News Kadaba Desk

ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಲ್ಲರಿಗೂ ಖಾತೆಯನ್ನು ಅಂತಿಮಗೊಳಿಸಲಾಗಿದ್ದು, ಈ ಕೆಳಗಿನಂತೆ ಹಂಚಲಾಗಿದೆ. ಎಚ್‌.ಡಿ. ಕುಮಾರಸ್ವಾಮಿ – ಹಣಕಾಸು / ಇಂಧನ / ಗುಪ್ತವಾರ್ತೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಪರಮೇಶ್ವರ್ – ಗೃಹ / ಬೆಂಗಳೂರು ನಗರಾಭಿವೃದ್ಧಿ ಎಚ್‌ಡಿ ರೇವಣ್ಣ – ಲೋಕೋಪಯೋಗಿ ಆರ್‌ವಿ ದೇಶಪಾಂಡೆ – ಕಂದಾಯ ಡಿಕೆ ಶಿವಕುಮಾರ್ – ಜಲಸಂಪನ್ಮೂಲ / ವೈದ್ಯಕೀಯ […]

ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..? Read More »

ಕರ್ನಾಟಕ

ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.08. ಜಾಗದ ತಕರಾರಿನ ಹಿನ್ನೆಲೆಯಲ್ಲಿ ವ್ಯಕ್ತಿಗಳಿಬ್ಬರು ಪರಸ್ಪರ ಹಲ್ಲೆ‌ ಮಾಡಿಕೊಂಡ ಘಟನೆ ಠಾಣಾ ವ್ಯಾಪ್ತಿಯ ಬಲ್ಯ ಗ್ರಾಮದ ದೇರಾಜೆ ಕ್ರಾಸ್ ಎಂಬಲ್ಲಿ ಗುರುವಾರದಂದು ನಡೆದಿದೆ. ಬಲ್ಯ ಗ್ರಾಮದ ಸಂಪಡ್ಕ ನಿವಾಸಿ, ದೇರಾಜೆ ಕ್ರಾಸ್ ಬಳಿಯ ಅಂಗಡಿ ವ್ಯಾಪಾರಿ ಗೋಪಾಲಕೃಷ್ಣ ಎಂಬವರಿಗೆ ದೇರಾಜೆ ಕ್ರಾಸ್ ನಿವಾಸಿ ಗಿರೀಶ್ ಎಂಬವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಡಿಯೊಳಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಇವರಿಬ್ಬರ ಜಾಗ ಅಕ್ಕಪಕ್ಕದಲ್ಲಿದ್ದು ಜಾಗದ ಒಂದು ಭಾಗದ ವಿಚಾರದಲ್ಲಿ ಕಳೆದ ಕೆಲವು

ಬಲ್ಯ: ಜಾಗದ ವಿಚಾರದಲ್ಲಿ ಪರಸ್ಪರ ಹಲ್ಲೆ ► ದೂರು – ಪ್ರತಿ ದೂರು Read More »

ಕರಾವಳಿ

ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.08. ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಪವಾಡ ಸದೃಶ ಪಾರಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ‌ ಮಾಣಿ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಮಹೇಶ್ ಸಂಸ್ಥೆಯ ಖಾಸಗಿ ಬಸ್ ಹಾಗೂ ಬೈಕ್‌ ನಡುವೆ ಮಾಣಿಯಲ್ಲಿ ಅಪಘಾತವಾಗಿದ್ದು, ಬೈಕ್ ಬಸ್ಸಿನ ಅಡಿಗೆ ಬಿದ್ದು ಜಖಂಗೊಂಡಿದೆ. ಬೈಕ್ ಸವಾರ ಅನಂತಾಡಿ ನಿವಾಸಿ ಮೋಹನ್ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್ ► ಪವಾಡ ಸದೃಶ ಪಾರಾದ ಸವಾರ Read More »

ಕರಾವಳಿ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶುಕ್ರವಾರ ಹಾಗೂ ಶನಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಗುರುವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿರುವುದರಿಂದ ಉಭಯ ಜಿಲ್ಲಾಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ರಜೆ‌ ನೀಡಿ ಆದೇಶಿಸಿದ್ದಾರೆ. ಭಾನುವಾರದ ವರೆಗೆ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯ‌ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆ ► ಎರಡು ದಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರು ಅಪಘಾತ ► ಅಪಾಯದಿಂದ ಪಾರಾದ ಅಪ್ಪು

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ, ಜೂ.08. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಪರಿಣಾಮ ಅಪ್ಪು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಗುರುವಾರ ರಾತ್ರಿ ಆಂಧ್ರ ಪ್ರದೇಶದ ಅನಂತಪುರದಲ್ಲಿ ಸಂಭವಿಸಿದೆ. ಬಳ್ಳಾರಿಯಲ್ಲಿ ಪವನ್ ಒಡೆಯರ್ ನಿರ್ದೇಶನದ ‘ನಟ ಸಾರ್ವಭೌಮ’ ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ತುಮಕೂರು ಮಾರ್ಗದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಅನಂತಪುರ ಮಾರ್ಗವಾಗಿ ತನ್ನ ರೇಂಜ್ ರೋವರ್ ಕಾರಿನಲ್ಲಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅನಂತಪುರ ಸಮೀಪ ಮೂರು ರಸ್ತೆ ಸೇರುವಲ್ಲಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಕಾರು ಅಪಘಾತ ► ಅಪಾಯದಿಂದ ಪಾರಾದ ಅಪ್ಪು Read More »

ರಾಷ್ಟ್ರೀಯ ನ್ಯೂಸ್

ಜೂನ್ 10 ರ ವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ► ಕರಾವಳಿಯಲ್ಲಿ ಹೈ-ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಮಹಾರಾಷ್ಟ್ರದಿಂದ ಕೇರಳದವರೆಗೆ ದಟ್ಟಮೋಡ ಕವಿದ ವಾತಾವರಣ ನಿರ್ಮಾಣವಾಗಿದೆಯಲ್ಲದೆ, ಮುಂಬಯಿಯಾದ್ಯಂತ ಭಾರೀ ಮಳೆಯಾಗಿದ್ದು, ಕರಾವಳಿಯಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ‌. ಗುರುವಾರದಿಂದ ಕರಾವಳಿಯಲ್ಲಿ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದೆಲ್ಲೆಡೆ ಜೂನ್ 10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಸಮುದ್ರದ ಮಟ್ಟದಲ್ಲಿ ಏರಿಕೆಯಾಗುವ ಲಕ್ಷಣಗಳಿದ್ದು, ಕಡಲ ತೀರದ

ಜೂನ್ 10 ರ ವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ► ಕರಾವಳಿಯಲ್ಲಿ ಹೈ-ಅಲರ್ಟ್ ಘೋಷಣೆ Read More »

ಕರ್ನಾಟಕ

ಬಲ್ಯ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಕೆಲಸಕ್ಕೆಂದು ತೆರಳಿದ್ದ ಯುವತಿಯೋರ್ವಳು ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಬಲ್ಯದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವತಿಯನ್ನು ಬಲ್ಯ ಗ್ರಾಮದ ದೇರಾಜೆ ಪನ್ಯಾಡಿ ನಿವಾಸಿ ದಿ.ಗುರುವ ಎಂಬವರ ಪುತ್ರಿ ಕು|ಸುಂದರಿ(30)‌ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಈಕೆ ಕಳೆದ ಸುಮಾರು ಒಂದು ತಿಂಗಳ ಹಿಂದೆ ಕೆಲಸಕ್ಕೆಂದು ತೆರಳಿದ್ದು, ಆ ಬಳಿಕ ಮನೆಗೆ ಬಾರದೆ ನಾಪತ್ತೆಯಾಗಿರುವುದಾಗಿ ಈಕೆಯ ತಾಯಿ ಚೋಮು ದೂರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಲ್ಯ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ Read More »

ಕರಾವಳಿ

ಬಿಳಿನೆಲೆ: ಕಾರು ಮರಕ್ಕೆ ಢಿಕ್ಕಿ ► ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ.07. ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿನ ಮರಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆಯಲ್ಲಿ ಗುರುವಾರದಂದು ನಡೆದಿದೆ. ಶಿವಮೊಗ್ಗದ ತೀರ್ಥಹಳ್ಳಿಯಿಂದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವರ ದರ್ಶನ ಪಡೆದು ಬಳಿಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದಾಗ ಬಿಳಿನೆಲೆ ಸಿಪಿಸಿಆರ್ಐ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಾಲಕ‌ ತೀರ್ಥಹಳ್ಳಿ ನಿವಾಸಿ

ಬಿಳಿನೆಲೆ: ಕಾರು ಮರಕ್ಕೆ ಢಿಕ್ಕಿ ► ಚಾಲಕನಿಗೆ ಗಾಯ Read More »

ಕರಾವಳಿ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.07. ಮರಳು ಸಾಗಾಟದ ಲಾರಿ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ನಡೆದಿದೆ. ಉಪ್ಪಿನಂಗಡಿ ಕಡೆಗೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮಂಗಳೂರು ಕಡೆಗೆ ತೆರಳುತ್ತಿದ್ದ ಆ್ಯಕ್ಟಿವಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಆ್ಯಕ್ಟಿವಾ ಸವಾರ ಬೆಳ್ತಂಗಡಿ ನಿವಾಸಿ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ Read More »

ಕರಾವಳಿ

ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’

(ನ್ಯೂಸ್ ಕಡಬ)‌ newskadaba.com ಸುಳ್ಯ, ಜೂ.06. ಜಾಲ್ಸೂರಿನ ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ಗಿಡವನ್ನು ನೆಡುವುದರ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಮಂಗಳವಾರದಂದು ಆಚರಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಅಬ್ದುಲ್ ರಝಾಕ್ ರವರು ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ, ಸಹ ಶಿಕ್ಷಕಿಯರಾದ ದೀಕ್ಷಿತ, ಜ್ಯೋತಿ ಲಕ್ಷ್ಮಿ, ಜ್ಯೋತಿ, ಜಯಂತಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಲ್ಸೂರು ಪಯನೀರ್ ಪಬ್ಲಿಕ್ ಸ್ಕೂಲ್‌ನಲ್ಲಿ ‘ವಿಶ್ವ ಪರಿಸರ ದಿನಾಚರಣೆ’ Read More »

ಕರಾವಳಿ
Scroll to Top