News Kadaba Desk

ಕಲ್ಲಾಪು: ಬೈಕ್ – ಲಾರಿ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಮೀನು ಸಾಗಾಟದ ಟೆಂಪೊವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ತೊಕ್ಕೊಟ್ಟಿನ ಕಲ್ಲಾಪು ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತ ಯುವಕನನ್ನು ಅಂಬ್ಲಮೊಗರು ಸಮೀಪದ ಎಲಿಯಾರ್ ನಿವಾಸಿ ಬಶೀರ್ ಎಂಬವರ ಪುತ್ರ ಮುಹಮ್ಮದ್ ಶಾಕಿಬ್(19) ಎಂದು ಗುರುತಿಸಲಾಗಿದೆ. ಶಾಕಿಬ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಮೀನು ಸಾಗಾಟದ ಟೆಂಪೊ ಢಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಕಲ್ಲಾಪು: ಬೈಕ್ – ಲಾರಿ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಮಂಗಳೂರು: ಮಚ್ಚಿನೇಟಿಗೆ ಮತ್ತೊಂದು ಬಲಿ ► ನಿದ್ರಿಸುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಪಣಂಬೂರು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ರೌಡಿ ಶೀಟರ್ ಭರತೇಶ್ ಸಹೋದರ ಶಿವರಾಜ್(45) ಎಂದು ಗುರುತಿಸಲಾಗಿದೆ. ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿವರಾಜ್ ರನ್ನು ಬೆಳಗ್ಗಿನ ಜಾವ ಮೂವರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ಶಿವರಾಜ್ ರನ್ನು ಕೂಡಲೇ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ

ಮಂಗಳೂರು: ಮಚ್ಚಿನೇಟಿಗೆ ಮತ್ತೊಂದು ಬಲಿ ► ನಿದ್ರಿಸುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು Read More »

ಕರಾವಳಿ

ಒಪ್ಪಿಗೆ ಇಲ್ಲದೆ ಮಹಿಳೆಯ ಮೈ ಮುಟ್ಟುವಂತಿಲ್ಲ ► ನ್ಯಾಯಾಲಯ ತಾಕೀತು

(ನ್ಯೂಸ್ ಕಡಬ) newskadaba.com ನವದೆಹಲಿ, ಜ.22. ಮಹಿಳೆಯ ಒಪ್ಪಿಗೆ ಇಲ್ಲದೆ ಯಾರೂ ಆಕೆಯ ಮೈಯನ್ನು ಮುಟ್ಟುವಂತಿಲ್ಲ ಎಂದು ದೆಹಲಿ ನ್ಯಾಯಾಲಯ ತಾಕೀತು ಮಾಡಿದೆ. ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಉತ್ತರ ಪ್ರದೇಶದ ಚಾವಿ ರಾಮ್‌ ಎಂಬ ಅಪರಾಧಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಧೀಶರು, ಮಹಿಳೆಯ ದೇಹ ಆಕೆಯ ವಿಶೇಷ ಸ್ವತ್ತಾಗಿದ್ದು, ಅದರ ಮೇಲೆ ಆಕೆಗಲ್ಲದೇ ಬೇರೆ ಯಾರಿಗೂ ಅಧಿಕಾರ ಇಲ್ಲ. ಆಕೆಯ ಒಪ್ಪಿಗೆ ಇಲ್ಲದೆ ಆಕೆಯ ದೇಹವನ್ನು ಯಾರೂ ಸ್ಪರ್ಶಿಸುವಂತಿಲ್ಲ ಎಂದು ನ್ಯಾಯಾಲಯ

ಒಪ್ಪಿಗೆ ಇಲ್ಲದೆ ಮಹಿಳೆಯ ಮೈ ಮುಟ್ಟುವಂತಿಲ್ಲ ► ನ್ಯಾಯಾಲಯ ತಾಕೀತು Read More »

ರಾಷ್ಟ್ರೀಯ ನ್ಯೂಸ್

ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಗೃಹರಕ್ಷಕ ದಳದಲ್ಲಿ ಖಾಲಿಯಿರುವ ಗೃಹರಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಗೃಹರಕ್ಷಕ ಸದಸ್ಯತ್ವಕ್ಕೆ ಸೇರಲು ಆಸಕ್ತಿ ಉಳ್ಳ ಅಭ್ಯರ್ಥಿಗಳು ಜನವರಿ 25 ರೊಳಗೆ ಜಿಲ್ಲಾ ಕಛೇರಿಗೆ ಅರ್ಜಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಅರ್ಜಿ ನಮೂನೆಗಳನ್ನು ಜಿಲ್ಲಾ ಗೃಹರಕ್ಷಕ ದಳ ಕಛೇರಿ, ಮೇರಿಹಿಲ್ ಮಂಗಳೂರು ಇಲ್ಲಿಂದ ಪಡೆಯಬಹುದು. ಕನಿಷ್ಠ ವಿದ್ಯಾಭ್ಯಾಸ ಎಸ್.ಎಸ್.ಎಲ್.ಸಿ ಆಗಿರಬೇಕು. ಹೆಚ್ಚಿನ ವಿವರಕ್ಕೆ ಜಿಲ್ಲಾ ಕಛೇರಿ ದೂರವಾಣಿ ಸಂಖ್ಯೆ: 0824-2220562 ನಂಬರನ್ನು ಸಂಪರ್ಕಿಸಬಹುದು. ಮುಂಬರುವ ಚುನಾವಣೆಯನ್ನು ದೃಷ್ಠಿಯಲ್ಲಿರಿಸಿಕೊಂಡು ಖಾಲಿ ಇರುವ

ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ

ದೀಪಕ್, ಬಶೀರ್ ನಿವಾಸಗಳಿಗೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 21. ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕರಾವಳಿಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದೀಪಕ್ ರಾವ್ ಮತ್ತು ಬಶೀರ್ ಮನೆಗಳಿಗೆ ರವಿವಾರ ಭೇಟಿ ನೀಡಿದರು. ದೀಪಕ್ ಹಾಗೂ ಬಶೀರ್ ಕುಟುಂಬದ ಸದ್ಯದ ಪರಿಸ್ಥಿತಿಯ ಬಗ್ಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಕ್ ಅವರಿಂದ ಮಾಹಿತಿ ಪಡೆದುಕೊಂಡ ದೇವೇಗೌಡರು ದೀಪಕ್ ಹಾಗೂ ಬಶೀರ್ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೀಪಕ್, ಬಶೀರ್ ನಿವಾಸಗಳಿಗೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ Read More »

ಕರಾವಳಿ

ಮಡಂತ್ಯಾರು: ಅಪಘಾತದ ಗಾಯಾಳು ‌ತಾಯಿ-ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.20. ಲಾರಿ ಹಾಗೂ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಮಗು ಸಹಿತ ಇಬ್ಬರು ಮೃತಪಟ್ಟ ಘಟನೆ‌ ಶನಿವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಮಂಗಳೂರಿನ ನೆಲ್ಲಿಗುಡ್ಡೆ ನಿವಾಸಿಗಳಾದ ಅರ್ಚನಾ ಹಾಗೂ ಐದು ತಿಂಗಳ ಮಗು ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಅರ್ಚನಾ ಪತಿ ಜಗದೀಶ್ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿನ ಆಶೀರ್ವಾದ್ ಸಭಾಂಗಣದ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಲ್ಲಿ

ಮಡಂತ್ಯಾರು: ಅಪಘಾತದ ಗಾಯಾಳು ‌ತಾಯಿ-ಮಗು ಮೃತ್ಯು Read More »

ಕರಾವಳಿ

ಮಡಂತ್ಯಾರು: ಲಾರಿ – ಕಾರು ಢಿಕ್ಕಿ ► ಮಗು ಸಹಿತ ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.20. ಲಾರಿ ಹಾಗೂ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಇಲ್ಲಿನ ಆಶೀರ್ವಾದ್ ಸಭಾಂಗಣದ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಲ್ಲಿ ಕಾರಿನಲ್ಲಿದ್ದ ಮಂಗಳೂರು ಮೂಲದ ಸಣ್ಣ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ

ಮಡಂತ್ಯಾರು: ಲಾರಿ – ಕಾರು ಢಿಕ್ಕಿ ► ಮಗು ಸಹಿತ ನಾಲ್ವರು ಗಂಭೀರ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ ► ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.20. ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ 2005 ನೇ ಬ್ಯಾಚಿನ ಐಪಿಎಸ್ ಅಧಿಕಾರಿ, ಎನ್ ಕೌಂಟರ್ ಸ್ಪೆಷಲಿಸ್ಟ್, ಬೆಳಗಾವಿ ಜಿಲ್ಲಾ ಎಸ್ಪಿಯಾಗಿದ್ದ ಡಾ| ಬಿ‌.ಆರ್‌. ರವಿಕಾಂತೇಗೌಡರವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ನಿರ್ಗಮನ ಎಸ್ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಸುಧೀರ್ ಕುಮಾರ್ ರೆಡ್ಡಿಯವರನ್ನು ಬೆಳಗಾವಿ ಜಿಲ್ಲಾ ಎಸ್ಪಿಯಾಗಿ ತಕ್ಷಣದಿಂದಲೇ ವರ್ಗಾಯಿಸಿ ರಾಜ್ಯ ಸರಕಾರ ಆದೇಶಿಸಿದೆ.

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ವರ್ಗಾವಣೆ ► ನೂತನ ಎಸ್ಪಿಯಾಗಿ ಎನ್ ಕೌಂಟರ್ ಸ್ಪೆಷಲಿಸ್ಟ್ ರವಿಕಾಂತೇಗೌಡ ನೇಮಕ Read More »

ಕರಾವಳಿ

ಕೊಕ್ಕಡ: ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.20. ಯುವತಿಯೋರ್ವಳು ತಾನು ಕೆಲಸ ಮಾಡುತ್ತಿದ್ದ ಮನೆಯಿಂದ ನಾಪತ್ತೆಯಾದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಮ್ಮಾಯಿಯ ಬೀರಿಗ ನಿವಾಸಿ ಲೀಲಾವತಿ ಯಾನೆ ಲಿಖಿತಾ (19) ನಾಪತ್ತೆಯಾದ ಯುವತಿ. ಈಕೆ ಕೌಕ್ರಾಡಿ ಗ್ರಾಮದ ಕೊಕ್ಕಡದ ತುಕ್ರಪ್ಪ ಶೆಟ್ಟಿ ಎಂಬವರ ಮನೆಯಲ್ಲಿ ಕೂಲಿ ಕೆಲಸಕ್ಕಿದ್ದು, ಅಲ್ಲಿಂದ ಜನವರಿ 15 ರಂದು ಮಧ್ಯಾಹ್ನ ನಾಪತ್ತೆಯಾಗಿದ್ದಾಳೆ. ಈಕೆಗಾಗಿ ಈಕೆಯ ಮನೆಯವರು ತಮ್ಮ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದ್ದು, ಆದರೂ ಈಕೆಯ ಪತ್ತೆಯಾಗಿಲ್ಲ. ಈ ಬಗ್ಗೆಯೂ ತುಕ್ರಪ್ಪ

ಕೊಕ್ಕಡ: ಯುವತಿ ನಾಪತ್ತೆ Read More »

ಕರಾವಳಿ

ಶಿರಾಡಿಘಾಟ್ ರಸ್ತೆ ಅಭಿವೃದ್ದಿ ಕಾಮಗಾರಿ ಹಿನ್ನೆಲೆ ► ಇಂದಿನಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.20. ರಾಷ್ಟ್ರೀಯ ಹೆದ್ದಾರಿ-48 ಬೆಂಗಳೂರು- ಮಂಗಳೂರು ರಸ್ತೆಯ ಶಿರಾಡಿ ಘಾಟಿ ಭಾಗದ ಸರಪಳಿ ಕಿ.ಮೀ.250.620 (ಕೆಂಪುಹೊಳೆ ಗೆಸ್ಟ್ ಹೌಸ್) ನಿಂದ 263.00 (ಅಡ್ಡಹೊಳೆ) ರವರೆಗಿನ ರಸ್ತೆ ಅಭಿವೃದ್ದಿಪಡಿಸುವ ಹಿನ್ನೆಲೆಯಲ್ಲಿ ಈಗ ಉದ್ದೇಶಿಸಲಾಗಿರುವ ರಸ್ತೆ ಕಾಮಗಾರಿಯನ್ನು ನಿರ್ವಹಿಸಲು ಸಕಲೇಶಪುರ ರಾಷ್ಟ್ರೀಯ ಹೆದ್ದಾರಿ ಕಿ.ಮೀ. 238.950 (ಮಾರನಹಳ್ಳಿ ಪೋಲೀಸ್ ಔಟ್ ಪೋಸ್ಟ್ ಕಾಡುಮನೆ ಎಸ್ಟೇಟ್ ರೋಡ್ ಜಂಕ್ಷನ್) ರಿಂದ ಪುತ್ತೂರು ತಾಲೂಕಿನ ಗುಂಡ್ಯ ಹೆದ್ದಾರಿ  ಕಿ.ಮೀ.  261.500ವರೆಗೆ ಶಿರಾಡಿಘಾಟ್‍ನ ರಸ್ತೆಯಲ್ಲಿ ಇಂದು ಜನವರಿ 20

ಶಿರಾಡಿಘಾಟ್ ರಸ್ತೆ ಅಭಿವೃದ್ದಿ ಕಾಮಗಾರಿ ಹಿನ್ನೆಲೆ ► ಇಂದಿನಿಂದ ವಾಹನ ಸಂಚಾರ ಸಂಪೂರ್ಣ ಸ್ಥಗಿತ Read More »

ಕರ್ನಾಟಕ
Scroll to Top