News Kadaba Desk

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ

(ನ್ಯೂಸ್ ಕಡಬ) newskadaba.com ಹಾಸನ, ನ.15. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಪತ್ನಿಯನ್ನು ಕೊಲೆಗೈದು ತನ್ನ ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾಗಿರುವ ಘಟನೆ ಚನ್ನರಾಯಪಟ್ಟಣದ ಗುಣಶೆಟ್ಟಿ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಕೊಲೆಯಾದ ಮಹಿಳೆಯನ್ನು ಚನ್ನರಾಯಪಟ್ಟಣ ನಿವಾಸಿ ಮಂಜೇಗೌಡ ಎಂಬಾತನ ಪತ್ನಿ ಸುಮಾ(29) ಎಂದು ಗುರುತಿಸಲಾಗಿದೆ. ಮಂಜೇಗೌಡ ಹಾಗೂ ಕೊಲೆಯಾಗಿರುವ ಸುಮಾ ಒಂದೇ ಊರಿನವರಾಗಿದ್ದು, 2004ರಲ್ಲಿ ಮದುವೆಯಾಗಿತ್ತು. ನಂತರದ ದಿನಗಳಲ್ಲಿ ಮಂಜೇಗೌಡ ತನ್ನ ಹೆಂಡತಿಯ ಬಗ್ಗೆ ಸಂಶಯ ಪಡುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬದಲ್ಲಿ ಬಿರುಕು ಬಿಟ್ಟಿತ್ತು ಎನ್ನಲಾಗಿದ್ದು, ಬಳಿಕ ಹಿರಿಯರ […]

ಹಾಸನ: ಕೌಟುಂಬಿಕ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯ ► ಇಬ್ಬರು ಮಕ್ಕಳೊಂದಿಗೆ ಪೊಲೀಸರಿಗೆ ಶರಣಾದ ಪತಿ Read More »

ಕರ್ನಾಟಕ

ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಶೃಂಗೇರಿ, ನ.14. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ನಡೆದಿದೆ. ಮೃತರನ್ನು ಕಾರು ಚಾಲಕ ಅಡುಗೆ ವೃತ್ತಿ ಮಾಡುತ್ತಿದ್ದ ಉಳುವೆ ನಿವಾಸಿ ಸತ್ಯನಾರಾಯಣ(64) ಎಂದು ಗುರುತಿಸಲಾಗಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸತ್ಯನಾರಾಯಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿಬೈದೆತಿಯ ಪುತ್ತಳಿಯ ಸಮೀಪ ಕುಳಿತು ಅಶ್ಲೀಲವಾಗಿ ಫೊಟೊ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣದ ಆರೋಪಿಗೆ ಪುತ್ತೂರು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯ ಮಂಗಳವಾರದಂದು ಜಾಮೀನು ಮಂಜೂರು ಮಾಡಿದೆ. ಪ್ರಕರಣದ‌ ಆರೋಪಿ ಈಶ್ವರ ಮಂಗಲ ನಿವಾಸಿ ಮಹಮ್ಮದ್ ಎಂಬವರ ಪುತ್ರ ಹನೀಫ್ ವಿರುದ್ಧ ಸಂಪ್ಯ ಠಾಣೆಯಲ್ಲಿ ಜಾಮೀನು ರಹಿತ ದೂರು ದಾಖಲಾಗಿತ್ತು. ಅರೋಪಿ ಪರವಾಗಿ ವಕೀಲರಾದ ಅಶ್ರಫ್

ದೇಯಿಬೈದೇತಿಗೆ ಅವಮಾನ ಪ್ರಕರಣ ► ಆರೋಪಿಗೆ ಜಾಮೀನು ಮಂಜೂರು Read More »

ಕರಾವಳಿ

ನೆಟ್ಟಣ: ರೈಲ್ವೇ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಕಡಬ, ನ.13. ಇಲ್ಲಿನ ಸುಬ್ರಹ್ಮಣ್ಯ ರೋಡ್ ರೈಲ್ವೇ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸೋಮವಾರ ಸಂಜೆ ಬೆಳಕಿಗೆ ಬಂದಿದೆ. ಮೃತನನ್ನು ಮಧ್ಯಪ್ರದೇಶದ ಜಬಲ್ಪುರದ ಬರ್ಗಿ ತಾಲೂಕು ನಿವಾಸಿ ಸುನಿಲ್ ಭುವಿಯಾ(26) ಎಂದು ಗುರುತಿಸಲಾಗಿದೆ. ಈತ ತನ್ನ ಸಂಗಡಿಗರೊಂದಿಗೆ ರೈಲ್ವೇ ಕಾಮಗಾರಿಗೆಂದು ಬಂದಿದ್ದು, ಭಾನುವಾರ ಸಂಜೆ ಮದ್ಯಪಾನ ಮಾಡಲೆಂದು ತೆರಳಿದ್ದು, ಹಿಂತಿರುಗಿ ಬಂದಿಲ್ಲವೆನ್ನಲಾಗಿದೆ. ಸೋಮವಾರದಂದು ಈತನನ್ನು ಹುಡುಕಾಡಿದಾಗ ರೈಲ್ವೇ ಮೇಲ್ಸೇತುವೆಯ ಕೆಳಗಿನ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕುಡಿತದ ಅಮಲಿನಲ್ಲಿ ಕೆಳಗಡೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು,

ನೆಟ್ಟಣ: ರೈಲ್ವೇ ಮೇಲ್ಸೇತುವೆಯಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.13. ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಬೇರಿಕೆ ಕೊಪ್ಪ ನಿವಾಸಿ ಹೊನ್ನಮ್ಮ(59) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಿಂದ ನಡೆದುಕೊಂಡು ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ

ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು

(ನ್ಯೂಸ್ ಕಡಬ) newskadaba.com ಬೆಳಗಾವಿ ನ.13. ಇಂದಿನಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕಾಗಿ ಬೆಳಗಾವಿಯ ಸುವರ್ಣಸೌಧ ಸಜ್ಜಾಗಿದೆ. ಈ ಬಾರಿಯ ಅಧಿವೇಶನದಲ್ಲಿ  ಕಾಂಗ್ರೆಸ್‌ ಸರ್ಕಾರದ ಸಾಧನೆ -ವೈಫ‌ಲ್ಯ ಕುರಿತು ಆರೋಪ -ಪ್ರತ್ಯಾರೋಪಗಳ ಸುರಿಮಳೆಯೇ ಹರಿದಾಡುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಕೊನೆಯ ಅಧಿವೇಶನ ಇದಾಗಿದೆ. ಪ್ರತಿಪಕ್ಷಗಳು ವೈಫ‌ಲ್ಯಗಳ ಪಟ್ಟಿಯೊಂದಿಗೆ ಮುಗಿಬೀಳಲು ಸಜ್ಜಾಗಿದ್ದರೆ, ಸಾಧನೆಗಳ ಅಸ್ತ್ರ ಪ್ರಯೋಗಿಸಿ ತಿರುಗೇಟು ನೀಡಲು ಕಾಂಗ್ರೆಸ್‌ ಸಿದ್ಧತೆ ನಡೆಸಿದೆ. ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಜಾರ್ಜ್‌ ರಾಜೀನಾಮೆಗೆ ಒತ್ತಾಯಿಸಿ ಅಧಿವೇಶನದಲ್ಲಿ ಹೋರಾಟ

ಇಂದಿನಿಂದ ಸಿದ್ದರಾಮಯ್ಯ ನೇತೃತ್ವದ ಕೊನೆಯ ಚಳಿಗಾಲದ ಅಧಿವೇಶನ ► ಅಧಿವೇಶನಕ್ಕೆ ಕುಂದಾನಗರಿಯ ಸುವರ್ಣ ಸೌಧ ಸಜ್ಜು Read More »

ಕರ್ನಾಟಕ

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಉಡುಪಿ, ನ.12. ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟನಾಗಿದ್ದಾನೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳೀನ್ ಕುಮಾರ್ ಕಟೀಲ್ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಅವರು ಉಡುಪಿಯ ಕಾಪು ಪೇಟೆಯಲ್ಲಿ ಭಾನುವಾರ ನಡೆದ ಪರಿವರ್ತನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡರು. ರಾವಣ ಸೀತೆಯ ಅಪಹರಣ ಮಾತ್ರ ಮಾಡಿದ್ದ ಆದರೆ ಸಿದ್ದರಾಮಯ್ಯ ಹಿಂದೂ ಸಮಾಜ ಒಡೆದು ಗೋ ಹತ್ಯೆಗೆ ಬೆಂಬಲವಾಗಿ ನಿಲ್ಲುತ್ತಿದ್ದಾನೆ. ಹಿಂದೂ ಸಂಸ್ಕೃತಿ ನಾಶ ಮಾಡಲು ಸಿದ್ದರಾಮಯ್ಯ ಹೊರಟಿದ್ದು, ರೈತರ ಆತ್ಮಹತ್ಯೆಗೆ ಕಾರಣವಾಗುತ್ತಿದ್ದಾನೆ  ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿದ್ದರಾಮಯ್ಯನ ಅಧಿಕಾರ

ಸಿದ್ದರಾಮಯ್ಯ ರಾವಣನಿಗಿಂತಲೂ ದುಷ್ಟ ► ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರ್ನಾಟಕ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ

(ನ್ಯೂಸ್ ಕಡಬ) newskadaba.com ಕಡಬ, ನ.12. ತಾಲೂಕು ಕೇಂದ್ರವಾಗಿ ಘೋಷಣೆಯಾಗಿರುವ ಕಡಬದಲ್ಲಿ ದಿನೇ ದಿನೇ ಜನ ಸಂಚಾರ ಹೆಚ್ಚಾಗುತ್ತಿದ್ದು, ಪ್ರಸ್ತಾವಿತ ಸುಮಾರು 35 ಗ್ರಾಮಗಳಿಂದ ಕಛೇರಿ ಕೆಲಸಗಳಿಗಾಗಿ ಕಡಬಕ್ಕೆ ಬರುವುದು ಅನಿವಾರ್ಯ. ಕಡಬ ಪೇಟೆಯಿಂದ ಕೇವಲ ಮೂರು ಕಿಮೀ ದೂರದಲ್ಲಿರುವ ಕಾಯರಡ್ಕದಿಂದ ಪೇರಡ್ಕದ ವರೆಗಿನ ಎರಡು ಕಿಮೀ ರಸ್ತೆಯು ಇಲ್ಲಿನ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಜಾಣ ಕುರುಡುತನದಿಂದಾಗಿ ಸಂಚಾರಕ್ಕೆ ಅಯೋಗ್ಯವಾದ ಸ್ಥಿತಿಯಲ್ಲಿದೆ. ಈ ರಸ್ತೆಯು ಕಡಬದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ ರಸ್ತೆಗೆ ಸಂಪರ್ಕ ಕಲ್ಪಿಸುತ್ತಿದ್ದು, ಈ ರಸ್ತೆಯ ಮೂಲಕ

ಸಂಚಾರಕ್ಕೆ ಅಯೋಗ್ಯವಾಗಿರುವ ಕಾಯರಡ್ಕ – ಪೇರಡ್ಕ ರಸ್ತೆ ► ಶೀಘ್ರದಲ್ಲೇ ಆಗಬೇಕಿದೆ ರಸ್ತೆಗೆ ಡಾಮರೀಕರಣ Read More »

ಕರಾವಳಿ

ಒಂಟಿ ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣ ದೋಚುವ ತಂಡ ► ಮೂವರು ಆರೋಪಿಗಳು ಮಂಗಳೂರು ಪೊಲೀಸರ ಬಲೆಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12. ನಗರದಲ್ಲಿ ಒಂದೆರಡು ವರ್ಷಗಳಿಂದ ಜನರಹಿತ ಪ್ರದೇಶಗಳಲ್ಲಿ ನಡೆದುಕೊಂಡು ಹೋಗುವ ಒಂಟಿ ಮಹಿಳೆಯರ ಸರಗಳ್ಳತನ ಮಾಡುತ್ತಿದ್ದ ಮೂವರು ಯುವಕರನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದ ದಳದ ಪೊಲೀಸ್ ತಂಡ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಆಕಾಶಭವನ ನಿವಾಸಿ ಅಲ್ವಿನ್, ಅಶೋಕ ನಗರ ನಿವಾಸಿ ಮನೀಷ್, ದೇರಳಕಟ್ಟೆ ನಿವಾಸಿ ಅಶ್ವಿನ್ ಎಂದು ಗುರುತಿಸಲಾಗಿದೆ. ಇವರು ಜನ/ವಸತಿ ರಹಿತ ಪ್ರದೇಶಗಳಲ್ಲಿ ನಡೆದುಕೊಂಡು ಹೋಗುವ ಒಂಟಿ ಮಹಿಳೆಯರನ್ನು ಕೇಂದ್ರವಾಗಿರಿಸಿಕೊಂಡು, ಮೋಟಾರ್‌ ಸೈಕಲ್‌ಗಳಲ್ಲಿ ದಾರಿ

ಒಂಟಿ ಮಹಿಳೆಯರ ಕುತ್ತಿಗೆಯಿಂದ ಚಿನ್ನಾಭರಣ ದೋಚುವ ತಂಡ ► ಮೂವರು ಆರೋಪಿಗಳು ಮಂಗಳೂರು ಪೊಲೀಸರ ಬಲೆಗೆ Read More »

ಕರಾವಳಿ

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.12.‌ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯರವರು ಭಾನುವಾರದಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕರಾವಳಿಗೆ ಆಗಮಿಸಲಿದ್ದಾರೆ. ಇಂದು ಸಂಜೆ 5.15 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಬೆಳ್ತಂಗಡಿಗೆ ತೆರಳಿ ಖಾಸಗಿ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ರಾತ್ರಿ 9.20 ಕ್ಕೆ ಬಜ್ಪೆ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿಗೆ Read More »

ಕರ್ನಾಟಕ
Scroll to Top