ಚಿಕ್ಕಮಗಳೂರು: 80 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಕಾರು ➤ ಬೆಳ್ತಂಗಡಿಯ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ.19. ಕಾರೊಂದು ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ ಬೆಳ್ತಂಗಡಿಯ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪ ಸೋಮವಾರದಂದು ಸಂಭವಿಸಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಿಲಿಗೂಡು ನಿವಾಸಿಗಳಾದ ವಿಶ್ವನಾಥ್(55) ಪುಷ್ಪಾವತಿ (48) ದಂಪತಿ ಹಾಗೂ ರಾಹುಲ್ ರೈ(58) ಮಮತಾ(51) ದಂಪತಿ ಎಂದು ಗುರುತಿಸಲಾಗಿದೆ. ಸಂಜೀವ್ ಶೆಟ್ಟಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕಳಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ […]









