News Kadaba Desk

ಬಹುಮತ ಸಾಬೀತಿಗೆ ಕ್ಷಣ ಗಣನೆ ► ನಾಪತ್ತೆಯಾಗಿದ್ದ ಓರ್ವ ಶಾಸಕ ಸದನಕ್ಕೆ

ಬಹುಮತ ಸಾಬೀತಿಗೆ ಕ್ಷಣ ಗಣನೆ ಆರಂಭವಾಗಿದ್ದು, ನಾಪತ್ತೆಯಾಗಿದ್ದ ಓರ್ವ ಶಾಸಕ ಪ್ರತಾಪ್ ಗೌಡ ಪಾಟೀಲ್ ಸದನಕ್ಕೆ ಹಾಜರಾಗಿದ್ದಾರೆ.

ಬಹುಮತ ಸಾಬೀತಿಗೆ ಕ್ಷಣ ಗಣನೆ ► ನಾಪತ್ತೆಯಾಗಿದ್ದ ಓರ್ವ ಶಾಸಕ ಸದನಕ್ಕೆ Read More »

ಕರ್ನಾಟಕ

ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ಗುಂಪು ಸೇರಿ ಗಲಾಟೆಗಳಾಗುವ ಸಂಭವವಿದ್ದು, ಈ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 26 ಗಂಟೆಗಳ ಕಾಲ ನಿಷೇಧಾಜ್ಞೆ ಹೊರಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕೋರಿಕೆಯ ಮೇಲೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ನೀಡಿದ್ದಾರೆ. ಕರಾವಳಿಯು ಈಗಾಗಲೇ ಮತೀಯ ಹಾಗೂ ರಾಜಕೀಯ ವಿಚಾರಗಳಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಸುತ್ತಿರುವುದು ಕಂಡುಬರುತ್ತಿದೆ. ಈಗಾಗಲೇ ಪರಿಸ್ಥಿತಿಯು

ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆ ► ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ Read More »

ಕರಾವಳಿ

ಹಂಗಾಮಿ ಸ್ಪೀಕರ್ ನೇಮಕ ವಿರೋಧಿ ಅರ್ಜಿಯನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ ► ಅಡಕತ್ತರಿಯಲ್ಲಿ ಜೆಡಿಎಸ್ – ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.19. ಹಂಗಾಮಿ ಸ್ಪೀಕರ್ ಆಗಿ ಕೆ.ಜಿ. ಭೋಪಯ್ಯರ ನೇಮಕವನ್ನು ವಿರೋಧಿಸಿ ಸುಪ್ರೀಮ್ ಕೋರ್ಟ್ ಮೊರೆ ಹೋಗಿದ್ದ ಕಾಂಗ್ರೆಸ್ ಪಕ್ಷದ ಅರ್ಜಿಯನ್ನು ಪರಿಶೀಲಿಸಿದ ಸುಪ್ರೀಮ್ ಕೋರ್ಟ್ ತ್ರಿಸದಸ್ಯ ಪೀಠವು, ಒಂದು ವೇಳೆ ಹಂಗಾಮಿ ಸ್ಪೀಕರನ್ನು ಬದಲಾಯಿಸಬೇಕೆಂದಿದ್ದರೆ, ಇಂದು ನಡೆಯಲಿರುವ ವಿಶ್ವಾಸಮತ ಯಾಚನೆಯನ್ನು ಮುಂದೂಡಬೇಕಾಗುತ್ತದೆ ಎಂದಿದ್ದು, ಅರ್ಜಿಯನ್ನು ತಳ್ಳಿಹಾಕಿದೆ. ಸುಪ್ರೀಮ್ ಕೋರ್ಟ್ ನ ಈ ನಿಲುವಿನಿಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಅಡಕತ್ತರಿಯಲ್ಲಿ ಸಿಲುಕಿದೆ. ಅಲ್ಲದೆ ಕಾಂಗ್ರೆಸ್ ನ ಆನಂದ ಸಿಂಗ್ ಹಾಗೂ ಪ್ರತಾಪ್ ಗೌಡ

ಹಂಗಾಮಿ ಸ್ಪೀಕರ್ ನೇಮಕ ವಿರೋಧಿ ಅರ್ಜಿಯನ್ನು ತಳ್ಳಿ ಹಾಕಿದ ಸುಪ್ರೀಂ ಕೋರ್ಟ್ ► ಅಡಕತ್ತರಿಯಲ್ಲಿ ಜೆಡಿಎಸ್ – ಕಾಂಗ್ರೆಸ್ Read More »

ಕರಾವಳಿ

ಮಂಗಳೂರು: 26 ಗಂಟೆಗಳ ಕಾಲ ನಿಷೇಧಾಜ್ಞೆ ವಿಧಿಸಿ ಆದೇಶ ► ಇದ್ದಕ್ಕಿದ್ದಂತೆ ನಿಷೇಧಾಜ್ಞೆ ಹೊರಡಿಸಲು ಕಾರಣವಾದರೂ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.19. ನೂತನ ಸರಕಾರದ ವಿಶ್ವಾಸ ಮತ ಯಾಚನೆಯ ಹಿನ್ನೆಲೆಯಲ್ಲಿ ಗುಂಪು ಸೇರಿ ಗಲಾಟೆಗಳಾಗುವ ಸಂಭವವಿದ್ದು, ಈ ಕಾರಣದಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 26 ಗಂಟೆಗಳ ಕಾಲ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯು ಈಗಾಗಲೇ ಮತೀಯ ಹಾಗೂ ರಾಜಕೀಯ ವಿಚಾರಗಳಲ್ಲಿ ಅತೀ ಸೂಕ್ಷ್ಮ ಪ್ರದೇಶವಾಗಿದ್ದು, ಸೋಲು – ಗೆಲುವಿನ ಬಗ್ಗೆ ವಿಮರ್ಶೆ ನಡೆಸುತ್ತಿರುವುದು ಕಂಡುಬರುತ್ತಿದೆ. ಈಗಾಗಲೇ ಪರಿಸ್ಥಿತಿಯು ಬೂದಿ ಮುಚ್ಚಲಾಯಿತು ಕೆಂಡದಂತಿದ್ದು, ಯಾವುದೇ

ಮಂಗಳೂರು: 26 ಗಂಟೆಗಳ ಕಾಲ ನಿಷೇಧಾಜ್ಞೆ ವಿಧಿಸಿ ಆದೇಶ ► ಇದ್ದಕ್ಕಿದ್ದಂತೆ ನಿಷೇಧಾಜ್ಞೆ ಹೊರಡಿಸಲು ಕಾರಣವಾದರೂ ಏನು ಗೊತ್ತೇ..? Read More »

ಕರಾವಳಿ

ಕುಂತೂರು: ಚರಂಡಿಗಿಳಿದು ಹಿಂತಿರುಗಿ ನಿಂತ ಕಾರು ► ಕಾರಿನಲ್ಲಿದ್ದ ದಂಪತಿ ಪಾರು

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಚಾಲಕನ‌ ನಿಯಂತ್ರಣ ತಪ್ಲಿದ ಮಾರುತಿ ಬಲೆನೋ‌ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಪೆರಾಬೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮಂಗಳೂರಿನಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದು ಹಿಂತಿರುಗಿ ನಿಂತಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಶ್ರೀಧರ್ ಹಾಗೂ ಅವರ ಪತ್ನಿ ನಳಿನಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕುಂತೂರು: ಚರಂಡಿಗಿಳಿದು ಹಿಂತಿರುಗಿ ನಿಂತ ಕಾರು ► ಕಾರಿನಲ್ಲಿದ್ದ ದಂಪತಿ ಪಾರು Read More »

ಕರಾವಳಿ

ಮುಳ್ಳಿನ ಹಾದಿಯಲ್ಲಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ► ರಾಜ್ಯ ಬಿಜೆಪಿ ಸರಕಾರಕ್ಕೆ ನಾಳೆ ಅಗ್ನಿ ಪರೀಕ್ಷೆ

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.18.‌ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಮುಳ್ಳಿನ ಹಾದಿಯಲ್ಲಿ ಸಿಲುಕಿದ್ದು, ನಾಳೆಯೇ ವಿಶ್ವಾಸ ಮತ ಸಾಬೀತು ಪಡಿಸಲು ಯಡಿಯೂರಪ್ಪರಿಗೆ ಸುಪ್ರೀಮ್ ಕೋರ್ಟ್ ಆದೇಶ ನೀಡಿದೆ. ನಾಳೆ ಬಹುಮತ ಸಾಬೀತು ಪಡಿಸುವಂತೆ ಸುಪ್ರೀಮ್ ಕೋರ್ಟ್ ಸಲಹೆಗೆ ಬಿಜೆಪಿ ವಕೀಲ ರೋಹ್ಟಗಿ ವಿರೋಧ ವ್ಯಕ್ತಪಡಿಸಿದ್ದು, ಈ ನಡುವೆ ನಾಳೆಯೇ ಬಹುಮತ ಸಾಬೀತು ಪಡಿಸಲು ಕಾಂಗ್ರೆಸ್ ಸಿದ್ಧ ಎಂದು ಕಾಂಗ್ರೆಸ್ ಪರ ವಕೀಲ ಸಿಂಘ್ವಿ ಸುಪ್ರೀಮ್ ಕೋರ್ಟ್ ಗೆ ತಿಳಿಸಿದ್ದಾರೆ. ವಾದ ವಿವಾದಗಳನ್ನು ಆಲಿಸಿದ ಸುಪ್ರೀಂ

ಮುಳ್ಳಿನ ಹಾದಿಯಲ್ಲಿ ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ► ರಾಜ್ಯ ಬಿಜೆಪಿ ಸರಕಾರಕ್ಕೆ ನಾಳೆ ಅಗ್ನಿ ಪರೀಕ್ಷೆ Read More »

ಕರಾವಳಿ

ಮೂಡಬಿದಿರೆ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಮೇ.17. ಮಾರುತಿ ಸೆಲೆರಿಯೋ ಹಾಗೂ ಮಾರುತಿ 800 ಕಾರುಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟ ಘಟನೆ ಗುರುವಾರದಂದು ಮಿಜಾರಿನಲ್ಲಿ ನಡೆದಿದೆ. ಮೈಟ್ ಕಾಲೇಜು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಮಾರುತಿ 800 ಕಾರಿನ ಚಾಲಕ, ಮೂಡು ಪೆರಾರ ನಿವಾಸಿ ಶಿವಾನಂದ ಶೆಟ್ಟಿ (65) ಎಂದು ಗುರುತಿಸಲಾಗಿದೆ. ಇವರು ತನ್ನ ಕಾರಿನಲ್ಲಿ ಮೂಡುಬಿದಿರೆಯತ್ತ ತೆರಳುತ್ತಿದ್ದ ಸಂದರ್ಭದಲ್ಲಿ ಮಿಜಾರು ಎಂಐಟಿ ಕಾಲೇಜು ಬಳಿ ವಿರುದ್ಧ ದಿಕ್ಕಿನಿಂದ ಬಂದ ಮಾರುತಿ ಸೆಲೆರಿಯೋ ಕಾರು ಚಾಲಕನ ನಿಯಂತ್ರಣ

ಮೂಡಬಿದಿರೆ: ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ► ಓರ್ವ ಮೃತ್ಯು Read More »

ಕರಾವಳಿ

ನಾಪತ್ತೆಯಾಗಿದ್ದ ಬಳ್ಳಾರಿಯ ಕಾಂಗ್ರೆಸ್ ಶಾಸಕ ಕೊನೆಗೂ ಪತ್ತೆ..! ► ಶಾಸಕ ಆನಂದ ಸಿಂಗ್ ಬೆಂಬಲ ಯಾವ ಪಕ್ಷಕ್ಕೆ ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.17. ಕ್ಷಣ ಕ್ಷಣವೂ ತೀವ್ರ ಕುತೂಹಲ‌ ಉಂಟು ಮಾಡುತ್ತಿರುವ ರಾಜ್ಯ ರಾಜಕೀಯ ಬೆಳವಣಿಗೆಯಲ್ಲಿ ನಿನ್ನೆಯಿಂದ ಕಣ್ಮರೆಯಾಗಿದ್ದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್‌ ಕೊನೆಗೂ ತನ್ನ ಇರುವಿಕೆಯನ್ನು ಗೊತ್ತುಪಡಿಸಿದ್ದಾರೆ. ಬಹುಮತ ಸಾಬೀತುಪಡಿಸುವ ನಿಟ್ಟಿನಲ್ಲಿ ಬಿಜೆಪಿಯು ಕಾರ್ಯತಂತ್ರಗಳನ್ನು ರೂಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ತಮ್ಮ ಶಾಸಕರನ್ನು ರೆಸಾರ್ಟ್ ನಲ್ಲಿ ಇರಿಸಿ ಕುದುರೆ ವ್ಯಾಪಾರದ ಆಮಿಷಕ್ಕೆ ಬಲಿಯಾಗದಂತೆ ನೋಡಿಕೊಳ್ಳುತ್ತಿದ್ದುರೂ ನಿನ್ನೆಯಿಂದ ಯಾರ ಕಣ್ಣಿಗೂ ಸಿಗದೆ ನಾಪತ್ತೆಯಾಗಿದ್ದ ಬಳ್ಳಾರಿಯ ಕಾಂಗ್ರೆಸ್ ಶಾಸಕ ಆನಂದ ಸಿಂಗ್

ನಾಪತ್ತೆಯಾಗಿದ್ದ ಬಳ್ಳಾರಿಯ ಕಾಂಗ್ರೆಸ್ ಶಾಸಕ ಕೊನೆಗೂ ಪತ್ತೆ..! ► ಶಾಸಕ ಆನಂದ ಸಿಂಗ್ ಬೆಂಬಲ ಯಾವ ಪಕ್ಷಕ್ಕೆ ಗೊತ್ತೇ..? Read More »

ಕರ್ನಾಟಕ

ವಿವಿಧ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರಕಾರ ► ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ವರ್ಗಾವಣೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮೇ.17. ನಿಷ್ಠಾವಂತ ಐಪಿಎಸ್ ಅಧಿಕಾರಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅಣ್ಣಾಮಲೈಯವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಿ ತನ್ನದೇ ಕಾರ್ಯವೈಖರಿಯಿಂದ ಯುವ ಮನಸ್ಸುಗಳನ್ನು ಗೆದ್ದಿದ್ದ ಅಣ್ಣಾಮಲೈ 2016 ರ ಆಗಸ್ಟ್‌ನಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ಅಲ್ಲಿಯೂ ತನ್ನದೇ ಶೈಲಿಯಲ್ಲಿ ಅಪರಾಧಿ ಕೃತ್ಯಗಳಿಗೆ ಕಡಿವಾಣ ಹಾಕಿದ್ದ ಅವರನ್ನು ನೂತನ ಸರಕಾರ ಅಸ್ಥಿತ್ವಕ್ಕೆ ಬಂದ ಕೂಡಲೇ ರಾಮನಗರ ಜಿಲ್ಲೆಗೆ

ವಿವಿಧ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರಕಾರ ► ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ವರ್ಗಾವಣೆ Read More »

ಕರ್ನಾಟಕ

ಕಡಬ ಪೊಲೀಸ್ ಠಾಣೆಯಲ್ಲಿ ನಡೆದ ಭೀಕರ ಸ್ಫೋಟ ಪ್ರಕರಣ ► ವಿವಿಧ ತಜ್ಞರಿಂದ ಸ್ಥಳ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.17. ಇಲ್ಲಿನ ಪೊಲೀಸ್ ಠಾಣೆಯ ಹಳೆಯ ಕಟ್ಟಡದಲ್ಲಿ ಬುಧವಾರ ರಾತ್ರಿ ಭಾರೀ ಸದ್ದಿನೊಂದಿಗೆ ಭೀಕರ ಸ್ಫೋಟ ನಡೆದಿದ್ದು, ಘಟನಾ ಸ್ಥಳಕ್ಕೆ ಗುರುವಾರದಂದು ವಿವಿಧ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೀಕರ ಸ್ಫೋಟಕ್ಕೆ ಕಾರಣ ನಿಗೂಢವಾಗಿದ್ದ ಹಿನ್ನೆಲೆಯಲ್ಲಿ ಫೋರೆನ್ಸಿಕ್ ತಜ್ಞರು, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು, ನಕ್ಸಲ್ ನಿಗ್ರಹ ದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಫೋಟಕ್ಕೆ ಸಂಬಂಧಿಸಿದಂತೆ ವಿವಿಧ ಮಾದರಿಗಳನ್ನು ಸಂಗ್ರಹಿಸಿದ್ದು, ಪ್ರಯೋಗಾಲಯಕ್ಕೆ ಕಳುಹಿಸಲಿದ್ದಾರೆ. ಪ್ರಯೋಗಾಲಯದ ವರದಿಯನ್ನು ಆಧರಿಸಿ

ಕಡಬ ಪೊಲೀಸ್ ಠಾಣೆಯಲ್ಲಿ ನಡೆದ ಭೀಕರ ಸ್ಫೋಟ ಪ್ರಕರಣ ► ವಿವಿಧ ತಜ್ಞರಿಂದ ಸ್ಥಳ ಪರಿಶೀಲನೆ Read More »

ಕರಾವಳಿ
Scroll to Top