ಮೋಟಾರ್ ವಾಹನ ತಿದ್ದುಪಡಿ ಮಸೂದೆ-2017ನ್ನು ಹಿಂಪಡೆಯುವಂತೆ ಅಗ್ರಹ ► ಜ. 8 ಮತ್ತು 9 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ
(ನ್ಯೂಸ್ ಕಡಬ)newskadaba.com.ಬೆಂಗಳೂರು,ಜ.6.ಮೋಟಾರ್ ವಾಹನ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿವೆ. ಇದು ಚಾಲಕರ ವಿರೋಧಿ ಮಸೂದೆ ಅಂತಾ ಸಾರಿಗೆ ಇಲಾಖೆ ಕಾರ್ಮಿಕರು ಕಿಡಿಕಾರಿದ್ದು ಈ ಹಿನ್ನಲೆಯಲ್ಲಿ ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್‍ಗೆ ಕರೆಕೊಟ್ಟಿದೆ. ಮೋಟಾರ್ ವಾಹನ ತಿದ್ದುಪಡಿ ಮಸೂದೆ-2017ನ್ನು ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಕಾರ್ಮಿಕ ಸಂಘಟನೆಗಳು ಒತ್ತಾಯಿಸುತ್ತಿವೆ. […]









