ಬ್ರೇಕಿಂಗ್ ನ್ಯೂಸ್

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ!

(ನ್ಯೂಸ್‌ ಕಡಬ) newskadaba.com,ಜ.30  : ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ಸಲ್ಲಿಸಿದ ವಿಭಿನ್ನ ಹರಕೆ ಇದೀಗ ಎಲ್ಲರ ಗಮನ ಸೆಳೆದಿದೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು, “ಚಿನ್ನದ ದರ ಇಳಿಯಲಿ, ಬಡವರು ಹಾಗೂ ಸಾಮಾನ್ಯ ಜನರೂ ಚಿನ್ನ ಖರೀದಿಸಲು ಸಾಧ್ಯವಾಗಲಿ” ಎಂಬ ಅಪರೂಪದ ಆಶಯದೊಂದಿಗೆ ದೇವಿಯ ಮುಂದೆ ಹರಕೆ ಸಲ್ಲಿಸಿದರು. ತಾಯಿಯ ರಥೋತ್ಸವದ ವೇಳೆ, ನಾಗರಾಜ […]

ಗಗನಕ್ಕೇರಿದ ಚಿನ್ನದ ಬೆಲೆ ಇಳಿಕೆಗಾಗಿ ದೇವಿಗೆ ಭಕ್ತನ ವಿಭಿನ್ನ ಹರಕೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.30  ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ

(ನ್ಯೂಸ್‌ ಕಡಬ) newskadaba.com,ಜ.29   ಮುಂಬೈ: ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಮತ್ತು ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಅಜಿತ್ ಪವಾರ್ ಪತ್ನಿ ಸುನೇತ್ರಾ, ಕೇಂದ್ರ ಗೃಹ ಸಚಿವ ಅಮಿತ್, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಜಿತ್ ಪವಾರ್

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅಂತ್ಯಕ್ರಿಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ

(ನ್ಯೂಸ್‌ ಕಡಬ) newskadaba.com,ಜ.29  ದೆಹಲಿ: ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯುವುದಕ್ಕಾಗಿ ವಿಶ್ವ ವಿದ್ಯಾಲಯ ಧನಸಹಾಯ ಆಯೋಗ ಹೊರಡಿಸಿರುವ ನಿಯಮಾವಳಿಯನ್ನು ಸುಪ್ರೀಂ ಕೋರ್ಟ್‌ ತಡೆ ಹಿಡಿದಿದೆ .. ನಿಯಮಾವಳಿ ವಿರುದ್ಧ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಂದ ವ್ಯಾಪಕ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಾವಳಿಯನ್ನು ತೀವ್ರವಾಗಿ ಟೀಕಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠವು, ಇದು ಸಂಪೂರ್ಣ ಅಸ್ಪಷ್ಟತೆಯಿಂದ ಕೂಡಿದೆ ಎಂದು ಹೇಳಿದೆ. ವಿಶ್ವವಿದ್ಯಾಲಯಗಳ ವ್ಯಾಪ್ತಿಯ

ಯುಜಿಸಿಯ ಹೊಸ ನಿಯಮಾವಳಿಗೆ ಸುಪ್ರೀಂ ಕೋರ್ಟ್‌ ತಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.29   ನವದೆಹಲಿ: ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆಯ ನಾಗಲೋಟ ಮುಂದುವರೆದಿದ್ದು ಬುಧವಾರ ಚೆನ್ನೈ ಮತ್ತು ಹೈದರಾಬಾದ್‌ ಮಾರುಕಟ್ಟೆಯಲ್ಲಿ 1 ಕೇಜಿ ಬೆಳ್ಳಿ ಬೆಲೆಯು 4 ಲಕ್ಷ ರು.ಗೆ ತಲುಪಿದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಬೆಳ್ಳಿ ದರ ಒಂದೇ ದಿನ 10,000 ರು. ಏರಿಕೆಯಾಗಿ 3.80 ಲಕ್ಷ ರು.ಗೆ ತಲುಪಿದೆ. ದೆಹಲಿಯಲ್ಲಿ ಕೂಡಾ 15,000 ರು. ಜಿಗಿದು 3.85 ಲಕ್ಷ ರು.ಗೆ ನೆಗೆದಿದೆ. ಇದು ಬೆಳ್ಳಿಯ ಸಾರ್ವಕಾಲಿಕ ಗರಿಷ್ಠ ದರವಾಗಿದೆ. ಕಳೆದ ಮೇ ತಿಂಗಳ ಅಂತ್ಯದ ವೇಳೆಗೆ

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ಮಂಗಳೂರಿನ ಮುಂಚೂಣಿಯ ನಿರ್ಮಾಣ ಸಂಸ್ಥೆ ಮುಕುಂದ್ ರಿಯಾಲ್ಟಿ ಅತ್ಯಪೂರ್ವ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್‌ನ ನೂತನ ಯೋಜನೆಯನ್ನು ತಣ್ಣೀರುಬಾವಿ ಬೀಚ್‌ನಲ್ಲಿ ಜರುಗಿದ ಡೆನ್ ಡೆನ್ ಅಂತಾರಾಷ್ಟ್ರೀಯ ಮುಕ್ತ ಈಜು ಚಾಂಪಿಯನ್‌ಶಿಪ್ ಸಂದರ್ಭ ಸಾಂಕೇತಿಕವಾಗಿ ಗಾಳಿಪಟ ಹಾರಿಸುವ ಮೂಲಕ ಅನಾವರಣಗೊಳಿಸಲಾಯಿತು. ಆಹ್ವಾನಿತ ಅತಿಥಿಗಳು, ಕ್ರೀಡಾಪಟುಗಳು ಮತ್ತು ಸಂಸ್ಥೆಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ಮುಕುಂದ್ ರಿಯಾಲ್ಟಿಯ ವ್ಯವಸ್ಥಾಪಕ ಪಾಲುದಾರರಾದ ಗುರುದತ್ತ ಶೆಣೈ, ಮಹೇಶ್ ಶೆಟ್ಟಿ ಮತ್ತು ಮಂಗಲದೀಪ್ ಎ.ಆರ್. ನೇತೃತ್ವದಲ್ಲಿ ರುದ್ರಾಕ್ಷ್ ಯೋಜನೆಯ ಮಾಹಿತಿ ಪತ್ರ ಅನಾವರಣಗೊಳಿಸಲಾಯಿತು.

ಮಂಗಳೂರು: ಮುಕುಂದ್ ರಿಯಾಲ್ಟಿ ರುದ್ರಾಕ್ಷ್ ಐಷಾರಾಮಿ ಅಪಾರ್ಟ್ಮೆಂಟ್ ಯೋಜನೆಯ ಅನಾವರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ನಿಗೂಢವಾಗಿ ಕಣ್ಮರೆಯಾದ ವ್ಯಕ್ತಿ

(ನ್ಯೂಸ್‌ ಕಡಬ) newskadaba.com,ಜ.29  ಬೆಳ್ತಂಗಡಿ: ಬೆಳ್ತಂಗಡಿಯ ಚರ್ಚ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.ನಾಪತ್ತೆಯಾದವರನ್ನು ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ದೇವಸ್ಯ ನಿವಾಸಿ ರೋಶನ್ ಕಿರಣ್ ಡಿಸೋಜಾ (36) ಎಂದು ಗುರುತಿಸಲಾಗಿದೆ. ಇವರು ಬೆಳ್ತಂಗಡಿಯ ಚರ್ಚ್ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು, ಪಿಕಪ್ ವಾಹನದ ಚಾಲಕರಾಗಿ ಕೆಲಸ ಮಾಡುತ್ತಿದ್ದರು.ಬೆಂಗಳೂರಿನಲ್ಲಿದ್ದ ತಮ್ಮ ಪತ್ನಿಗೆ ಕರೆ ಮಾಡಿದ್ದ ರೋಶನ್, ಜನವರಿ 25 ರಂದು ತಾವು ಬೆಂಗಳೂರಿಗೆ ಬರುವುದಾಗಿ ತಿಳಿಸಿದ್ದರು. ಅದರಂತೆ ಅಂದು ಬೆಳಿಗ್ಗೆ ಬೆಂಗಳೂರಿಗೆ

ಬೆಳ್ತಂಗಡಿ: ನಿಗೂಢವಾಗಿ ಕಣ್ಮರೆಯಾದ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ…..ಮೃತರನ್ನು ಚಿತ್ರಾಪು ಮರ್ಕುಂಜ ನಿವಾಸಿ ವನಜಾ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ. ವನಜಾ ಅವರು ಜೆಸಿಂತಾ ಮಚಾದೊ ಎಂಬವರ ಜೊತೆ ಕೊಕ್ಕರಕಲ್ ಸಮೀಪವಿರುವ ಹಾಲು ಸೊಸೈಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ

ಮೂಲ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ; ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ದುರ್ಮರಣ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಐವರ್ನಾಡು : ಕೃಷಿ ತೋಟಕ್ಕೆ ಕಾಡಾನೆ ಧಾಳಿ – ಅಪಾರ ಕೃಷಿ ನಾಶ

(ನ್ಯೂಸ್‌ ಕಡಬ) newskadaba.com,ಜ.29  ಸುಳ್ಯ:ಐವರ್ನಾಡು ಗ್ರಾಮದ ಉದ್ದಂಪಾಡಿ ಎಂಬಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆ ಧಾಳಿ ಮಾಡಿ ಅಪಾರ ಕೃಷಿ ನಾಶ ಪಡಿಸಿದ ಘಟನೆ ನಡೆದಿದೆ. ಉದ್ದಂಪಾಡಿ ಹೊನ್ನಪ್ಪ ನಾಯ್ಕ್ ಮತ್ತು ಕರುಣಾಕರ ನಾಯ್ಕ್ ಎಂಬವರ ಕೃಷಿ ತೋಟಕ್ಕೆ ಭಾನುವಾರ ರಾತ್ರಿ ಆನೆಗಳು ಧಾಳಿ ಮಾಡಿ ಅಪಾರ ಕೃಷಿ ನಾಶಮಾಡಿದೆ. ಅಡಕೆ ಗಿಡ, ಬಾಳೆ ,ತೆಂಗಿನ ಗಿಡಗಳನ್ನು ಪುಡಿಗಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ಐವರ್ನಾಡು : ಕೃಷಿ ತೋಟಕ್ಕೆ ಕಾಡಾನೆ ಧಾಳಿ – ಅಪಾರ ಕೃಷಿ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನಿಧನ

(ನ್ಯೂಸ್‌ ಕಡಬ) newskadaba.com,ಜ.29  ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.‌ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದಿಂದ ಸಮಾಜಕ್ಕೆ, ಮುಖ್ಯವಾಗಿ ಕಾರ್ಮಿಕ ವರ್ಗಕ್ಕೆ ತುಂಬಲಾರದ ನಷ್ಟವಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು

ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬರಾವ್ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top