News Kadaba Desk

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ಒಕ್ಕೂಟ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದೇಂತಡ್ಕದ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತ ಸ್ವಚ್ಛತೆಯನ್ನು ಯೋಜನೆಯ 75 ಸದಸ್ಯರು ಸೇರಿ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರಾದ ಜೆ ಶಂಕರ್ ಭಟ್, ವಸಂತ್ ಕುಮಾರ್ ಅಮೈ, ಜೆ.ಶ್ಯಾಮ್ ನಾರಾಯಣ್, ಜೆ.ರಾಮಕೃಷ್ಣ ಭಟ್, ಕೃಷ್ಣಾನಂದ ಬರೆಂಗಾಯಿ, ರಘು ಅಜಿಲ […]

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ದೇಂತಡ್ಕ ವನದುರ್ಗಾ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಚಿ ಕುಕ್ಕಾಜೆ ಒಕ್ಕೂಟದ ವತಿಯಿಂದ ವಿಷ್ಣು ಮೂರ್ತಿ ದೈವಸ್ಥಾನದ ಆವರಣವನ್ನು ಯೋಜನೆಯ 50 ಸದಸ್ಯರು ಒಗ್ಗೂಡಿ ಸ್ವಚ್ಚತೆ ಮಾಡಲಾಯಿತು‌. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಯಶವಂತ್ ಪೂಜಾರಿ, ಒಕ್ಕೂಟದ ಉಪಾಧ್ಯಕ್ಷರಾದ ರವೀಂದ್ರ ಪೂಜಾರಿ, ಯೋಜನೆಯ ಕೃಷಿ ಅಧಿಕಾರಿ ಚಿದಾನಂದ, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾ ಹಾಗೂ ಸೇವಾ ಪ್ರತಿನಿಧಿ ಶ್ರೀಮತಿ ಚಂಚಾಲಕ್ಷಿ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ- ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಪರಿಶೀಲನೆ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ವತಿಯಿಂದ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಅಂಗರಾಜೆ ಜಾಕು ಎಂಬವರಿಗೆ ಮಾಸಾಶನ ಪರಿಶೀಲನೆ ಮಾಡಲಾಯಿತು. ಮನೆಗೆ ಆಧಾರ ಸ್ತಂಭವಾಗಿದ್ದ ಮಗ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬಿದ್ದು ಮೃತಪಟ್ಟಿದ್ದು, ದೊಡ್ಡ ಮಗಳು ಹೃದ್ರೋಗ ಸಮಸ್ಯೆಯಿಂದ ಬಳಲುತಿದ್ದಾರೆ‌. ಇನ್ನೋರ್ವ ಮಗಳು ಬುದ್ಧಿಮಾಂದ್ಯೆಯಾಗಿದ್ದು, ಸೊಸೆ ಬೀಡಿ ಕಟ್ಟಿ ನಾಲ್ಕು ಜನರ ಜೀವನ ನಡೆಯುತ್ತಿದೆ. ಇವರಿಗೆ ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾರವರು ಮಾಸಾಶನ ಪರಿಶೀಲನೆಯನ್ನು ನಡೆಸಿದರು. ಈ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾಸಾಶನ ಪರಿಶೀಲನೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್-ನೆಸ್ ಫಂಡ್ ವಿತರಣೆ

(ನ್ಯೂಸ್ ಕಡಬ) newskadaba.com ಜ. 12. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಣಿ ವಲಯದ ಅನಂತಾಡಿ ‘ಬಿ’ ಒಕ್ಕೂಟದ ವೈದ್ಯನಾಥೆಶ್ವರ ಸಂಘದ ಸದಸ್ಯೆ ಶ್ರೀಮತಿ ಪುಷ್ಪಾ ಎಂಬವರ ಪತಿ ಕೃಷ್ಣಪ್ಪ ಪೂಜಾರಿ ಎಂಬವರು ಕಳೆದ 4 ತಿಂಗಳಿಂದ ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದು, ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಪಂಡ್ ಸಹಾಯ ಧನದ ಚೆಕ್ ನ್ನು ತಾಲೂಕಿನ ಕೃಷಿಯಾಧಿಕಾರಿ ಚಿದಾನಂದ್, ಮೇಲ್ವಿಚಾರಕರಾದ ಶ್ರೀಮತಿ ಆಶಾ ಪಾರ್ವತಿರವರು ವಿತರಿಸಿದರು. ಈ ಸಂದರ್ಭದಲ್ಲಿ ಸೇವಾಪ್ರತಿನಿಧಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕ್ರಿಟಿಕಲ್ ಇಲ್-ನೆಸ್ ಫಂಡ್ ವಿತರಣೆ Read More »

ಕರಾವಳಿ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಜ. 11. ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧತೆಗೊಳಿಸಲು ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರವನ್ನು ಕಡಬದ ಸೈಂಟ್ ಆನ್ಸ್ ಶಾಲೆಯಲ್ಲಿ ಆಯೋಜಿಸಲಾಗಿತ್ತು. ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ.ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹೇಗೆ ತಯಾರಿಯಾಗಬೇಕು, ಓದುವ ವಿಧಾನ ಹಾಗೂ ಗುರಿ, ಸಾಧನೆ ಯಾವ ರೀತಿ ಮಾಡಬಹುದು ಎಂದು ಮಾರ್ಗದರ್ಶನ ನೀಡಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಗಣಕಯಂತ್ರ ವಿಭಾಗದ ಮುಖ್ಯಸ್ಥರಾದ

ಕಡಬ: ಸೈಂಟ್ ಆನ್ಸ್ ಶಾಲೆಯಲ್ಲಿ SSLC ವಿದ್ಯಾರ್ಥಿಗಳಿಗೆ ಕಲಿಕಾ ಬಲವರ್ಧನೆ ಹಾಗೂ ವೃತ್ತಿ ಮಾರ್ಗದರ್ಶನ ಶಿಬಿರ Read More »

ಕರಾವಳಿ

ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ

(ನ್ಯೂಸ್ ಕಡಬ) newskadaba.com ಜ.11: ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್(ಹೆಚ್‌ಎಂಪಿವಿ) ಪತ್ತೆಯಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಮಗುವಿಗೆ ದಿಬ್ರುಗಢ್‌ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಾಹಿತಿ ನೀಡಿದ ಎಎಂಸಿಹೆಚ್ ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಅವರು, ಕಳೆದ 4 ದಿನಗಳಿಂದ ಮಗುವು ಶೀತ ಜ್ವರದಿಂದ ಬಳಲುತ್ತಿದ್ದು, ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳ ಆಧಾರದ ಮೇರೆಗೆ ಮಗುವನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗುವಿನಲ್ಲಿ

ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಮಗುವನ್ನು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರು; ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.11:ಮಗು ದತ್ತು ಪಡೆದುಕೊಂಡ ಸರ್ಕಾರಿ ನೌಕರರಿಗೆ ಪಿತೃತ್ವ ಮತ್ತು ಮಾತೃತ್ವ ರಜೆ ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಗು ದತ್ತು ಪಡೆದ ತಾಯಿಗೆ ಒಂದು ವರ್ಷ ವೇತನ ಸಹಿತ ರಜೆ ನೀಡಲಾಗುತ್ತದೆ. ಸರ್ಕಾರದ ಅಧಿಸೂಚನೆ (1)ರಲ್ಲಿ ರಾಜ್ಯ ಸರ್ಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಸರ್ಕಾರಿ ನೌಕರಳು ಮಗುವೊಂದನ್ನು ದತ್ತು ತೆಗೆದುಕೊಂಡಾಗ ಒಂದು ವರ್ಷದ ಅಥವಾ ದತ್ತಕ ಮಗುವಿಗೆ ಒಂದು ವರ್ಷ ವಯಸ್ಸಾಗುವವರೆಗೆ 60 ದಿವಸಗಳ ರಜೆ ನೀಡಲು

ಮಗುವನ್ನು ದತ್ತು ಪಡೆದ ನೌಕರರಿಗೂ ಪಿತೃತ್ವ, ಮಾತೃತ್ವ ರಜೆ ಮಂಜೂರು; ಸರ್ಕಾರ ಆದೇಶ Read More »

ಕರ್ನಾಟಕ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..!

(ನ್ಯೂಸ್ ಕಡಬ) newskadaba.com ಜ.11:  ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್  ಸಿಹಿ ಸುದ್ದಿಯೊಂದನ್ನು ನೀಡಿದೆ. ಪ್ರತಿದಿನ ಬೆಳಗ್ಗೆ 5 ಗಂಟೆಗೆ ಆರಂಭವಾಗುತ್ತಿದ್ದ ನಮ್ಮ ಮೆಟ್ರೋ ಸೇವೆ ಜ.13ರಿಂದ ಅಂದರೆ ಸೋಮವಾರದಿಂದ ಮುಂಜಾನೆ 4:15 ಕ್ಕೆ ಮೆಟ್ರೋ ಸೇವೆ ಆರಂಭಿಸಲಿದೆ. ಜನಸಂದಣಿ ಆಧರಿಸಿ ಬಿಎಂಆರ್’ಸಿಎಲ್ ಪ್ರತಿ ಸೋಮವಾರದಂದು ಮೆಟ್ರೋ ಸಮಯದಲ್ಲಿ ಬದಲಾವಣೆ ಮಾಡಿದೆ. ನಗರಕ್ಕ ಹಿಂದಿರುಗುವ ಪ್ರಯಾಣಿಕರ ಅನುಕೂಲಕ್ಕಾಗಿ ಸಿಟಿ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣಕ್ಕೆ ಮುಂಜಾನೆ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಪ್ರತಿ ಸೋಮವಾರ ಮುಂಜಾನೆ 4.15 ರಿಂದಲೇ ಮೆಟ್ರೋ ಸಂಚಾರ ಆರಂಭ..! Read More »

ಕರ್ನಾಟಕ

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ

(ನ್ಯೂಸ್ ಕಡಬ) newskadaba.com ಜ.11: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಯಾಚಿಸದಿದ್ದರೆ ಕೊಲೆ ಮಾಡುವುದಾಗಿ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ‘ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ’ ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ಮನೆಗೆ ಬಂದಿದೆ. ಈ ಸಂಬಂಧ ಸಿಟಿ ರವಿ ಅವರು ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಮಾತನಾಡಿ,

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ಕೇಸ್: ಸಿಟಿ ರವಿಗೆ ಕೊಲೆ ಬೆದರಿಕೆ Read More »

ಕರ್ನಾಟಕ

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಆನ್ಸಿಲ್ ಶಾಜಿ ಜೋನ್ ಗೆ ಡಿಸ್ಟಿಂಕ್ಷನ್

(ನ್ಯೂಸ್ ಕಡಬ) newskadaba.com ಜ. 11. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ ಲೋವರ್ ಗ್ರೇಡ್ ಚಿತ್ರಕಲಾ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಆನ್ಸಿಲ್ ಶಾಜಿ ಜೋನ್ 451 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತನಿಗೆ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ತರಬೇತಿ ನೀಡಿರುತ್ತಾರೆ. ಈತ ಕಡಬ ಹಳೆಸ್ಟೇಷನ್ ಶಾಜಿ ಕೆ ಜೋನ್ ಹಾಗೂ ಸುಪ್ರೀತ ಶಾಜಿ ದಂಪತಿಗಳ ಪುತ್ರ.

ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಆನ್ಸಿಲ್ ಶಾಜಿ ಜೋನ್ ಗೆ ಡಿಸ್ಟಿಂಕ್ಷನ್ Read More »

ಕರಾವಳಿ
Scroll to Top