ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ವಂಚನೆ- ಆರೋಪಿಯ ಬಂಧಿಸದಿದ್ದಲ್ಲಿ ರಾಮಸೇನೆಯ ವತಿಯಿಂದ ಪ್ರತಿಭಟನೆಯ ಎಚ್ಚರಿಕೆ
(ನ್ಯೂಸ್ ಕಡಬ) newskadaba.com ಕಡಬ, ಜು.03. ಪುತ್ತೂರಿನಲ್ಲಿ ರಾಜಕೀಯ ವ್ಯಕ್ತಿಯ ಪುತ್ರನೋರ್ವ ತನ್ನ ಸಹಪಾಠಿಯನ್ನು ಅತ್ಯಾಚಾರಗೈದು ಮದುವೆಯಾಗಲು ನಿರಾಕರಿಸಿರುವುದನ್ನು ಖಂಡಿಸಿರುವ ರಾಮಸೇನಾ ಪುತ್ತೂರು ಸಂಘಟನೆಯು ಆರೋಪಿಯನ್ನು ಬಂಧಿಸದಿದ್ದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ. ಈ ಬಗ್ಗೆ ಗುರುವಾರದಂದು ಕಡಬದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಮಸೇನಾ ಪುತ್ತೂರು ಜಿಲ್ಲಾಧ್ಯಕ್ಷ ಗೋಪಾಲ ನಾಯ್ಕ್ ಮೇಲಿನಮನೆ ಮಾತನಾಡಿ, ಪುತ್ತೂರು ನಗರಸಭಾ ಸದಸ್ಯ, ವಾಸ್ತುತಜ್ಞ ಪಿ.ಜಿ. ಜಗನ್ನಿವಾಸ ರಾವ್ ಅವರ ಮಗ ತನ್ನ ಸ್ನೇಹಿತೆಯನ್ನು ಅತ್ಯಾಚಾರಗೈದು ಮದುವೆಯಾಗುವುದಾಗಿ ನಂಬಿಸಿ ಮೋಸ […]









