ಕಡಬಕ್ಕೆ ಆಗಮಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ► ಪದವಿ ಕಾಲೇಜು ಆರಂಭಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಭರವಸೆ
(ನ್ಯೂಸ್ ಕಡಬ) newskadaba.com ಕಡಬ, ಜ.13. ಕಡಬ ಜ್ಯೂನಿಯರ್ ಕಾಲೇಜಿನ ಹೊಸ ಕಟ್ಟಡಕ್ಕೆ 1 ಕೋಟಿ ಅನುದಾನ ಮಂಜೂರುಗೊಂಡು ಟೆಂಡರ್ ಮುಗಿದು ಕಾಮಗಾರಿ ಆರಂಭಗೊಳ್ಳದೇ ಇರುವುದರಿಂದ ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಆದೇಶ ನೀಡಬೇಕೆಂದು ಉನ್ನತ ಶಿಕ್ಷಣ ಸಚಿವರಾದ ಜಿ.ಟಿ.ದೇವೆಗೌಡರಿಗೆ ಭಾನುವಾರದಂದು ಮನವಿ ಸಲ್ಲಿಸಲಾಯಿತು. ಕುಕ್ಕೇ ಸುಬ್ರಹ್ಮಣ್ಯ ಧಾರ್ಮಿಕ ಕ್ಷೇತ್ರವನ್ನು ಸಂದರ್ಶಿಸಿದ ಬಳಿಕ ಮುಖ್ಯಮಂತ್ರಿಗಳ ತುರ್ತು ಕಾರ್ಯಕ್ರಮದ ನಿಮಿತ್ತ ಸುಳ್ಯ ಮೂಲಕ ಮೈಸೂರಿಗೆ ತೆರಳಲು ಕಡಬಕ್ಕೆ ಆಗಮಿಸಿದ ಸಚಿವ ಜಿ.ಟಿ.ದೇವೇಗೌಡರಿಗೆ ಕಡಬದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಹೂವಿನ […]






