News Kadaba Desk

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ನ.06:   ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭಕ್ತರು ದೇವಾಲಯದ ಅತಿಥಿ ಗೃಹದಲ್ಲಿ ಕೊಠಡಿ ಕಾಯ್ದಿರಿಸಲು ಬಳಸುವ ಅಧಿಕೃತ ವೆಬ್‌ಸೈಟ್‌ಗೆ ಹೋಲಿಕೆಯ ನಕಲಿ ಸೈಟ್ ತೆರೆಯಲ್ಪಟ್ಟಿದ್ದು, ಮುಂಗಡ ಬುಕಿಂಗ್ ಹೆಸರಿನಲ್ಲಿ ಹಣ ಕಸಿಕೊಳ್ಳಲಾಗುತ್ತಿದೆ. “ಕರ್ನಾಟಕ ಟೆಂಪಲ್ ಅಕಮಡೇಶನ್” ಎಂಬ ಹೆಸರಿನಲ್ಲಿ ಸೈಬರ್ ಅಪರಾಧಿಗಳು ನಕಲಿ ವೆಬ್‌ಸೈಟ್ ನಿರ್ಮಿಸಿದ್ದು, ಅದರಲ್ಲಿ QR […]

ಉಡುಪಿ : ಕೊಲ್ಲೂರು ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸಾವಿರಾರು ರೂ. ವಂಚನೆ Read More »

ಕರಾವಳಿ

ಬೆಳ್ಳಾರೆ ಸಮೀಪದ ಹುಡುಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.06 ಸುಳ್ಯ: ಬೆಳ್ಳಾರೆ ಸಮೀಪದ ಪೆರುವಾಜೆ ಎಂಬಲ್ಲಿ 17 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನ. 5ರಂದು ರಾತ್ರಿ ವರದಿಯಾಗಿದೆ. ಈತನು ಬೆಳ್ಳಾರೆಯ ದೀಪಕ್ ಕೋಲ್ಡ್ ಹೌಸ್ ನಲ್ಲಿ ಕೆಲಸಕ್ಕಿದ್ದನು..ಈ ಹುಡುಗನನ್ನು ಗಗನ್ ಎಂದು ಗುರುತಿಸಲಾಗಿದೆ, ಪೆರುವಾಜೆಯಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. . ಮೂಲತಃ ಕಳೆಂಜದವರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.  

ಬೆಳ್ಳಾರೆ ಸಮೀಪದ ಹುಡುಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.06:   ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ಆದೇಶಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾ.ನಾಗಪ್ರಸನ್ನ ಅವರ ನೀಡಿದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಕೆ ಮಾಡಿತ್ತು. ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ.ಎಸ್.​ಜಿ.ಪಂಡಿತ್​ ಹಾಗೂ ನ್ಯಾ.ಗೀತಾ ಕೆ.ಬಿ ಅವರ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ತಡೆಯಾಜ್ಞೆ ತೆರವಿಗೆ ಏಕಸದಸ್ಯ ಪೀಠದಲ್ಲಿ ಮನವಿ ಸಲ್ಲಿಸಲು ವಿಭಾಗೀಯ ಪೀಠ ಅವಕಾಶ

ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ Read More »

ಕರ್ನಾಟಕ

ಬರೋಬ್ಬರಿ 150 ಕಡೆ ಕಳ್ಳತನ, ಐದು ಜಿಲ್ಲೆ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳತನ ಬಂಧನ

(ನ್ಯೂಸ್‌ ಕಡಬ) newskadaba.com,  ನ.06:   ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾವೇರಿ, ದಾವಣಗೆರೆ ಜಿಲ್ಲೆಗಳ ಪೊಲೀಸರಿಗೆ ತಲೆನೋವಾಗಿದ್ದ ಕುಖ್ಯಾತ ನಟೋರಿಯಸ್ ಕಳ್ಳನನ್ನ ವಿದ್ಯಾರಣ್ಯಪುರ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸೈಯ್ಯದ್ ಅಸ್ಲಾಂ ಪಾಷಾ, ಬಂಧಿತ ಆರೋಪಿ. ಇದುವರೆಗೂ ಕಳ್ಳತನದ ಕೆರಿಯರ್‌ನಲ್ಲಿ 150 ಕಳ್ಳತನ ಕೇಸ್‌ಗಳಲ್ಲಿ ಆರೋಪಿ. ಕಳ್ಳತನದ ತಂತ್ರಗಳು ಕೇಳಿ ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ಹಗಲಲ್ಲಿ ಐಷಾರಾಮಿಗಳ ಮನೆಗಳ ರೆಕ್ಕಿ, ಕತ್ತಲಲ್ಲಿ ಕೈಚಳ: ಆರೋಪಿ ವೃತ್ತಿಪರ ಖತರ್ನಾಕ್ ಕಳ್ಳನಾಗಿದ್ದು ಹಗಲೆಲ್ಲ ಐಷಾರಾಮಿ ಮನೆಗಳನ್ನ ರೆಕ್ಕಿ ಮಾಡುತ್ತಿದ್ದ. ರಾತ್ರಿಯಾಗುತ್ತಿದ್ದಂತೆ ಕೈಚಳಕ ತೋರಿಸುತ್ತಿದ್ದ

ಬರೋಬ್ಬರಿ 150 ಕಡೆ ಕಳ್ಳತನ, ಐದು ಜಿಲ್ಲೆ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕಳ್ಳತನ ಬಂಧನ Read More »

ಕರಾವಳಿ

ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು:  ‘ರಾಜ್ಯದಲ್ಲಿ ಪಂಚ ಗ್ಯಾರಂಟಿಗಳಿಂದ ನಾಲ್ಕು ಜನರ ಕುಟುಂಬ ಕನಿಷ್ಠ ಸರಾಸರಿ ತಿಂಗಳಿಗೆ 10 ಸಾವಿರ ರು. ಪ್ರಯೋಜನ ಪಡೆಯುತ್ತಿದೆ. ತನ್ಮೂಲಕ ಕರ್ನಾಟಕ ಗ್ಯಾರಂಟಿ ಮಾದರಿ ಸಾಮಾಜಿಕ, ಆರ್ಥಿಕ ಕ್ರಾಂತಿಗೆ ಕಾರಣವಾಗಿದ್ದು, ಇದನ್ನು ರಾಷ್ಟ್ರೀಯ ಮಾದರಿಯಾಗಿ ಗುರುತಿಸಿ ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಆರ್ಥಿಕ ಬೆಂಬಲ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಗ್ಯಾರಂಟಿ ಮಾದರಿಯನ್ನು ಗುರುತಿಸಿ ರಾಜ್ಯಗಳಿಗೆ ಹೆಚ್ಚುವರಿ ಹಾಗೂ ನ್ಯಾಯಬದ್ಧ ಆರ್ಥಿಕ ಬೆಂಬಲ

ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ

(ನ್ಯೂಸ್‌ ಕಡಬ) newskadaba.com,  ನ.05:  ಫಿಲಿಪೈನ್ಸ್‌ನಲ್ಲಿ ಈ ವರ್ಷ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪದಲ್ಲಿ ಕಲೇಗಿ ಚಂಡಮಾರುತವು ಮಧ್ಯ ಪ್ರಾಂತ್ಯಗಳಲ್ಲಿ ಕನಿಷ್ಠ 241 ಜನರನ್ನು ಬಲಿ ತೆಗೆದುಕೊಂಡು ಕಾಣೆಯಾಗಿದೆ.ಇದರ ನಡುವೆ ಫಿಲಿಪೈನ್‌್ಸನ ಅಧ್ಯಕ್ಷ ಫರ್ಡಿನಾಂಡ್‌ ಮಾರ್ಕೋಸ್‌‍ ಜೂನಿಯರ್‌ ಇಂದು ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಉಷ್ಣವಲಯದ ಚಂಡಮಾರುತವು ದಕ್ಷಿಣ ಚೀನಾ ಸಮುದ್ರಕ್ಕೆ ಬೀಸುವ ಮೊದಲು ಕಲೇಗಿ ಕನಿಷ್ಠ 114 ಜನರನ್ನು ಬಲಿ ತೆಗೆದುಕೊಂಡಿತು, ಅವರಲ್ಲಿ ಹೆಚ್ಚಿನವರು ಹಠಾತ್‌ ಪ್ರವಾಹದಲ್ಲಿ ಮುಳುಗಿ ಸಾವನ್ನಪ್ಪಿದರು ಮತ್ತು 127

ಫಿಲಿಪೈನ್ಸ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ : ಚಂಡಮಾರುತಕ್ಕೆ 241 ಜನ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು : ಇದುವರೆಗೂ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ನೀಡಲಾಗುತ್ತಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಯೋಜನೆ ರೂಪಿಸಿದೆ. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ.

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..!

(ನ್ಯೂಸ್‌ ಕಡಬ) newskadaba.com,  ನ.05:  ಕೊಪ್ಪ ಪಟ್ಟಣದಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಸೀಜ್ ಮಾಡಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದ್ದು, ಪೊಲೀಸ್ ಇಲಾಖೆಯಲ್ಲೇ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಈ ಆಘಾತಕಾರಿ ಮಾಹಿತಿ ಹೊರಬಂದಿದೆ. ಈ ಕಾರು ಮಾಜಿ ಶಿಕ್ಷಣ ಸಚಿವ ದಿ. ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟದ್ದು. ನೇಪಾಳಿ ಗ್ಯಾಂಗ್ ವಿರುದ್ಧ ನಡೆದ ತನಿಖೆಯಲ್ಲಿ

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.05:  ಮುಂದಿನ ಎರಡು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28° C ಮತ್ತು 20° C ಇರುವ ಸಾಧ್ಯತೆ ಇದೆ. ನ.6ರಂದು ಕರಾವಳಿ ಜಿಲ್ಲೆಗಳು, ಉತ್ತರ

ಕರಾವಳಿ ಸೇರಿ ಈ ಜಿಲ್ಲೆಗಳಲ್ಲಿ ಮಳೆ ನಿರೀಕ್ಷೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ನ.06 ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ.ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು.

ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top