News Kadaba Desk

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ

(ನ್ಯೂಸ್‌ ಕಡಬ) newskadaba.com,  ಅ.17 ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ. 16ರಂದು ನಡೆದಿದೆ. ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ. ಮಿಂಚನಾಳ ತಾಂಡಾದ ಮಾದೇವ ನಗರದ ಈ ಮೂವರು ಮಕ್ಕಳು ಮನೆಯ ಸಮೀಪದ ಹೊಲದ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಮಕ್ಕಳು ತುಂಬ ಹೊತ್ತಾದರೂ ಕಾಣಿಸದೇ ಇದ್ದಾಗ ಚಪ್ಪಲಿ ಗಮನಿಸಿ, […]

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.17: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21° C ಹಾಗೂ 29° C ಇರಲಿದೆ. ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಡಳಿತ ಸುಧಾರಣಾ ಆಯೋಗದ 9ನೇ ವರದಿ ಸರ್ಕಾರಕ್ಕೆ ಸಲ್ಲಿಕೆ: 7 ಸರ್ಕಾರಿ ಸಂಸ್ಥೆ ರದ್ದು, 9 ಸಂಸ್ಥೆ ವಿಲೀನಕ್ಕೆ ಶಿಫಾರಸು

(ನ್ಯೂಸ್‌ ಕಡಬ) newskadaba.com,  ಅ.17: ಕಾಂಗ್ರೆಸ್ ಶಾಸಕ ಆರ್‌ವಿ ದೇಶಪಾಂಡೆ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ – II (ಕೆಎಆರ್‌ಸಿ-II), ನಿಗಮ-ಮಂಡಳಿಗಳು, ಸಂಸ್ಥೆ ಮತ್ತು ಪ್ರಾಧಿಕಾರಗಳ ರದ್ದು, ಹಾಗೂ ವಿಲೀನ ಸೇರಿದಂತೆ 449 ಹೊಸ ಶಿಫಾರಸುಗಳೊಂದಿಗೆ ತನ್ನ ಒಂಬತ್ತನೇ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿತು. ವಿಧಾನಸೌಧದಲ್ಲಿ ಗುರುವಾರ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದರು. ವರದಿ ಸಲ್ಲಿಸಿದ ಬಳಿಕ ಮಾತನಾಡಿದ ದೇಶಪಾಂಡೆ ಅವರು, ರಾಜ್ಯದ 148 ನಿಗಮ-ಮಂಡಳಿಗಳ ಪೈಕಿ

ಆಡಳಿತ ಸುಧಾರಣಾ ಆಯೋಗದ 9ನೇ ವರದಿ ಸರ್ಕಾರಕ್ಕೆ ಸಲ್ಲಿಕೆ: 7 ಸರ್ಕಾರಿ ಸಂಸ್ಥೆ ರದ್ದು, 9 ಸಂಸ್ಥೆ ವಿಲೀನಕ್ಕೆ ಶಿಫಾರಸು Read More »

ಕರ್ನಾಟಕ

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ 36 ಜೀವ ಸೇಫ್

(ನ್ಯೂಸ್‌ ಕಡಬ) newskadaba.com,  ಅ.17 ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ  ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದಾರೆ. ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬ್ಲಾಸ್ಟ್‌ ಆಗುತ್ತಿದ್ದಂತೆ

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ 36 ಜೀವ ಸೇಫ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ ಸತ್ಯೇಂದ್ರ ನಾಯಕ್ (70), ಶ್ರೀಕಾಂತ್ ನಾಯಕ್ (37) ಮತ್ತು ರಾಮಾನಂದ ನಾಯಕ್ (48) ಎಂದು ಗುರುತಿಸಲಾಗಿದೆ. ಈ ಮೂವರು ಯಾವುದೇ ಪರವಾನಗಿ ಇಲ್ಲದೆ ಮತ್ತು ಮಾನವ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಸ್ಫೋಟಕ ಪಟಾಕಿಗಳನ್ನು ಸಂಗ್ರಹಿಸಿದ್ದರು

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಹೊಂಡದಿಂದ ಶಾಲಾ ವಾಹನ ಅಪಘಾತ – 10 ಮಕ್ಕಳಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.17: ಭಂದಾರ ಜಿಲ್ಲೆಯಲ್ಲಿನ ದಾರುಣ ಘಟನೆಯೊಂದು ದೇಶದ ರಸ್ತೆಗಳ ಅವ್ಯವಸ್ಥಿತ ಸ್ಥಿತಿಯ ಇನ್ನೊಂದು ಉದಾಹರಣೆಯಾಗಿದೆ. ಇಂದು ಮಧ್ಯಾಹ್ನ, ಪ್ರಾಥಮಿಕ ಶಾಲೆಯ 10 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಒಂದು ಖಾಸಗಿ ಓಮ್ನಿ ವಾಹನವು ಸೇತುವೆಯೊಂದರಲ್ಲಿ ನಿಯಂತ್ರಣ ತಪ್ಪಿ ಕೆಳಕ್ಕೆ ಉರುಳಿದ್ದು, ಎಲ್ಲಾ ಮಕ್ಕಳೂ ಗಾಯಗೊಂಡಿದ್ದಾರೆ. ಘಟನೆಯ ಬಳಿಕ ಗಾಯಗೊಂಡ ಮಕ್ಕಳನ್ನು ತಕ್ಷಣವೇ ಭಂದಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರುತಿ ಓಮ್ನಿ ಕಾರು ತುಂಬಾ ವೇಗದಲ್ಲಿ ಚಲಿಸುತ್ತಿದ್ದ ವೇಳೆ, ಒಂದು ಸಣ್ಣ ಸೇತುವೆ ಪ್ರದೇಶದಲ್ಲಿ ರಸ್ತೆಯಲ್ಲಿ ಇದ್ದ

ರಸ್ತೆ ಹೊಂಡದಿಂದ ಶಾಲಾ ವಾಹನ ಅಪಘಾತ – 10 ಮಕ್ಕಳಿಗೆ ಗಾಯ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ

(ನ್ಯೂಸ್‌ ಕಡಬ) newskadaba.com,  ಅ.17: ಗುಜರಾತ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನು ಹೊರತುಪಡಿಸಿ ಅವರ ಸಂಪುಟದಲ್ಲಿದ್ದ ಎಲ್ಲಾ 16 ಸಚಿವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ನಾಳೆ ಮಧ್ಯಾಹ್ನ 12.39ಕ್ಕೆ ಹೊಸ ಸಚಿವ ಸಂಪುಟದ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ. ಹೊಸ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸುಮಾರು 10 ಹೊಸ ಮುಖಗಳು ಸಚಿವ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಪ್ರಸ್ತುತ ಸಂಪುಟದಲ್ಲಿದ್ದ ಕೆಲವು

ಗುಜರಾತ್ ಸಂಪುಟ ಪುನರಚನೆ – ಸಿಎಂ ಭೂಪೇಂದ್ರ ಪಟೇಲ್ ಹೊರತುಪಡಿಸಿ 16 ಸಚಿವರು ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್

ಭಾವಿ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.17 ಶಿಕ್ಷಕರ ಅರ್ಹತಾ ಪರೀಕ್ಷೆ ಅಂದರೆ ಟಿಇಟಿ ಇನ್ನು ಮುಂದೆ ಆನ್‌ಲೈನ್‌ನಲ್ಲಿ ನಡೆಯಲಿದೆ. ಆಫ್‌ಲೈನ್ ಪರೀಕ್ಷೆಗೆ ವಿದಾಯ ಹೇಳಿ, ಪಾರದರ್ಶಕತೆ ಮತ್ತು ವೇಗಕ್ಕಾಗಿ ಈ ಬದಲಾವಣೆಯನ್ನು ಮಾಡಲಾಗುತ್ತಿದೆ. ಕಂಪ್ಯೂಟರ್ ಆಧರಿತ ಪರೀಕ್ಷೆಗೆ ಸರಕಾರ ಈಗಾಗಲೇ ಒಪ್ಪಿಗೆ ನೀಡಿದ್ದು, ಟೆಂಡರ್ ಪ್ರಕ್ರಿಯೆ ಬಳಿಕ ಪರೀಕ್ಷೆ ನಡೆಸುವ ಏಜೆನ್ಸಿಯನ್ನು ಅಂತಿಮಗೊಳಿಸಲಾಗುತ್ತದೆ. ಇದರಿಂದ ಅರ್ಹ ಪ್ರತಿಭಾವಂತರು ಆಯ್ಕೆಯಾಗಲು ಅನುಕೂಲ ಆಗಲಿದೆ.   ಬಿ.ಎಡ್‌ ಪದವೀಧರರು ಇನ್ಮುಂದೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಬರೆಯಬೇಕಿದೆ. ಆಫ್‌ಲೈನ್‌

ಭಾವಿ ಶಿಕ್ಷಕರಿಗೆ ಆನ್‌ಲೈನ್‌ ಮೂಲಕ ಶಿಕ್ಷಕರ ಅರ್ಹತಾ ಪರೀಕ್ಷೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ

(ನ್ಯೂಸ್‌ ಕಡಬ) newskadaba.com,  ಅ.17 ಮಂಗಳೂರು: ಮೀನುಗಾರರು ಅತ್ಯಧಿಕ ಸಂಖ್ಯೆಯಲ್ಲಿ ಇರುವ ಬಂದರು ಪ್ರದೇಶದಲ್ಲಿ ನಿರ್ಮಿಸಿಕೊಡಬೇಕಿದ್ದ ಇಂದಿರಾ ಕ್ಯಾಂಟೀನನ್ನು ತೆರೆಯದೆ ನಿರ್ಲಕ್ಷ್ಯ ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ವಿರೋಧಿಸಿ, ಕೂಡಲೇ ಇಂದಿರಾ ಕ್ಯಾಂಟೀನ್ ಸೇವೆ ಆರಂಭಿಸಲು ಒತ್ತಾಯಿಸಿ ಹಳೆ ಬಂದರು ಹಳೆ ಮುನ್ಸಿಪಲ್ ಕಚೇರಿ ಬಳಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಎದುರು ಬಂದರು ಶ್ರಮಿಕರ ಸಂಘ ಮತ್ತು ಡಿವೈಎಫ್ಐ ಬಂದರು ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಡಿವೈಎಫ್ಐ ಜಿಲ್ಲಾಧ್ಯಕ್ಷರೂ, ಬಂದರು ಶ್ರಮಿಕರ ಸಂಘದ ಅಧ್ಯಕ್ಷರೂ ಆಗಿರುವ ಬಿ.ಕೆ ಇಮ್ತಿಯಾಜ್

ಮಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

(ನ್ಯೂಸ್‌ ಕಡಬ) newskadaba.com,  ಅ.17 ಬಳ್ಳಾರಿ :  ರೈತರು ಉತ್ಪಾದನೆ ಜೊತೆಗೆ, ಹೆಚ್ಚು ಲಾಭ ಗಳಿಸಲು ಕೃಷಿ ಸಂಸ್ಕರಣೆ ಮತ್ತು ಮೌಲ್ಯವರ್ಧನೆಗೆ ಒತ್ತು ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಸಿರುಗುಪ್ಪ ತಾಲೂಕಿನ ಕೊಂಚಗೇರಿ ಗ್ರಾಮದಲ್ಲಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ರಾಷ್ಟ್ರೀಯ ಬ್ಯಾಂಕ್ ವತಿಯಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ  ಯಡಿ ₹2.54 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕೃಷಿ ಸಂಸ್ಕರಣೆಗಾಗಿ ರೈತರಿಗೆ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ರೈತರು ಬೆಳೆದ ಬೆಳೆಗಳಿಗೆ ಮೌಲ್ಯವರ್ಧಿತ ಬೆಲೆ ಸಿಗಲಿ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top