News Kadaba Desk

ಕಾಸರಗೋಡು: ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಡಿ. 26 ಕಾಸರಗೋಡು : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನೀರ್ಚಾಲು ಸಮೀಪದ ಮಾನ್ಯ ದಲ್ಲಿ ನಡೆದಿದೆ. ಮಾನ್ಯ ಅಯ್ಯಾಂಗಾವು ನ ವಿಜೇಶ್ (38) ಮೃತ ಪಟ್ಟವರು. ಮನೆಯ ಕೋಣೆ ಯಲ್ಲಿ ಗುರುವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ತಲಪಿಸಿದರೂ ಆಗಲೇ ಮೃತಪಟ್ಟಿದ್ದರು. ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಕಾಸರಗೋಡು: ಯುವಕ ಆತ್ಮಹತ್ಯೆ Read More »

ಕರಾವಳಿ

ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ

(ನ್ಯೂಸ್ ಕಡಬ) newskadaba.com ಡಿ. 26 ಥಾಣೆ: ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ 12 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ವಿಶಾಲ್ ಗಾವ್ಲಿಯನ್ನು ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಬುಧವಾರ ಬಂಧಿಸಿದ್ದ ಪೊಲೀಸರು, ಇಂದು ಬೆಳಗ್ಗೆ ನಗರಕ್ಕೆ ಕರೆತಂದು ಥಾಣೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕಲ್ಯಾಣ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ವಿ ಎ ಪತ್ರವಾಲೆ ಅವರು, ಆರೋಪಿಯನ್ನು 2025ರ ಜನವರಿ 2ರವರೆಗೆ

ಥಾಣೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ: ದಂಪತಿ ಬಂಧನ Read More »

ರಾಷ್ಟ್ರೀಯ ನ್ಯೂಸ್

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಡಿ. 26: ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) 7,000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಅನುಮೋದನೆ ನೀಡಿದ ನಂತರ ಎನ್. ಶ್ರೀನಿವಾಸನ್ ಬುಧವಾರ ಇಂಡಿಯಾ ಸಿಮೆಂಟ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸ್ಥಾನಕ್ಕೆ ರಾಜೀನಾಮೆ ನೀಡಿದರು. ಈ ಒಪ್ಪಂದವು ಬಿಲಿಯನೇರ್ ಕುಮಾರ್ ಮಂಗಳಂ ಬಿರ್ಲಾ ಅವರಿಂದ ಪ್ರಚಾರಗೊಂಡ ಅಲ್ಟ್ರಾಟೆಕ್ ಸಿಮೆಂಟ್ ಕಂಪನಿಯು ಇಂಡಿಯಾ ಸಿಮೆಂಟ್ಸ್ ಲಿಮಿಟೆಡ್ (ಐಸಿಎಲ್) ನಲ್ಲಿ ಹೆಚ್ಚಿನ ಪಾಲನ್ನು ಸ್ವಾಧೀನಪಡಿಸಿಕೊಂಡಿದೆ. ನಿಯಂತ್ರಕ ಫೈಲಿಂಗ್‌ನಲ್ಲಿ, ವಹಿವಾಟು ಪೂರ್ಣಗೊಂಡ ನಂತರ ಶ್ರೀನಿವಾಸನ್ ಉಪಾಧ್ಯಕ್ಷ ಮತ್ತು

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಂದಾಪುರ: ಹುಟ್ಟೂರಿಗೆ ತಲುಪಿದ “ಯೋಧ ಅನೂಪ್ ಪೂಜಾರಿ”ಯವರ ಪಾರ್ಥಿವ ಶರೀರ

(ನ್ಯೂಸ್ ಕಡಬ)com ಡಿ. 26 ಕುಂದಾಪುರ: ಜಮ್ಮು-ಕಾಶ್ಮೀರದಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕುಂದಾಪುರ ಸಮೀಪದ ಬೀಜಾಡಿಯಯೋಧ ಅನೂಪ್ ಪೂಜಾರಿ ಪಾರ್ಥಿವ ಶರೀರವು ಇಂದು ಅವರ ಹುಟ್ಟೂರಿಗೆ ತಲುಪಿದೆ. ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಉಡುಪಿಯಿಂದ ಬೆಳಗ್ಗೆ ಬೀಜಾಡಿಗೆ ರವಾನೆ ಮಾಡಲಾಯಿತು. ತೆಕ್ಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅನೂಪ್ ಅಂತಿಮ ಯಾತ್ರೆ ನಡೆಯಲಿದೆ. ಅಂತಿಮ ಯಾತ್ರೆಯಲ್ಲಿ ಸಾವಿರಾರು ಜನ ಭಾಗಿಯಾಗುವ ನಿರೀಕ್ಷೆ ಇದೆ. ಅಂತಿಮ ಯಾತ್ರೆ ಮುಗಿಸಿ ಹುತಾತ್ಮ ಯೋಧನ ದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು. ಬೀಜಾಡಿ

ಕುಂದಾಪುರ: ಹುಟ್ಟೂರಿಗೆ ತಲುಪಿದ “ಯೋಧ ಅನೂಪ್ ಪೂಜಾರಿ”ಯವರ ಪಾರ್ಥಿವ ಶರೀರ Read More »

ಕರಾವಳಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಸಾಹಿತಿ ಎಂ ಟಿ ವಾಸುದೇವನ್ ನಾಯರ್ ನಿಧನ

(ನ್ಯೂಸ್ ಕಡಬ) newskadaba.com ಡಿ. 26 ಕೋಝಿಕ್ಕೋಡ್: ಖ್ಯಾತ ಮಲಯಾಳಂ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ ಟಿ ವಾಸುದೇವನ್ ನಾಯರ್ ರವರು ಬುಧವಾರ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೋಝಿಕ್ಕೋಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಹೃದ್ರೋಗ ಮತ್ತು ಉಸಿರಾಟದ ತೊಂದರೆಯಿಂದ 11 ದಿನಗಳ ಕಾಲ ಆಸ್ಪತ್ರೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದ ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿತ್ತು. ಅವರ ಚಿಕಿತ್ಸೆಗಾಗಿ ವಿಶೇಷ ವೈದ್ಯಕೀಯ ತಂಡವನ್ನೂ ರಚಿಸಲಾಗಿತ್ತು. ಆದರೆ ನಿನ್ನೆ ರಾತ್ರಿ ಮೂತ್ರಪಿಂಡ ಮತ್ತು

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಮಲಯಾಳಂ ಸಾಹಿತಿ ಎಂ ಟಿ ವಾಸುದೇವನ್ ನಾಯರ್ ನಿಧನ Read More »

ಬ್ರೇಕಿಂಗ್ ನ್ಯೂಸ್

ಎರಡನೇ ದಿನವೂ ಏರಿಕೆ ಕಂಡ ಚಿನ್ನದ ಬೆಲೆ

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಚಿನ್ನದ ದರ ಇಂದು ಕೊಂಚ ಏರಿಕೆ ಕಂಡಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ ತಲಾ 25 ರೂ. ಮತ್ತು 28ರೂ. ಏರಿಕೆ ಆಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,125 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,773 ರೂ.ರಷ್ಟಿದೆ.

ಎರಡನೇ ದಿನವೂ ಏರಿಕೆ ಕಂಡ ಚಿನ್ನದ ಬೆಲೆ Read More »

ಕರ್ನಾಟಕ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ಇದನ್ನು ವಿರೋಧಿಸಿ ರಾಜ್ಯ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬುಧವಾರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್ Read More »

ಕರ್ನಾಟಕ

ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಒಳಸಂಚು ರೂಪಿಸಿ ಹಲ್ಲೆ ಮತ್ತು ಕೊಲೆಗೆ ಯತ್ನ ಎಂಬಂತೆ ಮುನಿರತ್ನ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಅದಲ್ಲದೇ, ಮೊಟ್ಟೆ ಎಸೆದವರು ಎಂಬ ಆರೋಪ ಹೊತ್ತವರಿಂದಲೂ ಪ್ರತಿದೂರು ದಾಖಲು ಮಾಡಲಾಗಿದೆ. ತಮ್ಮ ಮೇಲೆ ಗುಂಪು ಕಟ್ಟಿ ಹಲ್ಲೆ ಮಾಡಿದ್ದಾರೆ ಎಂದು ನಂದಿನಿ ಲೇಔಟ್

ಶಾಸಕ ಮುನಿರತ್ನರ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್ಐಆರ್ ದಾಖಲು Read More »

ಕರ್ನಾಟಕ

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಡಿ. 26 ಚಿಕಾಗೋ: ಯುನೈಟೆಡ್ ಏರ್‌ಲೈನ್ಸ್ ಜೆಟ್‌ಲೈನರ್ ವಿಮಾನದ ಚಕ್ರದಲ್ಲಿ ಮೃತದೇಹ ಪತ್ತೆಯಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕಾಗೋ ಓ’ಹೇರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಯುನೈಟೆಡ್ ಫ್ಲೈಟ್ 202 ಕಹುಲುಯಿ ವಿಮಾನ ನಿಲ್ದಾಣದಲ್ಲಿ ಇಳಿದಾಗ ವಿಮಾನದ ಲ್ಯಾಂಡಿಂಗ್ ಗೇರ್ ಹೊಂದಿರುವ ಕಂಪಾರ್ಟ್‌ಮೆಂಟ್‌ಗಳಲ್ಲಿ ಶವ ಪತ್ತೆಯಾಗಿದೆ ಎಂದು ಏರ್‌ಲೈನ್‌ನ ವೆಬ್‌ಸೈಟ್ ತಿಳಿಸಿದೆ.   ಮೃತ ವ್ಯಕ್ತಿಯ ಬಗ್ಗೆ ತನಿಖೆ ನಡೆಯುತ್ತಿದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗಳು ಸಾಮಾನ್ಯವಾಗಿವೆ ಮತ್ತು ಘಟನೆಯಿಂದ ಏನೂ ಪರಿಣಾಮ ಬೀರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನದ ಚಕ್ರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಬ್ರೇಕಿಂಗ್ ನ್ಯೂಸ್

ಕಡಬದ ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನಲ್ಲಿ ಮೆಗಾ ಸರ್ವಿಸ್ ಕಾರ್ನಿವಲ್

ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಟಿವಿಎಸ್ ನಲ್ಲಿ ಮೆಗಾ ಸರ್ವಿಸ್ ಕಾರ್ನಿವಲ್ ನಡೆಯುತ್ತಿದ್ದು, ಇದೇ ತಿಂಗಳು 30ರ ತನಕ ಮುಂದುವರಿಯಲಿದೆ. ಸರ್ವಿಸ್ ಕಾರ್ನಿವಲ್ ನ ಅಂಗವಾಗಿ ಎಲ್ಲಾ TVS ದ್ವಿಚಕ್ರ ವಾಹನ ಸರ್ವಿಸ್ ವಿಭಾಗದಲ್ಲಿ ವಿಶೇಷ ಕೂಡುಗೆಯಾಗಿ ಶೇಕಡಾ 75% ವರೆಗೆ ಉಳಿತಾಯ ಪಡೆಯಬಹುದಾಗಿದೆ. ಪ್ರಥಮ ಬಾರಿಗೆ ಸರ್ವಿಸ್ ನ ಎಲ್ಲಾ ವಿಭಾಗದಲ್ಲೂ ಡಿಸ್ಕೌಂಟ್ ಲಭ್ಯವಿದ್ದು, ಬಿಡಿ ಭಾಗಗಳು, ಲೇಬರ್, ಏಕ್ಚ್ಸೋಸರೀಸ್, ಹೆಲ್ಮೆಟ್, ಟೈರ್, ಬ್ಯಾಟರಿ ಇತ್ಯಾದಿಗಳಿಗೆ ಶೇಕಡಾ 75% ವರೆಗೆ

ಕಡಬದ ಟಿವಿಎಸ್ ಅಧಿಕೃತ ಡೀಲರ್ ಅಡಿಗ ಮೋಟಾರ್ಸ್ ನಲ್ಲಿ ಮೆಗಾ ಸರ್ವಿಸ್ ಕಾರ್ನಿವಲ್ Read More »

ಕರ್ನಾಟಕ
Scroll to Top