ಬ್ರೇಕಿಂಗ್ ನ್ಯೂಸ್

ಫಿಟ್ನೆಸ್, ವಿಮೆ ಇಲ್ಲದ ವಾಹನದಲ್ಲಿ ಮಕ್ಕಳ ಜೀವದೊಂದಿಗೆ ಚೆಲ್ಲಾಟ: ಕಲ್ಲಡ್ಕ ಶ್ರೀರಾಮ ಶಾಲಾ ಆಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ

(ನ್ಯೂಸ್‌ ಕಡಬ) newskadaba.com,  ಜು.27  ಬಂಟ್ವಾಳ : ತಾಲೂಕಿನ ಬರಿಮಾರ್‌ನಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು 6 ವರ್ಷದ ಎಲ್ ಕೆ ಜಿ ವಿದ್ಯಾರ್ಥಿನಿ ಮೃತಪಟ್ಟಿರುವ ಹಾಗೂ ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುರಂತ ಅತ್ಯಂತ ಆಘಾತಕಾರಿ ಮತ್ತು ದುಃಖಕರ ಘಟನೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಆಡಳಿತ ಮಂಡಳಿಯ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿರುವುದು ವರದಿಯಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಮಕ್ಕಳನ್ನು ಸಾಗಿಸುತ್ತಿದ್ದ ಶಾಲಾ ವಾಹನಕ್ಕೆ ಅಗತ್ಯವಿರುವ ಫಿಟ್ನೆಸ್ […]

ಫಿಟ್ನೆಸ್, ವಿಮೆ ಇಲ್ಲದ ವಾಹನದಲ್ಲಿ ಮಕ್ಕಳ ಜೀವದೊಂದಿಗೆ ಚೆಲ್ಲಾಟ: ಕಲ್ಲಡ್ಕ ಶ್ರೀರಾಮ ಶಾಲಾ ಆಡಳಿತದ ನಿರ್ಲಕ್ಷ್ಯಕ್ಕೆ SDPI ತೀವ್ರ ಖಂಡನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೀರಾಬಾಯಿ ಚಾನುಗೆ ಹ್ಯಾಟ್ರಿಕ್ ಚಿನ್ನ: 2026ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ!

(ನ್ಯೂಸ್‌ ಕಡಬ) newskadaba.com,  ಜು.27 : ಭಾರತದ ಸ್ಟಾರ್ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಅವರು 2026ರ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ 48 ಕೆಜಿ ತೂಕದ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಅವರಿಗೆ ಸತತ 3ನೇ ಚಿನ್ನದ ಪದಕವಾಗಿದೆ. ಮಣಿಪುರದ ಕ್ರೀಡಾಪಟು ಚಾನು ಅವರು ಸ್ನ್ಯಾಚ್ ಹಾಗೂ ಕ್ಲೀನ್ ಅಂಡ್ ಜರ್ಕ್ ಎರಡೂ ವಿಭಾಗಗಳಲ್ಲಿ ಹೊಸ ಕಾಮನ್‌ವೆಲ್ತ್ ಗೇಮ್ಸ್ ದಾಖಲೆ ನಿರ್ಮಿಸಿದ್ದಾರೆ. 85 ಕೆಜಿ (ಕಾಮನ್‌ವೆಲ್ತ್ ಮತ್ತು ಗೇಮ್ಸ್ ದಾಖಲೆ), 

ಮೀರಾಬಾಯಿ ಚಾನುಗೆ ಹ್ಯಾಟ್ರಿಕ್ ಚಿನ್ನ: 2026ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಭಾರತಕ್ಕೆ ಮೊದಲ ಸ್ವರ್ಣ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ನಾಪತ್ತೆಯಾಗಿದ್ದ ಮಹಿಳೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ ಚುರುಕು

(ನ್ಯೂಸ್‌ ಕಡಬ) newskadaba.com,  ಜು.27 : ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ಪುತ್ತೂರಿನ ಪಡ್ನೂರು ಗ್ರಾಮದ ಅಜೇಯನಗರದ ನಿವಾಸಿಯಾಗಿರುವ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಗ್ರಂಥಪಾಲಕಿ ವಿಜಯಾ ಟಿ. (60) .. ಇವರ ಮೃತದೇಹ ಬಂಟ್ವಾಳ ತಾಲೂಕಿನ ಶಂಭೂರು ಸಮೀಪದ ನೇತ್ರಾವತಿ ನದಿ ಅಣೆಕಟ್ಟಿನಲ್ಲಿ ಶನಿವಾರ ಪತ್ತೆಯಾಗಿದೆ.ಗುರುವಾರ ಬೆಳಿಗ್ಗೆ ಪುತ್ತೂರು ಪಟ್ಟಣಕ್ಕೆ ತೆರಳಿದ್ದ ಇವರು ಮನೆಗೆ ಮರಳದಿದ್ದಾಗ ಕುಟುಂಬಸ್ಥರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ

ಪುತ್ತೂರು: ನಾಪತ್ತೆಯಾಗಿದ್ದ ಮಹಿಳೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ ಚುರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ

(ನ್ಯೂಸ್‌ ಕಡಬ) newskadaba.com,  ಜು.27  ಕಡಬ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಕಚೇರಿಯಲ್ಲಿ ತಾಲೂಕು ಭಜನಾ ಪರಿಷತ್ತಿನ ವಿಶೇಷ ಸಭೆ ಭಾನುವಾರ ನಡೆಯಿತು.ರಾಜ್ಯ ಭಜನಾ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್ ದೀಪ ಬೆಳಗಿಸುವ ಮೂಲಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯ ಭಜನಾ ಪರಿಷತ್ತಿನ ಮೂಲಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ತಾಲೂಕು ಭಜನಾ ಪರಿಷತ್ತಿನ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಯುತ್ತಿದ್ದು, ಕಡಬ ತಾಲೂಕು ಭಜನಾ ಪರಿಷತ್ತು ರಾಜ್ಯದಲ್ಲೇ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ನ ವಿಶೇಷ ಸಭೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪದವಿ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಜು.27: ಯುವಜನರಲ್ಲಿ ಹೆಚ್‌ಐವಿ ಸೋಂಕು ಹೆಚ್ಚಾಗುತ್ತಿರುವ ಆತಂಕಕಾರಿ ವರದಿಗಳ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಪದವಿ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಕರ್ನಾಟಕ ಆರೋಗ್ಯ ಇಲಾಖೆ ನಿರ್ಧರಿಸಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ವರದಿಗಳ ಪ್ರಕಾರ, ಹೆಚ್‌ಐವಿ ಬಾಧಿತರ ಸಂಖ್ಯೆಯಲ್ಲಿ ಕರ್ನಾಟಕವು ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟು 2.60 ಲಕ್ಷ ಸೋಂಕಿತರಿದ್ದು, ಅದರಲ್ಲಿ 54,000 ಮಂದಿಗೆ ತಮಗೆ ಸೋಂಕು ತಗಲಿರುವುದರ ಬಗ್ಗೆ ಅರಿವೇ ಇಲ್ಲ.18ರಿಂದ 35 ವರ್ಷದ ಯುವ

ಪದವಿ, ಇಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಹತ್ವದ ನಿರ್ಧಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಾಮಾಣಿಕತೆ ಮೆರೆದ CISF: ಮಂಗಳೂರಿನಲ್ಲಿ ಪ್ರಯಾಣಿಕನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿದ್ದ ಪೌಚ್ ಹಸ್ತಾಂತರ

(ನ್ಯೂಸ್‌ ಕಡಬ) newskadaba.com,  ಜು.26: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ LGF ಪಾರ್ಕಿಂಗ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ವಿಠ್ಠಲ್ ಹೊಸಮನಿ ಅವರಿಗೆ ಅನಾಥವಾಗಿ ಬಿದ್ದಿದ್ದ ಕಪ್ಪು ಬಣ್ಣದ ಪೌಚ್ ಪತ್ತೆಯಾಗಿತ್ತು. ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದಿಂದ ತಪಾಸಣೆ ನಡೆಸಿದ ಬಳಿಕ ಪೌಚ್ ತೆರೆಯಲಾಯಿತು. ಅದರಲ್ಲಿ ಐಫೋನ್, ಚಿನ್ನದ ಉಂಗುರ, $10,000 (ಸುಮಾರು ₹9 ಲಕ್ಷ), 500 ದಿರ್ಹಾಮ್, ಪಾಸ್‌ಪೋರ್ಟ್, ಬೋರ್ಡಿಂಗ್ ಪಾಸ್ ಹಾಗೂ ಬ್ಯಾಂಕ್ ಕಾರ್ಡ್‌ಗಳು ಇದ್ದವು. ಪೌಚ್ ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್

ಪ್ರಾಮಾಣಿಕತೆ ಮೆರೆದ CISF: ಮಂಗಳೂರಿನಲ್ಲಿ ಪ್ರಯಾಣಿಕನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳಿದ್ದ ಪೌಚ್ ಹಸ್ತಾಂತರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನಾಹತ್ ಸಿಂಗ್ ಹೊಸ ಇತಿಹಾಸ: ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಪಟ್ಟ ಗೆದ್ದ ಮೊದಲ ಭಾರತೀಯ ಆಟಗಾರ್ತಿ!

(ನ್ಯೂಸ್‌ ಕಡಬ) newskadaba.com,  ಜು.26: ಕೆನಡಾದ ನಿಯಾಗ್ರಾ-ಆನ್-ದಿ-ಲೆಕ್‌ನಲ್ಲಿ ನಡೆದ 2026ರ ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್‌ಶಿಪ್‌ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ 18 ವರ್ಷದ ಅನಾಹತ್ ಸಿಂಗ್ ಪ್ರಶಸ್ತಿ ಗೆದ್ದು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜುಲೈ 25 ರಂದು ನಡೆದ ಫೈನಲ್‌ನಲ್ಲಿ ಅಗ್ರ ಶ್ರೇಯಾಂಕದ ಅನಾಹತ್, ಈಜಿಪ್ಟ್‌ನ ರುಕಯ್ಯಾ ಸಲೇಮ್ (2ನೇ ಶ್ರೇಯಾಂಕ) ವಿರುದ್ಧ 11-3, 11-7, 11-9 ನೇರ

ಅನಾಹತ್ ಸಿಂಗ್ ಹೊಸ ಇತಿಹಾಸ: ವಿಶ್ವ ಜೂನಿಯರ್ ಸ್ಕ್ವಾಶ್ ಚಾಂಪಿಯನ್ ಪಟ್ಟ ಗೆದ್ದ ಮೊದಲ ಭಾರತೀಯ ಆಟಗಾರ್ತಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ

(ನ್ಯೂಸ್‌ ಕಡಬ) newskadaba.com,  ಜು.26: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಅಭಾವ ಉಂಟಾಗಿ ನದಿಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾದ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿರುವ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ನಿತ್ಯ 42 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು 1,450 ಕ್ಯೂಸೆಕ್ ನೀರಿನ ಅಗತ್ಯವಿತ್ತು. ನದಿಯಲ್ಲಿ ಸಮರ್ಪಕ ಹರಿವಿಲ್ಲದೆ ಕಳೆದ ಒಂದೂವರೆ ತಿಂಗಳಿಂದ ಉತ್ಪಾದನೆ ಬಂದ್ ಆಗಿದೆ. ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ ನೀರು ಹರಿಯದ ಹಿನ್ನೆಲೆಯಲ್ಲಿ,

ಶಿವನಸಮುದ್ರ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿ.ಸಿ. ರೋಡ್ ಜಂಕ್ಷನ್‌ ಬಳಿ ಲಾರಿಯ ಚಕ್ರ ಕಳಚಿಬಿದ್ದು ಮಹಿಳೆಗೆ ಗಾಯ: ಮಂಗಳೂರಿನ ಆಸ್ಪತ್ರೆಗೆ ದಾಖಲು

(ನ್ಯೂಸ್‌ ಕಡಬ) newskadaba.com,  ಜು.26 :ಬಿ.ಸಿ. ರೋಡ್ ಜಂಕ್ಷನ್‌ ಬಳಿ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹೊರರಾಜ್ಯ ನೋಂದಣಿಯ ಕಂಟೇನರ್ ಲಾರಿಯೊಂದರ ಹಿಂಬದಿಯ ಚಕ್ರ ಏಕಾಏಕಿ ಕಳಚಿ ಬಿದ್ದಿದೆ.ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೆಸಿಲ್ಲ ಎಂಬ ಮಹಿಳೆಗೆ ಕಳಚಿದ ಚಕ್ರ ಡಿಕ್ಕಿ ಹೊಡೆದಿದ್ದು, ಅವರಿಗೆ ಗಾಯಗಳಾಗಿವೆ. ಗಾಯಾಳು ಮಹಿಳೆಯನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದ್ದು, ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿ.ಸಿ. ರೋಡ್ ಜಂಕ್ಷನ್‌ ಬಳಿ ಲಾರಿಯ ಚಕ್ರ ಕಳಚಿಬಿದ್ದು ಮಹಿಳೆಗೆ ಗಾಯ: ಮಂಗಳೂರಿನ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಪ್ರಾಪ್ತ ಚಾಲಕನಿಂದ ಭೀಕರ ಅಪಘಾತ — ಬೈಕ್ ಮಾಲೀಕ ಸಹೋದರನಿಗೆ ಜೈಲು, ₹35,000 ದಂಡ

(ನ್ಯೂಸ್‌ ಕಡಬ) newskadaba.com,  ಜು.26 : ಅಪ್ರಾಪ್ತ ಬಾಲಕನಿಗೆ ಬೈಕ್ ಚಲಾಯಿಸಲು ನೀಡಿದ್ದಕ್ಕಾಗಿ, ಬೈಕ್ ಮಾಲೀಕ ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಮ್‌ಗೆ ಬೆಳ್ತಂಗಡಿ ನ್ಯಾಯಾಲಯವು 1 ದಿನದ ಜೈಲು ಶಿಕ್ಷೆ ಮತ್ತು ₹35,000 ದಂಡ ವಿಧಿಸಿದೆ. ಅಪಘಾತ ಎಸಗಿದ ಅಪ್ರಾಪ್ತನಿಗೆ 25 ವರ್ಷ ವಯಸ್ಸಿನವರೆಗೆ ಚಾಲನಾ ಪರವಾನಗಿ ನೀಡಬಾರದು ಎಂದು ಪ್ರಾದೇಶಿಕ ಸಾರಿಗೆ ಕಚೇರಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.ಅಪಘಾತಕ್ಕೀಡಾದ ಬೈಕ್‌ನ ನೋಂದಣಿ ಪ್ರಮಾಣಪತ್ರವನ್ನು (RC) 1 ವರ್ಷದ ಅವಧಿಗೆ ಅಮಾನತುಗೊಳಿಸಲಾಗಿದೆ. ಜುಲೈ 20, 2024 ರ ರಾತ್ರಿ ಕರಾಯದ

ಬೆಳ್ತಂಗಡಿ: ಅಪ್ರಾಪ್ತ ಚಾಲಕನಿಂದ ಭೀಕರ ಅಪಘಾತ — ಬೈಕ್ ಮಾಲೀಕ ಸಹೋದರನಿಗೆ ಜೈಲು, ₹35,000 ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top