ಬ್ರೇಕಿಂಗ್ ನ್ಯೂಸ್

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು

(ನ್ಯೂಸ್‌ ಕಡಬ) newskadaba.com,  ಅ.17: ಭಾಗಮಂಡಲ ಸಮೀಪ ತಲಕಾವೇರಿಯಲ್ಲಿ ಶುಕ್ರವಾರ ಕಾವೇರಿ ತೀರ್ಥೋದ್ಭವವಾಗಿದೆ. ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದು, ದೇವಿಯ ಆಶೀರ್ವಾದ ಪಡೆಯಲು ಸಾವಿರಾರು ಭಕ್ತರು ಸೇರಿದ್ದರು. ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ, ಹಾಡು ನೃತ್ಯದ ಮೂಲಕ ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ. ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ […]

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ; ತೀರ್ಥರೂಪಿಣಿ ಕಾವೇರಿ ತಾಯಿ ದರ್ಶನ ಪಡೆದ ಸಹಸ್ರಾರು ಭಕ್ತರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು

(ನ್ಯೂಸ್‌ ಕಡಬ) newskadaba.com,  ಅ.17 ಪಡುಬಿದ್ರೆ: ಲಾರಿಯೊಂದು ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಬೈಪಾಸ್ ಬಳಿ ಶುಕ್ರವಾರ (ಅ 16) ಬೆಳಗ್ಗೆ ನಡೆದಿದೆ. ಹೆಜಮಾಡಿ ಮಾಸ್ತಿಕಟ್ಟೆ ನಿವಾಸಿ ರಫೀಕ್ (37) ಮೃತ ದುರ್ದೈವಿ. ರಫೀಕ್ ಶುಕ್ರವಾರ ಮುಂಜಾನೆ ಮನೆಯಿಂದ ಮಸೀದಿಗೆ ರಿಕ್ಷಾದಲ್ಲಿ ತೆರಳಿದ್ದರು. ಈ ವೇಳೆ ಹೆಜಮಾಡಿ ಬೈಪಾಸ್ ಬಳಿ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಆಟೋ ಚಾಲಕ

ಆಟೋ ರಿಕ್ಷಾಕ್ಕೆ ಲಾರಿ ಢಿಕ್ಕಿ; ಚಾಲಕ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಅ.17: ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಾಜಿ ಅವರು, ಕಳೆದ ಕೆಲ ಸಮಯಗಳಿಂದ

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ Read More »

ಬ್ರೇಕಿಂಗ್ ನ್ಯೂಸ್

ತೆಲುಗು ಚಿತ್ರದತ್ತ ಮುಖ ಮಾಡಿದ ನಟ ರಿಷಭ್ ಶೆಟ್ಟಿ; ಕಾಂತಾರ

(ನ್ಯೂಸ್‌ ಕಡಬ) newskadaba.com,  ಅ.17 ಅಕ್ಟೋಬರ್ 2ರಂದು ಬಿಡುಗಡೆಯಾದ ಕಾಂತಾರ: ಚಾಪ್ಟರ್ 1 ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಓಟವನ್ನು ಮುಂದುವರಿಸಿದ್ದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ರಿಲ್ಯಾಕ್ಸ್ ಮೂಡ್‌ನಲ್ಲಿದ್ದಾರೆ. ಇತ್ತೀಚೆಗಷ್ಟೇ ಮೈಸೂರಿಗೆ ಭೇಟಿ ನೀಡಿದ್ದ ನಟ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ಮುಂದಿನ ಯೋಜನೆ ‘ಜೈ ಹನುಮಾನ್’ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದರು. ಮುಂಬರುವ ಚಿತ್ರವನ್ನು ಪ್ರಶಾಂತ್ ವರ್ಮಾ ನಿರ್ದೇಶಿಸಲಿದ್ದಾರೆ ಮತ್ತು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸಲಿದೆ ಎಂದು ನಟ ಮತ್ತು ನಿರ್ದೇಶಕರು ಖಚಿತಪಡಿಸಿದ್ದಾರೆ.

ತೆಲುಗು ಚಿತ್ರದತ್ತ ಮುಖ ಮಾಡಿದ ನಟ ರಿಷಭ್ ಶೆಟ್ಟಿ; ಕಾಂತಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಮ್ಮ ಮೆಟ್ರೋ ದುಬಾರಿ: ಟೀಕೆಗಳಿಗೆ ಬಗ್ಗದ BMRCL

(ನ್ಯೂಸ್‌ ಕಡಬ) newskadaba.com,  ಅ.17 ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ಬಗ್ಗೆ ಸಾಕಷ್ಟು ಟೀಕೆ, ವಿರೋಧಗಳು ವ್ಯಕ್ತವಾಗುತ್ತಿದ್ದರೂ, ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮಾತ್ರ ಯಾವುದಕ್ಕೂ ಜಗ್ಗದೆ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಇತ್ತೀಚೆಗೆ ದರ ಏರಿಕೆ ವಿರುದ್ಧ ಕಿಡಿಕಾರಿದ್ದರು. ಅಲ್ಲದೆ, ಕೆಲವು ಸ್ಪಷ್ಟೀಕರಣಗಳನ್ನು ಕೋರಿ ಬಿಎಂಆರ್‌ಸಿಎಲ್’ಗೆ ಪತ್ರವನ್ನೂ ಬರೆದಿದ್ದರು.ಇದೀಗ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜೆ. ರವಿಶಂಕರ್ ಅವರು, ಫೆಬ್ರವರಿಯಲ್ಲಿ ಜಾರಿಗೆ

ನಮ್ಮ ಮೆಟ್ರೋ ದುಬಾರಿ: ಟೀಕೆಗಳಿಗೆ ಬಗ್ಗದ BMRCL Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭೂಗತ ಪಾತಕಿಗಳಿಂದ ಕಪಿಲ್ ಶರ್ಮಾ ರೆಸ್ಟೊರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ

(ನ್ಯೂಸ್‌ ಕಡಬ) newskadaba.com,  ಅ.17: ಪಂಜಾಬಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೆನಡಾನಲ್ಲಿ ಕಪಿಲ್ ಶರ್ಮಾ ಅವರು ರೆಸ್ಟೊರೆಂಟ್ ತೆರೆದಿದ್ದರು. ಇದೀಗ ಗುರುವಾರ ರಾತ್ರಿ ರೆಸ್ಟೊರೆಂಟ್ ಮೇಲೆ ಇತ್ತೀಚೆಗೆ ಭೂಗತ ಪಾತಕಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ಭೂಗತ ಪಾತಕಿಗಳು ರೆಸ್ಟೊರೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದೀಗ ಬರೋಬ್ಬರಿ ಮೂರನೇ ಬಾರಿಗೆ ಕೆನಡಾದ ಸರ್ರೆಯ ನ್ಯೂ ಟೌನ್ ಏರಿಯಾನಲ್ಲಿ ರೆಸ್ಟೊರೆಂಟ್ ಗುಂಡಿನ ದಾಳಿ ಮಾಡಿದ್ದಾರೆ. ಅಲ್ಲಿನ ಕಾಲಮಾನ 3:45ರ ಸುಮಾರಿಗೆ ಕೆಲ ಅಗಂತುಕರು ಗುಂಡಿನ ದಾಳಿ ನಡೆಸಿದ್ದು, ಈ

ಭೂಗತ ಪಾತಕಿಗಳಿಂದ ಕಪಿಲ್ ಶರ್ಮಾ ರೆಸ್ಟೊರೆಂಟ್ ಮೇಲೆ ಮತ್ತೆ ಗುಂಡಿನ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ

(ನ್ಯೂಸ್‌ ಕಡಬ) newskadaba.com,  ಅ.17 ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ. 16ರಂದು ನಡೆದಿದೆ. ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ. ಮಿಂಚನಾಳ ತಾಂಡಾದ ಮಾದೇವ ನಗರದ ಈ ಮೂವರು ಮಕ್ಕಳು ಮನೆಯ ಸಮೀಪದ ಹೊಲದ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಮಕ್ಕಳು ತುಂಬ ಹೊತ್ತಾದರೂ ಕಾಣಿಸದೇ ಇದ್ದಾಗ ಚಪ್ಪಲಿ ಗಮನಿಸಿ,

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಜಲ ಸಮಾಧಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.17: ರಾಜ್ಯದಲ್ಲಿ ಮುಂದಿನ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರಿನಲ್ಲಿ ಶುಕ್ರವಾರ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21° C ಹಾಗೂ 29° C ಇರಲಿದೆ. ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ

ಇಂದಿನ ಹವಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ 36 ಜೀವ ಸೇಫ್

(ನ್ಯೂಸ್‌ ಕಡಬ) newskadaba.com,  ಅ.17 ಬೆಂಗಳೂರು: ನಗರದಿಂದ ಹೊರಟಿದ್ದ ಖಾಸಗಿ ಬಸ್‌ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ಅನಂತಪುರ ಜಿಲ್ಲೆಗೆ 15 ಕಿಮೀ ದೂರದಲ್ಲಿರುವ ಗರ‍್ಲದಿನ್ನೆಯಲ್ಲಿ ನಡೆದಿದೆ. ಬೆಂಗಳೂರಿನಿಂದ ರಾಯಚೂರಿಗೆ  ಹೊರಟಿದ್ದ ಬಸ್‌ ಅನಂತಪುರದ ಬಳಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸೇಫ್‌ ಆಗಿದ್ದಾರೆ. ಗ್ರೀನ್ ಲೈನ್ ಟ್ರಾವೆಲ್ಸ್‌ಗೆ ಸೇರಿದ ಈ ಬಸ್‌ ಬೆಂಗಳೂರು-ಅನಂತಪುರ ಹೈವೇನಲ್ಲಿ ಹೊರಟಿತ್ತು. ಈ ವೇಳೆ ಟಯರ್‌ ಬ್ಲಾಸ್ಟ್‌ ಆಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬ್ಲಾಸ್ಟ್‌ ಆಗುತ್ತಿದ್ದಂತೆ

ಬೆಂಗಳೂರಿಂದ ಹೊರಟಿದ್ದ ಖಾಸಗಿ ಬಸ್‌ ಏಕಾಏಕಿ ಬೆಂಕಿಗಾಹುತಿ – ಮಹಿಳೆಯೊಬ್ಬರ ಸಮಯಪ್ರಜ್ಞೆಯಿಂದ 36 ಜೀವ ಸೇಫ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಅ.17 ಕಾರ್ಕಳ: ದೀಪಾವಳಿ ಹಬ್ಬದ ಸಿದ್ಧತೆ ಹಿನ್ನೆಲೆಯಲ್ಲಿ, ಕಾರ್ಕಳ ತಾಲೂಕಿನ ಮಿಯಾರಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಸಂಗ್ರಹಿಸಿದ್ದ ಮೂವರನ್ನು ಕಾರ್ಕಳ ಪೊಲೀಸರು ಬಂಧಿಸಿದ್ದು, ಕೋಟಿಗಟ್ಟಲೆ ರೂಪಾಯಿ ಮೌಲ್ಯದ ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಮಿಯಾರು ನಿವಾಸಿಗಳಾದ ಸತ್ಯೇಂದ್ರ ನಾಯಕ್ (70), ಶ್ರೀಕಾಂತ್ ನಾಯಕ್ (37) ಮತ್ತು ರಾಮಾನಂದ ನಾಯಕ್ (48) ಎಂದು ಗುರುತಿಸಲಾಗಿದೆ. ಈ ಮೂವರು ಯಾವುದೇ ಪರವಾನಗಿ ಇಲ್ಲದೆ ಮತ್ತು ಮಾನವ ಜೀವಕ್ಕೆ ಅಪಾಯ ತಂದೊಡ್ಡುವ ರೀತಿಯಲ್ಲಿ ಸ್ಫೋಟಕ ಪಟಾಕಿಗಳನ್ನು ಸಂಗ್ರಹಿಸಿದ್ದರು

ಕಾರ್ಕಳದಲ್ಲಿ ಕೋಟ್ಯಂತರ ಮೌಲ್ಯದ ಅಕ್ರಮ ಪಟಾಕಿ ದಾಸ್ತಾನು; ಮೂವರು ಆರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top