News Kadaba Desk

ಕಡಬದ ಏಮ್ಸ್ ಕಾಲೇಜಿನಲ್ಲಿ ನಾಳೆ(ಡಿ.23) ಸ್ನೇಹ ಸಮ್ಮಿಲನ ► ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಎ.ಎಂ.ಎಸ್ ಮತ್ತು ಏಮ್ಸ್ ಹಳೇ ವಿದ್ಯಾರ್ಥಿ ಸಂಘಗಳ ಒಕ್ಕೂಟದ ವತಿಯಿಂದ ಹಳೇ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಮತ್ತು ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮವು ಶನಿವಾರ ಬೆಳಿಗ್ಗೆ 09.30 ಕ್ಕೆ ಏಮ್ಸ್ ಪ್ರಥಮ ದರ್ಜೆ ಕಾಲೇಜು ಆವರಣದ ಗೋಪಾಲರಾವ್ ವೇದಿಕೆಯಲ್ಲಿ ನಡೆಯಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಸೆಮೀರಾ ಕೆ.ಎ. ನಿರ್ವಹಿಸಲಿದ್ದು, ಏಮ್ಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಕುಮಾರಿ ಫೌಝಿಯಾ ಬಿ.ಎಸ್. […]

ಕಡಬದ ಏಮ್ಸ್ ಕಾಲೇಜಿನಲ್ಲಿ ನಾಳೆ(ಡಿ.23) ಸ್ನೇಹ ಸಮ್ಮಿಲನ ► ಪೂರ್ವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಕಡಬ: ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.22. ಮದ್ದು ತರಲೆಂದು ತೆರಳಿದ್ದ ಮಹಿಳೆಯೋರ್ವರು ತನ್ನ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಐತ್ತೂರು ಎಂಬಲ್ಲಿ ಡಿ.13 ರಂದು ನಡೆದಿದ್ದು, ಈ ಬಗ್ಗೆ ಹುಡುಕಾಡಿದ ಮಹಿಳೆಯ ಮನೆಯವರು ತಡವಾಗಿ ಕಡಬ ಠಾಣೆಗೆ ದೂರು ನೀಡಿದ್ದಾರೆ. ನಾಪತ್ತೆಯಾಗಿರುವ ಮಹಿಳೆಯನ್ನು ಐತ್ತೂರು ಗ್ರಾಮದ ಓಟೆಕಜೆ ನಿವಾಸಿ ಸ್ವಾಮಿವೇಲು ಎಂಬವರ ಪತ್ನಿ ಜ್ಯೋತಿ ಮಾಲಾರ್(30) ಹಾಗೂ ಮಕ್ಕಳಾದ ವರ್ಷಿಣಿ(9) ನಿದೀಶ್(7) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಯಲ್ಲಿ ಹುಡುಕಾಡಿ ಪತ್ತೆಯಾಗದಿದ್ದಾಗ ಕಡಬ ಪೊಲೀಸರಿಗೆ ದೂರು ನೀಡಿದ್ದು,

ಕಡಬ: ತನ್ನ ಇಬ್ಬರು ಮಕ್ಕಳೊಂದಿಗೆ ಮಹಿಳೆ ನಾಪತ್ತೆ Read More »

ಕರಾವಳಿ

ಮಿತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22. ಓಮ್ನಿ ಕಾರೊಂದು ಢಿಕ್ಕಿಯಾಗಿ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ರಾತ್ರಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ತಿರುವಿನಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ಕೆದಿಲ ಗ್ರಾಮದ ಕರಿಮಜಲು ನಿವಾಸಿ ಬಾಲಕೃಷ್ಣ(33 ವ.) ಎಂದು ಗುರುತಿಸಲಾಗಿದೆ. ಇವರು ಮಿತ್ತೂರು ತಿರುವಿನಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಾಣಿ ಕಡೆಯಿಂದ ಬಂದ ಕೇರಳ ನೋಂದಣಿಯ ಓಮ್ನಿ ಕಾರು ಇವರಿಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ರಭಸಕ್ಕೆ ಬಾಲಕೃಷ್ಣರವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ

ಮಿತ್ತೂರು: ಪಾದಚಾರಿಗೆ ಢಿಕ್ಕಿ ಹೊಡೆದು ಓಮ್ನಿ ಪಲ್ಟಿ ► ಪಾದಚಾರಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪುತ್ತೂರು ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.22. ಸರಕಾರಿ ವೈದ್ಯರೋರ್ವರು ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಬಲೆಗೆ ಬಿದ್ದ ಘಟನೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ನಡೆದಿದೆ. ಸಂತೋಷ್ ಆಚಾರ್ಯ ಎಂಬವರು ಚಾಟ್ ಸೆಂಟರ್ ಪಡೆಯುವ ಉದ್ದೇಶದಿಂದ ತಾಲೂಕು ವೈದ್ಯಾಧಿಕಾರಿ ಕಚೇರಿಗೆ ಪರವಾನಿಗೆ ಪತ್ರಕ್ಕಾಗಿ ಸಲ್ಲಿಸಿದ್ದ ಅರ್ಜಿಗೆ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವೈದ್ಯಾಧಿಕಾರಿ ಸುಮಂತ್ ಎಂಬವರು ಲಂಚ ಕೇಳಿದ್ದರು. ಸಂತೋಷ್ ಸುವರ್ಣರ ದೂರಿನಂತೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು 2500 ರೂ. ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಸುಮಂತ್ ಅವರನ್ನು

ಪುತ್ತೂರು ಲಂಚ ಸ್ವೀಕರಿಸುತ್ತಿದ್ದ ವೈದ್ಯಾಧಿಕಾರಿ ಎಸಿಬಿ ಬಲೆಗೆ Read More »

ಕರಾವಳಿ

ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ ‘ಬೃಹತ್ ಸಾಂಸ್ಕೃತಿಕ ಮೆರವಣಿಗೆ’

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.22. ಇಂದಿನಿಂದ ಡಿಸೆಂಬರ್ 31 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಕರಾವಳಿ ಉತ್ಸವವನ್ನು ಇಂದು ಸಂಜೆ 6 ಗಂಟೆಗೆ ಬಹುಭಾಷಾ ಖ್ಯಾತ ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ. ಇಂದು ಸಂಜೆ 3.30 ರಿಂದ ನೆಹರೂ ಮೈದಾನದಿಂದ ಕರಾವಳಿ ಉತ್ಸವ ಮೈದಾನದವರೆಗೆ ಆಕರ್ಷಕ ಬೃಹತ್ ಸಾಂಸ್ಕತಿಕ ಮೆರವಣಿಗೆ ನಡೆಯಲಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ. ವೈವಿಧ್ಯಮಯವಾದ ಮೆರವಣಿಗೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ

ಹತ್ತು ದಿನಗಳ ಕಾಲ‌ ನಡೆಯಲಿರುವ ಕರಾವಳಿ ಉತ್ಸವಕ್ಕೆ ಇಂದು ಚಾಲನೆ ► ಉತ್ಸವದ ವಿಶೇಷ ಆಕರ್ಷಣೆಯಾಗಿ ‘ಬೃಹತ್ ಸಾಂಸ್ಕೃತಿಕ ಮೆರವಣಿಗೆ’ Read More »

ಕರಾವಳಿ

ಝೀರೋ ಟ್ರಾಫಿಕ್ ವ್ಯವಸ್ಥೆಯಡಿ ಬೈಂದೂರಿನಿಂದ ಬೆಂಗಳೂರು ತಲುಪಿದ ಅನುಶಾ ► ಗಂಭೀರ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.22. ಝೀರೋ ಟ್ರಾಫಿಕ್ ನಿರ್ಮಾಣ ಮಾಡಿ ಗಂಭೀರವಾದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯನ್ನು ಉಡುಪಿಯಿಂದ ಬೆಂಗಳೂರಿಗೆ ರವಾನೆ ಮಾಡಲಾದ ಘಟನೆ ಗುರುವಾರದಂದು ನಡೆದಿದೆ. ಲಿವರ್ ಸಮಸ್ಯೆಯಿಂದ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಉಡುಪಿಯ ಬೈಂದೂರು ತಾಲೂಕಿನ ಅರೆಶಿರೂರು ಗ್ರಾಮದ ಆರನೇ ತರಗತಿ ವಿದ್ಯಾರ್ಥಿನಿ ಅನುಶಾಳನ್ನು ತುರ್ತು ಶಸ್ತ್ರಚಿಕಿತ್ಸೆಗಾಗಿ ಉಡುಪಿ – ಮಂಗಳೂರು ಮಾರ್ಗವಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ರಾಜ್ಯದ ಅತೀ ದೊಡ್ಡ ಝೀರೋ ಟ್ರಾಫಿಕ್ ವ್ಯವಸ್ಥೆಯೆನ್ನಲಾದ ಸುಮಾರು 140

ಝೀರೋ ಟ್ರಾಫಿಕ್ ವ್ಯವಸ್ಥೆಯಡಿ ಬೈಂದೂರಿನಿಂದ ಬೆಂಗಳೂರು ತಲುಪಿದ ಅನುಶಾ ► ಗಂಭೀರ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಆರನೇ ತರಗತಿ ವಿದ್ಯಾರ್ಥಿನಿ Read More »

ಕರ್ನಾಟಕ

ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು

(ನ್ಯೂಸ್ ಕಡಬ) newskadaba.com ಕಾರ್ಕಳ, ಡಿ.22. ಕಾಡಿನಿಂದ ನಾಡಿಗೆ ಆಗಮಿಸಿದ ಹೆಣ್ಣು ಚಿರತೆಯೊಂದು ಮನೆಯಂಗಳದಲ್ಲಿ ವಿಲವಿಲನೆ ಒದ್ದಾಡಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಎರ್ಲಪ್ಪಾಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಗುರುವಾರದಂದು ಕಾರ್ಕಳ ತಾಲೂಕಿನ ಎರ್ಲಪ್ಪಾಡಿ ಗ್ರಾಮದ ಕಾಂತರಗೋಡಿಯ ವಿಲಿಯಂ ಎಂಬವರ ಮನೆಯ ಅಂಗಳಕ್ಕೆ ಏಕಾಏಕಿ ಆಗಮಿಸಿದ ದೊಡ್ಡ ಗಾತ್ರದ ಹೆಣ್ಣು ಚಿರತೆಯೊಂದು ಸುತ್ತು ಬಂದವರಂತೆ ಬೀಳುತ್ತಿತ್ತು. ಮತ್ತೆ ಏಳಲು ಪ್ರಯತ್ನ ಮಾಡಿ ಮತ್ತೆ ಮತ್ತೆ ಬೀಳುತ್ತಿತ್ತು. ಸುಮಾರು 10 ರಿಂದ 15 ನಿಮಿಷಗಳ ಕಾಲ ಎಲ್ಲರ ಕಣ್ಣಮುಂದೆಯೇ ಒದ್ದಾಡಿ,

ಕಾರ್ಕಳ: ಕಾಡಿನಿಂದ ನಾಡಿಗೆ ಆಗಮಿಸಿದ ಚಿರತೆ ► ಮನೆಯಂಗಳದಲ್ಲಿ ಎಲ್ಲರೆದುರೇ ವಿಲವಿಲನೆ ಒದ್ದಾಡಿ ಸಾವು Read More »

ಕರ್ನಾಟಕ

ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಸುಮಾರು 4.95 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ವಾಮಂಜೂರು ಜಂಕ್ಷನ್‌ನಿಂದ ಪಿಲಿಕುಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಕಾಂಕ್ರಿಟೀಕರಣ ಮತ್ತಿತರ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಧ್ವಜವನ್ನು ಪ್ರದರ್ಶಿಸಿದ ಘಟನೆ ಗುರುವಾರದಂದು ನಡೆದಿದೆ. ಸ್ಥಳೀಯ ಕಾರ್ಪೊರೇಟರ್ ಮತ್ತು ಗ್ರಾಪಂ ಅಧ್ಯಕ್ಷರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದನ್ನು ಖಂಡಿಸಿದ ಬಿಜೆಪಿ ಕಾರ್ಯಕರ್ತರು ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲು ಆಗಮಿಸಿದ್ದ ಸಾಂಖ್ಯಿಕ, ವಿಜ್ಞಾನ, ತಂತ್ರಜ್ಞಾನ ಸಚಿವ

ವಾಮಂಜೂರು – ಪಿಲಿಕುಳ ಚತುಷ್ಪಥ ಕಾಂಕ್ರೀಟ್ ರಸ್ತೆಗೆ ಶಿಲಾನ್ಯಾಸ ► ಆಗಮಿಸಿದ ಸಚಿವರು, ಶಾಸಕರಿಗೆ ಬಿಜೆಪಿ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರದರ್ಶನ Read More »

ಕರಾವಳಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.21. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡನೇ ಹಂತದ ಕಾಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಯು ಜನವರಿಯಲ್ಲಿ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜನವರಿ 2ನೇ ವಾರದಿಂದ ಐದು ತಿಂಗಳ ಕಾಲ ಈ ಮಾರ್ಗದಲ್ಲಿ ಸಂಪೂರ್ಣವಾಗಿ ವಾಹನ ಸಂಚಾರ ನಿಷೇಧಿಸಲು ಲೋಕೋಪಯೋಗಿ ಇಲಾಖೆ ನಿರ್ಧರಿಸಿದೆ. ಶಿರಾಡಿ ಘಾಟಿಯಲ್ಲಿ ಬಾಕಿ ಉಳಿದಿರುವ 12.38 ಕಿ.ಮೀ. ಉದ್ದದ ಕಾಂಕ್ರೀಟ್‌ ರಸ್ತೆ ನಿರ್ಮಾಣ ಕಾಮಗಾರಿ ಆರಂಭಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಬಹುಶಃ ಜನವರಿ

ಜನವರಿಯಲ್ಲಿ ಶಿರಾಡಿ ಘಾಟ್ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭ ► ಜನವರಿ ಎರಡನೇ ವಾರದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ Read More »

ಕರಾವಳಿ

ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.21. ಖಾಸಗಿ ಶಾಲೆಗಳು ಅನಿಯಮಿತವಾಗಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನ ಬಂದಂತೆ ಶುಲ್ಕ ನಿಗದಿ ಮಾಡುವ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ಇದಕ್ಕೆ ನಿಯಮಾವಳಿ ರೂಪಿಸಿ 2018-19ನೆ ಸಾಲಿನಿಂದಲೇ ಅನುಷ್ಠಾನಕ್ಕೆ ತರಲಾಗುವುದು ಎಂದರು. ಸರಕಾರದ ನಿಯಮಾವಳಿ ಆಧರಿಸಿಯೇ ಖಾಸಗಿ ಶಾಲೆಗಳು ಶುಲ್ಕ ನಿಗದಿ

ಖಾಸಗಿ ಶಾಲೆಗಳು ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಲ್ಲಿ ಕಠಿಣ ಕ್ರಮ ► ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ Read More »

ಕರ್ನಾಟಕ
Scroll to Top