ಬ್ರೇಕಿಂಗ್ ನ್ಯೂಸ್

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ

(ನ್ಯೂಸ್‌ ಕಡಬ) newskadaba.com,ಜ.17 :  ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ ಹಾಗೂ ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಟುಂಬ ಹಾಗೂ ಸ್ನೇಹಿತರ ಜೊತೆಗೆ ಮಠಕ್ಕೆ ಭೇಟಿ ನೀಡಿದ್ದ ಸುರೇಶ್‌ ಗೋಪಿ ಅವರು ಶ್ರೀಕೃಷ್ಣನ ದರ್ಶನ ಪಡೆದರು. ನಟ ಹಾಗೂ ಸಚಿವರನ್ನು ಕೃಷ್ಣಮಠಕ್ಕೆ ದಿವಾನರು ಆದರದಿಂದ ಬರಮಾಡಿಕೊಂಡರು. ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯನ್ನು ನಟ ಭೇಟಿಯಾದರು. ತೀರ್ಥರ ಪರ್ಯಾಯ ಸಮಾಪ್ತಿ ವೇಳೆ ಭೇಟಿ ಮಾಡಲಾಯಿತು. ಕೇಂದ್ರ ಸಚಿವರಿಗೆ ಮಠದ […]

ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಸಚಿವ ಸುರೇಶ್‌ ಗೋಪಿ ಭೇಟಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ

(ನ್ಯೂಸ್‌ ಕಡಬ) newskadaba.com,ಜ.17 :  ಕೇರಳದ ಕುಂಭಮೇಳ ಎಂದೇ ಪ್ರಸಿದ್ಧಿಯಾಗಿರುವ ಮಹಾಮಾಘ ಮಹೋತ್ಸವಕ್ಕೆ ಮಲಪ್ಪುರಂ ಜಿಲ್ಲೆಯ ತಿರುನವಾಯದಲ್ಲಿ ಭವ್ಯವಾಗಿ ಚಾಲನೆ ದೊರೆತಿದೆ. ಪುರಾತನ ಪರಂಪರೆ ಮತ್ತು ಆಧ್ಯಾತ್ಮಿಕ ಮಹತ್ವ ಹೊಂದಿರುವ ಈ ಮಹೋತ್ಸವವು ಜನವರಿ 16 ರಿಂದ ಫೆಬ್ರವರಿ 3 ರವರೆಗೆ ನಡೆಯಲಿದ್ದು, ಲಕ್ಷಾಂತರ ಭಕ್ತರು ಮತ್ತು ಸಾಧು-ಸಂತರ ಸಮಾಗಮಕ್ಕೆ ವೇದಿಕೆಯಾಗಲಿದೆ. ಗುರು ಗ್ರಹದ ಚಕ್ರದಲ್ಲಿ ಒಮ್ಮೆ, ಅಂದರೆ 12 ವರ್ಷಗಳಿಗೊಮ್ಮೆ ಮಾಘ ಮಾಸದ ಹುಣ್ಣಿಮೆ ಮತ್ತು ಮಾಘ ನಕ್ಷತ್ರ ಒಂದೇ ದಿನ ಸೇರುವ ಸಂದರ್ಭದಲ್ಲಿ ಮಹಾಮಾಘಂ

ಕೇರಳದಲ್ಲಿ ‘ದಕ್ಷಿಣದ ಕುಂಭಮೇಳ’ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್‌ ಕಠಿಣ ನಿಲುವು – ಬೆಂಬಲಿಸದ ದೇಶಗಳಿಗೆ ಸುಂಕದ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,ಜ.17 :  ಗ್ರೀನ್‌ಲ್ಯಾಂಡ್‌ನ್ನು ಅಮೇರಿಕಾದ ವಶಕ್ಕೆ ಪಡೆಯುವ ತನ್ನ ಯೋಜನೆಗೆ ಬೆಂಬಲ ನೀಡದ ರಾಷ್ಟ್ರಗಳ ಮೇಲೆ ವ್ಯಾಪಾರ ಸುಂಕಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. ಗ್ರೀನ್‌ಲ್ಯಾಂಡ್‌ ಅಮೇರಿಕಾದ ರಾಷ್ಟ್ರೀಯ ಭದ್ರತೆಗೆ ಅತ್ಯಂತ ಅಗತ್ಯ ಎಂದು ಟ್ರಂಪ್‌ ಹೇಳಿದ್ದು, ಈ ನಿರ್ಧಾರವನ್ನು ಒಪ್ಪದ ದೇಶಗಳ ವಿರುದ್ಧ ಆರ್ಥಿಕ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಯುರೋಪ್‌ ರಾಷ್ಟ್ರಗಳಿಗೆ ಟ್ರಂಪ್‌ ಗಟ್ಟಿಯಾದ ಸಂದೇಶ ರವಾನಿಸಿದ್ದಾರೆ. ಇದಕ್ಕೂ ಮುನ್ನ ಗ್ರೀನ್‌ಲ್ಯಾಂಡ್‌ನ್ನು

ಗ್ರೀನ್‌ಲ್ಯಾಂಡ್ ವಿಚಾರದಲ್ಲಿ ಟ್ರಂಪ್‌ ಕಠಿಣ ನಿಲುವು – ಬೆಂಬಲಿಸದ ದೇಶಗಳಿಗೆ ಸುಂಕದ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗೋವಾದಲ್ಲಿ ಇಬ್ಬರು ರಷ್ಯನ್ ಸ್ನೇಹಿತೆಯರ ಭೀಕರ ಹತ್ಯೆ – ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,ಜ.17 :  ಗೋವಾದಲ್ಲಿ ನಡೆದ ಭೀಕರ ಜೋಡಿ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ರಷ್ಯಾದ ವ್ಯಕ್ತಿಯೊಬ್ಬ ತನ್ನ ಇಬ್ಬರು ಮಹಿಳಾ ಸ್ನೇಹಿತೆಯರ ಕತ್ತು ಸೀಳಿ ಹತ್ಯೆಗೈದಿರುವುದು ಪತ್ತೆಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಗೋವಾದ ಮೊರ್ಜಿಮ್ ಮತ್ತು ಅರಾಂಬೋಲ್ ಗ್ರಾಮಗಳಲ್ಲಿ ವಾಸವಾಗಿದ್ದ ರಷ್ಯನ್ ನಾಗರಿಕರಾದ ಎಲೆನಾ ವನೀವಾ (37) ಮತ್ತು ಎಲೆನಾ ಕಸ್ತನೋವಾ (37) ಅವರನ್ನು ಅಲೆಕ್ಸಿ ಲಿಯೊನೊವ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿಯಂತೆ, ಜನವರಿ 14ರಂದು ಮೊರ್ಜಿಮ್‌ನಲ್ಲಿ

ಗೋವಾದಲ್ಲಿ ಇಬ್ಬರು ರಷ್ಯನ್ ಸ್ನೇಹಿತೆಯರ ಭೀಕರ ಹತ್ಯೆ – ಆರೋಪಿ ಬಂಧನ Read More »

ಬ್ರೇಕಿಂಗ್ ನ್ಯೂಸ್

ಅಂಡರ್-19 ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು!

(ನ್ಯೂಸ್‌ ಕಡಬ) newskadaba.com,ಜ.17 :  5 ಬಾರಿ ಚಾಂಪಿಯನ್‌ ಭಾರತ ತಂಡ ಈ ಬಾರಿ ಐಸಿಸಿ ಅಂಡರ್‌-19 ಏಕದಿನ ವಿಶ್ವಕಪ್‌ನಲ್ಲಿ ಸೂಪರ್‌-6 ಹಂತಕ್ಕೆ ಪ್ರವೇಶ ಖಚಿತಪಡಿಸಿಕೊಳ್ಳುವ ವಿಶ್ವಾಸದಲ್ಲಿದೆ. ತಂಡ ಶನಿವಾರ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಟೂರ್ನಿಯಲ್ಲಿ ಸತತ 2ನೇ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದೆ. ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಯುಎಸ್‌ಎ ವಿರುದ್ಧ 6 ವಿಕೆಟ್‌ ಗೆಲುವು ಲಭಿಸಿತ್ತು. ಬಲಗೈ ವೇಗಿ ಹೆನಿಲ್‌ ಪಟೇಲ್‌ 16 ರನ್‌ಗೆ 5 ವಿಕೆಟ್‌ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಸುಲಭ

ಅಂಡರ್-19 ವಿಶ್ವಕಪ್: ಇಂದು ಭಾರತ vs ಬಾಂಗ್ಲಾ ಕದನ, ಸೂಪರ್-6 ಮೇಲೆ ಭಾರತದ ಕಣ್ಣು! Read More »

ಬ್ರೇಕಿಂಗ್ ನ್ಯೂಸ್

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಏಪ್ರಿಲ್ 1 ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯನ್ನು ನಿಷೇಧಿಸಲು ಸಜ್ಜಾಗಿದೆ. ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಪ್ರಯಾಣವನ್ನು ಸುಗಮಗೊಳಿಸುವ ಉದ್ದೇಶದಿಂದ ಪ್ರಯಾಣಿಕರು ಟೋಲ್‌ಗಳನ್ನು ಪಾವತಿಸಲು FASTag ಅಥವಾ UPI ಅನ್ನು ಬಳಸಬೇಕಾಗುತ್ತದೆ. ಇನ್ನೂ ಯಾವುದೇ ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿಲ್ಲವಾದರೂ, ಸಚಿವಾಲಯವು ಸುಗಮ ಪರಿವರ್ತನೆಗೆ ಸಿದ್ಧತೆ ನಡೆಸುತ್ತಿದೆ. ಈ ಕ್ರಮವು ದೀರ್ಘ ಸರತಿ ಸಾಲುಗಳನ್ನು ನಿವಾರಿಸುತ್ತದೆ ಮತ್ತು ಪ್ರಯಾಣವನ್ನು ಹೆಚ್ಚು

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಬಂದ್ – ಹೊಸ ನಿಯಮ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ

(ನ್ಯೂಸ್‌ ಕಡಬ) newskadaba.com,ಜ.17 ಬೆಂಗಳೂರು : ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇಂಥ ಲೋಪಗಳಾಗದಂತೆ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಲವು ಬಿಗಿ ಕ್ರಮಗಳನ್ನು ಕೈಗೊಂಡಿದೆ. ನೋಡಲ್‌ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್‌ಐಆರ್‌ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್‌ಅಪ್‌/ ಯೂಟ್ಯೂಬ್‌/

ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಾದ್ರೆ ಪ್ರಿನ್ಸಿಪಾಲ್ ಮನೆಗೆ ಫಿಕ್ಸ್! ಶಿಕ್ಷಣ ಇಲಾಖೆಯಿಂದ ‘ಬಿಗ್‌ ಶಾಕ್‌’ ನೀಡುವ ಸುತ್ತೋಲೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ

(ನ್ಯೂಸ್‌ ಕಡಬ) newskadaba.com,ಜ.17 ಮಂಗಳೂರುಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬ್ಲೂ ಬೇ ಬೀಚ್ಲ್ಲಿ 9ನೇ ಅವೃತ್ತಿಯ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಜ. 17 ಮತ್ತು 18ರಂದು ನಡೆಯಲಿದೆ. ಸಂಜೆ 3 ಗಂಟೆಗೆ ಆರಂಭವಾಗುವ ಉತ್ಸವದಲ್ಲಿ ಭಾಗವಹಿಸಲು 15 ದೇಶಗಳ 30 ಅಂತರಾಷ್ಟ್ರೀಯ ಗಾಳಿಪಟುಗಳು ಈಗಾಗಲೇ ಮಂಗಳೂರಿಗೆ ಆಗಮಿಸಿದ್ದಾರೆ. ಭಾರತ ಮತ್ತು ವಿದೇಶಗಳಿಂದ ಸೇರಿ ಒಟ್ಟು 62 ನುರಿತ ಗಾಳಿಪಟ ಹಾರಾಟಗಾರರು ತಮ್ಮ ವೈವಿಧ್ಯಮಯ ಗಾಳಿಪಟಗಳನ್ನು ಬಾನಂಗಳದಲ್ಲಿ ಹಾರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು. ಜಿಲ್ಲಾಧಿಕಾರಿ

ಕರಾವಳಿ ಉತ್ಸವದ ಅಂಗವಾಗಿ ತಣ್ಣೀರು ಬಾವಿ ಬೀಚ್‌ನಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.17: ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ

ಇಂದಿನಿಂದ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಿಯಾಲಿಟಿ ಶೋ “ಬಿಗ್ ಬಾಸ್” ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್‌

(ನ್ಯೂಸ್‌ ಕಡಬ) newskadaba.com,: ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿದ ಆರೋಪದಡಿ ಬಿಗ್ ಬಾಸ್ ವಿರುದ್ಧ ರಣಹದ್ದು ಸಂರಕ್ಷಣಾ ಟ್ರಸ್ಟ್ ವತಿಯಿಂದ ದೂರು ನೀಡಿದ್ದ ಹಿನ್ನೆಲೆ, ಬಿಗ್ ಬಾಸ್ ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್ ಜಾರಿ ಮಾಡಲಾಗಿದೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ‘ಹೊಂಚು ಹಾಕಿ ಸಂಚು ಮಾಡಿ ಲಬಕ್ ಅಂತ ಹಿಡಿಯುವುದು’ ಎಂದು ಮಾಹಿತಿ ಹರಡಲಾಗಿದೆ. ಹದ್ದು& ರಣಹದ್ದಿಗೂ ಇರುವ ವ್ಯತ್ಯಾಸದ ಬಗ್ಗೆ ಸ್ಪಷ್ಟಿಕರಣ ನೀಡುವಂತೆ, ಪ್ರೋಗ್ರಾಂ ಹೆಡ್‌ಗೆ ನೋಟಿಸ್‌

ರಿಯಾಲಿಟಿ ಶೋ “ಬಿಗ್ ಬಾಸ್” ಪ್ರೋಗ್ರಾಂ ಹೆಡ್‌ಗೆ ಅರಣ್ಯ ಇಲಾಖೆಯಿಂದ ತಿಳುವಳಿಕೆ ನೋಟಿಸ್‌ Read More »

ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top