News Kadaba Desk

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಶೀರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ದೀಪಕ್‌ ರಾವ್ ಹತ್ಯೆಯಂದು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ಭಾನುವಾರದಂದು ಮೃತಪಟ್ಟ ಆಕಾಶ ಭವನ ನಿವಾಸಿ ಅಹಮದ್ ಬಶೀರ್ ಕುಟಂಬಕ್ಕೆ ಸರಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ದೀಪಕ್ ರಾವ್ ಕುಟುಂಬಕ್ಕೆ ನೀಡಿದಂತೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ಬಶೀರ್ ಕುಟುಂಬಕ್ಕೂ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ಮೃತಪಟ್ಟ ಬಶೀರ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ Read More »

ಕರಾವಳಿ

ಅಮಾಯಕರ ಹತ್ಯೆ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ► ಬೆಳ್ತಂಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.07. ದೇವರು ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಅಮಾಯಕ ಜನರನ್ನು ಹತ್ಯೆ ಮಾಡುವಂತಹ, ಹಿಂಸಾಚಾರ ನಡೆಸುವಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ಭಾನುವಾರದಂದು ಬೆಳ್ತಂಗಡಿಯಲ್ಲು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಅಧಿಕಾರದ ಆಸೆಯಿಂದ ಕೆಲವರು ಹೆಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ

ಅಮಾಯಕರ ಹತ್ಯೆ ಮಾಡುವವರನ್ನು ಸಹಿಸಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ► ಬೆಳ್ತಂಗಡಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ Read More »

ಕರಾವಳಿ

ದುಷ್ಕರ್ಮಿಗಳಿಂದ ತೀವ್ರ ಇರಿತಕ್ಕೊಳಗಾಗಿದ್ದ ಬಶೀರ್ ಮೃತ್ಯು ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಕೊಲೆಯತ್ನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ಕೊಟ್ಟಾರ ಚೌಕಿಯಲ್ಲಿ ಜನವರಿ 03 ರಂದು ರಾತ್ರಿ ದುಷ್ಕರ್ಮಿಗಳಿಂದ ಬರ್ಬರ ಹಲ್ಲೆಗೀಡಾಗಿ ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಆಕಾಶಭವನ ನಿವಾಸಿ ಬಶೀರ್ ಭಾನುವಾರದಂದು ಕೊನೆಯುಸಿರೆಳೆದರು. ತನ್ನ ಫಾಸ್ಟ್ ಫುಡ್ ಅಂಗಡಿಯನ್ನು ಮುಚ್ಚುವಷ್ಟರಲ್ಲಿ ದುಷ್ಕರ್ಮಿಗಳು ತಲ್ವಾರು ದಾಳಿ ನಡೆಸಿದ ಪರಿಣಾಮ ಬಶೀರ್ ರವರು ಗಂಭೀರ ಗಾಯಗೊಂಡು ಬಿದ್ದಿದ್ದರು. ಅವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ‌.

ದುಷ್ಕರ್ಮಿಗಳಿಂದ ತೀವ್ರ ಇರಿತಕ್ಕೊಳಗಾಗಿದ್ದ ಬಶೀರ್ ಮೃತ್ಯು ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಕೊಲೆಯತ್ನ Read More »

ಕರಾವಳಿ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ► ವಾರದೊಳಗೆ 31,800 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್: ಉನ್ನತ ಶಿಕ್ಷಣ ಸಚಿವ ರಾಯರೆಡ್ಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ರಾಜ್ಯದಾದ್ಯಂತ 412 ಸರಕಾರಿ ಪದವಿ, 85 ಪಾಲಿಟೆಕ್ನಿಕ್ ಮತ್ತು 14 ಸರಕಾರಿ ಇಂಜಿನಿಯರ್ ಕಾಲೇಜುಗಳ ಒಟ್ಟು 31,800 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ವಾರದೊಳಗೆ ಉಚಿತ ಲ್ಯಾಪ್‍ಟಾಪ್ ವಿತರಿಸಲಾಗುವುದು ಎಂದು  ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು. ಅವರು ನಗರದ ಪುರಭವನದಲ್ಲಿ 2016-17 ಸಾಲಿನ ಎಸ್.ಸಿ.ಪಿ./ಟಿ.ಎಸ್.ಪಿ. ಯೋಜನೆಯ ಅಡಿಯಲ್ಲಿ ದ.ಕ ಜಿಲ್ಲೆಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರಕಾರಿ ಪಾಲಿಟೆಕ್ನಿಕ್‍ಗಳ ಪರಿಶಿಷ್ಟ ಜಾತಿ

ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ ► ವಾರದೊಳಗೆ 31,800 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್: ಉನ್ನತ ಶಿಕ್ಷಣ ಸಚಿವ ರಾಯರೆಡ್ಡಿ Read More »

ಕರಾವಳಿ

ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಸುಳ್ಯ ತಾಲೂಕಿನ 22 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು ಜನವರಿ 13 ರಂದು ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯ ಆವರಣದ ನೀರಬಿದರೆ ಮಹಾಲಿಂಗೇಶ್ವರ ಭಟ್ ಸಭಾಂಗಣದ ಪಾನತ್ತಿಲ ಈಶ್ವರಪ್ಪ ಗೌಡ ವೇದಿಕೆಯಲ್ಲಿ ನಡೆಯಲಿದೆ. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಮಿತ್ರ ಯುವಕ ಮಂಡಲ(ರಿ). ಕ್ಯೊಕುಳಿ ಕುರಲ್ ತುಳುಕೂಟ ದುಗ್ಗಲಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಸಂತ

ಜು.13: ಸುಳ್ಯ ತಾಲೂಕು 22 ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಸಮ್ಮೇಳನದ ಅಧ್ಯಕ್ಷರಾಗಿ ವಸಂತ ಶೆಟ್ಟಿ ಬೆಳ್ಳಾರೆ Read More »

ಕರಾವಳಿ

ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಭಾರತದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಗ್ಗೆ ಜನವರಿ 1 ರಂದು ಅರ್ಹತಾ ದಿನಾಂಕವಾಗಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಜನವರಿ 12 ರ ವರೆಗೆ ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ಹಕ್ಕು ಆಕ್ಷೇಪಣೆಗಳನ್ನು ಜನವರಿ 12 ರೊಳಗೆ ಮತಗಟ್ಟೆಯ ಕ್ಷೇತ್ರ ಮಟ್ಟದ ಅಧಿಕಾರಿಯವರಲ್ಲಿ ಅಥವಾ ಮಂಗಳೂರು ಮಹಾನಗರ ಪಾಲಿಕೆ ಲಾಲ್‍ಬಾಗ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬಹುದು ಎಂದು

ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ Read More »

ಕರ್ನಾಟಕ

ಮೆಹಂದಿ ಹಚ್ಚಿ ಅದಕ್ಕೆ ಹೇಗೆ ಬಣ್ಣ ಬರಿಸಬೇಕೆಂಬ ಗೊಂದಲವೇ…? ► ಮೆಹಂದಿ ಬಣ್ಣ ಕೆಂಪಾಗಿ ಕಾಣಲು ಕೆಲವೊಂದು ಮಾಹಿತಿ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಜ.06. ಮದುವೆ ಸಂದರ್ಭದಲ್ಲಿ ವಧುವಿನ ಮೆಹೆಂದಿ ಡಾರ್ಕ್‌ ಆಗಿ ತುಂಬಾ ದಿನಗಳ ಕಾಲ ಉಳಿಯಲು ಸುಲಭ ವಿಧಾ‌ನಗಳನ್ನು ನಾವು ತಿಳಿಸಿಕೊಡುತ್ತೇವೆ. ಮೆಹೆಂದಿ ಹಾಕುವ ಮುನ್ನ ಕೈ ಹಾಗು ಕಾಲುಗಳನ್ನು ಚೆನ್ನಾಗಿ ತೊಳೆಯಿರಿ. ಕೈ ಕಾಲಿನಲ್ಲಿದ್ದ ಧೂಳು, ಮಣ್ಣು ಹೋದ ಮೇಲೆ ಮೆಹೆಂದಿ ಬಣ್ಣ ಚೆನ್ನಾಗಿ ಉಳಿಯುತ್ತದೆ. ಮೆಹೆಂದಿಯನ್ನು 7-8 ಗಂಟೆಗಳ ಕಾಲ ಕೈಯಲ್ಲಿ ಹಾಗೆಯೆ ಇಟ್ಟರೆ ಅದರ ಬಣ್ಣ ಹೆಚ್ಚಾಗುತ್ತಾ ಹೋಗುತ್ತದೆ. ಆದರೆ ನೀವು ಮೆಹೆಂದಿ ಹಾಕಿದ ತಕ್ಷಣ ತೊಳೆದರೆ

ಮೆಹಂದಿ ಹಚ್ಚಿ ಅದಕ್ಕೆ ಹೇಗೆ ಬಣ್ಣ ಬರಿಸಬೇಕೆಂಬ ಗೊಂದಲವೇ…? ► ಮೆಹಂದಿ ಬಣ್ಣ ಕೆಂಪಾಗಿ ಕಾಣಲು ಕೆಲವೊಂದು ಮಾಹಿತಿ Read More »

ಆರೋಗ್ಯ ಮಾಹಿತಿ

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಕಾಲೇಜು ವಿದ್ಯಾರ್ಥಿನಿಯೋರ್ವಳ ಮೃತದೇಹವೊಂದು ಗುರುಪುರದ ಫಲ್ಗುಣಿ ನದಿಯಲ್ಲಿ ಶನಿವಾರದಂದು ಪತ್ತೆಯಾಗಿದೆ. ಮೃತ ಯುವತಿಯನ್ನು ಉಲಾಯಿಬೆಟ್ಟು ನಿವಾಸಿ ನಗರದ ಕಾಲೇಜೊಂದರ ವಿದ್ಯಾರ್ಥಿನಿ ತನುಶ್ರಿ (17) ಎಂದು ಗುರುತಿಸಲಾಗಿದ್ದು, ಈಕೆಯ ಮೃತದೇಹವು ಶನಿವಾರದಂದು ಗುರುಪುರದ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಮಾಹಿತಿ ತಿಳಿದ ಕಂಕನಾಡಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ಇದು ಆತ್ಮಹತ್ಯೆಯೋ ಅಥವಾ ಯಾರಾದರೂ ಕೊಲೆಗೈದು ನದಿಗೆ ಎಸೆದಿರಬಹುದೇ ಎನ್ನುವ ಬಗ್ಗೆ ಕುತೂಹಲ ಮೂಡಿದ್ದು, ಪೊಲೀಸರು

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನದಿಯಲ್ಲಿ ಪತ್ತೆ ► ಆತ್ಮಹತ್ಯೆಯೋ, ಕೊಲೆಯೋ ಎಂಬ ಬಗ್ಗೆ‌ ವ್ಯಾಪಕ ಸಂಶಯ Read More »

ಕರಾವಳಿ

ಬಶೀರ್ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಯತ್ನ ಪ್ರಕರಣ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ಇತ್ತೀಚೆಗೆ ಕಾಟಿಪಳ್ಳದಲ್ಲಿ ನಡೆದ ದೀಪಕ್ ಹತ್ಯೆಯ ಬೆನ್ನಲ್ಲೇ ಕೊಟ್ಟಾರ ಚೌಕಿಯಲ್ಲಿ ನಡೆದ ಅಬ್ದುಲ್ ಬಶೀರ್ ಎಂಬವರ ಕೊಲೆಗೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು ಪ್ರಕರಣದಲ್ಲಿ ಭಾಗಿಯಾದ 4 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಶನಿವಾರ ಸಂಜೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮೀಷನರ್ ಟಿ.ಆರ್‌ ಸುರೇಶ್, ದೀಪಕ್ ರಾವ್ ಹತ್ಯೆಯಂದು ರಾತ್ರಿ ಕೊಟ್ಟಾರ ಚೌಕಿಯಲ್ಲಿ ಫಾಸ್ಟ್ ಫುಡ್ ಅಂಗಡಿಯನ್ನು ಹೊಂದಿದ್ದ ಬಶೀರ್ ಎಂಬವರ ಮೇಲೆ ಬರ್ಬರವಾಗಿ ಕಡಿದು ಕೊಲೆಗೆ

ಬಶೀರ್ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ ► ದೀಪಕ್ ರಾವ್ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಬಶೀರ್ ಕೊಲೆಯತ್ನ ಪ್ರಕರಣ Read More »

ಕರಾವಳಿ

ಸವಣೂರು: ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಸವಣೂರು, ಜ.06. ಹೆಚ್ಚು ಯುವಪಡೆಯನ್ನು ಹೊಂದಿರುವ ನಮ್ಮ ದೇಶದ ಯುವಕರು ಮನಸು ಮಾಡಿದ್ದಲ್ಲಿ ದೇಶದಲ್ಲಿ ಅಮೂಲಾಗ್ರ ಬದಲಾವಣೆ ಸಾಧ್ಯವಿದೆ. ಜಾತಿ, ಭಾಷೆ, ಧರ್ಮವೆಂದು ಕಚ್ಚಾಡುವ ಬದಲು ಸಾಮರಸ್ಯದೊಂದಿಗೆ ಯುವಜನತೆ ಒಗ್ಗೂಡಿ ಬಲಿಷ್ಠ ರಾಷ್ಟ್ರ ನಿರ್ಮಾಣ ಮಾಡಲು ಯುವಕರು ಶ್ರಮಪಡಬೇಕೆಂದು ಅರಣ್ಯ ,ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. ಅವರು  ಸವಣೂರು ದ.ಕ.ಜಿ.ಪಂ. ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಯುವ ಸಬಲೀಕರಣ

ಸವಣೂರು: ಜಿಲ್ಲಾ ಮಟ್ಟದ ಯುವಜನ ಮೇಳ ಉದ್ಘಾಟನೆ Read More »

ಕರಾವಳಿ
Scroll to Top