ಬ್ರೇಕಿಂಗ್ ನ್ಯೂಸ್

ದೈವಗಳ ಮೂರ್ತಿಗಳು, ಬೆಲೆಬಾಳುವ ವಸ್ತುಗಳ ಕಳವು ಆರೋಪ- ಇಬ್ಬರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,ಜ.29  ಮಂಗಳೂರು: ಕುಳಾಯಿ ಗ್ರಾಮದ ಬೀಗ ಹಾಕಿದ ಮನೆಯಿಂದ ದೈವದ ಮೂರ್ತಿಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಮಾರು 1.95 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಸೈಯದ್ ಅಲಿ (40), ಬಜ್ಪೆ ನಿವಾಸಿ ವಾಜಿದ್ ಜೆ ಅಲಿಯಾಸ್ ವಾಜಿ (27) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಕುಳಾಯಿ ಗ್ರಾಮದ ಯಶೋದಾ ಕ್ಲಿನಿಕ್ ಬಳಿಯ ನಿವಾಸಿ ಸುರೇಶ್ ಅವರ ಪತ್ನಿ ಅಮಿತಾ […]

ದೈವಗಳ ಮೂರ್ತಿಗಳು, ಬೆಲೆಬಾಳುವ ವಸ್ತುಗಳ ಕಳವು ಆರೋಪ- ಇಬ್ಬರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.29:  ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಟ್ಟಾಯಂ ಕಾರು ಅಪಘಾತದಲ್ಲಿ ಸುರತ್ಕಲ್ ಯುವಕ ಸಾವು, 4 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,ಜ.28  ಕೊಟ್ಟಾಯಂ: ಕೇರಳದ ಕೊಟ್ಟಾಯಂನಲ್ಲಿ ಬುಧವಾರ ನಡೆದ ಕಾರು ಅಪಘಾತದಲ್ಲಿ ಸುರತ್ಕಲ್‌ನ ಕಾನಾದ ಯುವಕನೊಬ್ಬ ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ.ಮೃತ ವ್ಯಕ್ತಿಯನ್ನು ಮುಲ್ಕಿ ತಾಲ್ಲೂಕಿನ ಅಂಗರಗುಡ್ಡೆ ಮೂಲದ ಶಾನವಾಜ್ ಅಲಿಯಾಸ್ ಶಮೀಮ್ (26) ಎಂದು ಗುರುತಿಸಲಾಗಿದ್ದು, ಪ್ರಸ್ತುತ ಕಾನಾದ ಚಿರಾಗ್ ಫ್ಲಾಟ್ಸ್‌ನಲ್ಲಿ ವಾಸಿಸುತ್ತಿದ್ದರು. ಶಮೀಮ್ ಮತ್ತು ಇತರ ನಾಲ್ವರು ಕೊಟ್ಟಾಯಂನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕಾಗಿ ಬೌನ್ಸರ್‌ಗಳಾಗಿ ಹೋಗಿದ್ದರು ಎಂದು ತಿಳಿದುಬಂದಿದೆ. ಬುಧವಾರ ಬೆಳಿಗ್ಗೆ, ಅವರು ಉಪಾಹಾರ ಸೇವಿಸಲು ಪಟ್ಟಣದ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಅಪಘಾತ ಸಂಭವಿಸಿದೆ.

ಕೊಟ್ಟಾಯಂ ಕಾರು ಅಪಘಾತದಲ್ಲಿ ಸುರತ್ಕಲ್ ಯುವಕ ಸಾವು, 4 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ

  (ನ್ಯೂಸ್‌ ಕಡಬ) newskadaba.com,ಜ.28  ಮುಂಬೈ:  ಅಜಿತ್‌ ಪವಾರ್‌ ಪ್ರಯಾಣಿಸುತ್ತಿದ್ದ  ವಿಮಾನ ಲ್ಯಾಂಡ್‌ ಆಗಲು ಪ್ರಯತ್ನಿಸುತ್ತಿದ್ದ ವೇಳೆ ಪತನಗೊಂಡಿದೆ.ಫ್ಲೈಟ್‌ರಾಡರ್‌ನ ದತ್ತಾಂಶದ ಪ್ರಕಾರ ಬಾಂಬಾರ್ಡಿಯರ್ ಲಿಯರ್‌ಜೆಟ್ 45 (ವಿಟಿ-ಎಸ್‌ಎಸ್‌ಕೆ) ಮುಂಬೈ ವಿಮಾನ ನಿಲ್ದಾಣದಿಂದ ಬೆಳಗ್ಗೆ 8:10ಕ್ಕೆ ಟೇಕಾಫ್‌ ಆಗಿತ್ತು .ಅರಬ್ಬಿ ಸಮದ್ರದ ಮೇಲೆ ಹಾರಿ 8:30ಕ್ಕೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲು ಪೈಲಟ್‌ ಪ್ರಯತ್ನಿಸಿದ್ದಾರೆ.ಮೊದಲ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ 2ನೇ ಬಾರಿ ವಿಮಾನ ಲ್ಯಾಂಡಿಂಗ್‌ ಮಾಡಲು ಮುಂದಾಗಿದ್ದಾರೆ. ಬೆಳಗ್ಗೆ 8:42 ರ ಸುಮಾರಿಗೆ ಎರಡನೇ ಬಾರಿಗೆ ಇಳಿಸಲು

ಖಾಸಗಿ ವಿಮಾನ ಎರಡನೇ ಬಾರಿ ರನ್‌ವೇನಲ್ಲಿ ಲ್ಯಾಂಡ್‌ ಮಾಡುವ ವೇಳೆ ಪತನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com,ಜ.28  ಬೆಂಗಳೂರು:  ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌‍ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ನಡುವೆ ಗುರುವಾರ ಗೈರಾದರೆ ನೋ ವರ್ಕ್‌

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ

(ನ್ಯೂಸ್‌ ಕಡಬ) newskadaba.com,ಜ.28  ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ  ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ… ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ. ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ

ಮಹಾರಾಷ್ಟ್ರದಲ್ಲಿ ಭೀಕರ ಹೆಲಿಕಾಪ್ಟರ್ ಅಪಘಾತ ಡಿಸಿಎಂ ಅಜಿತ್ ಪವಾರ್ ಸೇರಿ ಆರು ಮಂದಿ ದುರ್ಮರಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

  (ನ್ಯೂಸ್‌ ಕಡಬ) newskadaba.com,ಜ.28  ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮುಳುಗಿದ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಮೃತರನ್ನು ಮೈಸೂರು ನಿವಾಸಿ ದಿಶಾ (23) ಎಂದು ಗುರುತಿಸಲಾಗಿದೆ. ಜನವರಿ 26 ರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಮೈಸೂರಿನಿಂದ ಕೋಡಿಬೆಂಗ್ರೆಗೆ ರಜೆಯ ಮೇಲೆ ಬಂದಿದ್ದ ಯುವಕರ ಗುಂಪೊಂದು ಪ್ರಯಾಣಿಸುತ್ತಿದ್ದ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅದೇ ದಿನ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ!

  (ನ್ಯೂಸ್‌ ಕಡಬ) newskadaba.com,ಜ.28 : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಮತ್ತು ನೋಟ್‌ಬುಕ್‌ಗಳು ದೊರೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರಂಭದಲ್ಲಿ 500 ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು.”ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು, ಸರ್ಕಾರವು ಈಗ ಒಟ್ಟು 3,500 ಕೋಟಿ ರೂ. ವೆಚ್ಚದಲ್ಲಿ 900 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ”

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,ಜ.28 ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳಾದ ಪೂತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) , ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ,

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.28: ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top