ಬ್ರೇಕಿಂಗ್ ನ್ಯೂಸ್

ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ.19. ಕಡಬದ ಯುವಕನೋರ್ವ ಐರ್ಲೆಂಡ್ ನಲ್ಲಿ ನಿಗೂಢವಾಗಿ ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ನ ಚಾರ್ಲ್ಸ್‌ಟೌನ್ ಪ್ರದೇಶದ ನಿವಾಸದಲ್ಲಿ ವಾಸವಾಗಿದ್ದ ಕಡಬ ತಾಲೂಕು  ಕುಟ್ರುಪಾಡಿ ಗ್ರಾಮದ ವಿಮಲಗಿರಿ ನಿವಾಸಿ ಸಾಂಜೋ ಸುನಿಲ್(31) ಬುಧವಾರದಂದು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಲಾಗಿದೆ. ತಿಂಗಳ ಹಿಂದಷ್ಟೇ ಐರ್ಲೆಂಡ್ ದೇಶಕ್ಕೆ ತೆರಳಿದ್ದ ಸಾಂಜೋ ಸುನಿಲ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ!

(ನ್ಯೂಸ್‌ ಕಡಬ) newskadaba.com ಫೆ.19 : 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ, ನೆದರ್‌ಲೆಂಡ್ಸ್ ಎದುರು ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯಲ್ಲಿ ಸತತ 4 ಗೆಲುವು ದಾಖಲಿಸುವ ಮೂಲಕ ಅಜೇಯವಾಗಿ ಸೂಪರ್-8 ಹಂತವನ್ನು ಪ್ರವೇಶಿಸಿದೆ. ಇನ್ನು ಇದೇ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಈ

ಹಾರ್ದಿಕ್ ಪಾಂಡ್ಯ ವಿಶ್ವದಾಖಲೆ: ಟಿ20 ಇತಿಹಾಸದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ! Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ

(ನ್ಯೂಸ್‌ ಕಡಬ) newskadaba.com ಫೆ.19 : ಆಸ್ಟ್ರೇಲಿಯಾದ ವಿಕ್ಟೋರಿಯಾ ಪ್ರಾಂತ್ಯದ ಜೀಲಾಂಗ್ ನಗರದ ಸಮೀಪದ ಕೊರಿಯೊ ಪ್ರದೇಶದಲ್ಲಿ ಭಾರತೀಯ ಮೂಲದ 22 ವರ್ಷದ ನರ್ಸ್ ಹರ್ಮನ್ ಪ್ರೀತ್ ಸಿಂಗ್ ಮೇಲೆ ಭೀಕರ ಜನಾಂಗೀಯ ದಾಳಿ ನಡೆದಿದೆ. ಫೆಬ್ರವರಿ 17ರ ತಡರಾತ್ರಿ ಜಿಮ್‌ನಲ್ಲಿ ವ್ಯಾಯಾಮ ಮುಗಿಸಿ ಹೊರಬರುತ್ತಿದ್ದ ವೇಳೆ ಮೂವರು ವ್ಯಕ್ತಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅದರಲ್ಲಿ ಬಿಳಿ ಟಿ-ಶರ್ಟ್ ಧರಿಸಿದ್ದ ವ್ಯಕ್ತಿಯೊಬ್ಬ ಹರ್ಮನ್ ಅವರನ್ನು

ಆಸ್ಟ್ರೇಲಿಯಾದ ಜೀಲಾಂಗ್‌ನಲ್ಲಿ ಭಾರತೀಯನ ಮೇಲೆ ಜನಾಂಗೀಯ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಅಕಾಲಿಕ ಮಳೆ

(ನ್ಯೂಸ್‌ ಕಡಬ) newskadaba.com ಫೆ.19 : ಜಿಲ್ಲೆಯ ಕೆಲವು ಕಡೆಗಳಲ್ಲಿ ಬುಧವಾರ ಸಂಜೆ ವೇಳೆಗೆ ಅಕಾಲಿಕ ಮಳೆ ಸುರಿದಿದೆ. ಜಿಲ್ಲೆಯ ಸುಳ್ಯ, ಪುತ್ತೂರು ಸುತ್ತಮುತ್ತಲಿನ ಭಾಗದಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಸಂಪಾಜೆ, ಕಬಕ, ವಿಟ್ಲ, ಬೆಟ್ಟಂಪಾಡಿ, ರೆಂಜ, ನಿಡ್ಪಳ್ಳಿ, ಕೊಂದಲಕಾನ ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅನೇಕ ಕೃಷಿಕರ ಮನೆಯಂಗಳದಲ್ಲಿ ಕೊಯಿಲಿನ ಅಡಿಕೆ ಇದ್ದು, ಮಳೆಗೆ ಒದ್ದೆಯಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ. ಬೆಳಗ್ಗೆ ತುಸು ಚಳಿ, ಮೋಡದಿಂದ ಕೂಡಿದ ವಾತಾವರಣ, ಮಧ್ಯಾಹ್ನ ವೇಳೆ

ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಅಕಾಲಿಕ ಮಳೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನಾಭರಣ ಪ್ರಿಯರಿಗೆ ಮತ್ತೆ ನಿರಾಸೆ-ಏರಿದ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಫೆ.19 : ಕಳೆದ ಮೂರ್ನಾಲ್ಕು ದಿನದಿಂದ ಸತತವಾಗಿ ಇಳಿದಿದ್ದ ಚಿನ್ನದ ಬೆಲೆಯಲ್ಲಿ ಇಂದು ದಿಢೀರನೆ 2290 ರೂಪಾಯಿ ಹೆಚ್ಚಳ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಭರ್ಜರಿ 15 ಸಾವಿರ ರೂ ಹೆಚ್ಚಳ ಆಗಿದೆ. ಚಿನ್ನದ ಇಂದಿನ ದರ ಫೆಬ್ರವರಿ 19 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯ 1 ಗ್ರಾಂ ನಲ್ಲಿ 229 ರೂಪಾಯಿ ಹೆಚ್ಚಳ ಆಗಿದೆ. 10 ಗ್ರಾಂ ನಲ್ಲಿ 2290 ರೂ ಏರಿಕೆ ಕಂಡಿದೆ. ಇದರಿಂದಾಗಿ ಮತ್ತೆ 24 ಕ್ಯಾರೆಟ್‌ನ

ಚಿನ್ನಾಭರಣ ಪ್ರಿಯರಿಗೆ ಮತ್ತೆ ನಿರಾಸೆ-ಏರಿದ ಚಿನ್ನದ ಬೆಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕಿ ಭಾಗೀರಥಿ ಮುರುಳ್ಯರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ

(ನ್ಯೂಸ್‌ ಕಡಬ) newskadaba.com ಫೆ.19 ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಅವರು ಸುಳ್ಯ ತಾಲೂಕು ಪಂಚಾಯಿತಿಯ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಅರಂತೋಡು ಗ್ರಾಮದ ಅಡ್ತಲೆ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ಶಾಸಕರಿಗೆ ಮನವಿ ಸಲ್ಲಿಸಿ, ಅಡ್ತಲೆ ಪ್ರದೇಶದಲ್ಲಿ ನಿರಂತರವಾಗಿ ಆಗುತ್ತಿರುವ ಆನೆ ಹಾವಳಿಯಿಂದ ಅಡ್ತಲೆ ಭಾಗದಲ್ಲಿ ಕೃಷಿಕರು, ಗ್ರಾಮಸ್ಥರು ಬದುಕು ನಡೆಸಲು ಆತಂಕಪಡುವಂತಾಗಿದೆ. ಸಂಜೆಯಾಗುತ್ತಲೆ ಕಾಡಾನೆಗಳು ರಸ್ತೆಗೆ ಇಳಿದು, ಜನವಸತಿ ಪ್ರದೇಶಕ್ಕೆ ಬರುತ್ತಿವೆ, ಇತ್ತೀಚೆಗೆ ನಾವು ಸಮಾಲೋಚನಾ ಸಭೆ ನಡೆಸಿ ಆನೆ ಹಾವಳಿಗೆ ಶಾಶ್ವತ

ಶಾಸಕಿ ಭಾಗೀರಥಿ ಮುರುಳ್ಯರಿಂದ ಸುಳ್ಯದಲ್ಲಿ ಅಹವಾಲು ಸ್ವೀಕಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಕ್ಕಿ ಮಾಜಿ ಹೆಂಡತಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com ಫೆ.19: ವ್ಯಕ್ತಿಯೊಬ್ಬ ಟೆಕ್ಕಿಯಾಗಿದ್ದ ತನ್ನ ಮಾಜಿ ಪತ್ನಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ… ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಮಹಿಳೆಯೇ ಕಾರಣ ಎಂದು ವ್ಯಕ್ತಿ ಆರೋಪಿಸಿದ್ದಾನೆ. ಮಹಿಳೆಯ 2ನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ ಗರ್ಭಿಣಿ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 30 ರ ಹರೆಯದ ಕೊಲೆ ಆರೋಪಿ 2022 ರಲ್ಲಿ ಆ ಮಹಿಳೆಯನ್ನು

ಟೆಕ್ಕಿ ಮಾಜಿ ಹೆಂಡತಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಟೂನ್ ಪಾತ್ರಗಳ ಗೆಟಪ್‌ನಲ್ಲಿ ಕಳ್ಳತನ ಖದೀಮರ ಆಟ ಮುಗಿಸಿದ ಖಾಕಿ ಪಡೆ

(ನ್ಯೂಸ್‌ ಕಡಬ) newskadaba.com ಫೆ.19: ಕಾರ್ಟೂನ್ ಪಾತ್ರಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಎಲ್ಲರಿಗೂ ಇಷ್ಟ, ಅದರಲ್ಲೂ ಸ್ಕೂಬಿ ಡೂ, ಶಾಗ್ಗಿ, ವೆಲ್ಮಾ, ಫ್ರೆಡ್ ಮತ್ತು ಡ್ಯಾಫ್ನೆ ಪಾತ್ರಗಳು ಜನಪ್ರಿಯತೆಯ ಶಿಖರದಲ್ಲಿವೆ. ಆದರೆ ಈ ಪಾತ್ರಧಾರಿಗಳ ವೇಷ ಧರಿಸಿ ಕಳ್ಳರು ಮೊಬೈಲ್ ಕಳ್ಳತನ ನಡೆಸುತ್ತಿದ್ದ ಘಟನೆ ತೀವ್ರ ಆತಂಕ ಮೂಡಿಸಿದೆ. ಅಂಡರ್ ಕವರ್ ಪೊಲೀಸರ ತಂಡ ಈ ಕಳ್ಳರ ಮೇಲೆ ನಿಗಾ ಇರಿಸಿಕೊಂಡಿದ್ದು, ಸದ್ಯಕ್ಕೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷರನ್ನು ಬಂಧಿಸಲಾಗಿದೆ. ಬಂಧಿತರ ಒಬ್ಬೊಬ್ಬರ ಬಳಿ ಕನಿಷ್ಠ

ಕಾರ್ಟೂನ್ ಪಾತ್ರಗಳ ಗೆಟಪ್‌ನಲ್ಲಿ ಕಳ್ಳತನ ಖದೀಮರ ಆಟ ಮುಗಿಸಿದ ಖಾಕಿ ಪಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ಫೆ.19: ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗಿವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲಾ ಬಸ್ ಚಕ್ರದಡಿ ಸಿಲುಕಿ LKG ಬಾಲಕ ದಾರುಣ ಮರಣ

(ನ್ಯೂಸ್‌ ಕಡಬ) newskadaba.com,  ಫೆ.18: ಗುರುಮಠಕಲ್ ತಾಲೂಕಿನ ಗಾಜರಕೋಟ್ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಲ್‍ಕೆಜಿ ವಿದ್ಯಾರ್ಥಿಯೊಬ್ಬನು ಶಾಲಾ ಬಸ್ ಚಕ್ರದಡಿ ಸಿಲುಕಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಖಾಸಗಿ ಶಾಲೆಯ ಬಸ್ ನಿತ್ಯದಂತೆ ಮಕ್ಕಳನ್ನು ಶಾಲೆಯಿಂದ ಮನೆಗೆ ಬಿಟ್ಟು ಹಿಂತಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.ವಿದ್ಯಾರ್ಥಿಗಳನ್ನು ಕೆಳಗಿಳಿಸಿದ ನಂತರ ಚಾಲಕನು ಹಿಂಭಾಗ ಗಮನಿಸದೇ ಬಸ್ ಅನ್ನು ರಿವರ್ಸ್ ತೆಗೆದುಕೊಂಡಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಿಂಭಾಗಕ್ಕೆ ಬಂದಿದ್ದ ಬಾಲಕ ಚಾಲಕರ ಗಮನಕ್ಕೆ ಬಾರದೆ ಬಸ್ ಹಿಂಬದಿ

ಶಾಲಾ ಬಸ್ ಚಕ್ರದಡಿ ಸಿಲುಕಿ LKG ಬಾಲಕ ದಾರುಣ ಮರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top