News Kadaba Desk

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್

 (ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಸುಳ್ಯ ಶ್ರೀ ಚೆನ್ನಕೇಶವ ದೇವರ ವರ್ಷಾವಧಿ ಜಾತ್ರೋತ್ಸವವು ಜನವರಿ 13ರವರೆಗೆ ನಡೆಯಲಿದೆ. ಈ ಸಮಯ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು, ಸುವ್ಯವಸ್ಥೆ ಹಾಗೂ ಸುರಕ್ಷತೆಯನ್ನು ಕಾಪಾಡುವ ಸಾರ್ವಜನಿಕ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1) ರ ಅಡಿಯಲ್ಲಿ ದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಾರ್ ಮತ್ತು ರೆಸ್ಟೋರೆಂಟ್ ಮತ್ತು ವೈನ್‍ಶಾಪ್, ಮದ್ಯ ಮಾರಾಟ ಕೇಂದ್ರಗಳನ್ನು ಜನವರಿ 10 ರಂದು ಮಧ್ಯರಾತ್ರಿ 12 ಗಂಟೆಯಿಂದ ಜನವರಿ […]

ಸುಳ್ಯ: ಇಂದು ನಾಳೆ ಮದ್ಯ ಮಾರಾಟ ಕೇಂದ್ರ ಬಂದ್ Read More »

ಕರಾವಳಿ

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಅಮೇರಿಕನ್ ಅಕಾಡೆಮಿ ಆಫ್ ನ್ಯೂರೋಲಜಿ ಸಂಸ್ಥೆಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸ್ಕಾಲರ್ ಶಿಪ್ ಅವಾರ್ಡ್‍ಗೆ ಮಂಗಳೂರಿನ ವೈದ್ಯೆ ಡಾ. ಸಲ್ಮಾ ಸುಹಾನ ಆಯ್ಕೆಯಾಗಿದ್ದಾರೆ.ದಾವಣಗೆರೆಯ ಎಸ್‍ಎಸ್‍ಐಎಂಎಸ್‍ಆರ್‍ಸಿ ವೈದ್ಯಕೀಯ ಕಾಲೇಜಿನಲ್ಲಿ ನ್ಯೂರೋಲಜಿ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ (ಡಿಎಂ) ವ್ಯಾಸಂಗ ಮಾಡುತ್ತಿರುವ ಡಾ.ಸಲ್ಮಾ ಸುಹಾನಾ ಅವರ ಸೆರೆಬ್ರಲ್ ವೀನಸ್ ತ್ರಂಬೋಸಿಸ್ ಕುರಿತ ಅಧ್ಯಯನವನ್ನು ಗುರುತಿಸಿ, ಪ್ರಶಸ್ತಿ ಸ್ವೀಕರಿಸಲು ಮೇ ತಿಂಗಳಲ್ಲಿ ಫಿಲಡೆಲ್ಫಿಯಾದಲ್ಲಿ ನಡೆಯುವ ಜಾಗತಿಕ ನರರೋಗ ತಜ್ಞರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಸಲ್ಮಾ ಸುಹಾನ ಅವರು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com.ಕಡಬ,ಜ.11.ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (ಏಈಆ) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ ಈ ವೈರಾಣು ರಕ್ತ ಸೇರುತ್ತದೆ. ಪ್ಲಾವಿವೈರಸ್ ಎಂಬ ಗುಂಪಿಗೆ

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಸ್ಪರ್ಧಾತ್ಮಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ /ಆಂಗ್ಲ/ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.    2018ರ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರಗ್ರಂಥಾಲಯ, ಕಬ್ಬನ್‍ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 30ರ ವರೆಗೆ ಕಾಪಿರೈಟ್

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ Read More »

ಕರಾವಳಿ

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ 2018-19ನೇ ಸಾಲಿಗೆ ಜಿಲ್ಲೆಯ ವಿಕಲಚೇತನ ಫಲಾನುಭವಿಗಳಿಂದ ‘ಆಧಾರ್’ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.  ಅರ್ಹ ವಿಕಲಚೇತನರು ಅರ್ಜಿಯನ್ನು ಇಲಾಖೆಯಿಂದ ಕಚೇರಿ ವೇಳೆಯಲ್ಲಿ ಪಡೆದು ಜನವರಿ 25 ರೊಳಗಾಗಿ ಸಲ್ಲಿಸಬೇಕು.  ಷರತ್ತುಗಳು: ಅರ್ಜಿ ಸಲ್ಲಿಸುವ ವಿಕಲಚೇತನರು ಫಲಾನುಭವಿಯು ಶೇ.40 ಅಥವಾ ಅದಕ್ಕಿಂತ ಹೆಚ್ಚು ಅಂಗವಿಕಲತೆ ಇದ್ದು 18 ರಿಂದ 55 ವರ್ಷ ವಯಸ್ಸಿನೊಳಗಿನ ನಿರುದ್ಯೋಗಿಯಾಗಿರಬೇಕು ಹಾಗೂ ಕನಿಷ್ಠ ಕಳೆದ ಹತ್ತು ವರ್ಷಗಳಿಂದ ಕರ್ನಾಟಕರಾಜ್ಯದಲ್ಲಿ ವಾಸವಿರುವ ಬಗ್ಗೆ ತಹಸೀಲ್ದಾರ್‍ರವರಿಂದ ಧೃಢೀಕರಣ ಸಲ್ಲಿಸಬೇಕು.

ವಿಕಲಚೇತನ ಫಲಾನುಭವಿಗಳಿಗೆ ಆಧಾರ್ ಯೋಜನೆಯಡಿ ► ಸಬ್ಸಿಡಿ ಸಹಿತ ಸಾಲ ಸೌಲಭ್ಯ Read More »

ಕರಾವಳಿ

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.10. ಭಾರತೀಯ ರೈಲ್ವೆ ಸೇವೆಯನ್ನು ಉನ್ನತ ದರ್ಜೆಗೆ ಏರಿಸಲು ಶ್ರಮಿಸುತ್ತಿರುವ ಕೇಂದ್ರ ಸರ್ಕಾರ,  ಭಾರತದ ರೈಲ್ವೆ ಹೊಸ ಟಚ್‌ ಕೊಡಲು ಮುಂದಾಗಿದೆ. ಭಾರತದ ಕೆಲವು ರೈಲುಗಳಲ್ಲಿ ಪ್ರಯಾಣಿಕರು, ತಮ್ಮ ಪ್ರಯಾಣದ ಅವಧಿಯಲ್ಲೇ, ತಮಗೆ ಬೇಕಿರುವ ಸೌಂದರ್ಯ ವರ್ಧಕ ಉತ್ಪನ್ನಗಳು, ಫಿಟ್‌ನೆಸ್‌ ಹಾಗೂ ಅಡುಗೆ ಮನೆಗೆ ಅಗತ್ಯವಿರುವ ಪರಿಕರಗಳನ್ನು ಖರೀದಿಸಬಹುದಾಗಿದೆ. ಈ ಮೂಲಕ ಭಾರತದ ಕೆಲವು ರೈಲುಗಳು ಶಾಪಿಂಗ್‌ ಮಾಲ್‌ಗಳ ರೂಪ ಪಡೆಯಲಿವೆ.   16 ಮೇಲ್‌ ಮತ್ತು ಎಕ್ಸ್‌ಪ್ರೆಸ್‌ ರೈಲುಗಳಲ್ಲಿ 5 ವರ್ಷಗಳ ಕಾಲ ಸೌಂದರ್ಯವರ್ಧಕ,

ಕೆಲಸದ ಒತ್ತಡದಿಂದಾಗಿ ಶಾಪಿಂಗ್ ಮಾಡಲು ಸಮಯ ಸಾಕಾಗುತ್ತಿಲ್ಲವೆ? ► ಇನ್ಮುಂದೆ ಕೆಲವು ರೈಲುಗಳಲ್ಲಿ ಇರಲಿವೆ ಶಾಪಿಂಗ್‌ ಮಾಲ್‌ಗಳು Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10.  ಭಾರತ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ಮಕ್ಕಳ ವಿರುದ್ಧ ಅಪಾದನೆಗಳ ತ್ವರಿತ ವಿಲೇವಾರಿಗೆ ಮಕ್ಕಳ ನ್ಯಾಯಾಲಯವನ್ನು ಸ್ಥಾಪಿಸಲು ಮಕ್ಕಳ ಹಕ್ಕುಗಳ  ರಕ್ಷಣೆಯ ಅಧಿನಿಯಮ-20055ನ್ನು ಜಾರಿಗೆ ತಂದಿದ್ದು, ಪ್ರಕರಣ 17(1)ರಂತೆ ದಿನಾಂಕ:27-9-2007ರ ಸರ್ಕಾರಿ ಆದೇಶದನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ಕರ್ನಾಟಕ ಸರ್ಕಾರವು ಸ್ಥಾಪಿಸಿದ್ದು ಸದರಿ ಆಯೋಗಕ್ಕೆ ಆರು ಸದಸ್ಯರನ್ನು (ಇಬ್ಬರು ಮಹಿಳಾ ಸದಸ್ಯರನ್ನು ಒಳಗೊಂಡಂತೆ) ರಾಜ್ಯ ಸರ್ಕಾರವು ನೇಮಿಸಬೇಕಾಗಿರುತ್ತದೆ.  ಸದಸ್ಯರ ಅವಧಿಯು 3 ವರ್ಷದ್ದಾಗಿದ್ದು, ಸದಸ್ಯ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜನವರಿ 12 ಮತ್ತು 13ರಂದು ನಡೆಯುವ ಮಂಗಳೂರು ರಿವರ್ ಫೆಸ್ಟ್ “ ನದಿ ಉತ್ಸವ”ಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಉತ್ಸವಕ್ಕೆ ಸಂಬಂದಪಟ್ಟ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜ.12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಈ ಉತ್ಸವ ನಡೆಯಲಿದೆ. ನದಿಗಳತ್ತ ಜನರನ್ನು ಆಕರ್ಷಿಸಲು ಹಾಗೂ ನದಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ Read More »

ಕರಾವಳಿ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಸಂಸ್ಥೆಗಳಾದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ನೆಹರು ಯುವ ಕೇಂದ್ರ ಸಂಘಟನೆಯ ಆಶ್ರಯದಲ್ಲಿ ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆಯನ್ನು ಆಯೋಜಿಸಿದೆ. ಜನವರಿ 17,18,19 ರಂದು ದಕ್ಷಿಣ ಕನ್ನಡ ಜಿಲ್ಲಾಮಟ್ಟದಲ್ಲಿ ಪ್ರಥಮ ಸುತ್ತಿನ ಸ್ಪರ್ಧೆಯನ್ನು ಸಂತ ಆಗ್ನೇಸ್ ಕಾಲೇಜ್ ಬೆಂದೂರು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಸ್ಪರ್ಧೆಯು ಎರಡು ವಿಧದಲ್ಲಿ ನಡೆಯಲಿದೆ. ಆಯ್ದ ವಿಷಯಗಳ ಬಗ್ಗೆ ಎರಡು ಮೂರು ನಿಮಿಷ ಕನ್ನಡ/ಇಂಗ್ಲಿಷ್/ಹಿಂದಿ ಭಾಷೆಯಲ್ಲಿ ಮಾತನಾಡಬೇಕು ಹಾಗೂ ತಮ್ಮದೇ ಭಾಷಣದ ವಿಡಿಯೋ

  ಜನವರಿ 17,18,19  ರಾಷ್ಟ್ರೀಯ ಯುವ ಸಂಸತ್ತು ಸ್ಪರ್ಧೆ Read More »

ಕರಾವಳಿ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.10. ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 26ರಿಂದ 28ರವರೆಗೆ ಏರ್ಪಡಿಸಲಾಗಿದೆ. ತರಕಾರಿ ಕೆತ್ತನೆ, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ Read More »

ಕರಾವಳಿ
Scroll to Top