News Kadaba Desk

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

(ನ್ಯೂಸ್ ಕಡಬ) newskadaba.com ಕಡಬ, ಡಿ.19. ಹೆರಿಗೆ ನೋವಿನಿಂದ ಆಸ್ಪತ್ರೆಗೆ ತೆರಳುವ ಹಾದಿ ಮಧ್ಯೆ ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಮಹಿಳೆಯೋರ್ವರು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಮಂಗಳವಾರದಂದು ಮುಂಜಾನೆ 4.45ರ ಸುಮಾರಿಗೆ ನಡೆದಿದೆ. ಹೆರಿಗೆ ನೋವೆಂದು ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ಆಲಂಕಾರು ಸಮೀಪದ ನಡುಗುಡ್ಡೆ ನಿವಾಸಿ ಲಲಿತಾ(38) ಪುತ್ತೂರು ಕೋಡಿಯಾಡಿ ಮಾರ್ಗ ಮಧ್ಯೆ ಗಂಡು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ‌. ಇದೀಗ ತಾಯಿ-ಮಗು ಆರೋಗ್ಯದಿಂದಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಸೂತ್ರ […]

ಕಡಬದ 108 ಆಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ Read More »

ಕರಾವಳಿ

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.19. ಲಕ್ಷದ್ವೀಪ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾತ್ರಿ ಬಂದಿಳಿದರು. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿರುವುದರಿಂದ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಸಂಭ್ರಮಾಚರಿಸಿದರು. ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ಪಿ.ರಾಧಾಕೃಷ್ಣನ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಂಸದ ನಳಿನ್ ಕುಮಾರ್

ಮಂಗಳೂರಿನಲ್ಲಿ ತಂಗಿದ ಪ್ರಧಾನಿ ಮೋದಿ ► ಬಿಜೆಪಿ ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆ Read More »

ರಾಷ್ಟ್ರೀಯ ನ್ಯೂಸ್

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ► ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ನೆಲ್ಯಾಡಿ ಶಕ್ತಿ ಕೇಂದ್ರದ ಅಧ್ಯಕ್ಷ ಧರ್ಮಪಾಲ ರಾವ್, ಸುಳ್ಯ ಮಂಡಲ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ರಾವ್, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್., ತೇಜಸ್ವಿನಿ ಕಟ್ಟಪುಣಿ, ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಅರ್.ಕೆ. ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಿಡಿಸಲಾದ ಪಟಾಕಿಯ ಕಸವನ್ನು ಕಾರ್ಯಕರ್ತರು ಗುಡಿಸಿ ಸ್ವಚ್ಚಗೊಳಿಸಿ ಸ್ವಚ್ಛ ಭಾರತದ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ► ಗೋಳಿತ್ತಡಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ Read More »

ಕರಾವಳಿ

ಮಂಗಳೂರು: ತಂಡದಿಂದ ಚೂರಿ ಇರಿತ ► ನಾಲ್ವರಿಗೆ ಗಾಯ, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18. ತಂಡವೊಂದು ನಾಲ್ಕು ಮಂದಿಗೆ ತಲವಾರಿನಿಂದ ಇರಿದಿದ್ದರಿಂದ ಓರ್ವ ಗಂಭೀರ ಗಾಯಗೊಂಡು, ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ನಗರದ ರಾವ್ ಆ್ಯಂಡ್ ರಾವ್ ಸರ್ಕಲ್ ಸಮೀಪದ ಹರ್ಷ ಬಾರ್ ಬಳಿ ಸೋಮವಾರ ರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಬಂದರ್‌ ನಿವಾಸಿ ಶಫೀಕ್ (45) ಎಂದು ಗುರುತಿಸಲಾಗಿದ್ದು, ಶಫೀಕ್‌ಗೆ ಮೂವರ ತಂಡವೊಂದು ಹಿಗ್ಗಾಮುಗ್ಗ ಥಳಿಸುವುದನ್ನು ಕಂಡ ಅನೀಸ್ (22), ಹಫೀಝ್ (22) ಹಾಗೂ ಸ್ಥಳೀಯ ಪಾನ್ ಅಂಗಡಿ ವ್ಯಾಪಾರಿಯೊಬ್ಬರು

ಮಂಗಳೂರು: ತಂಡದಿಂದ ಚೂರಿ ಇರಿತ ► ನಾಲ್ವರಿಗೆ ಗಾಯ, ಓರ್ವ ಗಂಭೀರ Read More »

ಕರಾವಳಿ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ಪೂಜೆಗೆ ಮಾವಿನ ಎಲೆ ಹಾಗೂ ಹಿಂಗಾರ ಬೇಕೆಂದು ನಂಬಿಸಿ ಮನೆಯ ಮಾಲಕನನ್ನು ತೋಟಕ್ಕೆ ಕಳುಹಿಸಿ ಮನೆಯಿಂದ ನಗ ನಗದನ್ನು ಕದ್ದೊಯ್ದ ಘಟನೆ ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಅಪರಿಚಿತ ವ್ಯಕ್ತಿಯಿಂದ ಮೋಸಕ್ಕೊಳಗಾದವರನ್ನು ಕೌಕ್ರಾಡಿ ಗ್ರಾಮದ ಪೊಟ್ಲಡ್ಕ ನಿವಾಸಿ ಎಲ್ಯಣ್ಣ ಗೌಡ (70) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಅವರ ಮನೆಗೆ ಬೈಕೊಂದರಲ್ಲಿ ಬಂದ ಯುವಕನೋರ್ವ ನಾಳೆ ನಮ್ಮ ಮನೆಯಲ್ಲಿ ಪೂಜೆ ಇದ್ದು ಅದಕ್ಕೆ ಮಾವಿನ ಎಲೆ

ಕೌಕ್ರಾಡಿ: ಪೂಜೆಗೆ ಮಾವಿನ ಎಲೆ ಬೇಕೆಂದು ನಂಬಿಸಿ ಕಳ್ಳತನ ► ನಗ, ನಗದನ್ನು ದೋಚಿದ ಅಪರಿಚಿತ ವ್ಯಕ್ತಿ Read More »

ಕರಾವಳಿ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.18. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ ಘಟನೆ ಸೋಮವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಕುಖ್ಯಾತ ಕ್ರಿಮಿನಲ್ ಮಹಮ್ಮದ್ ಅಲ್ತಾಫ್ ಎಂದು ಗುರುತಿಸಲಾಗಿದೆ. ಅಲ್ತಾಫ್ ತಲೆಮರೆಸಿಕೊಂಡಿರುವ ಇನ್ನೋರ್ವ ಆರೋಪಿಯೊಂದಿಗೆ ಸೇರಿಕೊಂಡು ಪಾರ್ಕ್, ನಿರ್ಜನ ಪ್ರದೇಶದಲ್ಲಿ ಸಿಗುವ ಪ್ರೇಮಿಗಳನ್ನು, ಒಬ್ಬಂಟಿ ವ್ಯಕ್ತಿಗಳನ್ನು ಬೆದರಿಸಿ ಚಿನ್ನಾಭರಣ ಹಾಗೂ ಹಣವನ್ನು ದೋಚುವುದನ್ನೇ ವೃತ್ತಿಯಾಗಿಸಿಕೊಂಡಿದ್ದರು. ಆದರೆ ಮರ್ಯಾದೆಗೆ ಅಂಜಿ ಯಾರು ಕೂಡಾ ಈ ಬಗ್ಗೆ ದೂರು ದಾಖಲಿಸಲು ಮುಂದಾಗುತ್ತಿರಲಿಲ್ಲ. ಇತ್ತೀಚೆಗೆ

ಉಪ್ಪಿನಂಗಡಿ: ದರೋಡೆ ಪ್ರಕರಣದ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.18. ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ರವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಈ ಹಿಂದಿನ ಫೊಟೊ ಹಾಕಿ ಯಾರೋ ಕೀಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿದ ಘಟನೆ ಸೋಮವಾರದಂದು ನಡೆದಿದೆ. ಅವರು ಇಂದು ತನ್ನ ಡಾಲರ್ಸ್ ಕಾಲೋನಿಯ ಸ್ವಗ್ರಹದಲ್ಲಿ ಗುಜರಾತ್‌ನ ಚುನಾವಣೆಯ ಫಲಿತಾಂಶವನ್ನು ವೀಕ್ಷಿಸುತ್ತಿದ್ದ ವೇಳೆ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹರಡಲಾಗಿತ್ತು. ಇದರಿಂದಾಗಿ ಅಭಿಮಾನಿಗಳಲ್ಲಿ ಕೆಲಕಾಲ ಆತಂಕ

ಬ್ರೇಕಿಂಗ್ ನ್ಯೂಸ್: ಯಡಿಯೂರಪ್ಪರಿಗೆ ಹೃದಯಾಘಾತ ► ಯಡಿಯೂರಪ್ಪರ ಅಭಿಮಾನಿಗಳನ್ನು ಬೇಸ್ತು ಬೀಳಿಸಿದ ಸುಳ್ಳು ಸುದ್ದಿ Read More »

ಕರ್ನಾಟಕ

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ವಿಜಯದ ನಗೆ ಬೀರುತ್ತಿದ್ದಂತೆ ರಾಷ್ಟ್ರದಾದ್ಯಂತ ಬಿಜೆಪಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಕಡಬ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಮಿತಿಯ ಸದಸ್ಯರಾದ ಕೃಷ್ಣ ಶೆಟ್ಟಿ, ಮಾಜಿ‌ ಅಧ್ಯಕ್ಷರಾದ ಸತೀಶ್ ನಾಯ್ಕ್, ಎಪಿಎಂಸಿ ಸದಸ್ಯರಾದ ಪುಲಸ್ತ್ಯಾ ರೈ, ಮೇದಪ್ಪ ಗೌಡ ಡೆಪ್ಪುಣಿ, ಹಿಂದೂ ಮುಖಂಡ ರವಿರಾಜ್ ಶೆಟ್ಟಿ,

ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ► ಕಡಬದಲ್ಲಿ ಬಿಜೆಪಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ Read More »

ಕರಾವಳಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.18. ವಿಟ್ಲ ಪರಿಸರದಲ್ಲಿ ಕಳ್ಳರ ಕಾಟ ಕಳೆದ ಕೆಲವು ದಿನಗಳಿಂದ ಹೆಚ್ಚಾಗುತ್ತಿದ್ದು, ಯಾರೂ ಇಲ್ಲದ ವೇಳೆ ಮನೆಯೊಂದರ ಒಳನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸ್ವತ್ತುಗಳನ್ನು ಎಗರಿಸಿದ ಘಟನೆ ಸೋಮವಾರದಂದು ಬೆಳಕಿಗೆ ಬಂದಿದೆ. ಇಲ್ಲಿನ ಕೇಪು ಗ್ರಾಮದ ಕುಕ್ಕೆಬೆಟ್ಟು ನಿವಾಸಿ ಕೆ.ಪಿ ಸುಲೈಮಾನ್ ಎಂಬವರ ಮನೆಯ ಮುಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ಮನೆಯ ನಾಲ್ಕು ಕೋಣೆಯ ಕಪಾಟ್ ಗಳಲ್ಲಿ ಸ್ವತ್ತಿಗಾಗಿ ಜಾಲಾಡಿದ್ದಾರೆ. ನಂತರ ವಿದೇಶಿಯ ವಸ್ತುಗಳಾದ 10 ಹಾಲಿನ ಹುಡಿ

ವಿಟ್ಲ ಪರಿಸರದಲ್ಲಿ ಮುಂದುವರಿದ ಕಳ್ಳರ ಕಾಟ ► ಮನೆಯ ಮುಂಭಾಗದ ಬೀಗ ಮುರಿದು ಕಳ್ಳತನ Read More »

ಕರಾವಳಿ

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಡಿ ಇಡುತ್ತಿದ್ದಂತೆಯೇ ರಾಷ್ಟ್ರದಾದ್ಯಂತ ಬಿಜೆಪಿ ಹರ್ಷಾಚರಿಸುತ್ತಿದೆ. ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯಲ್ಲಿ ಬಿಜೆಪಿಯು 100 ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆಯೇ ದೇಶದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಸಂಭಮಾಚರಣೆಯಲ್ಲಿ ತೊಡಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ 68 ಸ್ಥಾನಗಳ ಪೈಕಿ 42 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದ್ದು, ಅಧಿಕಾರವನ್ನು ಮರಳಿ ತನ್ನ ತೆಕ್ಕೆಯಲ್ಲಿ ಉಳಿಸಿಕೊಳ್ಳಲಿದೆ.

ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣಾ ಫಲಿತಾಂಶ ► ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯುವತ್ತ ಬಿಜೆಪಿ Read More »

ರಾಷ್ಟ್ರೀಯ ನ್ಯೂಸ್
Scroll to Top