ಬ್ರೇಕಿಂಗ್ ನ್ಯೂಸ್

crime, arrest, suspected

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ

(ನ್ಯೂಸ್ ಕಡಬ) newskadaba.com, ನ.05: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ […]

ಮಂಗಳೂರಿನಲ್ಲಿ ಮಾದಕ ವಸ್ತು ಸೇವಿಸಿದ ಆರೋಪ; 8 ಮಂದಿ ಬಂಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ

(ನ್ಯೂಸ್‌ ಕಡಬ) newskadaba.com,  ನ.05:  2024ರ ವಿಧಾನಸಭಾ ಚುನಾವಣೆ ವೇಳೆ ಹರಿಯಾಣದಲ್ಲಿ ಬರೋಬ್ಬರಿ 25 ಲಕ್ಷ ಮತಗಳು ಕಳ್ಳತನ ಆಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನವದೆಹಲಿಯ ಎಐಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾತನಾಡಿದ ಅವರು, “2024ರ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಪ್ರಮಾಣದ ಅಕ್ರಮ ನಡೆದಿದೆ. ಬಿಜೆಪಿ ಗೆದ್ದಿರೋದು ನಕಲಿ ಮತಗಳಿಂದ ಅನ್ನೋದು ಖಚಿತವಾಗಿದೆ. ಮಹಾದೇವಪುರ, ಆಳಂದ ಆದ್ಮೇಲೆ ಇದು ಕೆಲವು ಕ್ಷೇತ್ರಗಳಿಗಷ್ಟೇ ಸೀಮಿತವಾಗಿಲ್ಲ, ಇಡೀ ರಾಜ್ಯ, ದೇಶವನ್ನೇ ಆವರಿಸಿಕೊಂಡಿದೆ ಅನಿಸಿತು.

‘ಹರಿಯಾಣದಲ್ಲಿ 25 ಲಕ್ಷ ಮತಗಳು ಕಳ್ಳತನವಾಗಿದೆ’- ರಾಹುಲ್ ಗಾಂಧಿ ಆರೋಪ Read More »

ಬ್ರೇಕಿಂಗ್ ನ್ಯೂಸ್

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ

(ನ್ಯೂಸ್‌ ಕಡಬ) newskadaba.com,  ನ.05:  ವಾಟ್ಸ್ಯಾಪ್‌ ಮೂಲಕ ಹೊಸ ಬಗೆಯ ವಂಚನೆಯೊಂದು (WhatsApp RTO challan scam) ಇದೀಗ ಜೋರಾಗಿ ನಡೆಯುತ್ತಿದ್ದು, ಕೋಟ್ಯಂತರ ರೂಪಾಯಿಗಳನ್ನು ನಾಗರಿಕರಿಗೆ ವಂಚಿಸಲಾಗಿದೆ. ಈ ವಂಚನೆಗೆ ನಕಲಿ ಆರ್‌ಟಿಒ ಚಲನ್‌ಗಳನ್ನು ಬಳಸಲಾಗುತ್ತಿದೆ. ಹಲವಾರು ಜನರು ಅಪರಿಚಿತ ಸಂಖ್ಯೆಗಳಿಂದ ನಕಲಿ RTO ಚಲನ್ ಸಂದೇಶಗಳನ್ನು ಸ್ವೀಕರಿಸುತ್ತಿದ್ದು, ಅವರ ವಾಹನದ ನಂಬರ್‌ಗೆ ಇದನ್ನು ನೀಡಲಾಗುತ್ತಿದೆ. ನಾಗರಿಕರು ಈ ಬಗ್ಗೆ ಎಚ್ಚರ ವಹಿಸುವಂತೆ ಸೂಚಿಸಲಾಗಿದೆ. ಈ ನಕಲಿ ಚಲನ್‌ಗಳು ನಿಮ್ಮ ವಾಟ್ಸ್ಯಾಪ್‌ಗೆ ಬರುತ್ತಿದ್ದು, ನಿಮ್ಮ ವಾಹನದ ನಂಬರ್‌ ಮೇಲೆ ಟ್ರಾಫಿಕ್‌

ವಾಟ್ಸ್ಯಾಪ್ನಲ್ಲಿ ಹೊಸ ವಂಚನೆ, ಆರ್ಟಿಒ ಚಲನ್ ಹೆಸರಿನಲ್ಲಿ ಧೋಖಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್

(ನ್ಯೂಸ್‌ ಕಡಬ) newskadaba.com,  ನ.05:  ಖಾನಾಪುರ ತಾಲ್ಲೂಕಿನ ಸುಳೇಗಾಳಿ ಅರಣ್ಯದ ಬಳಿ ಭಾನುವಾರ ಎರಡು ಆನೆಗಳು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯಿಂದ ವರದಿ ಕೇಳಿದ ಎರಡು ದಿನಗಳ ನಂತರ, ಆನೆಗಳ ವಿದ್ಯುತ್ ಸ್ಪರ್ಶಕ್ಕೆ ಕಾರಣರಾದ ಇಬ್ಬರು ರೈತರ ವಿರುದ್ಧ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಗರಗಲಿ ವಲಯ ಅರಣ್ಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಅಲ್ಲಿನ ಕೃಷಿ ಭೂಮಿಯಲ್ಲಿ ವಿದ್ಯುತ್ ತಂತಿಗಳು ಬಿದ್ದಿರುವ ವರದಿಗಳ ನಂತರ

ಬೆಳಗಾವಿ: ವಿದ್ಯುತ್ ತಂತಿ ತಗುಲಿ ಆನೆ ಸಾವು; ರೈತರ ವಿರುದ್ಧ ಅರಣ್ಯ ಇಲಾಖೆ ಕೇಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..!

(ನ್ಯೂಸ್‌ ಕಡಬ) newskadaba.com,  ನ.05:  ಒಂದು ಕಡೆ ದಿನನಿತ್ಯದ ವಸ್ತುಗಳ ಬೆಲೆಏರಿಕೆಯಿಂದ ಜನರು ಏದುಸಿರು ಬೀಡುತ್ತೀರುವ ಸಂದರ್ಭದಲ್ಲೇ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯೂ ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ ಮಾಡಿದೆ. ನಂದಿನಿ ತುಪ್ಪದ ದರ ಪ್ರತಿ ಕೆಜಿಗೆ 90 ರೂ. ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ.ಈ ಹಿಂದೆ 1 ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700

ನಂದಿನ ತುಪ್ಪದ ಏಕಾಏಕಿ 90 ರೂ. ಏರಿಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ!

(ನ್ಯೂಸ್‌ ಕಡಬ) newskadaba.com,  ನ.05:  ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ಸ್ಫೋಟದ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ನಿನ್ನೆಯಷ್ಟೇ ಭೂಮಿ ಕಂಪಿಸಿತ್ತು, ಇದೀಗ ಮತ್ತೆ ಇಂದು ಬೆಳಿಗ್ಗೆ 9:12 ಗಂಟೆಗೆ ಭೂಮಿ ನಡುಗಿದ ಅನುಭವವಾಗಿ ಜನರು ಭಯಭೀತರಾಗಿ ಹೊರಗೆ ಓಡಿಬಂದ ಘಟನೆ ನಡೆದಿದೆ. ವಿಜಯಪುರ ನಗರ, ಶಿವಗಿರಿ, ಪಾನಿ ನಗರ, ತೊರವಿ, ಕನಕದಾಸ ಬಡಾವಣೆ ಮತ್ತು ಗೋಳಗುಮ್ಮಟ ಏರಿಯಾ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭೂಮಿ ಕಂಪಿಸಿದೆ. ವಿಶೇಷವಾಗಿ ನಗರದ ಕೇಂದ್ರ ಭಾಗಗಳಲ್ಲಿ ಜನರಿಗೆ

ವಿಜಯಪುರ: ಬೆಳಗ್ಗೆ 9:12ಕ್ಕೆ ಮತ್ತೆ ಕಂಪಿಸಿದ ಭೂಮಿ, ನಿಗೂಢ ಸದ್ದು, ಎರಡು ತಿಂಗಳಲ್ಲಿ 14ನೇ ಭಾರಿ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್

(ನ್ಯೂಸ್‌ ಕಡಬ) newskadaba.com,  ನ.05:  ಅಮೆರಿಕದ ನ್ಯೂಯಾರ್ಕ್ ನಗರವು ಐತಿಹಾಸಿಕ ರಾಜಕೀಯ ಬದಲಾವಣೆಗೆ ಸಾಕ್ಷಿಯಾಗಿದೆ. ಭಾರತೀಯ ಮೂಲದ ಡೆಮಾಕ್ರಟಿಕ್ ಅಭ್ಯರ್ಥಿ ಜೋಹ್ರಾನ್ ಮಮ್ದಾನಿ ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆಲುವು ಪಡೆದಿದ್ದಾರೆ. ಅವರು ನ್ಯೂಯಾರ್ಕ್‌ನ ಮೊದಲ ಮುಸ್ಲಿಂ ಮೇಯರ್. ಮಮ್ದಾನಿಯವರ ಗೆಲುವು ಮಮ್ದಾನಿಯನ್ನು ನಿರಂತರವಾಗಿ ವಿರೋಧಿಸುತ್ತಿದ್ದ ಡೊನಾಲ್ಡ್ ಟ್ರಂಪ್‌ಗೆ ದೊಡ್ಡ ಹೊಡೆತವಾಗಿದೆ. ಮಮ್ದಾನಿ ಗೆದ್ದರೆ ನ್ಯೂಯಾರ್ಕ್‌ಗೆ ಹಣಕಾಸು ಒದಗಿಸುವುದನ್ನು ನಿಲ್ಲಿಸುವುದಾಗಿ ಅವರು ಬೆದರಿಕೆ ಹಾಕಿದ್ದರು. ಇಂದು ಪ್ರಕಟವಾದ ಫಲಿತಾಂಶಗಳಲ್ಲಿ, ಮಮ್ದಾನಿ ತಮ್ಮ ಎರಡೂ ಪ್ರತಿಸ್ಪರ್ಧಿಗಳನ್ನು ಮೀರಿಸಿ ದೊಡ್ಡ

ಭಾರತ ಮೂಲದ ಜೊಹ್ರಾನ್ ಮಮ್ದಾನಿ ನ್ಯೂಯಾರ್ಕ್ನ ನೂತನ ಮೇಯರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.05:  ರಾಜ್ಯದಲ್ಲಿ ಕಳೆದೊಂದು ವಾರದಿಂದ ವರುಣನ ಆರ್ಭಟ ಕಡಿಮೆಯಾಗಿದ್ದು, ಆದರೆ ಮುಂದಿನ 3 ದಿನಗಳವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ  ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಇದೆ. ಇಂದು (ನ. 5) ಕರಾವಳಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ ಹೊಡೆದಿದ್ದು, ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರ ಜಿಲ್ಲೆಯಲ್ಲಿ ಸಂಭವಿಸಿದೆ. ಬಿಲಾಸ್‌ಪುರ-ಕಟ್ನಿ ವಿಭಾಗದಲ್ಲಿ ಕೊರ್ಬಾ ಪ್ರಯಾಣಿಕ ರೈಲು ಲಾಲ್ ಖಾದನ್ ಪ್ರದೇಶದ ಬಳಿ ನಿಂತಿದ್ದ ಸರಕು ರೈಲಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಕೆಲ ಬೋಗಿಗಳು ಒಂದರ ಮೇಲೆ ಹೋಗಿ ಬಿದ್ದಿದ್ದವು. ಘಟನಾ ಸ್ಥಳಕ್ಕೆ ರೈಲ್ವೆ ರಕ್ಷಣಾ ತಂಡಗಳು, ಆರ್‌ಪಿಎಫ್ ಸಿಬ್ಬಂದಿ ಮತ್ತು ಸ್ಥಳೀಯ ಪೊಲೀಸರು

ಛತ್ತೀಸ್ ಗಢ: ಗೂಡ್ಸ್ ರೈಲಿಗೆ ಪ್ರಯಾಣಿಕ ರೈಲು ಢಿಕ್ಕಿ; ಕನಿಷ್ಠ 6 ಸಾವು; ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.03:  ಟ್ರಸ್ಟ್‌ ಹೆಸರಿನಲ್ಲಿ ಸ್ಕೀಂ ಮಾಡಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top