News Kadaba Desk

ಅಮಾಯಕ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಬಶೀರ್ ಹತ್ಯೆ ಬಗ್ಗೆ ನಮಗೆ‌ ಚಿಂತೆಯಿಲ್ಲ ► ಕೊಲೆಗಡುಕರಿಗೆ ಬೆಂಬಲ ಸೂಚಿಸಿದ ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.28. ಅಮಾಯಕ ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಬಶೀರ್ ಹತ್ಯೆಯಾಗಿದೆ. ಆದ್ದರಿಂದ ಬಶೀರ್ ಹತ್ಯೆಯ ಬಗ್ಗೆ ನಮಗೇನೂ ಚಿಂತೆಯಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೊನ್ನೆ ದೀಪಕ್ ರಾವ್ ಕೊಲೆಗೆ ಪ್ರತೀಕಾರವಾಗಿ ಬಶೀರ್ ಕೊಲೆ ನಡೆಯಿತು. ಒಬ್ಬ ಅಮಾಯಕ, ಮುಗ್ದ ಮುಸ್ಲಿಮನ ಹತ್ಯೆಯಾಯಿತು ಎಂದು ಮಾಧ್ಯಮಗಳಲ್ಲಿ ಭಾರೀ ವರದಿ ಬಂತು. ಬಶೀರ್ ಹತ್ಯೆಗೂ ಮೊದಲು ಅಮಾಯಕ […]

ಅಮಾಯಕ ದೀಪಕ್ ಹತ್ಯೆಗೆ ಪ್ರತೀಕಾರವಾಗಿ ನಡೆದ ಬಶೀರ್ ಹತ್ಯೆ ಬಗ್ಗೆ ನಮಗೆ‌ ಚಿಂತೆಯಿಲ್ಲ ► ಕೊಲೆಗಡುಕರಿಗೆ ಬೆಂಬಲ ಸೂಚಿಸಿದ ವಿಹಿಂಪ ಜಿಲ್ಲಾಧ್ಯಕ್ಷ ಜಗದೀಶ್ ಶೇಣವ ಹೇಳಿಕೆ Read More »

ಕರಾವಳಿ

ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.28. ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮ 4ರನ್ವಯ 2018-19 ನೇ ಸೈಕ್ಷಣಿಕ ಸಾಲಿನಲ್ಲಿ ರಾಜ್ಯದಲ್ಲಿ ಖಾಸಗಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಚಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ/ ಟ್ರಸ್ಟ್ ಗಳಿಂದ ಅರ್ಜಿಗಳನ್ನು ಆನ್‍ಲೈನ್ ಮೂಲಕ “ಅರ್ಜಿ ನಮೂನೆ” (Form-I) ರಲ್ಲಿ ದಿನ ಜನವರಿ 31 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಲು, ಜಂಟಿ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು, ಇವರಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ

ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಅರ್ಜಿ ಆಹ್ವಾನ Read More »

ಕರ್ನಾಟಕ

ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು

(ನ್ಯೂಸ್ ಕಡಬ) newskadaba.com ತುಂಬೆ, ಜ.28. ಸ್ನಾನಕ್ಕೆಂದು ನೀರಿಗಿಳಿದಿದ್ದ ಯುವಕರಿಬ್ಬರು ನೀರುಪಾಲಾಗಿರುವ ಘಟನೆ ಭಾನುವಾರದಂದು ತುಂಬೆ ಸಮೀಪದ ಮಾರಿಪಳ್ಳದಲ್ಲಿ ನಡೆದಿದೆ. ಮೃತ ಯುವಕರನ್ನು ಮಾರಿಪಳ್ಳ ನಿವಾಸಿಗಳಾದ ಸವಾದ್ ಮತ್ತು ರಮ್ಲಾನ್ ಎಂದು ಗುರುತಿಸಲಾಗಿದೆ. ಇವರು ತನ್ನ ಸ್ನೇಹಿತರೊಂದಿಗೆ ತುಂಬೆಗೆ ಆಗಮಿಸಿ ಈಜಲು ನೇತ್ರಾವತಿ ನದಿಗಿಳಿದಿದ್ದರು. ಈ ಸಂದರ್ಭದಲ್ಲಿ ನೀರಿನ ಆಳ ತಿಳಿಯದೆ ಇವರಿಬ್ಬರು ನೀರುಪಾಲಾಗಿದ್ದಾರೆ ಎನ್ನಲಾಗಿದೆ.

ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದಿದ್ದ ಯುವಕರಿಬ್ಬರು ನೀರುಪಾಲು Read More »

ಕರಾವಳಿ

ದಿಢೀರ್ ಬೆಳವಣಿಗೆಯಲ್ಲಿ ಶಾಸಕ ಆನಂದ್ ಸಿಂಗ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.27. ದಿಢೀರ್ ಬೆಳವಣಿಗೆಯೊಂದರಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ವಿಜಯನಗರ ಕ್ಷೇತ್ರದ ಬಿಜೆಪಿ ಶಾಸಕ ಆನಂದ್ ಸಿಂಗ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ವಿಧಾನಸಭೆ ಸ್ಪೀಕರ್ ಕೆ.ಬಿ.ಕೋಳಿವಾಡ, ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿರುವ ಸ್ಪೀಕರ್ ಕೋಳಿವಾಡ ಅವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಶಾಸಕ ಆನಂದ್ ಸಿಂಗ್, ‘ನಾನು ಈ ದಿನ, ಕರ್ನಾಟಕ ವಿಧಾನಸಭೆಯ ನನ್ನ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಒಂದು ಸಾಲಿನ

ದಿಢೀರ್ ಬೆಳವಣಿಗೆಯಲ್ಲಿ ಶಾಸಕ ಆನಂದ್ ಸಿಂಗ್ ರಾಜೀನಾಮೆ Read More »

ಕರ್ನಾಟಕ

ಔಷಧಿಗೆ ಚೀಟಿ ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ► ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.28 ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರಗಿನಿಂದ ಔಷಧಿ ತರಿಸಲು ಚೀಟಿ ನೀಡುವ ಕೆಟ್ಟ ಪದ್ಧತಿಗೆ ಕಡಿವಾಣ ಹಾಕಲಾಗಿದ್ದು, ಔಷಧಿಗಾಗಿ ಚೀಟಿ ಬರೆದು ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ. ಅವರು ಇತ್ತೀಚೆಗೆ ಹೊಸನಗರದಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ 50 ಹಾಸಿಗೆಯಿಂದ 100 ಹಾಸಿಗೆಗೆ ಮೇಲ್ದರ್ಜೆಗೇರಿಸಿದ ಸಾರ್ವಜನಿಕ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿ, ಎಲ್ಲಾ ಆಸ್ಪತ್ರೆಗಳಲ್ಲಿ ಮುಂದಿನ ಕೆಲವೇ ದಿನಗಳಲ್ಲಿ

ಔಷಧಿಗೆ ಚೀಟಿ ನೀಡುವ ವೈದ್ಯರ ವಿರುದ್ಧ ಕಠಿಣ ಕ್ರಮ ► ಆರೋಗ್ಯ ಸಚಿವ ರಮೇಶ್ ಕುಮಾರ್ ಎಚ್ಚರಿಕೆ Read More »

ಕರ್ನಾಟಕ

ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.28. ಸುಮಾರು 18 ವರುಷಗಳ ಹಿಂದೆ ಪ್ರಕರಣವೊಂದರಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಎಲ್ ಪಿಸಿ ವಾರಂಟ್ ಆರೋಪಿಯೊಬ್ಬನನ್ನು ಸಂಪ್ಯ ಪೊಲೀಸರು ಬಂಧಿಸಿದ ಘಟನೆ ಶನಿವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡಿನ ಇಂದಿರಾನಗರದ ಪೂಡಿಪಲ್ಲಿ ನಿವಾಸಿ ಅಹಮ್ಮದ್ ಎಂಬವರ ಪುತ್ರ ಹಾರೀಸ್(38) ಎಂದು ಗುರುತಿಸಲಾಗಿದೆ. ಆರೋಪಿಯು ಸುಮಾರು 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನನ್ನು ಕೇರಳ ರಾಜ್ಯದ ಕಾಸರಗೋಡಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಸಂಪ್ಯ: 18 ವರ್ಷಗಳ ಹಿಂದಿನ ಪ್ರಕರಣದ ಆರೋಪಿ ಬಂಧನ Read More »

ಕರಾವಳಿ

ಅಪರಿಚಿತ ವಾಹನ ಢಿಕ್ಕಿ ► ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು

(ನ್ಯೂಸ್ ಕಡಬ) newskadaba.com ಹಳೇಬೀಡು, ಜ. 27. ಅಪರಿಚಿತ ವಾಹನ‌ವೊಂದು ಢಿಕ್ಕಿಹೊಡೆದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್ ಓರ್ವರು ಮೃತಪಟ್ಟ ಘಟನೆ ಹಳೇಬೀಡು-ಜಾವಗಲ್ ರಸ್ತೆಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಹಳೇಬೀಡು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್ ನಾಗರಾಜ್ (29) ಎಂದು ಗುರುತಿಸಲಾಗಿದೆ. ನಾಗರಾಜ್ ‌ಶನಿವಾರ ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಯಾವುದೋ ಅಪರಿಚಿತ ವಾಹನ ಢಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಈ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಿಚಿತ ವಾಹನ ಢಿಕ್ಕಿ ► ಪೊಲೀಸ್ ಕಾನ್ಸ್‌ಟೇಬಲ್ ಮೃತ್ಯು Read More »

ಕರ್ನಾಟಕ

ರಾಜ್ಯಾದ್ಯಂತ ನಾಳೆ(ಜ.28) ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.27. ರಾಜ್ಯದಲ್ಲಿ ಜನವರಿ 28, 2018 (ಮೊದಲನೇ ಸುತ್ತು) ಮತ್ತು ಮಾರ್ಚ್ 11, 2018 (ಎರಡನೇ ಸುತ್ತು) ರಂದು ಎರಡು ಹಂತದಲ್ಲಿ ನಡೆಯುವ ರಾಷ್ಟ್ರೀಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ 0-5 ವಯೋಮಿತಿಯ ಯಾವುದೇ ಮಗು ಲಸಿಕೆಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶ್ರೀಮತಿ ಕೆ. ರತ್ನಪ್ರಭಾ ಅವರು ಸೂಚಿಸಿದರು. 2018 ರ ರಾಷ್ಟ್ರೀಯ ಲಸಿಕಾ ದಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ವಿಧಾನಸೌಧದಲ್ಲಿ ಇಂದು

ರಾಜ್ಯಾದ್ಯಂತ ನಾಳೆ(ಜ.28) ಮೊದಲ ಹಂತದ ಪಲ್ಸ್ ಪೊಲೀಯೋ ಕಾರ್ಯಕ್ರಮ Read More »

ಕರ್ನಾಟಕ

ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಜ.27. ಜಾತಿ ನಿಂದನೆ ಆರೋಪದಲ್ಲಿ ಬಂಧಿತನಾಗಿದ್ದ ಕಡಬ ತಾಲೂಕಿನ ಬಲ್ಯ ಗ್ರಾಮದ ಪುತ್ತಿಲ ನಿವಾಸಿ ನಾಟಿ ವೈದ್ಯ ಅನುರಾಧ ಗೌಡರಿಗೆ ಶನಿವಾರದಂದು ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಆಲಂಕಾರು ಗ್ರಾಮದ ಕೇಪುಳು ನಿವಾಸಿ ರಾಘವ ಎಂಬವರು ಕಳೆದ ಮಂಗಳವಾರ ಸೊಂಟ ನೋವಿನ ಸಮಸ್ಯೆಗೆ ಮಸಾಜ್ ಮಾಡಿಸಲು ಹೋದ ಸಂದರ್ಭದಲ್ಲಿ ಅನುರಾಧ ಗೌಡರು ತಮ್ಮ ಮನೆಯೊಳಗೆ ಪ್ರವೇಶಿಸುವುದನ್ನು ತಡೆದು ನೀನು ಯಾವ ಜಾತಿಯವನು ಎಂದು ಕೇಳಿ ಅಪಹಾಸ್ಯ ಮಾಡಿ ಅವಾಚ್ಯವಾಗಿ ಬೈದು ಜಾತಿ

ಕಡಬ: ಜಾತಿ ನಿಂದನೆ ಆರೋಪಿಗೆ ಜಾಮೀನು Read More »

ಕರಾವಳಿ

ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ.27. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯ ವತಿಯಿಂದ ಮೈಸೂರಿನ ಕೆ.ಆರ್. ಪೇಟೆಯ ಅಲ್ಪಸಂಖ್ಯಾತ ವಸತಿ ಶಾಲೆಯಲ್ಲಿ ನಿಗೂಢ ಸಾವನ್ನಪ್ಪಿದ ವಿದ್ಯಾರ್ಥಿನಿ ಝೈಬುನ್ನೀಸಾಳ ಸಾವಿನ ಸಮಗ್ರ ತನಿಖೆ ಹಾಗು ಹೆಚ್ಚಿನ ಪರಿಹಾರ ಮೊತ್ತ ನೀಡುವಂತೆ ಆಗ್ರಹಿಸಿ ಪುತ್ತೂರಿನ ದರ್ಬೆ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಸವಾದ್ ಕಲ್ಲರ್ಪೆ ಮಾತನಾಡಿ, ರಾಜ್ಯದಲ್ಲಿ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಮಿತಿಮೀರುತ್ತಿದೆ. ಸರಕಾರ ಎಚ್ಚೆತ್ತುಕೊಂಡು

ಝೈಬುನ್ನಿಸಾ ನಿಗೂಢ ಸಾವಿನ ಸಮಗ್ರ ತನಿಖೆಗೆ ಆಗ್ರಹ ► ಕ್ಯಾಂಪಸ್ ಫ್ರಂಟ್ ಪುತ್ತೂರು ತಾಲೂಕು ವತಿಯಿಂದ ಪ್ರತಿಭಟನೆ Read More »

ಕರಾವಳಿ
Scroll to Top