ಶೇ.50 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ಬರಬೇಕಾಗಿದೆ: ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ► ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.08. ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳಾ ಮೀಸಲು ಕಾಯಿದೆ ಜಾರಿಗೆ ಬಂದಿರುವುದರಿಂದ ಸ್ತ್ರೀಯರಿಗೆ ಆಡಳಿತ ನಡೆಸಲು ಹೆಚ್ಚಿನ ಅವಕಾಶ ಲಭಿಸಿದೆ. ಸಂಸತ್ತು ಮತ್ತು ವಿಧಾನ ಮಂಡಲದಲ್ಲೂ ಶೇ.50 ಮಹಿಳಾ ಮೀಸಲು ವಿಧೇಯಕ ಅನುಷ್ಠಾನಕ್ಕೆ ಬರಬೇಕಾಗಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕರಂಬಾರ್ ಮೊಹಮ್ಮದ್ ಹೇಳಿದರು. ಕಂಕನಾಡಿಯ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸಭಾಂಗಣದಲ್ಲಿ ಗುರುವಾರದಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಮುಸ್ಲಿಂ ಮಹಿಳಾ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಒಂದು ಕಾಲದ ಪುರುಷ ಪ್ರಧಾನ ಸಮಾಜ ಸಡಿಲುಗೊಳ್ಳುತ್ತಿದೆ. ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ದೇವರು ಗಂಡು – ಹೆಣ್ಣು ಎಂಬ […]








