News Kadaba Desk

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಹಲವು ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕೂಡಲೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಅವರನ್ನು ನೇಮಕ ಮಾಡಿದೆ. ನಿನ್ನೆ ತಡರಾತ್ರಿ ನಡೆದ ದಿಢೀರ್ ಬೆಳವಣಿಗೆಯಲ್ಲಿ ಕಾಲ್ತುಳಿತ ಘಟನೆಗೆ ರಾಜ್ಯದ ಪೊಲೀಸ್ ಇಲಾಖೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನಗರ ಪೊಲೀಸ್ ಆಯುಕ್ತರ ತಲೆದಂಡವಾಗಿದ್ದು, ಬೆಂಗಳೂರಿನ 39ನೇ ಪೊಲೀಸ್ ಕಮಿಷನರ್ […]

ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ Read More »

ಕರ್ನಾಟಕ

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ಆದೇಶಿಸಿದೆ.   ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ

ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ತುರ್ತು ಪರಿಸ್ಥಿತಿಯಿಂದ ಕಾಂಗ್ರೆಸ್ ಯಾವುದೇ ಪಾಠ ಕಲಿತಿಲ್ಲ ಮತ್ತು ಕರ್ನಾಟಕದಲ್ಲಿ ‘ಅಘೋಷಿತ ತುರ್ತು ಪರಿಸ್ಥಿತಿ’ಯ ಮೂಲಕ ವಿರೋಧ ಪಕ್ಷದ ನಾಯಕರನ್ನು ಬೆದರಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಹೇಳಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ, ಅವುಗಳನ್ನು ಎದುರಿಸುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದರು. ಅನೇಕ ಸಚಿವರು ತಮ್ಮ ಜಿಲ್ಲೆಗಳಲ್ಲಿ ‘ಸೂಪರ್ ಗೃಹ ಮಂತ್ರಿಗಳಂತೆ’ ವರ್ತಿಸುತ್ತಿದ್ದಾರೆ ಮತ್ತು ವಿರೋಧ ಪಕ್ಷದ ನಾಯಕರ ವಿರುದ್ಧ ರಾಜಕೀಯ ಪ್ರೇರಿತ ಪ್ರಕರಣಗಳನ್ನು ದಾಖಲಿಸಲಾಗಿದೆ

ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸಿ.ಟಿ ರವಿ Read More »

ಕರ್ನಾಟಕ

‘ಬೃಹತ್‌ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್‌ಒಪಿ ಮಾಡುತ್ತೇವೆ’ – ಪರಮೇಶ್ವರ್

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ನಡೆದಿಲ್ಲ . ಮುಂದೆ ಇಂಥ ವಿಜಯೋತ್ಸವಗಳು ನಡೆಸುವ ಸಂದರ್ಭ ಬಂದಾಗ ಪೊಲೀಸ್ ನಿರ್ದೇಶನಗಳ ಚೌಕಟ್ಟಿನೊಳಗೇ ಮಾಡುತ್ತೇವೆ. ಇದಕ್ಕಾಗಿ ಹೊಸ ಎಸ್‌ಒಪಿ (ಸ್ಟ್ಯಾಂಡರ್ಡ್ ಆಪರೇಟಿವ್ ಪ್ರೊಸಿಜರ್) ಮಾಡುತ್ತೇವೆ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ

‘ಬೃಹತ್‌ ವಿಜಯೋತ್ಸವ , ಸಮಾರಂಭಗಳಿಗೆ ಹೊಸ ಎಸ್‌ಒಪಿ ಮಾಡುತ್ತೇವೆ’ – ಪರಮೇಶ್ವರ್ Read More »

ಕರ್ನಾಟಕ

‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ರಾಜ್ಯ ರಾಜಧಾನಿಯ ಬೆಂಗಳೂರಿನಲ್ಲಿ ನಿನ್ನೆ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಪ್ರಕರಣಕ್ಕೆ ಸಿಎಂ, ಡಿಸಿಎಂ ಮತ್ತು ಪೊಲೀಸ್‌ ವ್ಯವಸ್ಥೆಯೇ ನೇರ ಹೊಣೆ ಎಂಬುದು ಎಲ್ಲರ ಆರೋಪ. ಈ ನಡುವೆ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್

‘ಚಿನ್ನಸ್ವಾಮಿ ಸ್ಟೇಡಿಯಂ’ನಲ್ಲಿ ಕಾಲ್ತುಳಿತ- ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ದೂರು Read More »

ಕರ್ನಾಟಕ

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು

(ನ್ಯೂಸ್ ಕಡಬ) newskadaba.com, ಜೂ.05. ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವನ್ನಪ್ಪಿದ ಘಟನೆ ಉಡುಪಿಯ ನಿಟ್ಟೂರಿನಲ್ಲಿ ಜೂನ್ 4ರಂದು ನಡೆದಿದೆ. ಉಡುಪಿ ಜಿಲ್ಲೆಯ ಪುತ್ತೂರು ಗ್ರಾಮದ ಅಯ್ಯಪ್ಪ (27) ಎಂಬುವರು ಕಳೆದ ಮೂರು ವರ್ಷಗಳಿಂದ ಉಡುಪಿಯಲ್ಲಿ ಕೆಲಸ ಮಾಡುತ್ತಿದ್ದು, ನಿಟ್ಟೂರಿನಲ್ಲಿ ಗಂಗಾಧರ್ ಒಡೆತನದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಜೂನ್ 4 ರಂದು ಬೆಳಿಗ್ಗೆ 9.30 ರ ಸುಮಾರಿಗೆ, ಅಯ್ಯಪ್ಪ ತನ್ನ ಪತ್ನಿ ಮತ್ತು ಒಂದು ವರ್ಷದ ಮಗಳು ಕಾಳಮ್ಮ ಅವರನ್ನು ಬಟ್ಟೆಯ ತೊಟ್ಟಿಲಿನಲ್ಲಿ (ಜೋಲಿ)

ಉಡುಪಿ: ತೊಟ್ಟಿಲಿನ ಸೀರೆಯಲ್ಲಿ ಸಿಕ್ಕಿಹಾಕಿಕೊಂಡು ಒಂದು ವರ್ಷದ ಮಗು ಸಾವು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Death, deadbody, Waterfall

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com, ಜೂ.05. ಮಂಗಳೂರು: ನಗರದ ಸೆಂಟ್ರಲ್ ಮಾರುಕಟ್ಟೆಯ ಬಳಿ ಅಪರಿಚಿತ ಯುವಕನೋರ್ವನ ಮೃತದೇಹ ಗುರುವಾರ ಬೆಳಗ್ಗೆ ಪತ್ತೆಯಾಗಿದೆ. ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಕಾಲಿನಲ್ಲಿ ಸಣ್ಣ ಪ್ರಮಾಣದ ಗಾಯ ಕಂಡುಬಂದಿದ್ದು, ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರಾವಳಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧ

(ನ್ಯೂಸ್ ಕಡಬ) newskadaba.com, ಜೂ.05. ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಡೋಣಗಳನ್ನು ಬಳಸಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಡೋಣ್ ಬಳಕೆಯನ್ನು ಪ್ರಮುಖವಾಗಿ ಸೂಕ್ಷ್ಮ ಸ್ಥಳಗಳು ಮತ್ತು ಪ್ರಮುಖ ಸ್ಥಾವರಗಳ ಸುತ್ತಮುತ್ತ ವಿಶೇಷವಾಗಿ ನಿರ್ಬಂಧಿಸಲಾಗಿದೆ. ಜಿಲ್ಲೆಯ ಎಲ್ಲ ಕೈಗಾರಿಕೆ, ವಾಣಿಜ್ಯ ಸಂಸ್ಥೆಗಳು, ಭದ್ರತೆ ಒದಗಿಸುವ ಎಲ್ಲಾ ಖಾಸಗಿ ಭದ್ರತಾ ಸಂಸ್ಥೆಗಳು, ಕಣ್ಣಾವಲು ಅಥವಾ ಇತರ ಉದ್ದೇಶಗಳಿಗಾಗಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಸಗಿ ಡ್ರೋನ್ ಬಳಕೆ ನಿಷೇಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com, ಜೂ.05. ಬೆಂಗಳೂರು: ಉಡುಪಿ-ಕಾರೊಂದು ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾರಾವಳಿಯಿಂದ ಉಡುಪಿ ಕಡೆಗೆ ಹೋಗುವ ರಸ್ತೆಯಲ್ಲಿ, ಶಿರಬೀಡು ಬಳಿ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಸ್ತುತ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಭಿಷೇಕ್ ಆಚಾರ್ಯ, ಅಭಿಷೇಕ್ ಹಾಗೂ ಮತ್ತಿಬ್ಬರು ವಾಹನದಲ್ಲಿದ್ದರು ಎಂದು ವರದಿಯಾಗಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಅದೃಷ್ಟವಶಾತ್ ನಾಲ್ವರು ಅಪಾಯದಿಂದ ಪಾರು Read More »

ಕರ್ನಾಟಕ
Scroll to Top