News Kadaba Desk

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ನವದೆಹಲಿ : 75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ನಿವೃತ್ತಿ ಚರ್ಚೆಗೆ ಆರ್​​ಎಸ್​ಎಸ್​ ಸರಸಂಘ ಚಾಲಕ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೆಯೇ 75ನೇ ವಯಸ್ಸಿನಲ್ಲೇ ನಿವೃತ್ತಿ ಘೋಷಿಸಲಿದ್ದಾರೆ ಎನ್ನುವ ಚರ್ಚೆಯಾಗಿತ್ತು. ಆದರೆ ಇದೀಗ ಎಲ್ಲಾ ಊಹಾಪೋಹಗಳಿಗೆ ಮೋಹನ್ ಭಾಗವತ್ ತೆರೆ ಎಳೆದಿದ್ದಾರೆ. ಸ್ವತಃ ಭಾಗವತ್ ಅವರು ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿಯವರಿಗಿಂತ ಆರು ದಿನ ಮುಂಚಿತವಾಗಿ […]

’75ವರ್ಷಕ್ಕೆ ನಿವೃತ್ತಿ ಕಡ್ಡಾಯವಲ್ಲ’- ಮೋಹನ್ ಭಾಗವತ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆಯಾಗಿರುವ ಬಾನು ಮುಷ್ತಾಕ್‌ ಅವರು ಕನ್ನಡಾಂಬೆ ಕುರಿತ ತಮ್ಮ ಹೇಳಿಕೆಗೆ ಸ್ಪಷ್ಟನೆ ಕೊಡಬೇಕು ಎಂದು ಯದುವೀರ್‌ ಒತ್ತಾಯಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಯನ್ನು ಮೊದಲು ಯದುವೀರ್ ಸ್ವಾಗತಿಸಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಕಾರಣ ಪಕ್ಷದ ನಿರ್ಧಾರಕ್ಕೆ ಮಣೆ ಹಾಕಿದ್ದಾರೆ. ಬಾನು ಮುಷ್ತಾಕ್ ಕನ್ನಾಡಂಬೆ ಕುರಿತ ತಮ್ಮ ಹೇಳಿಕೆಗೆ ಮೊದಲು ಸ್ಪಷ್ಟನೆಯನ್ನ ಕೊಡಲಿ ಎಂದು ಆಗ್ರಹಿಸಿದ್ದಾರೆ.   ಸ್ಪಷ್ಟೀಕರಣ ಕೊಡದಿದ್ದರೆ ಬಾನು ಮುಷ್ತಾಕ್ ದಸರಾ

ಕನ್ನಡಾಂಬೆ ಕುರಿತು ಬಾನು ಮುಷ್ತಾಕ್ ಮೊದಲು ಸ್ಪಷ್ಟೀಕರಣ ಕೊಡಲಿ’- ಯದುವೀರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಬಂಪರ್‌ ಕೊಡುಗೆಯನ್ನು ನೀಡಲು ಮುಂದಾಗಿದೆ. ಜನೌಷಧಿ ಕೇಂದ್ರಗಳ ಮಾದರಿಯಲ್ಲಿ, ರೈತರಿಗೆ ಕಡಿಮೆ ದರದಲ್ಲಿ ಕೀಟನಾಶಕಗಳನ್ನು ಒದಗಿಸಲು ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನೌಷಧಿ ಕೇಂದ್ರಗಳು ರಿಯಾಯಿತಿ ದರದಲ್ಲಿ ಔಷಧಿಗಳನ್ನು ಒದಗಿಸುವಂತೆ, ರೈತರಿಗೆ ಅಗತ್ಯವಾದ ಕೀಟನಾಶಕಗಳನ್ನು ಕಡಿಮೆ ದರದಲ್ಲಿ ಒದಗಿಸುವ ಯೋಜನೆಯ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು

ಕೇಂದ್ರ ಸರ್ಕಾರದಿಂದ ರೈತರಿಗೆ ಜನೌಷಧಿ ಮಾದರಿಯಲ್ಲಿ ಕೀಟನಾಶಕ ಕೇಂದ್ರ ಸ್ಥಾಪನೆ Read More »

ಬ್ರೇಕಿಂಗ್ ನ್ಯೂಸ್

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯುಂಟಾಗಿ ನಿರ್ಗಮನ ಮತ್ತು ಆಗಮನದಲ್ಲಿ ವಿಳಂಬವಾಗಿದೆ. ನಿರಂತರ ಮಳೆಯ ಹಿನ್ನೆಲೆ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ,

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ವಿಶಾಖಪಟ್ಟಣಂ : ಕೇವಲ 14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಸ್ಫೋಟಕ ಶತಕ ಬಾರಿಸುವ ಮೂಲಕ ವಿಶ್ವದಾದ್ಯಂತ ಗಮನ ಸೆಳೆದಿದ್ದ ವೈಭವ್ ಸೂರ್ಯವಂಶಿ ಇದೀಗ ಕಬಡ್ಡಿ ಅಂಗಳದಲ್ಲೂ ಕಾಣಿಸಿಕೊಂಡಿದ್ದಾರೆ. ಪ್ರೊ ಕಬಡ್ಡಿ ಲೀಗ್‌ನ 12 ನೇ ಸೀಸನ್ ಆಗಸ್ಟ್ 29 ರ ಶುಕ್ರವಾರದಿಂದ ಪ್ರಾರಂಭವಾಗಿದೆ. ಅದರ ಉದ್ಘಾಟನೆಗೆ ವೈಭವ್ ಸೂರ್ಯವಂಶಿ ಅವರನ್ನು ವಿಶೇಷವಾಗಿ ಆಹ್ವಾನಿಸಲಾಗಿತ್ತು. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ವೈಭವ್ ಅವರನ್ನು ನೋಡಿದ ತಕ್ಷಣ ಅಭಿಮಾನಿಗಳ ಹರ್ಷೋದ್ಘಾರ

ಪ್ರೋ ಕಬಡ್ಡಿ ಅಖಾಡದಲ್ಲಿ ಕಾಣಿಸಿಕೊಂಡ ‘ವೈಭವ್ ಸೂರ್ಯವಂಶಿ’ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮೂಡಬಿದಿರೆ: ಮಂಕುಬೂದಿ ಎರಚಿ ಮಹಿಳೆಯೊಬ್ಬರಿಂದ ನಗ-ನಗದು ಎಗರಿಸಿಕೊಂಡು ವಂಚಿಸಿದ ಯುವಕನ ವರ್ತಿನೆಯಿಂದ ನೊಂದ ಮಹಿಳೆ ಬದುಕಿಗೆ ಅಂತ್ಯ‌ಹೇಳಿದ ಘಟನೆ ಮೂಡುಬಿದಿರೆ ತೋಡಾರಿನಲ್ಲಿ ನಡೆದಿದೆ.‌ ಮಂಗಳೂರು ಉಳ್ಳಾಲದ ಕಲ್ಲಾಪು ಮೂಲದ ಮಹಿಳೆ ಶಫ್ರೀನಾ ಬಾನು(31) ಘಟನೆಯಲ್ಲಿ ನೊಂದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ 14 ವರ್ಷಗಳ ಹಿಂದೆ ಮೂಡುಬಿದಿರೆ ಬೆಳುವಾಯಿ ನವಾಝ್ ರೊಂದಿಗೆ‌ ದಾಂಪತ್ಯ‌ ಜೀವನಕ್ಕೆ ಕಾಲಿರಿಸಿದ ಶಫ್ರೀನಾ ಬಾನು ತೋಡಾರು ಗ್ರಾಮದ ಏರ್ ಇಂಡಿಯಾ ನಾಮಾಂಕಿತದ ಅಪಾರ್ಟ್ ಮೆಂಟ್ ನಲ್ಲಿರುವ ಫ್ಲಾಟ್

ಮೂಡಬಿದಿರೆ: ನಗ- ನಗದು ಎಗರಿಸಿ ವಂಚಿಸಿದ ಯುವಕ- ನೊಂದ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು: ಕರ್ನಾಟಕ-ಕೇರಳ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಬಳಿ ಗುರುವಾರ ಸಂಭವಿಸಿದ ಅಪಘಾತಕ್ಕೆ ಬಸ್‌ನ ಬ್ರೇಕ್ ವೈಫಲ್ಯ ಕಾರಣವಲ್ಲ, ಬದಲಾಗಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ. ಅಧಿಕಾರಿಗಳ ಪ್ರಕಾರ, ಮಂಗಳೂರು-1ನೇ ಘಟಕದ ಚಾಲಕ ನಿಜಲಿಂಗಪ್ಪ ಚಲವಾದಿ ಅವರು ಕಾಸರಗೋಡಿನಿಂದ ಮಂಗಳೂರಿಗೆ ಬಸ್ ಚಲಾಯಿಸುತ್ತಿದ್ದರು. ಮಧ್ಯಾಹ್ನ 1:45ರ ಸುಮಾರಿಗೆ, ಇಳಿಜಾರಿನಲ್ಲಿ ತಲಪಾಡಿ ಟೋಲ್ ಗೇಟ್ ಸಮೀಪಿಸುತ್ತಿದ್ದಾಗ ಅವರು ಬಸ್ ಅನ್ನು ಅತಿ ವೇಗವಾಗಿ ಚಲಾಯಿಸಿದ್ದಾರೆ. ಆಟೋರಿಕ್ಷಾವೊಂದಕ್ಕೆ ಡಿಕ್ಕಿ

ಮಂಗಳೂರು: ತಲಪಾಡಿನ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದ ಕೆಎಸ್‌ಆರ್‌ಟಿಸಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30 ಮಂಗಳೂರು :  ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಇತನು  ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್

ಮಂಗಳೂರು : ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆ(ಆ.30) ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಹವಾಮಾನ ಇಲಾಖೆಯು ದ.ಕ. ಜಿಲ್ಲೆಗೆ ಆಗಸ್ಟ್ 30ರಂದು ರೆಡ್ ಅಲರ್ಟ್ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ (ಶನಿವಾರ) ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೊಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಾಳೆ(ಆ.30) ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಅಲೆಕ್ಸಾಂಡರ್ ಒಜಾರಿಯೊ(76) ಅವರು ಆಗಸ್ಟ್ 29 ರಂದು ನಗರದಲ್ಲಿ ನಿಧನರಾದರು. ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎರಿಕ್ ಒಜಾರಿಯೊ ಎಂದು ಜನಪ್ರಿಯರಾಗಿದ್ದ ಇವರು ಮೇ 18, 1949 ರಂದು ಮಂಗಳೂರಿನ ಜೆಪ್ಪುವಿನಲ್ಲಿ ಜನಿಸಿದರು. ಇವರು ಪ್ರಸಿದ್ಧ ಕೊಂಕಣಿ ಸಂಗೀತ ಸಂಯೋಜಕ, ಸಾಂಸ್ಕೃತಿಕ ಕಾರ್ಯಕರ್ತ ಮತ್ತು ಕೊಂಕಣಿ ಸಮುದಾಯದ ಬಗ್ಗೆ ಅಪಾರ

ಮಂಗಳೂರು: ಕೊಂಕಣಿ ಸಂಗೀತ ಮತ್ತು ಸಾಂಸ್ಕೃತಿಕ ಪರಂಪರೆಯ ಶ್ರೇಷ್ಠ ಕಲಾವಿದ ಎರಿಕ್ ಒಜಾರಿಯೊ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top