ಮೇ 10 ಸಂಜೆ ಆರು ಗಂಟೆಯ ನಂತರ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ ► ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.08. ಮತದಾನ ಪ್ರಕ್ರಿಯೆ ಮುಗಿಯುವ 48 ಗಂಟೆಗೆ ಮೊದಲು ಹೊರಗಿನ ಯಾವೊಬ್ಬ ಚುನಾವಣಾ ತಾರಾ ಪ್ರಚಾರಕ, ಕ್ಷೇತ್ರದ ಮತದಾರರಲ್ಲದ ಕಾರ್ಯಕರ್ತರು, ಪಕ್ಷದ ನಾಯಕರು ಜಿಲ್ಲೆಯ ಯಾವೊಂದು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವಂತಿಲ್ಲವಾಗಿದ್ದು, ಎಲ್ಲರೂ ಕ್ಷೇತ್ರ ಬಿಟ್ಟು ತೆರಳಬೇಕು ಎಂದು ಚುನಾವಣಾಧಿಕಾರಿಯೂ ಆದ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ 12 ರಂದು ನಡೆಯುವ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಚುನಾವಣಾ ಆಯೋಗದ ನಿರ್ದೇಶನದಂತೆ ಸೂಚಿಸಲಾಗುವ […]









