ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಜ.16 :  ತಮಿಳುನಾಡಿನ ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ […]

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ

(ನ್ಯೂಸ್‌ ಕಡಬ) newskadaba.com,  ಜ.15 :  ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ  ಗುರುವಾರ (ಜನವರಿ 15) ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಕೆಲವು ಮಾರುಕಟ್ಟೆಯಲ್ಲಿ ರಾಶಿ ಅಡಿಕೆ 60 ಸಾವಿರ ರೂ.ನ ಗಡಿ ದಾಟಿದೆ. ಅಡಿಕೆ ಧಾರಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ಶಿವಮೊಗ್ಗದಲ್ಲಿ ರಾಶಿ ಅಡಿಕೆ 57,100ರೂ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಮತ್ತೆ ಭರ್ಜರಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!!

(ನ್ಯೂಸ್‌ ಕಡಬ) newskadaba.com,  ಜ.15  ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಅವರು ಇದೀಗ ಸ್ವಂತ ತಂಗಿಯ ವಿರುದ್ಧವೇ ಆರ್‌ಆರ್ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ಸಮೃದ್ಧಿ ರಾಮ್ ವಿರುದ್ಧ ದೂರು ನೀಡಿದ್ದಾರೆ. ತಮ್ಮ ಸಹೋದರಿ, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದಾರೆ. ಕಾರುಣ್ಯಾ ರಾಮ್ ಸಹೋದರಿ ಸಮೃದ್ಧಿ ರಾಮ್ ಅವರು ಮೇಕಪ್ ಕಲಾವಿದೆ ಆಗಿದ್ದರು. ಬಳಿಕ ಕೆಲವು ಧಾರಾವಾಹಿಗಳಲ್ಲಿ ಕೂಡ ನಟಿಸಿದರು.

ಸ್ವಂತ ತಂಗಿಯ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಕಾರುಣ್ಯ ರಾಮ್..!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ

(ನ್ಯೂಸ್‌ ಕಡಬ) newskadaba.com,  ಜ.15  ಬೆಂಗಳೂರು: ಇದೇ ಜ.22ರಿಂದ ಜ.31ರ ತನಕ ಅಧಿವೇಶನ ನಡೆಸಲು ತುರ್ತು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ರಜಾ ದಿನಗಳನ್ನ ಹೊರತುಪಡಿಸಿ ಎಷ್ಟು ದಿನ ಅಧಿವೇಶನ ನಡೆಯಬೇಕು ಎಂಬುದನ್ನ ಸ್ಪೀಕರ್ ತೀರ್ಮಾನಿಸಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ನಡೆದ ಸಚಿವ ಸಂಪುಟ ಸಭೆಯಲ್ಲಿ ಮನ್ರೇಗಾ ವರ್ಸಸ್ ವಿಕಸಿತ ಭಾರತ್ ಜಿರಾಮಜಿ ಕಾಯ್ದೆಗಳನ್ನು ಹೋಲಿಕೆ ಮಾಡಿ, ಸುದೀರ್ಘವಾಗಿ ಕ್ಯಾಬಿನೆಟ್‌ನಲ್ಲಿ ಚರ್ಚಿಸಲಾಗಿದೆ. ಬಳಿಕ

ಜ.22ರಿಂದ 31ರ ವರೆಗೆ ವಿಧಾನಮಂಡಲದ ಜಂಟಿ ಅಧಿವೇಶನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು

(ನ್ಯೂಸ್‌ ಕಡಬ) newskadaba.com,  ಜ.15 ಬೆಳ್ತಂಗಡಿ: ಕಳಿಯ ಗ್ರಾಮದ ನಾಳ ದೇವಸ್ಥಾನಕ್ಕೆ ಇಂದು ಮುಂಜಾನೆ ಧನುಪೂಜೆಗೆ ಹೊರಟಿದ್ದ ಬಾಲಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದು, ಬಳಿಕ ಮನೆಯ ಸಮೀಪದ ಕೆರೆಯಲ್ಲಿ ಆತನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ–ಬರಮೇಲು ಪ್ರದೇಶದಲ್ಲಿ ನಡೆದಿದೆ.ಮೃತ ಬಾಲಕನನ್ನು ಕುವೆಟ್ಟು ಗ್ರಾಮದ ಸಂಬೋಳ್ಯ ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ, ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (15) ಎಂದು ಗುರುತಿಸಲಾಗಿದೆ. ಸುಮಂತ್ ಸೇರಿದಂತೆ ಮೂವರು ಬಾಲಕರು

ಬೆಳ್ತಂಗಡಿ: 9ನೇ ತರಗತಿ ವಿದ್ಯಾರ್ಥಿ ಸುಮಂತ್ ನಿಗೂಢ ಸಾವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಜ.15: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದ್ದು, ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್

(ನ್ಯೂಸ್‌ ಕಡಬ) newskadaba.com: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ನ ಇತ್ತೀಚಿನ ಹೇಳಿಕೆಗಳನ್ನು ನೋಡಿದಾಗ ವೆನೆಜುವೆಲಾದ ತೈಲ ಮಾತ್ರವಲ್ಲ, ದೇಶದ ಕೀಲಿಕೈ ಕೂಡ ಎಂಬುದು ಸ್ಪಷ್ಟವಾಗುತ್ತಿದೆ. ಅಮೆರಿಕವು ಇತ್ತೀಚೆಗೆ ವೆನೆಜುವೆಲಾ ವಿರುದ್ಧ ಮಿಲಿಟರಿ ದಾಳಿ ನಡೆಸಿ, ಅದರ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿತ್ತು. ಈಗ ಅಷ್ಟೇ ಅಲ್ಲ ಡೊನಾಲ್ಡ್​ ಟ್ರಂಪ್ ತಮ್ಮನ್ನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡಿರುವುದು ಅಚ್ಚರಿಯನ್ನುಂಟು ಮಾಡಿದೆ. ಅವರು ತಮ್ಮ ಟ್ರುತ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಇದರ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಜನರು

ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಘೋಷಿಸಿಕೊಂಡ ಟ್ರಂಪ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌

(ನ್ಯೂಸ್‌ ಕಡಬ) newskadaba.com: ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರ ನಿಗೂಢ ಸಾವಿನಲ್ಲಿ ಅಚ್ಚರಿಯ ತಿರುವು ಸಿಕ್ಕಿದೆ. ಅವರ ಸಾವು ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಿಂದ ಎಂದು ವರದಿಯಾಗಿತ್ತು. ಪೊಲೀಸ್ ತನಿಖೆ ನಡೆಸಿ ಯುವತಿಯ ಸಾವು ಪೂರ್ವನಿಯೋಜಿತ ಕೊಲೆ ಎಂದು ದೃಢಪಡಿಸಿವೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ಕರ್ನಲ್ ಕುರಯ್‌ ಅವನನ್ನು ಬಂಧಿಸಲಾಗಿದೆ. ಮೂಲತಃ ಮಂಗಳೂರಿನವರಾದ ಶರ್ಮಿಳಾ ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ

ಮಂಗಳೂರು ಮೂಲದ ಟೆಕ್ಕಿಕೊಲೆ ಪ್ರಕರಣ: ಆರೋಪಿ ಓರ್ವ ಅರೆಸ್ಟ್‌ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ

(ನ್ಯೂಸ್‌ ಕಡಬ) newskadaba.com: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ. ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು. ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು.

ಮೂರನೇ ಹಂತದಲ್ಲಿ ತಾಂತ್ರಿಕ ದೋಷ- PSLV ಮಿಷನ್ ಉಡಾವಣೆ ವಿಫಲ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ

(ನ್ಯೂಸ್‌ ಕಡಬ) newskadaba.com,: ಕಳೆದ ಕೆಲವು ದಿನಗಳ ಹಿಂದೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಆರೆಸ್ಟ್ ಮಾಡಿದ್ದಾರೆ. ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಆರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಲೀಕ್‌ ಮಾಡಿದ 8 ಮಂದಿ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top