜೀವ ಬೆದರಿಕೆ ➤ ಮೂವರು ಭಜರಂಗದಳದ ಕಾರ್ಯಕರ್ತರ ಬಂಧನ Read More »

ರಾಷ್ಟ್ರೀಯ ನ್ಯೂಸ್

➤➤ Breaking News ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು ➤ ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಾಣಿ, ಮೇ.25. ನೇತ್ರಾವತಿ ನದಿಗೆ ಇಳಿದಿದ್ದ ಮೂವರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ಸಂಭವಿಸಿದೆ. ಮೖತ ಬಾಲಕರನ್ನು ಕೇರಳ ರಾಜ್ಯದ ಕುಂಬ್ಳೆ ನಿವಾಸಿಗಳಾದ ಮನೀಷ್ ಮತ್ತು ಅಜಿತ್ ಎಂದು ಗುರುತಿಸಲಾಗಿದೆ. ಸೂರಿಕುಮೇರು ಸಮೀಪದ ಬರಿಮಾರು ನಿವಾಸಿ ಸಂಜೀವ ಬೋವಿ ಎಂಬವರ ಮನೆಗೆ ಮದುವೆ ಕಾರ್ಯಕ್ರಮಕ್ಕೆ ಕುಂಬ್ಳೆಯಿಂದ ಬಂದಿದ್ದ ಸಂಬಂಧಿಕರ ಏಳು ಮಂದಿ ಮಕ್ಕಳು ಇಲ್ಲಿನ ನೇತ್ರಾವತಿ ನದಿಗೆ

➤➤ Breaking News ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು ➤ ಓರ್ವ ಗಂಭೀರ Read More »

ಕರಾವಳಿ

ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕಡಬ ಸೈಂಟ್ ಜೋಕಿಮ್ಸ್ ಚರ್ಚ್ ನ ಇಂಡಿಯನ್ ಕ್ಯಾಥೊಲಿಕ್ ಯೂತ್ ಮೂವ್ ಮೆಂಟ್ ಘಟಕ ಹಾಗೂ ಐಸಿವೈಎಂ ಪುತ್ತೂರು ಪೂರ್ವ ವಿಭಾಗದ ಆಶ್ರಯದಲ್ಲಿ ಮಂಗಳೂರಿನ ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ನಾಳೆ (ಮೇ.26) ಕಡಬದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಕಡಬದ ಸೈಂಟ್ ಜೋಕಿಮ್ಸ್ ಚರ್ಚ್‌ನ ಸಭಾಂಗಣದಲ್ಲಿ ಆರಂಭಗೊಂಡು ಮಧ್ಯಾಹ್ನದ ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕಾಗಿ ಸಂಸ್ಥೆಯ

ನಾಳೆ (ಮೇ.26) ಕಡಬದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ Read More »

ಕರಾವಳಿ
Scroll to Top