ಬ್ರೇಕಿಂಗ್ ನ್ಯೂಸ್

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ […]

ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು

(ನ್ಯೂಸ್‌ ಕಡಬ) newskadaba.com,  ಅ.21 ಬೆಂಗಳೂರು: ಶಾಲೆಗೆ ಚಕ್ಕರ್ ಹಾಕುತ್ತಿದ್ದ 5ನೇ ತರಗತಿ ವಿದ್ಯಾರ್ಥಿಯನ್ನು ಕೂಡಿ ಹಾಕಿ, ಪಿವಿಸಿ ಪೈಪ್’ನಿಂದ ಮನಬಂದಂತೆ ಅಮಾನುಷವಾಗಿ ದಂಡಿಸಿದ ಆರೋಪದ ಮೇರೆಗೆ ಖಾಸಗಿ ಶಾಲೆಯ ಪ್ರಾಂಶುಪಾಲ ಹಾಗೂ ಶಿಕ್ಷಕ ಸೇರಿದಂತೆ ಇತರರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂಕದಕಟ್ಟೆಯ ಹೊಯ್ಸಳ ನಗರದ ನಿವಾಸಿ ದಿವ್ಯಾ (30) ಅವರು ಸುಂಕದಕಟ್ಟೆಯ ಪೈಪ್‌ಲೈನ್ ರಸ್ತೆಯಲ್ಲಿರುವ ನ್ಯೂ ಸೇಂಟ್ ಮೇರಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ರಾಕೇಶ್ ಕುಮಾರ್, ಶಾಲೆಯ ಮಾಲೀಕ ವಿಜಯ್ ಕುಮಾರ್

ಶಾಲೆಗೆ ಗೈರು ಹಾಜರಿಯಾದ ವಿದ್ಯಾರ್ಥಿಗೆ ಕೂಡಿ ಹಾಕಿ PVC ಪೈಪ್‌ನಿಂದ ಹೊಡೆತ – FIR ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ

(ನ್ಯೂಸ್‌ ಕಡಬ) newskadaba.com,  ಅ.20 ಜೇವರಗಿ ತಾಲೂಕು ನರಿಬೋಳ, ಚಿತಾಪುರ ತಾಲೂಕು ಚಾಮನೂರ ನಡುವಿನ ಭೀಮಾ ನದಿಯ ಸೇತುವೆ ಕೆಲಸ 7 ವರ್ಷಗಳಿಂದ ನಿಂತಲ್ಲೆ ನಿಂತಿದ್ದು,ಗುಣಮಟ್ಟದ ಕಾಮಗಾರಿ ನಡೆಸದ ಗುತ್ತಿಗೆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ,ಜಮೀನು ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರುಗಡೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ ಎಸ್ ಪಾಟೀಲ ನರಿಬೋಳ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ

ಕಲಬುರಗಿ : ಅ.23 ರಿಂದ ರಾಷ್ಟ್ರೀಯ ಹೆದ್ದಾರಿ ಕಛೇರಿ ಎದುರಿಗೆ ಉಪವಾಸ ಸತ್ಯಾಗ್ರಹ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ.20 ಪುತ್ತೂರು:  ಭಾನುವಾರ ಸಂಜೆ ಸುರಿದ ಭಾರೀ ಗಾಳಿ ಮಳೆಯ ಜೊತೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಯಾಗಿ, ಮನೆಯಲ್ಲಿದ್ದ ಮಗು ಸಹಿತ ಐದು ಮಂದಿ ಸಣ್ಣಪುಟ್ಟ ಗಾಯಗೊಂಡ ಘಟನೆ ಪುತ್ತೂರು ನರಿಮೊಗ್ರು ಗ್ರಾಮದ ಬೆದ್ರಾಳದಲ್ಲಿ ನಡೆದಿದೆ. ಬೆದ್ರಾಳ ನಿವಾಸಿ ದಯಾನಂದ ಮೂಲ್ಯ ಅವರಿಗೆ ಸೇರಿದ ಮನೆಗೆ ಸಿಡಿಲು ಬಡಿದು ಹಂಚಿನ ಛಾವಣಿ ಸಂಪೂರ್ಣ ಹಾನಿಯಾಗಿದೆ. ಗೋಡೆ ಕುಸಿತಗೊಂಡಿದ್ದು, ಒಂದು ಭಾಗಕ್ಕೆ ಹಾಕಿದ್ದ ಸಿಮೆಂಟ್ ಶೀಟ್ ಹಾನಿಯಾಗಿದೆ. ಮನೆ ಮಂದಿಗೆ ಹೆಂಚಿನ ತುಂಡುಗಳು

ಪುತ್ತೂರಿನಲ್ಲಿ ಸಿಡಿಲು ಬಡಿದು ಮನೆ ಸಂಪೂರ್ಣವಾಗಿ ಹಾನಿ- ಮಗು ಸಹಿತ 5 ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್

(ನ್ಯೂಸ್‌ ಕಡಬ) newskadaba.com,  ಅ.20 : ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದೆ. ಕೇವಲ ಪ್ರಾದೇಶಿಕವಾಗಿ ಅಲ್ಲದೇ ಪ್ರಪಂಚದಾದ್ಯಂತ ಮೆಚ್ಚುಗೆಯ ಮಹಾಪೂರ ಹರಿದು ಬಂದಿದೆ. ಸಿನಿಮಾ ನೋಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದೆ ಅಭಿಮಾನಿ ವರ್ಗ. ಬಹುಭಾಷೆಯಲ್ಲಿ ಏಕಕಾಲಕ್ಕೆ ತೆರೆಕಂಡ ಕಾಂತಾರ ಚಾಪ್ಟರ್-1 ಸಿನಿಮಾಗೆ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಮೂರನೇ ವಾರದಲ್ಲೂ ಕಾಂತಾರ ಸಿನಿಮಾದ ಗಳಿಕೆ ಕುಗ್ಗಿಲ್ಲ. ಸಾಲು ಸಾಲು ರಜಾ ದಿನಗಳ ಜೊತೆ ಹಬ್ಬ ಇರುವ ಕಾರಣ ಚಿತ್ರ ನೋಡಲು ಥಿಯೇಟರ್‌ಗೆ ಜನ ಬರುತ್ತಿದ್ದಾರೆ.

ಕಾಂತಾರ ಚಾಪ್ಟರ್ – 1; 18 ದಿನಕ್ಕೆ 765 ಕೋಟಿ ಕಲೆಕ್ಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ

(ನ್ಯೂಸ್‌ ಕಡಬ) newskadaba.com,  ಅ.20 ಶಿವಮೊಗ್ಗ: 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.“ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಧಿಸೂಚನೆ ಹೊರಡಿಸಲಾಗಿದೆ. ಅಕ್ಟೋಬರ್ 23 ರಿಂದ ನವೆಂಬರ್ 9ರವರೆಗೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿಸೆಂಬರ್ 7ರಂದು ಟಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿದರು. “ಶೀಘ್ರದಲ್ಲಿ ಅನುದಾನಿತ ಶಾಲೆಯ ಶಿಕ್ಷಕರ ನೇಮಕಾತಿಗೂ ಸರ್ಕಾರ ಆದೇಶ ಹೊರಡಿಸಲಿದೆ. ರಾಜ್ಯದಲ್ಲಿ 800

ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಸೆಟ್ ಪರೀಕ್ಷೆ ಮುಂದೂಡಿ: ಮನವಿ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2025 (ಕೆಸೆಟ್-2025) ಮುಂದೂಡಲು ಕೆಇಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ. ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಿಗೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ಪತ್ರ ಸಲ್ಲಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025ರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಶಿಕ್ಷಕರು ಕೆಸೆಟ್‌ ಪರೀಕ್ಷೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಲು ಸಮಯಾವಕಾಶ ಕಲ್ಪಿಸಿ, ನ.2ರಂದು ನಡೆಯುವ KSET ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೋರಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ,

ಕೆಸೆಟ್ ಪರೀಕ್ಷೆ ಮುಂದೂಡಿ: ಮನವಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ

(ನ್ಯೂಸ್‌ ಕಡಬ) newskadaba.com,  ಅ.20 ಉತ್ತರಪ್ರದೇಶ:  ದೀಪಾವಳಿ ಹಬ್ಬದ ನಿಮಿತ್ತ ಭರ್ಜರಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಎರಡು ಗಿನ್ನೆಸ್ ದಾಖಲೆ ನಿರ್ಮಾಣಗೊಂಡಿವೆ. ಅಯೋಧ್ಯೆಯ 56 ಘಾಟ್​ಗಳ ಸಾಲುಗಳುದ್ದಕ್ಕೂ ಅತಿಹೆಚ್ಚು ದೀಪಗಳನ್ನು ಹಚ್ಚಿದ್ದು, ಅತಿ ಹೆಚ್ಚು ಜನರು ಒಟ್ಟಿಗೆ ದೀಪಾರತಿ ಮಾಡಿದ್ದು, ಈ ಎರಡು ವಿಶ್ವ ದಾಖಲೆಗಳು ನಿರ್ಮಾಣವಾಗಿವೆ. ಗಿನ್ನೆಸ್ ಬುಕ್ ಆಫ್ ರೆಕಾರ್ಡ್​​ನಿಂದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಾಖಲೆ ನಿರ್ಮಾಣಗೊಂಡದ್ದಕ್ಕೆ ಪ್ರಮಾಣಪತ್ರ ನೀಡಲಾಗಿದೆ. ಈ ದೀಪೋತ್ಸವವನ್ನು ರಾಮನ 14 ವರ್ಷಗಳ ವನವಾಸದ ನಂತರ

ಅಯೋಧ್ಯೆಯಲ್ಲಿ ದೀಪಾವಳಿ ಹಬ್ಬದ ಭರ್ಜರಿ ಕಾರ್ಯಕ್ರಮ- 2 ಗಿನ್ನೆಸ್ ದಾಖಲೆ ನಿರ್ಮಿಸಿದ ಅಯೋಧ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನವೆಂಬರ್ 1 ರಿಂದ ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ

(ನ್ಯೂಸ್‌ ಕಡಬ) newskadaba.com,  ಅ.20 ಬಳ್ಳಾರಿ: ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಮತ್ತು ವ್ಯವಹಾರಕ್ಕೆ ಪ್ರಮುಖ ಉತ್ತೇಜನ ನೀಡುವ ನಿಟ್ಟಿನಲ್ಲಿ, ಪ್ರಾದೇಶಿಕ ವಿಮಾನಯಾನ ಸಂಸ್ಥೆ ಸ್ಟಾರ್ ಏರ್ ಬೆಂಗಳೂರು ಮತ್ತು ಹಂಪಿಯನ್ನು ಸಂಪರ್ಕಿಸುವ ಹೊಸ ವಿಮಾನವನ್ನು ಪ್ರಾರಂಭಿಸುವ ಯೋಜನೆಯನ್ನು ಪ್ರಕಟಿಸಿದೆ. ಐತಿಹಾಸಿಕ ಪಟ್ಟಣಕ್ಕೆ ಹತ್ತಿರದ ವಿಮಾನ ನಿಲ್ದಾಣವಾದ ವಿದ್ಯಾನಗರ (ಜೆಎಸ್‌ಡಬ್ಲ್ಯೂ) ಏರ್ ಪೋರ್ಟ್ ಮೂಲಕ ವಿಮಾನಗಳು ಕಾರ್ಯನಿರ್ವಹಿಸಲಿವೆ. ಕಳೆದ ಒಂದು ತಿಂಗಳಿನಿಂದ ಜೆಎಸ್‌ಡಬ್ಲ್ಯೂ ವಿಮಾನ ನಿಲ್ದಾಣದಲ್ಲಿ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿರುವುದರಿಂದ ಪ್ರಯಾಣಿಕರು ಮತ್ತು ಸ್ಥಳೀಯರಿಗೆ ಈ

ನವೆಂಬರ್ 1 ರಿಂದ ಬೆಂಗಳೂರು- ಹಂಪಿ ದೈನಂದಿನ ವಿಮಾನ ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶುಂಠಿ ಏರಿಕೆ ರೈತರ ಮುಖದಲ್ಲಿ ಮಂದಹಾಸ

(ನ್ಯೂಸ್‌ ಕಡಬ) newskadaba.com,  ಅ.20 ಬೆಂಗಳೂರು: ಈ ಹಿಂದೆ ಶುಂಠಿ ಬೆಲೆ ಕುಸಿತದಿಂದಾಗಿ ಕಂಗಲಾಗಿದ್ದ ರೈತರಿಗೆ ಪ್ರಸ್ತುತ ಶುಂಠಿ ಬೆಲೆ ಏರಿಕೆಯಿಂದ ಹಿರಿ ಹಿರಿ ಹೀಗಗುವತಾಗಿದೆ. ಮುಖದಲ್ಲಿ ಮಂದಹಾಸ ಮೂಡಿದೆ. ಈಗಲೇ ಕಡಿಮೆ ದರಕ್ಕೆ ಮಾರಾಟ ಮಾಡಿದವರು ಕೈ ಕೈ ಹಿಚುಕಿಕೊಳ್ಳುತ್ತಿದ್ದಾರೆ.ಉತ್ತರಭಾರತ ರಾಜ್ಯಗಳಾದ ಧೇಲ್ಲಿ ಮಧ್ಯಪ್ರದೇಶ, ಬಾಂಬೆ ಮಾರುಕಟ್ಟೆಗಳಿಂದ ಬೇಡಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಶುಂಠಿ ಬೆಲೆ ಏರಿಕೆಗೆ ಕಾರಣವಾಗಿದೆ. ಮಲೆನಾಡು, ಅರೆಮಲೆನಾಡು ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲಿದೊಡ್ಡ ಪ್ರಮಾಣದಲ್ಲಿ ಶುಂಠಿ ಬೆಳೆಯಲಾಗುತ್ತಿದೆ.

ಶುಂಠಿ ಏರಿಕೆ ರೈತರ ಮುಖದಲ್ಲಿ ಮಂದಹಾಸ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top