News Kadaba Desk

ಮಾಜಿ ಸಚಿವ ಬಿ.ಎ.ಮೊಹಿದಿನ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಹಿರಿಯ ರಾಜಕೀಯ ನೇತಾರ, ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ. ಮೊಹಿದಿನ್(81) ಅಲ್ಪ ಕಾಲದ ಅಸೌಖ್ಯದಿಂದಾಗಿ ಮಂಗಳವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದಿಂದಾಗಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ಚೇತರಿಕೆಯ ನಂತರ ವಾರದ ಹಿಂದೆ ಬೆಂಗಳೂರಿಗೆ ತೆರಳಿದ್ದರೆನ್ನಲಾಗಿದೆ. ಅಲ್ಲಿ ಆರೋಗ್ಯ ಪರಿಸ್ಥಿತಿ ಹದಗೆಟ್ಟಾಗ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿತ್ತು. ಮಂಗಳವಾರ ಮುಂಜಾನೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಮಾಜಿ ಸಚಿವ ಬಿ.ಎ.ಮೊಹಿದಿನ್ ವಿಧಿವಶ Read More »

ಕರ್ನಾಟಕ

ಉಪ್ಪಳ: ಲಾರಿ – ತೂಫಾನ್ ಮುಖಾಮುಖಿ ಢಿಕ್ಕಿ ► ಮಂಗಳೂರಿನ ಒಂದೇ ಕುಟುಂಬದ ಐವರ ದುರ್ಮರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.09. ಲಾರಿ ಹಾಗೂ ತೂಫಾನ್ ನಡುವೆ ಢಿಕ್ಕಿ ಸಂಭವಿಸಿ ಐವರು ಮೃತಪಟ್ಟ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಉಪ್ಪಳ ಸಮೀಪದ ನಯಾ ಬಜಾರ್‍‍ ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕೆ.ಸಿ.ರೋಡ್ ಅಜ್ಜಿನಡ್ಕ ನಿವಾಸಿಗಳಾದ ಬೀಫಾತಿಮ್ಮ(65), ಅಸ್ಮಾ(30), ನಸೀಮಾ(38), ಮುಸ್ತಾಕ್(41), ಇಮ್ತಿಯಾಝ್(35) ಎಂದು ಗುರುತಿಸಲಾಗಿದೆ. ಇವರು ಕುಟುಂಬ ಸಮೇತರಾಗಿ ಕೇರಳದ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ಸಂದರ್ಶಿಸಿ ಹಿಂತಿರುಗುತ್ತಿದ್ದಾಗ ಉಪ್ಪಳ ಸಮೀಪ ಲಾರಿ ಹಾಗೂ ತೂಫಾನ್ ನಡುವೆ ಢಿಕ್ಕಿಯುಂಟಾಗಿ

ಉಪ್ಪಳ: ಲಾರಿ – ತೂಫಾನ್ ಮುಖಾಮುಖಿ ಢಿಕ್ಕಿ ► ಮಂಗಳೂರಿನ ಒಂದೇ ಕುಟುಂಬದ ಐವರ ದುರ್ಮರಣ Read More »

ರಾಷ್ಟ್ರೀಯ ನ್ಯೂಸ್

ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ತೀವ್ರ ಮಳೆಯ ಹಿನ್ನೆಲೆಯಲ್ಲಿ ಜುಲೈ 09 ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಸಸಿಕಾಂತ್ ಸೆಂಥಿಲ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ತೀವ್ರ ಮಳೆಯಾಗುತ್ತಿರುವುದರಿಂದಾಗಿ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಹಾಗೂ ಪ್ರಾಕೃತಿಕ ವಿಕೋಪದ ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಸೋಮವಾರದಂದು ರಜೆ ಘೋಷಿಸಲಾಗಿದೆ.

ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆ ► ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ Read More »

ಕರಾವಳಿ

ಕೊಂಬಾರು ಗ್ರಾಮ ಕರಣಿಕ ನೆಬಿ ಸಾಹೇಬ್ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಜು.08. ಕೊಂಬಾರು ಗ್ರಾಮ ಕರಣಿಕರಾಗಿ ಸೇವೆಯಲ್ಲಿದ್ದ ನೆಬಿಸಾಹೇಬ್ ಮಿದುಳು ರಕ್ತಸ್ರಾವದಿಂದಾಗಿ ಭಾನುವಾರದಂದು ನಿಧನ ಹೊಂದಿದರು. ನಿವೃತ್ತ ಯೋಧರಾಗಿದ್ದ ಇವರು ಕಳೆದ ನಾಲ್ಕು ವರ್ಷಗಳ ಹಿಂದೆ ಕಂದಾಯ ಇಲಾಖೆಗೆ ಸೇರ್ಪಡೆಗೊಂಡು ಪ್ರಸ್ತುತ ಕೊಂಬಾರು ಗ್ರಾಮ ಕರಣಿಕರಾಗಿ ಸೇವೆ ಸಲ್ಲಿಸುತ್ತಿದ್ದರು. ಭಾನುವಾರದಂದು ಕಡಬದಲ್ಲಿ ಕುಸಿದು ಬಿದ್ದ‌ ಇವರನ್ನು ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಿದುಳು ರಕ್ತಸ್ರಾವದಿಂದಾಗಿ ಮೃತಪಟ್ಟರು.

ಕೊಂಬಾರು ಗ್ರಾಮ ಕರಣಿಕ ನೆಬಿ ಸಾಹೇಬ್ ನಿಧನ Read More »

ಕರಾವಳಿ

ಪುತ್ತೂರು: ಮನೆಯ ಮೇಲೆ ಗುಡ್ಡ ಕುಸಿತ ► ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.07. ಶುಕ್ರವಾರದಿಂದ ಸುರಿದ ಭಾರೀ ಮಳೆಗೆ ಮನೆತ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತೂರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಪುತ್ತೂರು ಕಸಬಾ ಗ್ರಾಮದ ಹೆಬ್ಬಾರ್ ಬೈಲ್ ನಿವಾಸಿ ಪಾರ್ವತಿ(70) ಹಾಗೂ ಧನುಷ್(11) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತಿದ್ದು ಗುಡ್ಡ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟರು ಎಂದು ಹೇಳಲಾಗಿದೆ.

ಪುತ್ತೂರು: ಮನೆಯ ಮೇಲೆ ಗುಡ್ಡ ಕುಸಿತ ► ಇಬ್ಬರು ಮೃತ್ಯು Read More »

ಕರಾವಳಿ

ಮುಡಿಪು: ಕಾರು – ಲಾರಿ ಢಿಕ್ಕಿ ► ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.06. ಓಮ್ನಿ ಕಾರು ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮುಡಿಪು – ಮೆಲ್ಕಾರ್ ರಸ್ತೆಯ ಕಾಯರ್ಗೋಳಿ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಕಾರು ಚಾಲಕ ಸಿಕಂದರ್ ಎಂಬವರು ಗಂಭೀರ ಗಾಯಗೊಂಡಿದ್ದು, ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮಕ್ಕಳಿಬ್ಬರಿಗೂ ಗಾಯಗಳಾಗಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಮೆಲ್ಕಾರ್ ನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ

ಮುಡಿಪು: ಕಾರು – ಲಾರಿ ಢಿಕ್ಕಿ ► ಮೂವರಿಗೆ ಗಾಯ Read More »

ಕರಾವಳಿ

ನೇರಳಕಟ್ಟೆ: ಬೈಕ್ – ಕ್ಯಾಂಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.05. ಬೈಕ್ ಹಾಗೂ ಕ್ಯಾಂಟರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಎಂಬಲ್ಲಿ ಗುರುವಾರದಂದು ನಡೆದಿದೆ. ಘಟನೆಯಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ಪಾಟ್ರಕೋಡಿ ನಿವಾಸಿಗಳಾದ ಬಿಲಾಲ್ ಮತ್ತು ಅಲ್ತಾಫ್ ಎಂಬವರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಈಚರ್ ಲಾರಿ ನಡುವೆ

ನೇರಳಕಟ್ಟೆ: ಬೈಕ್ – ಕ್ಯಾಂಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಸುಳ್ಯ: ಬಿಡಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಜು.04. ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರದಂದು ಸುಳ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ನು ಸುಳ್ಯದ ಕೆವಿಜಿ ದಂತ ಮಹಾ ವಿದ್ಯಾಲಯದ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿನಿ, ಮೈಸೂರು ನಗರದ ಗುರುರಾಜ ಬಡಾವಣೆ ನಿವಾಸಿ ರಮೇಶ್ ಎಂಬವರ ಪುತ್ರಿ ಸುಮಾ(19) ಎಂದು ಗುರುತಿಸಲಾಗಿದೆ. ಈಕೆ ವಾರ್ಷಿಕ ಪರೀಕ್ಷೆಯನ್ನು ಸರಿಯಾಗಿ ಬರೆದಿಲ್ಲ ಎಂದು ಜಿಗುಪ್ಸೆಗೊಂಡು ಮನನೊಂದು ಬುಧವಾರದಂದು ಹಾಸ್ಟೆಲ್ ನಲ್ಲಿ ಡೆತ್ ನೋಟ್ ಬರೆದಿಟ್ಟು ಚೂಡಿದಾರದ ವೇಲ್ ನಿಂದ

ಸುಳ್ಯ: ಬಿಡಿಎಸ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ

ಕಡಬ ತಹಶೀಲ್ದಾರರಾಗಿ ಜಾನ್ ಪ್ರಕಾಶ್ ರೋಡ್ರಿಗಸ್ ಮತ್ತೆ ಕರ್ತವ್ಯಕ್ಕೆ ಹಾಜರ್

(ನ್ಯೂಸ್ ಕಡಬ) newskadaba.com ಕಡಬ, ಜು.03. ಚುನಾವಣಾ ಕರ್ತವ್ಯ ನಿಮಿತ್ತ ವರ್ಗಾವಣೆಗೊಂಡಿದ್ದ ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಮತ್ತೆ ಕಡಬ ತಹಶೀಲ್ದಾರರಾಗಿ ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳ 21 ರಂದು ಉಡುಪಿ ಜಿಲ್ಲೆಯ ಕಾಪು ತಹಶೀಲ್ದಾರರಾಗಿ ನಿಯೋಜನೆಗೊಂಡಿದ್ದ ಇವರು ಚುನಾವಣೆ ಮುಗಿದ ನಂತರ ಇದೀಗ ತನ್ನ ಮೂಲಸ್ಥಾನಕ್ಕೆ ಹಿಂತಿರುಗಿದ್ದಾರೆ.

ಕಡಬ ತಹಶೀಲ್ದಾರರಾಗಿ ಜಾನ್ ಪ್ರಕಾಶ್ ರೋಡ್ರಿಗಸ್ ಮತ್ತೆ ಕರ್ತವ್ಯಕ್ಕೆ ಹಾಜರ್ Read More »

ಕರಾವಳಿ

ಬೆಳ್ಳಾರೆ: ಅಕ್ರಮ ಗಾಂಜಾ ಮಾರಾಟ ಯತ್ನ ► ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.03. ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಬೆಳ್ಳಾರೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬುಧವಾರದಂದು ನಡೆದಿದೆ. ಬಂಧಿತ ಆರೋಪಿಗಳನ್ನು ಬೇಲೂರು ತಾಲೂಕಿನ ಹಳೇಬೀಡು ಬೂದಿಗುಂಡಿ ನಿವಾಸಿ ಅಕ್ಬರ್ ಎಂಬವರ ಪುತ್ರ ಸಾದಿಕ್(35), ಕರಿಕ್ಕಳದ ಐವತ್ತೊಕ್ಲು ಜನತಾ ಕಾಲೋನಿ ನಿವಾಸಿ ಶೇಕಬ್ಬ ಎಂಬವರ ಪುತ್ರ ಮಹಮ್ಮದ್ ಇಕ್ಬಾಲ್(25) ಮತ್ತು ಕಳಂಜ ಗ್ರಾಮದ ವಿಷ್ಣು ನಗರ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಷಾದ್ ಎಂದು

ಬೆಳ್ಳಾರೆ: ಅಕ್ರಮ ಗಾಂಜಾ ಮಾರಾಟ ಯತ್ನ ► ಮೂವರ ಬಂಧನ Read More »

ಕರಾವಳಿ
Scroll to Top