News Kadaba Desk

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಲಂಡನ್,ಜೂ.4. ಚೂರಿಗಳನ್ನು ಝಳಪಿಸುತ್ತಿದ್ದ, ನಕಲಿ ಆತ್ಮಹತ್ಯಾ ಜಾಕೆಟ್‌ಗಳನ್ನು ಧರಿಸಿದ್ದ ಮೂವರು ಭಯೋತ್ಪಾದಕರು ಶನಿವಾರ ರಾತ್ರಿ ಮಧ್ಯ ಲಂಡನ್‌ನಲ್ಲಿ ಮಾರಣಹೋಮ ನಡೆಸಿದ್ದಾರೆ. ರಾತ್ರಿ 10 ಗಂಟೆಗೆ(ಭಾರತೀಯ ಕಾಲಮಾನ ಸೋಮವಾರ ನಸುಕಿನ 2:30 ಗಂಟೆ) ಲಂಡನ್ನಿನ ಹೆಗ್ಗುರುತು ಲಂಡನ್ ಬ್ರಿಡ್ಜ್‌ನಲ್ಲಿ ಅತಿವೇಗದಿಂದ ಚಲಿಸುತ್ತಿದ್ದ ಬಿಳಿಯ ಬಣ್ಣದ ವ್ಯಾನ್‌ನಲ್ಲಿದ್ದ ಈ ರಾಕ್ಷಸರು ಪಾದಚಾರಿ ಗಳ ಮೇಲೆ ವಾಹನವನ್ನು ನುಗ್ಗಿಸಿದ ಬಳಿಕ ಸಮೀಪದ ಮಾರುಕಟ್ಟೆ ಪ್ರದೇಶದಲ್ಲಿದ್ದ ಜನರನ್ನು ಚೂರಿಗಳಿಂದ ಮನಬಂದಂತೆ ಇರಿದಿದ್ದಾರೆ. ಈ ದಾಳಿಯಲ್ಲಿ ಏಳು ಜನರು ಸಾವನ್ನಪ್ಪಿದ್ದು, […]

ಲಂಡನ್: ಭಯೋತ್ಪಾದಕ ದಾಳಿಗೆ ಏಳು ಬಲಿ, 48 ಜನರಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ

(ನ್ಯೂಸ್ ಕಡಬ) newskadaba.com ಮಾಲ್ಡಾ, ಜೂ.4. ನೂತನ 2 ಸಾವಿರ ರೂ. ಮುಖಬೆಲೆಯ 4,98,000 ನಕಲಿ ನೋಟುಗಳನ್ನು ಗಡಿಭದ್ರತಾ ಪಡೆ ವಶಪಡಿಸಿಕೊಂಡಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ ಭಾರತ-ಬಾಂಗ್ಲಾ ಗಡಿಪ್ರದೇಶದಿಂದ ಈ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಯ ವೇಳೆ ಕತ್ತಲಾಗಿದ್ದರಿಂದ ದಂಧೆಕೋರರು ಪರಾರಿಯಾಗಿದ್ದಾರೆ. ವಶಪಡಿಸಿಕೊಂಡಿರುವ ನೋಟುಗಳನ್ನು ಕಲಿಯಾಚಕ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ Read More »

ರಾಷ್ಟ್ರೀಯ ನ್ಯೂಸ್

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್
Scroll to Top