News Kadaba Desk

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿಯೊಬ್ಬನ ಮನೆಗೆ ಪೊಲೀಸರು ಇತ್ತೀಚೆಗೆ ನಡೆಸಿದ ದಾಳಿಯ ಕುರಿತಂತೆ ವರದಿ ಮಾಡಿದ ಆರೋಪದಲ್ಲಿ ‘ವಾರ್ತಾಭಾರತಿ’ಯ ಬಂಟ್ವಾಳ ತಾಲೂಕಿನ ಮುಖ್ಯ ವರದಿಗಾರನನ್ನು ಯಾವುದೇ ನೋಟಿಸ್ ನೀಡದೆ ಬಂಟ್ವಾಳ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದು, ಪೊಲೀಸರ ಈ ಕ್ರಮದ ವಿರುದ್ಧ ನಾಡಿನ ವಿವಿಧ ಮುಖಂಡರು, ರಾಜಕೀಯ ನಾಯಕರು ತಮ್ಮ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ನೋಟಿಸನ್ನೂ ನೀಡದೆ ಪೊಲೀಸರು ಪತ್ರಕರ್ತನನ್ನು ಬಂಧಿಸಿದ್ದು, ಇದು ದ.ಕ. […]

‘ವಾರ್ತಾಭಾರತಿ’ ವರದಿಗಾರನ ಬಂಧನ ► ರಾಜಕೀಯ‌ ನೇತಾರರು, ವಿವಿಧ ಸಂಘಟನೆಗಳಿಂದ ವ್ಯಾಪಕ ಆಕ್ರೋಶ Read More »

ಕರಾವಳಿ

ಕಡಬ ಸಹಿತ 49 ಹೊಸ ತಾಲೂಕುಗಳಿಗೆ ಸಂಪುಟ ಅನುಮೋದನೆ ► 2018 ಜನವರಿ 01ರಿಂದ ಅಸ್ತಿತ್ವಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 08. ರಾಜ್ಯ ಸರ್ಕಾರ ಘೋಷಿಸಿರುವ 49 ಹೊಸ ತಾಲೂಕುಗಳು 2018ರ ಜನವರಿ ಒಂದರಿಂದ ಅಸ್ತಿತ್ವಕ್ಕೆ ಬರಲಿದ್ದು, ಈ ಸಂಬಂಧ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ. ಆರ್ಥಿಕ ಇಲಾಖೆಯ ಅನುಮೋದನೆ ಪಡೆದು ಹೊಸ ತಾಲ್ಲೂಕುಗಳಿಗೆ ತಹಶೀಲ್ದಾರ್ ಕಚೇರಿ ಮತ್ತು ಬೇರೆ ಬೇರೆ ಇಲಾಖೆಗಳ ತಾಲ್ಲೂಕು ಮಟ್ಟದ ಕಚೇರಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ತಾಲ್ಲೂಕು ಪುನರ್ ರಚನೆ ಸಂಬಂಧ 1973ರಲ್ಲಿ ವಾಸುದೇವ ರಾವ್ ಆಯೋಗ, 84ರಲ್ಲಿ ಟಿ.ಎಂ. ಹುಂಡೇಕರ್, 86ರಲ್ಲಿ ಪಿ.ಸಿ. ಗದ್ದಿಗೌಡರ್,

ಕಡಬ ಸಹಿತ 49 ಹೊಸ ತಾಲೂಕುಗಳಿಗೆ ಸಂಪುಟ ಅನುಮೋದನೆ ► 2018 ಜನವರಿ 01ರಿಂದ ಅಸ್ತಿತ್ವಕ್ಕೆ Read More »

ಕರ್ನಾಟಕ

ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.08. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 34ನೇ ನೆಕ್ಕಿಲಾಡಿ ಸಮೀಪ ಮಾರುತಿ ಎಸ್ ಕ್ರಾಸ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಿನಿಮೀಯ ಶೈಲಿಯಲ್ಲಿ ಮುಖ್ಯ ರಸ್ತೆಯಿಂದ ಕೆಳಗಿನ ರಸ್ತೆಗೆ ಇಳಿದ ದೃಶ್ಯ ಗುರುವಾರ ಸಂಜೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಸುತ್ತಿದ್ದರು. ಚಾಲಕ ಸೀಟ್ ಬೆಲ್ಟ್ ಧರಿಸಿದ್ದ ಕಾರಣದಿಂದ ಕಾರನ್ನು ಹತೋಟಿಗೆ ತರಲು ಸಾಧ್ಯವಾಯಿತೆನ್ನಲಾಗಿದೆ. ಕಾರು ಕೆಳಗಿನ ರಸ್ತೆಗೆ ಬಂದು ನಿಲ್ಲುವ

ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Read More »

ಕರಾವಳಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವಮೋರ್ಚಾ ವತಿಯಿಂದ ನಡೆದ‌ ಮಂಗಳೂರು ಚಲೋ ಕಾರ್ಯಕ್ರಮವನ್ನು ನಗರದ ನೆಹರೂ ಮೈದಾನದಲ್ಲಿ ಮಾಡುವ ಬದಲು ಜ್ಯೋತಿ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಮಾವೇಶ ಮಾಡಿ ಕಾನೂನನ್ನು ಉಲ್ಲಂಘಿಸಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ 50 ಮಂದಿಯ ವಿರುದ್ಧ ಬಂದರ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ಯುವಮೋರ್ಚಾ ಸಮಾವೇಶಕ್ಕೆ ಪೊಲೀಸರು ನೆಹರು ಮೈದಾನದಲ್ಲಿ ಮಾತ್ರ ಅನುಮತಿ ನೀಡಿದ್ದು, ಆದರೆ ಬಿಜೆಪಿಯ ನಾಯಕರು, ಕಾರ್ಯಕರ್ತರು ಈ ಆದೇಶವನ್ನು ಉಲ್ಲಂಘಿಸಿ

ಕಾನೂನು ಉಲ್ಲಂಘಿಸಿ ಜ್ಯೋತಿ ವೃತ್ತದಲ್ಲಿ ಸಮಾವೇಶ ► ಯಡಿಯೂರಪ್ಪ ಸೇರಿ 50 ಮಂದಿಯ ವಿರುದ್ಧ ಕೇಸು ದಾಖಲು Read More »

ಕರಾವಳಿ

ಪೊಲೀಸ್ ಅಧಿಕಾರಿಯನ್ನು ನಿಂದಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ► ಸಾರ್ವಜನಿಕವಾಗಿ ಅಬ್ಬರಿಸಿದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಬಿಜೆಪಿ ಯುವ ಮೋರ್ಛಾ ನೇತೃತ್ವದಲ್ಲಿ ಇಂದು ಮಂಗಳೂರಿನಲ್ಲಿ ನಡೆದ ರ್ಯಾಲಿ, ಪ್ರತಿಭಟನೆಗೆ ಸಂಬಂಧಿಸಿ ಪೊಲೀಸ್ ಅಧಿಕಾರಿಯೋರ್ವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಬೆದರಿಕೆ ಹಾಕಿರುವ ವೀಡಿಯೋ ಇದೀಗ ವೈರಲ್ ಆಗಿದೆ. ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ಪೊಲೀಸ್ ಅಧಿಕಾರಿಯ ಫೋನ್ ಕಿತ್ತುಕೊಳ್ಳಲು ಯತ್ನಿಸಿದ್ದಲ್ಲದೆ ಸಾರ್ವಜನಿಕರ ಎದುರಲ್ಲೇ ಏಕವಚನದಲ್ಲಿ ಅಧಿಕಾರಿಗೆ ಬೆದರಿಕೆ ಹಾಕುತ್ತಿರುವುದು ಕಾಣಬಹುದಾಗಿದೆ.

ಪೊಲೀಸ್ ಅಧಿಕಾರಿಯನ್ನು ನಿಂದಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ► ಸಾರ್ವಜನಿಕವಾಗಿ ಅಬ್ಬರಿಸಿದ ವೀಡಿಯೋ ವೈರಲ್ Read More »

ಕರಾವಳಿ

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ರವರನ್ನು ಭೀಕರವಾಗಿ ಕೊಲೆ ಮಾಡಿರುವಂತಹ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಕಡಬ ತಹಶಿಲ್ದಾರರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.   ದಿಟ್ಟ ಪತ್ರಕರ್ತೆಯಾಗಿ ಗುರುತಿಸಿಕೊಂಡಿದ್ದ ಗೌರಿ ಲಂಕೇಶ್ ರವರನ್ನು ಗುಂಡು ಹಾರಿಸಿ ಭೀಕರವಾಗಿ ಕೊಲೆಗೈದ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯದಲ್ಲಿ ಪತ್ರಕರ್ತರ ಮೇಲೆ ನಿರಂತರ ಹಲ್ಲೆಗಳಾಗುತ್ತಿರುವುದನ್ನು ತಡೆಯಲು ಸೂಕ್ತ ಕ್ರಮಗಳನ್ನು

ಗೌರಿ ಲಂಕೇಶ್ ಕೊಲೆ ಆರೋಪಿಗಳ ಶೀಘ್ರ ಪತ್ತೆಗೆ ಆಗ್ರಹ ► ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಮನವಿ Read More »

ಕರಾವಳಿ

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಸೆ.06. ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ನಡೆಯಲಿರುವುದರಿಂದ ಆಲಂಕಾರು, ಕಡಬ, ಸುಬ್ರಹ್ಮಣ್ಯ, ಗುಂಡ್ಯ, ನೆಲ್ಯಾಡಿ ಪರಿಸರದಲ್ಲಿ ಸೆಪ್ಟೆಂಬರ್ 07 ಗುರುವಾರದಂದು ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 07 ಗುರುವಾರದಂದು ► ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಗುಂಡ್ಯ ಪರಿಸರದಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಕಡಬ,‌ ಸೆ.06. ಕಾಡು ಬಿಟ್ಟು ನಾಡಿಗೆ ಬಂದು ಉರುಳಿಗೆ ಸಿಲುಕಿದ್ದ ಚಿರತೆಯನ್ನು ಯಶಸ್ವಿ ಕಾರ್ಯಾಚರಣೆಯ ಮೂಲಕ ವಾಪಾಸ್ ಕಾಡಿಗೆ ಬಿಡಲಾಯಿತು. ಪುತ್ತೂರು ತಾಲೂಕಿನ ಮರ್ಧಾಳದ ಬಂಟ್ರ ಗ್ರಾಮದ ಮುಂಡ್ರಾಡಿ ನಿವಾಸಿ ಶ್ರೀನಿವಾಸ್ ರೈ ಎಂಬವರ ಜಮೀನಿನಲ್ಲಿ ಯಾರೋ ಅಪರಿಚಿತರು ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿರುವುದು ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿತ್ತು. ವಿಷಯ ತಿಳಿದ ಅರಣ್ಯ ಅಧಿಕಾರಿಗಳು ಮಂಗಳೂರಿನ ಪಿಲಿಕುಳ ನಿಸರ್ಗಧಾಮದ ಅರಿವಳಿಕೆ ತಜ್ಞರನ್ನು ಸ್ಥಳಕ್ಕೆ ಕರೆಸಿ ಮೂರು ಸುತ್ತಿನ ಚುಚ್ಚುಮದ್ದು ನೀಡಿ

ಮರ್ಧಾಳ: ನಾಡಿಗೆ ಬಂದ ಚಿರತೆ ಮರಳಿ ಕಾಡಿಗೆ ► ಅರಣ್ಯ ಅಧಿಕಾರಿಗಳಿಂದ ಯಶಸ್ವಿ ಕಾರ್ಯಾಚರಣೆ Read More »

ಕರಾವಳಿ

ಕಡಬ: ಉರುಳಿಗೆ ಬಿದ್ದ ಚಿರತೆ* *► ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ಮುಂಡ್ರಾಡಿ ಶ್ರೀನಿವಾಸ ರೈ ಎಂಬವರ ಜಾಗದಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಬುಧವಾರದಂದು ನಡೆದಿದೆ. ವಿಷಯ ತಿಳಿದ ಊರವರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು ಅರಿವಳಿಕೆ ತಜ್ಞರಿಗೆ ಮಾಹಿತಿ ನೀಡಿದ್ದು, ಪಿಲಿಕುಳದಿಂದ ತಜ್ಞರು ಆಗಮಿಸುತ್ತಿದ್ದಾರೆ.

ಕಡಬ: ಉರುಳಿಗೆ ಬಿದ್ದ ಚಿರತೆ* *► ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖಾಧಿಕಾರಿಗಳು Read More »

ಕರಾವಳಿ

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.06. ಕಲಿತರೂ ಕೆಲಸ ಸಿಕ್ಕಿಲ್ಲವೆಂದು ಮನನೊಂದ ಯುವತಿಯೋರ್ವಳು ನದಿಯಲ್ಲಿ ಮುಳುಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿ ಶ್ರೀ ಸಹಸ್ರ ಲಿಂಗೇಶ್ವರ ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗೆ ಇಳಿದ ಯುವತಿಯು ಮುಳುಗಲು ಸಿದ್ಧವಾಗುತ್ತಿರುವುದನ್ನು ಕಂಡು ತಕ್ಷಣವೇ ಕಾರ್ಯಪ್ರವೃತರಾದ ಜೀವರಕ್ಷಕ ವೃತ್ತಿಯ ಚೆನ್ನಪ್ಪರು ಯುವತಿಯನ್ನು ರಕ್ಷಿಸಿ ವಿಚಾರಿಸಿದಾಗ ಕಲಿತರೂ ಉದ್ಯೋಗ ಸಿಗಲಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಆ ಬಳಿಕ ಯುವತಿಗೆ ಬುದ್ದಿ ಹೇಳಿ ಕಳುಹಿಸಿಕೊಡಲಾಯಿತೆಂದು

ಉಪ್ಪಿನಂಗಡಿ: ಕಲಿತರೂ ಕೆಲಸ ಸಿಗಲಿಲ್ಲವೆಂಬ ಚಿಂತೆ ► ಯುವತಿಯಿಂದ ನೇತ್ರಾವತಿ ನದಿಯಲ್ಲಿ ಮುಳುಗಿ ಆತ್ಮಹತ್ಯೆ ಯತ್ನ Read More »

ಕರಾವಳಿ
Scroll to Top