News Kadaba Desk

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ

(ನ್ಯೂಸ್ ಕಡಬ) newskadaba.com ಲಂಡನ್, ಜೂ. 4. ಬ್ರಿಟಿಶ್ ಪ್ರಧಾನಿ ತೆರೇಸಾ ಮೇ ತನ್ನ ಗಂಡ ಫಿಲಿಪ್ ಜೊತೆಗೆ ಶನಿವಾರ ವಾಯುವ್ಯ ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿದರು. ಬ್ರಿಟನ್ ಸಂಸತ್ತಿಗೆ ಜೂನ್ 8ರಂದು ಚುನಾವಣೆ ನಡೆಯಲಿದ್ದು, ಅದಕ್ಕಿಂತ ದಿನಗಳ ಮುಂಚೆ ತೆರೇಸಾ ಭೇಟಿ ನೀಡಿದ್ದಾರೆ. ಲಂಡನ್‌ನಲ್ಲಿರುವ ಸ್ವಾಮಿನಾರಾಯಣ ದೇವಸ್ಥಾನವು ಭಾರತದ ಹೊರಗಿನ ಅತ್ಯಂತ ದೊಡ್ಡ ಹಿಂದೂ ದೇವಾಲಯವಾಗಿದೆ. ದೇವಾಲಯಕ್ಕೆ ಭೇಟಿ ನೀಡಿದ 60 ವರ್ಷದ ಪ್ರಧಾನಿ, ಭಗವಾನ್ ಸ್ವಾಮಿನಾರಾಯಣನಿಗೆ ಪುಷ್ಪ ದಳಗಳನ್ನು ಅರ್ಪಿಸಿದರು ಎಂದು ದೇವಸ್ಥಾನದ ವಕ್ತಾರರೋರ್ವರು […]

ಸ್ವಾಮಿ ನಾರಾಯಣ ದೇವಸ್ಥಾನಕ್ಕೆ ಬ್ರಿಟನ್ ಪ್ರಧಾನಿ ಭೇಟಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ

(ನ್ಯೂಸ್ ಕಡಬ) newskadaba.com ಮಾಲ್ಡಾ, ಜೂ.4. ನೂತನ 2 ಸಾವಿರ ರೂ. ಮುಖಬೆಲೆಯ 4,98,000 ನಕಲಿ ನೋಟುಗಳನ್ನು ಗಡಿಭದ್ರತಾ ಪಡೆ ವಶಪಡಿಸಿಕೊಂಡಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಬಿಎಸ್ ಎಫ್ ಭಾರತ-ಬಾಂಗ್ಲಾ ಗಡಿಪ್ರದೇಶದಿಂದ ಈ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಕಾರ್ಯಾಚರಣೆಯ ವೇಳೆ ಕತ್ತಲಾಗಿದ್ದರಿಂದ ದಂಧೆಕೋರರು ಪರಾರಿಯಾಗಿದ್ದಾರೆ. ವಶಪಡಿಸಿಕೊಂಡಿರುವ ನೋಟುಗಳನ್ನು ಕಲಿಯಾಚಕ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಬಿಎಸ್ಎಫ್ ಕಾರ್ಯಾಚರಣೆ: 4 ಲಕ್ಷ ಮುಖಬೆಲೆಯ ನಕಲಿ ನೋಟುಗಳ ವಶ Read More »

ರಾಷ್ಟ್ರೀಯ ನ್ಯೂಸ್

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್
Scroll to Top